ತಗ್ಗು ಪ್ರದೇಶದ ನಿವೇಶನಗಳಲ್ಲಿ ಅಂಡರ್ ಗ್ರೌಂಡ್ ವಾಹನ ನಿಲ್ದಾಣ ನಿರ್ಮಾಣಕ್ಕೆ ಅವಕಾಶವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

Construction of underground parking lots is not allowed in low-lying areas: DCM DK Shivakumar

ಬೆಂಗಳೂರು: “ಕೆರೆಗಳ ಹತ್ತಿರ ಹಾಗೂ ತಗ್ಗು ಪ್ರದೇಶಗಳಲ್ಲಿ ಅಂಡರ್ ಗ್ರೌಂಡ್ ನಿರ್ಮಾಣ ಮಾಡಿ ವಾಹನ ನಿಲ್ದಾಣಕ್ಕೆ ಅವಕಾಶ ನೀಡದಂತೆ ಭವಿಷ್ಯದಲ್ಲಿ ಕಾನೂನು ತರಲಾಗುವುದು. ಮಳೆ ಕಡಿಮೆಯಾದ ನಂತರ ಇದರ ಬಗ್ಗೆ ಕಾರ್ಯಸೂಚಿ ಬಿಡುಗಡೆ ಮಾಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದರು.

ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಸುರಿದ ಮಳೆಯಿಂದ ಉಂಟಾದ ವಿದ್ಯುತ್ ಅವಘಡದಲ್ಲಿ ಬಿ.ಟಿ.ಎಂ 2ನೇ ಹಂತದ ಡಾಲರ್ಸ್ ಕಾಲೋನಿ ಬಳಿಯ ಎಂ.ಎಸ್. ಪಾಳ್ಯದಲ್ಲಿ ಮನಮೋಹನ್ ಕಾಮತ್ ಹಾಗೂ ದಿನೇಶ್ ಎಂಬುವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ, ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿಕೆ ಶಿವಕುಮಾರ್ ಅವರು ಘಟನಾ ಸ್ಥಳಕ್ಕೆ ಮಂಗಳವಾರ ಸಂಜೆ ಅಧಿಕಾರಿಗಳ ಜತೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸ್ವಾಂತನ ಹೇಳಿದರು. ನಂತರ ಮಧ್ಯಮಗಳ ಜತೆ ಮಾತನಾಡಿದರು.

“ಅಂಡರ್ ಗ್ರೌಂಡ್ ಹೊರತು ಪಡಿಸಿ ನೆಲ ಮಹಡಿಯಲ್ಲಿ ವಾಹನಗಳನ್ನು ನಿಲ್ಲಿಸುವ ರೀತಿ ಯೋಜನೆ ರೂಪಿಸುವ ಆಲೋಚನೆಯಿದೆ. ಅದರ ಮೇಲೆ ಜನರು ವಾಸಕ್ಕೆ ಮನೆ ನಿರ್ಮಾಣ‌ ಮಾಡಿಕೊಳ್ಳಲಿ” ಎಂದರು.

“ಅಂಡರ್ ಗ್ರೌಂಡ್ ನಲ್ಲಿ ಸಂಗ್ರಹವಾಗಿದ್ದ ನೀರನ್ನು ಪಂಪ್ ಹಾಕಿ ಖಾಲಿ ಮಾಡುವಾಗ ಅಧಿಕಾರಿಗಳು, ಪೊಲೀಸ್ ಹಾಗೂ ಸಹಾಯ ಮಾಡಲು ಬಂದ ವ್ಯಕ್ತಿಗಳಿಗೂ ವಿದ್ಯುತ್ ಆಘಾತವಾಗಿದೆ. ಈ ವೇಳೆ ಮೃತಪಟ್ಟ ನಾಗರಿಕರಿಗೂ ಪರಿಹಾರ ನೀಡಲಾಗುವುದು.

ಮಳೆ ಅವಘಡದಿಂದ ಮೃತಪಟ್ಟವರಿಗೆ 5 ಲಕ್ಷ ಪರಿಹಾರ ನೀಡಲಾಗುತ್ತಿದೆ. ಜಾನುವಾರುಗಳು ಸಹ ಮೃತಪಟ್ಟಿದ್ದು ಇದಕ್ಕೂ ಪರಿಹಾರ ನೀಡಲಾಗುವುದು. ನಮ್ಮ ಅಧಿಕಾರಿಗಳಿಗೆ ದಿನಪೂರ್ತಿ ಎಚ್ಚರವಹಿಸುವಂತೆ ಸೂಚನೆ ನೀಡಲಾಗಿದೆ” ಎಂದರು.

ಬಿಬಿಎಂಪಿ ಹಾಗೂ ಬಿಡ್ಬ್ಲೂ ಎಸ್ ಎಸ್ ಬಿಯವರಿಂದ ಸರಿಯಾದ ಪ್ರತಿಕ್ರಿಯೆ ದೊರೆಯುತ್ತಿಲ್ಲ ಎನ್ನುವ ಸಾರ್ವಜನಿಕರ ದೂರಿನ ಬಗ್ಗೆ ಕೇಳಿದಾಗ, “ಬೆಂಗಳೂರಿನ ಜನಸಂಖ್ಯೆ 1.40 ಕೋಟಿಯಿದೆ. ವಾರ್ ರೂಮಲ್ಲಿ ಹೇಗೆ ಕೆಲಸ ನಡೆಯುತ್ತದೆ ಎಂದು ಮಾಧ್ಯಮಗಳೇ ಒಮ್ಮೆ ಬಂದು ನೋಡಿ. ಎಲ್ಲರು ತಂಡವಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದರು‌

“ಮಳೆ ಬಂದು ಅವಘಡ ಉಂಟಾಗಿರುವ ಭಾಗದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಸಾರ್ವಜನಿಕರು ಸಹ ಸಹಕಾರ ನೀಡುತ್ತಿದ್ದಾರೆ. ವಾರ್ ರೂಮ್ ಮೂಲಕವೂ ಪರಿಸ್ಥಿತಿಯನ್ನು ಅವಲೋಕಿಸಲಾಗುತ್ತಿದೆ” ಎಂದು ಹೇಳಿದರು.

ಸೋಶಿಯಲ್ ಮೀಡಿಯಾಗಳಲ್ಲಿ ಟೀಕೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಹೀಗೆ ಮಾಡುವವರು, ಸರ್ಕಾರಕ್ಕೆ ಕೆಟ್ಟ ಹೆಸರು ತರುವವರು ಟೀಕೆ ಮಾಡುತ್ತಿಲ್ಲ ಬೆಂಗಳೂರಿನ ಹೆಸರನ್ನು ಹಾಳು ಮಾಡುತ್ತಿದ್ದಾರೆ” ಎಂದರು.

ಬಿಜೆಪಿಯವರು ಮಳೇ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನಿಮ್ಮ ಫೋಟೊ ಹಿಡಿದು ವ್ಯಂಗ್ಯ ಮಾಡಿರುವ ಬಗ್ಗೆ ಕೇಳಿದಾಗ, “ಅವರಿಂದ ಇನ್ನೇನು ಮಾಡಲು ಸಾಧ್ಯವಾಗುತ್ತದೆ, ಮಾಡಲಿ ಬಿಡಿ‌. ನಾವು ಎರಡು ವರ್ಷದ ಸಂಭ್ರಮಾಚರಣೆ ಮಾಡಿದ್ದೇವೆ.

ಮೋದಿಯವರ ಸರ್ಕಾರಕ್ಕೆ 5 ವರ್ಷ ತುಂಬಿದಾಗ ಸಂಭ್ರಮ ಮಾಡಿರಲಿಲ್ಲವೇ? ಸಂತೋಷ ಪಡಬೇಡ ಎಂದು ಹೇಳಿದರೆ ಹೇಗೆ, ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ‌. ಆಚರಣೆ ಮಾಡಲು ನಮಗೆ ಹಕ್ಕಿಲ್ಲವೇ? ಕಾರ್ಯಕ್ರಮ ಮೊದಲೇ ನಿಗದಿಯಾಗಿತ್ತು, ಆಗ ಮಳೆ ಬಂದಿದೆ.‌ ಈಗ ಉಂಟಾಗಿರುವ ಸಮಸ್ಯೆಗಳನ್ನು ಬಗೆಹರಿಸಲೇ ನಾವಿದ್ದೇವೆ” ಎಂದರು.

ಮುಂದಿನ ನಾಲ್ಕೈದು ದಿನ ಮಳೆ ಬರುತ್ತದೆ ಎನ್ನುವ ವರದಿ ಬಗ್ಗೆ ಕೇಳಿದಾಗ, “ಮಳೆ ಜಾಸ್ತಿ ಬರಬಹುದು. ಇದರ ಬಗ್ಗೆ ನಾವು ಜಾಗೃತರಾಗಿದ್ದೇವೆ” ಎಂದು ಹೇಳಿದರು.

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]