ತುಮಕೂರು: ಗೃಹಸಚಿವ ಡಾ.ಜಿ.ಪರಮೇಶ್ವರ್ (Dr.G.Parameshwar) ಅವರ ಒಡೆಯತನದ ಸಿದ್ದಾರ್ಥ ಕಾಲೇಜ್ (Siddhartha College) ಮೇಲೆ ಬುಧವಾರ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿ, ದಾಖಲೆ ನಡೆಸುತ್ತಿದ್ದಾರೆ.
ಐದು ಕಾರುಗಳಲ್ಲಿ ಕಾಲೇಜಿಗೆ ಆಗಮಿಸಿದ ಇ.ಡಿ ಅಧಿಕಾರಿಗಳು, ದಾಖಲೆಗಳ ಪರಿಶೀಲನೆಗೆ ಕೈಹಾಕಿದ್ದಾರೆ.
ವಿದ್ಯಾರ್ಥಿಗಳಿಂದ ಸಂಗ್ರಹಿಸಿರುವ ಶುಲ್ಕ, ಕಾಲೇಜು ಸಿಬ್ಬಂದಿಗಳ ವೆಚ್ಚ, ಡೊನೇಷನ್ ಮೊತ್ತ, ಸಂಸ್ಥೆಯ ವಾರ್ಷಿಕ ಆದಾಯ-ಖರ್ಚು ವಿವರಗಳು ಸೇರಿದಂತೆ ಹಲವಾರು ಆರ್ಥಿಕ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಅಲ್ಲದೆ ಪ್ರಾಂಶುಪಾಲರನ್ನು ಒಂದು ಕೋಣೆಯಲ್ಲಿ ಕೆಲವು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ ಎನ್ನಲಾಗಿದೆ.
ಇನ್ನೂ ವಿದ್ಯಾರ್ಥಿಗಳ ದಾಖಲಾತಿ ಸಮಯದಲ್ಲೇ ನಡೆಯುತ್ತಿರುವುದರಿಂದ ಕಾಲೇಜಿನಲ್ಲಿ ಜನಜಂಗುಳಿ ಹೆಚ್ಚಾಗಿದ್ದ ವೇಳೆಯೇ ದಾಳಿ ನಡೆದಿದೆ. ಇದರಿಂದಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರ ಹಾಜರಾತಿಯಿಂದ ಆತಂಕದ ವಾತಾವರಣ ಸೃಷ್ಟಿಯಾಯಿತು.
ಇ.ಡಿ ಅಧಿಕಾರಿಗಳು ಈಗಾಗಲೇ ಹಲವಾರು ದಾಖಲೆಗಳನ್ನು ಸಂಗ್ರಹಿಸಿ ತನಿಖೆ ಮುಂದುವರೆಸಿದ್ದಾರೆ.
ಈ ಸಂಬಂಧ ಗೃಹಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.