ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಅಜಾಕ್ಸ್ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ನನ್ನ ಶಾಲೆ ನನ್ನ ಜವಾಬ್ದಾರಿ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಡಾ.ಅನುರಾಧ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಸಿಗುವ 38 ಸೌಲಭ್ಯಗಳ ಕುರಿತು ಪೋಷಕರಿಗೆ ವಿವರಿಸಿದರು.
ಸರ್ಕಾರಿ ಶಾಲೆಯಲ್ಲಿ ಬೆಳಿಗ್ಗೆ ಹಾಲು ಕೊಡುವುದರಿಂದ ಹಿಡಿದು, ಮಧ್ಯಾಹ್ನ ಉತ್ತಮ ಪೌಷ್ಟಿಕಾಂಶವಾದ ಮೊಟ್ಟೆ, ಬಾಳೆಹಣ್ಣು, ಅಕ್ಷರ ದಾಸೋಹ, ಸಮವಸ್ತ್ರ ಪಠ್ಯಪುಸ್ತಕ ಈ ರೀತಿ ಎಲ್ಲಾ ಸೌಲಭ್ಯಗಳನ್ನು ಮಕ್ಕಳಿಗೆ ಉಚಿತವಾಗಿ ನೀಡಲಾಗುತ್ತದೆ. ಊ ಸೌಲಭ್ಯಗಳನ್ನು ಪಡೆಯಲು ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಿ ಎಂದು ತಿಳಿಸಿದರು.
ತಾಲೂಕು ಪಂಚಾಯತಿ ಇಒ ಮುನಿರಾಜು ಮಾತನಾಡಿ, ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರಿ ಶಾಲೆಗೆ ಸೇರಿಸಿದರೆ ಮಕ್ಕಳ ವಿದ್ಯಾಭ್ಯಾಸ ಉತ್ತಮವಾಗುತ್ತದೆ. ಎಲ್ಲಾ ರಂಗದಲ್ಲೂ ಅವರು ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸೈಯದ್ ಅನ್ನಿಸ, ಅಕ್ಷರ ದಾಸೋಹ ಸಹ ನಿರ್ದೇಶಕ ಶಶಿ ಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿ ಹನುಮಂತರಾಯಪ್ಪ,, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಎಂಎಸ್ ರಾಜಶೇಖರ್, ಪ್ರಧಾನ ಕಾರ್ಯದರ್ಶಿ ವಿಧನಂಜಯ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೆ.ಜೈಕುಮಾರ್, ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಸವಲಿಂಗಯ್ಯ, ಎಸ್ ಡಿ ಎಮ್ ಸಿ ಅಧ್ಯಕ್ಷ ಆನಂದ್, ಪರಿಕ್ರಮ ಸಂಸ್ಥೆಯ ಕಿರಣ್, ಶಾಲೆಯ ಮುಖ್ಯಶಿಕ್ಷಕಿ ಆರ್.ರಾಜೇಶ್ವರಿ, ಶಿಕ್ಷಕರಾದ ತಾಯಪ್ಪ, ಸುನಿಲ್, ಶಿವಕುಮಾರ್, ಭಾರತಿ, ಇಂದ್ರಮ್ಮ ಮತ್ತಿತರರಿದ್ದರು.