Handover of Kumki elephants to Andhra Pradesh: Cmsiddaramaiah

ಆಂಧ್ರ ಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ನುಡಿದರು.

ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ 6 ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ (Pavan kalyan) ಅವರಿಗೆ ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದರು.

ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3695 ಆನೆಗಳು ನಮ್ಮಲ್ಲಿವೆ ಎಂದರು.

ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತದೆ ಎಂದರು.

ಈ ವೇಳೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ (Pavan kalyan) ಅವರು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಶಾಲು ಹೊದಿಸಿ, ನೆನಪಿನ ಕಾಣಿಕೆ ನೀಡಿ, ಅಭಿನಂದಿಸಿದರು.

ತುಂಗಭದ್ರಾ ನೀರಿನ ವಿಚಾರವಾಗಿ ಚರ್ಚೆಗೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರ ಸಮಯ ನಿಗದಿಪಡಿಸಿ

“ತುಂಗಾಭದ್ರ ನದಿಯ ನಮ್ಮ ಪಾಲಿನ ನೀರನ್ನು ಬಳಕೆ ಮಾಡಿಕೊಳ್ಳುವ ಬಗ್ಗೆ ಚರ್ಚಿಸಲು ಆಂಧ್ರ ಪ್ರದೇಶ ಮುಖ್ಯಮಂತ್ರಿಗಳ ಸಮಯಾವಕಾಶ ಮಾಡಿಸಿಕೊಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಅವರಿಗೆ ತಿಳಿಸಿದರು.

“ಆನೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಬಂದಿರುವ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಹಾಗೂ ನಮ್ಮ ರಾಜ್ಯದ ಸಂಬಂಧ ಇನ್ನೂ ಉತ್ತಮವಾಗಲಿ. ನಮ್ಮ ಪಾಲಿನ 24 ಟಿಎಂಸಿ ನೀರಿನ ಬಳಕೆ ಬಗ್ಗೆ ನಿಮ್ಮ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಬೇಕಿದೆ” ಎಂದು ಹೇಳಿದರು.

ಆನೆಗಳಿಂದ ಆಂಧ್ರಪ್ರದೇಶದ ವಿಘ್ನಗಳು ನಿವಾರಣೆಯಾಗಲಿ

“ಆನೆ ವಿನಾಯಕನ ಸ್ವರೂಪ. ಆಂಧ್ರಪ್ರದೇಶದ ಎಲ್ಲಾ ವಿಘ್ನಗಳನ್ನು ನಿವಾರಣೆ ಮಾಡಲಿ ಎಂದು ತರಬೇತುಗೊಂಡ ಆರು ಆನೆಗಳನ್ನು ಆ ಸರ್ಕಾರದವರಿಗೆ ಹಸ್ತಾಂತರ ಮಾಡುತ್ತಿದ್ದೇವೆ. ಇನ್ನು ಎಷ್ಟು ಬೇಕಾದರೂ ಆನೆಗಳನ್ನು ಕಳುಹಿಸುವ ಶಕ್ತಿ ನಮ್ಮ ರಾಜ್ಯಕ್ಕಿದೆ.

ಕರ್ನಾಟಕದ ಪ್ರಾಣಿ ಸಂಪತ್ತು ಹೇರಳವಾಗಿದೆ. ಮುಂದಿನ ಪೀಳಿಗೆ ಈ ಸಂಪತ್ತನ್ನು ಕಣ್ತುಂಬಿಕೊಳ್ಳಬೇಕು. ನನ್ನ ಮನೆಯ ಗೋಡೆಗೆ ಒತ್ತರಿಸಿಕೊಂಡು 50 ಕ್ಕೂ ಹೆಚ್ಚು ಆನೆಗಳು ಹೋಗಿದ್ದನ್ನು ನಾನು ಈ ಹಿಂದೆ ನೋಡಿದ್ದೇನೆ. ಇದರ ವಿಡಿಯೋ ಕೂಡ ನನ್ನ ಬಳಿಯಿದೆ” ಎಂದು ತಿಳಿಸಿದರು.

“ಆನೆಗಳನ್ನು ತರಬೇತುಗೊಳಿಸುವುದೇ ಕಷ್ಟದ ಕೆಲಸ. ಈ ಹಿಂದೆ ನೀವು ಖೆಡ್ಡಾ ಸಿನಿಮಾ ನೋಡಿರಬಹುದು. ಆನೆಗಳನ್ನು ಓಡಿಸಿಕೊಂಡು ಬಂದು ಹಿಡಿದು ಪಳಗಿಸುತ್ತಿದ್ದ ಕಾಲ ಈಗ ಇಲ್ಲ. ನಮ್ಮ ವನ್ಯಸಂಪತ್ತನ್ನು ಕಾಪಾಡುವ ಕೆಲಸ ಮಾಡಬೇಕು. ಈಶ್ವರ್ ಖಂಡ್ರೆಯವರ ಬಳಿ ಜಗಳ ಮಾಡಿ, ಮಾಡಿ ನಮ್ಮ ಭಾಗದ ಶೇ. 50 ರಷ್ಟು ಕಾಡಂಚಿಗೆ ರೈಲ್ವೇ ಕಂಬಿ ಅಳವಡಿಸಲಾಗಿದೆ. ಅನೇಕ ನಮ್ಮ ರೈತರು ಆನೆಗಳಿಂದ ಜೀವ ಕಳೆದುಕೊಂಡಿದ್ದಾರೆ” ಎಂದರು.

“ನಮ್ಮ ಅರಣ್ಯ ಇಲಾಖೆಯವರು ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ ಅವರಿಗೆ ಮಾತ್ರ ಕಬಿನಿ ಅರಣ್ಯ ಪ್ರದೇಶದಲ್ಲಿ ಸಫಾರಿ ಮಾಡಲು ನಿಯಂತ್ರಣ ತೆಗೆದುಕೊಂಡಿದ್ದಾರೆ. ಖಾಸಗಿಯವರಿಗೆ ಅವಕಾಶ ನೀಡದೇ ಇರುವುದು ಒಳ್ಳೆಯ ಕೆಲಸ. ನನ್ನ ಹುಟ್ಟುಹಬ್ಬ ಆಚರಣೆ ಮಾಡಲು ಕಬಿನಿಗೆ ಹೋಗಿದ್ದೆ. ನಾನು ಈ ಹಿಂದೆ ಕಬಿನಿಗೆ ಹೋಗಿರಲಿಲ್ಲ. ಅಲ್ಲಿ ನನ್ನ ಅಳಿಯನ ರೆಸಾರ್ಟ್ ಕೂಡ ಇದೆ. ಅರಣ್ಯ ಇಲಾಖೆಯವರು ಹುಲಿ, ಚಿರತೆ ತೋರಿಸದರು. ನಂತರ ಹಿನ್ನಿರಿನಲ್ಲಿ ಸುಮಾರು 150 ಕ್ಕೂ ಹೆಚ್ಚು ಆನೆಗಳನ್ನು ಕೇವಲ ಅರ್ಧ ಗಂಟೆ ಸಮಯದಲ್ಲಿ ತೋರಿಸಿದರು. ಇಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜಿಂಕೆಗಳಿವೆ ಎಂದು ಅಧಿಕಾರಿಗಳು ಹೇಳಿದರು” ಎಂದರು.

“ಇದಕ್ಕೂ ಮೊದಲು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ದಸರಾ ಸಮಯದಲ್ಲಿ ರಾಜ್ಯಕ್ಕೆ ಬಂದಾಗ ಆರೆಂಜ್ ಕೌಂಟಿ ಎನ್ನುವ ಜಾಗದಲ್ಲಿ ವಿಹಾರ ನಡೆಸಲು ವ್ಯವಸ್ಥೆ ಮಾಡಿದ್ದೆ. ನಾನು ಕಾರಣಾಂತರಗಳಿಂದ ತೆರಳಲು ಆಗಿರಲಿಲ್ಲ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಈಶ್ವರ್ ಖಂಡ್ರೆ, ದಿನೇಶ್ ಗುಂಡೂರಾವ್, ಬೈರತಿ ಸುರೇಶ್, ಕೆಕೆಆರ್ಡಿಬಿ ಅಧ್ಯಕ್ಷ ಅಜಯ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!