PM E-Drive Project of National Importance: HD Kumaraswamy

PM E-ಡ್ರೈವ್ ರಾಷ್ಟ್ರೀಯ ಮಹತ್ವದ ಯೋಜನೆ: ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ: ಪಿಎಂ ಇ-ಡ್ರೈವ್ ಯೋಜನೆಯಡಿಯಲ್ಲಿ ಇವಿ ಚಾರ್ಜಿಂಗ್ ಮೂಲಸೌಕರ್ಯ ಅನುಷ್ಠಾನವನ್ನು ಪರಿಶೀಲನೆ ಹಾಗೂ ಅದನ್ನು ಮತ್ತಷ್ಟು ವೇಗವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕೇಂದ್ರದ ಬೃಹತ್ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಅಂತರ ಸಚಿವಾಲಯ ಸಮನ್ವಯ ಸಭೆಯನ್ನು ನಡೆಸಿದರು.

ನವದೆಹಲಿಯ ತಮ್ಮ ಸಚಿವಾಲಯದಲ್ಲಿ ಸಚಿವರು ಕರೆದಿದ್ದ ಈ ಸಭೆಯಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮತ್ತು ಬೃಹತ್ ಕೈಗಾರಿಕೆ ಸಚಿವಾಲಯದ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಭೂಸಾರಿಗೆ ವಲಯದಲ್ಲಿ ವಾಯು ಮಾಲಿನ್ಯವನ್ನು ಗಣನೀಯವಾಗಿ ತಗ್ಗಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಇ-ಡ್ರೈವ್ ಅನುಷ್ಠಾನಕ್ಕೆ ಬಂದಿದ್ದು, ಇದನ್ನು ರಾಷ್ಟ್ರೀಯ ಮಹತ್ವದ ಯೋಜನೆ ಎಂದು ಪರಿಗಣಿಸಿ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಕಟಿಬದ್ಧವಾಗಿ ಕೆಲಸ ಮಾಡಬೇಕು ಎಂದು ಸಚಿವರು ಒತ್ತಿ ಹೇಳಿದರು.

ಪ್ರಧಾನಿಗಳ ದೂರದೃಷ್ಟಿಯಂತೆ ಈ ಯೋಜನೆಯು ಮಾಲಿನ್ಯ ಮುಕ್ತ ಸಾರಿಗೆ ವ್ಯವಸ್ಥೆಯನ್ನು ಸಕ್ರಿಯಗೊಳಿಸುತ್ತದೆ ಮತ್ತು ಸಾಂಪ್ರದಾಯಿಕ ಇಂಧನಗಳ ಮೇಲಿನ ಭಾರತದ ಅವಲಂಬನೆಯನ್ನು ಕಡಿಮೆ ಮಾಡಲು ರಾಷ್ಟ್ರವ್ಯಾಪಿ ವಿದ್ಯುತ್ ಚಾಲಿತ ವಾಹನ ಕ್ಷೇತ್ರಕ್ಕೆ ಅಗತ್ಯವಾದ ಪೂರಕ ವ್ಯವಸ್ಥೆಯನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ. ಇದಕ್ಕೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಸಮನ್ವಯತೆ ಅತ್ಯಗತ್ಯ ಎಂದು ಸಚಿವರು ಪ್ರತಿಪಾದಿಸಿದರು.

₹2,000 ಕೋಟಿ ವೆಚ್ಚ

ಪಿಎಂ ಇ- ಡ್ರೈವ್ ಯೋಜನೆ ಮೂಲಕ ₹2,000 ಕೋಟಿ ವೆಚ್ಚದಲ್ಲಿ ದೇಶಾದ್ಯಂತ ಸುಮಾರು 72,000 ಸಾರ್ವಜನಿಕ ಎಲೆಕ್ಟ್ರಿಕ್ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಬೆಂಬಲ ನೀಡುತ್ತದೆ. ಈ ಕೇಂದ್ರಗಳನ್ನು 50 ರಾಷ್ಟ್ರೀಯ ಹೆದ್ದಾರಿ ಕಾರಿಡಾರ್‌ಗಳಲ್ಲಿ, ಮೆಟ್ರೋ ನಗರಗಳು, ಟೋಲ್ ಪ್ಲಾಜಾಗಳು, ರೈಲ್ವೆ ನಿಲ್ದಾಣಗಳು, ವಿಮಾನ ನಿಲ್ದಾಣಗಳು, ಇಂಧನ ಮಳಿಗೆಗಳು ಮತ್ತು ರಾಜ್ಯ ಹೆದ್ದಾರಿಗಳಂತಹ ಹೆಚ್ಚಿನ ದಟ್ಟಣೆಯ ತಾಣಗಳಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ಸಚಿವರು ಹೇಳಿದರು.

ಭಾರತವು ಸುಸ್ಥಿರ ಸಾರಿಗೆಗೆ ಜಾಗತಿಕ ಮಟ್ಟದಲ್ಲಿ ಮಾದರಿಯಾಗುವ ಹಾದಿಯಲ್ಲಿದೆ. ಪಿಎಂ ಇ- ಡ್ರೈವ್ ಯೋಜನೆಯು ನಮ್ಮ ನಾಗರಿಕರಿಗೆ ಸ್ವಚ್ಛ, ಕೈಗೆಟುಕುವ ಮತ್ತು ಅನುಕೂಲಕರ ಸಾರಿಗೆ ಆಯ್ಕೆಗಳಿಗೆ ಅವಕಾಶ ನೀಡುವ ಗುರಿಯನ್ನು ಹೊಂದಿರುವ ಪರಿವರ್ತನಾತ್ಮಕ ಉಪಕ್ರಮವಾಗಿದೆ.

ನಾವು ಕೇವಲ ಮೂಲಸೌಕರ್ಯವನ್ನು ನಿರ್ಮಿಸುತ್ತಿಲ್ಲ, ಇಂಧನ ಭದ್ರತೆ ಮತ್ತು ಹಸಿರು ಆರ್ಥಿಕ ಬೆಳವಣಿಗೆಗೆ ನಾವು ಅಡಿಪಾಯವನ್ನು ನಿರ್ಮಿಸುತ್ತಿದ್ದೇವೆ ಎಂದು ಅವರು ಹೇಳಿದರು.

ನೋಡೆಲ್ ಏಜೆನ್ಸಿಯಾಗಿ ಬಿಎಚ್‌ಇಎಲ್

ಈ ಉಪಕ್ರಮದ ಅನುಷ್ಠಾನದಲ್ಲಿ ವಿವಿಧ ಪಾಲುದಾರರ ಸಮಗ್ರ ಪಾತ್ರವನ್ನು ಸಚಿವರು ಶ್ಲಾಘಿಸಿದರು. ಬಿಎಚ್‌ಇಎಲ್ (ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್) ಅನ್ನು ಬೇಡಿಕೆ ಒಟ್ಟುಗೂಡಿಸುವಿಕೆಗೆ ಮತ್ತು ಭಾರತದಾದ್ಯಂತ ಇವಿ ಬಳಕೆದಾರರಿಗೆ ಒಂದೇ ವೇದಿಕೆಯಾಗಿ ಕಾರ್ಯನಿರ್ವಹಿಸುವ ಏಕೀಕೃತ ಡಿಜಿಟಲ್ ಸೂಪರ್ ಅಪ್ಲಿಕೇಶನ್‌ನ ಅಭಿವೃದ್ಧಿಗಾಗಿ ನೋಡಲ್ ಏಜೆನ್ಸಿಯಾಗಿ ಪರಿಗಣಿಸಲಾಗುತ್ತಿದೆ ಎಂದ ಸಚಿವರು ಮಾಹಿತಿ ನೀಡಿದರು.

ಪಿಎಂ ಇ-ಡ್ರೈವ್ ಯೋಜನೆಯಡಿಯಲ್ಲಿ ರಾಷ್ಟ್ರೀಯ ನಿಯೋಜನೆಯನ್ನು ಪತ್ತೆಹಚ್ಚಲು ಈ ಅಪ್ಲಿಕೇಶನ್ ನೈಜ-ಸಮಯದ ಸ್ಲಾಟ್ ಬುಕಿಂಗ್, ಪಾವತಿ ವ್ಯವಸ್ಥೆ, ಚಾರ್ಜರ್ ಲಭ್ಯತೆಯ ಸ್ಥಿತಿ ಮತ್ತು ಪ್ರಗತಿ ಡ್ಯಾಶ್‌ಬೋರ್ಡ್‌ಗಳನ್ನು ಒಳಗೊಂಡಿರುತ್ತದೆ.

ಚಾರ್ಜರ್ ಸ್ಥಾಪನೆಗಳಿಗೆ ಪ್ರಸ್ತಾವನೆಗಳನ್ನು ಸಂಗ್ರಹಿಸಲು ಮತ್ತು ಮೌಲ್ಯಮಾಪನ ಮಾಡಲು ಬಿಎಚ್‌ಇಎಲ್ ವತಿಯಿಂದ ರಾಜ್ಯಗಳು ಮತ್ತು ಸಚಿವಾಲಯಗಳೊಂದಿಗೆ ಸಮನ್ವಯ ಸಾಧಿಸಲಾಗುವುದು ಎಂದು ಕೇಂದ್ರ ಸಚಿವರು ತಿಳಿಸಿದರು.

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]