I haven't been given a house for two years: R Ashoka

ಕಾಂಗ್ರೆಸ್‌ ರಾಜ್ಯ ಸರ್ಕಾರದ ಆಡಳಿತಕ್ಕೆ ದಿವಾಳಿ ಆಫ್‌ ಮಾಡಲ್‌ ಕರ್ನಾಟಕ ಎಂಬ ಬಿರುದು ನೀಡಿದ್ದೇವೆ: ಆರ್‌.ಅಶೋಕ

ಬೆಂಗಳೂರು: ಜನರ ಮೇಲೆ ತೆರಿಗೆ ಭಾರ ಹೊರೆಸಿರುವ ಕಾಂಗ್ರೆಸ್‌ ಸರ್ಕಾರಕ್ಕೆ ʼದಿವಾಳಿ ಮಾಡಲ್‌ ಆಫ್‌ ಕರ್ನಾಟಕʼ ಎಂಬ ಬಿರುದು ನೀಡುತ್ತಿದ್ದೇವೆ. ಕಾಂಗ್ರೆಸ್‌ ನಾಯಕರು ಜನರ ಸಾವಿನ ಮೇಲೆ ಸಾಧನೆಯ ಸಮಾವೇಶ ನಡೆಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ಆರ್ಮಿ ಜನರಲ್‌ ಆಸಿಫ್‌ ಮುನೀರ್‌ಗೆ ಫೀಲ್ಡ್‌ ಮಾರ್ಷಲ್‌ ಬಿರುದು ನೀಡಿದಂತೆಯೇ, ನಾವೆಲ್ಲರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ʼದಿವಾಳಿ ಮಾಡಲ್‌ ಆಫ್‌ ಕರ್ನಾಟಕʼ ಎಂಬ ಬಿರುದು ನೀಡುತ್ತಿದ್ದೇವೆ.

ಜನರು ತೆರಿಗೆ ಭಾರವನ್ನು ಹೊತ್ತಿರುವಾಗ ಕಾಂಗ್ರೆಸ್‌ ಸಮಾವೇಶ ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ಲೂಟಿಯಾಗಿದೆ. ಮುಡಾದಲ್ಲಿ 14 ಸೈಟುಗಳನ್ನು ಸಿಎಂ ಸಿದ್ದರಾಮಯ್ಯ ಲೂಟಿ ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಸತ್ತಿದ್ದಾರೆ. 2 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಎಲ್ಲ ಕಾರಣಕ್ಕೆ ಸಮಾವೇಶ ಮಾಡಲಾಗಿದೆಯೇ? ಎಂದು ಪ್ರಶ್ನಿಸಿದರು.

ವಕ್ಫ್‌ ಮಂಡಳಿಯಿಂದ ರೈತರ ಜಮೀನು, ದೇವಾಲಯದ ಭೂಮಿ ಕಬಳಿಸಲಾಗಿದೆ. ಕೆಪಿಎಸ್‌ಸಿಯಿಂದ ನಡೆದ ಪರೀಕ್ಷೆಯಲ್ಲಾದ ತಪ್ಪಿನಿಂದ 2 ಲಕ್ಷ ಅಭ್ಯರ್ಥಿಗಳ ಜೀವನಕ್ಕೆ ಕೊಡಲಿ ಏಟು ಬಿದ್ದಿದೆ. ಹುಬ್ಬಳ್ಳಿಯಲ್ಲಿ ಲವ್‌ ಜಿಹಾದ್‌ನಿಂದ ನೇಹಾ ಹತ್ಯೆಯಾಗಿದೆ. ನಾಗಮಂಗಲದಲ್ಲಿ ಕೋಮು ಗಲಭೆ ನಡೆದಾಗ ಗಣೇಶನನ್ನೇ ಜೈಲಿಗೆ ಹಾಕಿದ್ದರು.

ಮಳೆ ಬಂದು ಬೆಂಗಳೂರಿನಲ್ಲಿ ಐದು ಜನರು ಮೃತಪಟ್ಟಿದ್ದಾರೆ. ರಾಜಧಾನಿಯನ್ನು ತೇಲುತ್ತಿರುವ ಬೆಂಗಳೂರು ಮಾಡಿದ್ದಾರೆ. ಹಾಲಿನ ದರ ಹೆಚ್ಚಳ ಮಾಡುವುದರ ಜೊತೆಗೆ ಸುಮಾರು 700 ಕೋಟಿ ರೂ. ಪ್ರೋತ್ಸಾಹಧನ ನೀಡಿಲ್ಲ. ಇವೆಲ್ಲ ಸಾಧನೆಗಳಿಗಾಗಿ ಸರ್ಕಾರ ಸಮಾವೇಶ ಮಾಡಿದೆ ಎಂದು ದೂರಿದರು.

ಅವೈಜ್ಞಾನಿಕ ಗ್ಯಾರಂಟಿಗಳಿಗಾಗಿ 60,000 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಇದಕ್ಕಾಗಿ ಸಾಲ ಮಾಡಲಾಗಿದೆ. ಈ ನಡುವೆ ವಿದ್ಯುತ್‌ ಶುಲ್ಕ ಹೆಚ್ಚಿಸಲಾಗಿದೆ. ಕಾನೂನು ಸುವ್ಯವಸ್ಥೆಯನ್ನು ಯಾರೂ ಕೇಳುವವರೇ ಇಲ್ಲ. ಗೃಹಸಚಿವರನ್ನು ಪ್ರಶ್ನಿಸಿದರೆ ಇದು ಆಕಸ್ಮಿಕ ಘಟನೆ, ಆರೋಪಿಯು ಮಾನಸಿಕ ಅಸ್ವಸ್ಥ ಎನ್ನುತ್ತಾರೆ. ಮಲ್ಲಿಕಾರ್ಜುನ ಖರ್ಗೆಯನ್ನು ಪಾಕಿಸ್ತಾನವನ್ನು ʼನಮ್ಮ ಪಾಕಿಸ್ತಾನʼ ಎಂದು ಹೇಳುತ್ತಾರೆ. ಭಯೋತ್ಪಾದನಾ ಕೃತ್ಯವನ್ನು ಸಣ್ಣದು ಎಂದು ಹೇಳುತ್ತಾರೆ. ಇಂತಹ ಕಾಂಗ್ರೆಸ್‌ ನಾಯಕರ ಬಂಡವಾಳ ಜನರ ಮುಂದೆ ಬಯಲಾಗಿದೆ ಎಂದರು.

ಎಟಿಎಂ ಸರ್ಕಾರ

ಕಾಂಗ್ರೆಸ್‌ ಜನರನ್ನು ಲೂಟಿ ಮಾಡಿ ಎಟಿಎಂ ಮಾಡಿ ಕೇಂದ್ರಕ್ಕೆ ಕಳುಹಿಸುತ್ತಿದೆ. ಬೆಂಗಳೂರಿನಲ್ಲಿ ಎಷ್ಟು ಕಾಮಗಾರಿ ಮಾಡಲಾಗಿದೆ, ಎಷ್ಟು ಅನುದಾನ ನೀಡಲಾಗಿದೆ ಎಂದಿ ತಿಳಿಸಲಿ. ಬಿಜೆಪಿ ಅವಧಿಯಲ್ಲಿ 1,600 ಕೋಟಿ ರೂ. ನೀಡಿ ಕಾಮಗಾರಿಗೆ ಟೆಂಡರ್‌ ಆಗಿತ್ತು. ಅದನ್ನು ರದ್ದು ಮಾಡಲಾಗಿದೆ. 54,000 ಕೋಟಿ ರೂ. ನೀಡಲಾಗುವುದು ಎಂದು ಘೋಷಣೆ ಮಾಡಿದ್ದರೂ, ಆ ಹಣ ಬಂದೇ ಇಲ್ಲ.

ರಸ್ತೆಗಳಿಗೆ 7,000 ಕೋಟಿ ರೂ. ಎಂದು ಘೋಷಿಸಿ, ಅದನ್ನು ಸುರಂಗ ಯೋಜನೆಗೆ ಬಳಸಿದ್ದಾರೆ. ಮಳೆಯಿಂದಾಗಿ ರಸ್ತೆಗಳಲ್ಲಿ ಸುರಂಗ ಈಗಾಗಲೇ ನಿರ್ಮಾಣವಾಗಿದೆ. ಬ್ರ್ಯಾಂಡ್‌ ಬೆಂಗಳೂರು ಎಂದು ಹೇಳಿ ಅದನ್ನು ಮಾಡದೆ, ಈಗ ಗ್ರೇಟರ್‌ ಬೆಂಗಳೂರು ಎನ್ನುತ್ತಿದ್ದಾರೆ. ಆದರೆ ಅದನ್ನೂ ಸರಿಯಾಗಿ ಮಾಡಿಲ್ಲ. ನಮಗೆ ನಾಡಪ್ರಭು ಕೆಂಪೇಗೌಡರ ಸುಸಜ್ಜಿತ ನಗರವಿದ್ದರೆ ಸಾಕು ಎಂದರು.

ಬೆಂಗಳೂರಿನ ಪರಿಹಾರ ಕಾರ್ಯಾಚರಣೆಗೆ 5,000 ಕೋಟಿ ರೂ. ಬಿಡುಗಡೆ ಮಾಡಬೇಕಿದೆ. ವಿಶ್ವಬ್ಯಾಂಕ್‌ನಿಂದ ಹಣ ಪಡೆಯುವ ಪ್ರಸ್ತಾವ ನಮ್ಮ ಅವಧಿಯಲ್ಲೇ ಚರ್ಚೆಯಾಗಿತ್ತು. ಮಳೆಹಾನಿಯಿಂದ ಮನೆ ಕಳೆದುಕೊಂಡವರಿಗೆ 25,000 ರೂ. ನಿಂದ 1 ಲಕ್ಷ ರೂ. ವರೆಗೆ ಪರಿಹಾರ ನೀಡಲಿ. ಕೇವಲ ಏಳೆಂಟು ಸಾವಿರ ರೂ. ಪರಿಹಾರ ಬೇಕಿಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಂದು ಹತ್ತು ವರ್ಷ ಕಳೆದಿದೆ. ಮೋದಿ ಸರ್ಕಾರ ರೈಲ್ವೆಗೆ, ಕುಡಿಯುವ ನೀರಿಗೆ, ಹೆದ್ದಾರಿಗೆ ಎಷ್ಟು ಅನುದಾನ ನೀಡಿದ್ದಾರೆ ಎಂದು ನಾವು ತಿಳಿಸುತ್ತೇವೆ. ಮನಮೋಹನ್‌ ಸಿಂಗ್‌ ಎಷ್ಟು ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಲಿ. ತೆರಿಗೆ ಪಾವತಿಸುವುದು ಮಾನದಂಡ ಆಗುವುದಿಲ್ಲ. ಮೈಸೂರಿನ ಜನರು, ಬೆಂಗಳೂರಿನ ಜನರು ʼನಮ್ಮ ತೆರಿಗೆ ನಮ್ಮ ಹಕ್ಕುʼ ಎಂದರೆ ಏನು ಮಾಡುತ್ತಾರೆ ಎಂದು ಪ್ರಶ್ನೆ ಮಾಡಿದರು.

ಚಿನ್ನದ ಸ್ಮಗ್ಲಿಂಗ್‌

ರನ್ಯಾ ರಾವ್‌ ಚಿನ್ನದ ಕಳ್ಳ ಸಾಗಾಣಿಕೆಗೆ ಸಂಬಂಧಿಸಿದಂತೆ ಸಿದ್ಧಾರ್ಥ ಎಜುಕೇಶನ್‌ ಸಂಸ್ಥೆಯನ್ನು ತನಿಖೆಗೆ ಒಳಪಡಿಸಲಾಗಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ಎಲ್ಲರ ಮೇಲೂ ಕ್ರಮ ಕೈಗೊಳ್ಳಬೇಕು. ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣದಲ್ಲೇ ಕಾಂಗ್ರೆಸ್‌ ನಾಯಕರು ಭಯಕ್ಕೊಳಗಾಗಲಿಲ್ಲ. ತಪ್ಪು ಮಾಡಿರುವುದಕ್ಕೆ ಭಯ ಪಡುವಂತೆ ಮಾಡಬೇಕಿದೆ ಎಂದರು.

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!