Hgd

ಬೆಂಗಳೂರಿಗೆ 4500 ಎಲೆಕ್ಟ್ರಿಕ್ ಬಸ್ ಹಂಚಿಕೆ: ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ: ಪಿಎಂ ಇ-ಡ್ರೈವ್ ಅಡಿಯಲ್ಲಿ ಮೊದಲ ಹಂತದಲ್ಲಿಯೇ ರಾಷ್ಟ್ರದ ಐದು ಪ್ರಮುಖ ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಈ ಪೈಕಿ ಬೆಂಗಳೂರು ನಗರಕ್ಕೆ 4500 ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಲಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ತಿಳಿಸಿದರು.

ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಎಲೆಕ್ಟ್ರಿಕ್ ಬಸ್ ಹಂಚಿಕೆಯ ಸಂಬಂಧ ಕರ್ನಾಟಕ, ತೆಲಂಗಾಣ, ಗುಜರಾತ್ ಹಾಗೂ ದೆಹಲಿ ರಾಜ್ಯಗಳ ಅಧಿಕಾರಿಗಳ ಜತೆ ಕೇಂದ್ರ ಸಚಿವರು ಸಭೆ ನಡೆಸಿದರು.

ಎಲೆಕ್ಟ್ರಿಕ್ ಬಸ್ ಗಳ ಬಳಕೆ ಹಾಗೂ ಅವುಗಳ ನಿರ್ವಹಣೆಗೆ ಅಗತ್ಯವಾದ ಪೂರಕ ಮೂಲಸೌಕರ್ಯವನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಚಿವರು; ಮಾಲಿನ್ಯರಹಿತ ಸಮೂಹ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವುದು ರಾಷ್ಟ್ರೀಯ ಅಗತ್ಯ ಎಂದು ಪ್ರತಿಪಾದಿಸಿದರು.

ಬಸ್ ಹಂಚಿಕೆಯಲ್ಲಿ ಬೇಡಿಕೆ, ಜನಸಂಖ್ಯೆ ಹಾಗೂ ಹಳೆಯ ಬಸ್ ಗಳ ವಿಲೇವಾರಿ ಅಂಶಗಳನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದರು.

ಕರ್ನಾಟಕಕ್ಕೆ 4500 ಬಸ್ ಹಂಚಿಕೆ

ಕರ್ನಾಟಕದ ಪರವಾಗಿ ಸಭೆಯಲ್ಲಿ ಹಾಜರಿದ್ದ ಸರಿಗೆ ಇಲಾಖೆಯ ಕಾರ್ಯದರ್ಶಿ ಎನ್.ವಿ.ಪ್ರಸಾದ್ ಅವರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಾಗಿ (BMTC) 7,000 ಎಲೆಕ್ಟ್ರಿಕ್ ಬಸ್ ಗಳಿಗೆ ಬೇಡಿಕೆ ಸಲ್ಲಿಸಿದರು.

ಕೆಲ ದಿನಗಳ ಹಿಂದೆ ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾಗಿದ್ದ ರಾಜ್ಯದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕೂಡ ಇಷ್ಟೇ ಸಂಖ್ಯೆಯ ಬಸ್ ಗಳಿಗೆ ಬೇಡಿಕೆ ಸಲ್ಲಿಸಿದರು.

ಈ ಬೇಡಿಕೆ ಹಾಗೂ ಜನಸಂಖ್ಯೆಯನ್ನು ಪರಿಗಣಿಸಿ ಮೊದಲ ಹಂತದಲ್ಲಿಯೇ ಬಿಎಂಟಿಸಿಗೆ 4,500 ಬಸ್ ಗಳನ್ನು ಒದಗಿಸುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದರು. ದೇಶದ ಇತರೆ ನಗರಗಳಿಗೆ ಹೋಲಿಸಿದರೆ ಬೆಂಗಳೂರು ನಗರಕ್ಕೆ ಅತ್ಯಧಿಕ ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆಯನ್ನು ಅವರು ನೀಡಿದರು.

ಉಳಿದಂತೆ ದೆಹಲಿ ಸಾರಿಗೆ ಸಂಸ್ಥೆ 2800 ಬಸ್ ಗಳಿಗೆ ಬೇಡಿಕೆ ಇಟ್ಟಿದ್ದು, ಅಷ್ಟೂ ಬಸ್ ಗಳನ್ನು ಒದಗಿಸುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದರು.

ದೇಶದ ಇತರೆ ನಗರಗಳಿಗೆ ಹೋಲಿಸಿದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜನಸಂಖ್ಯೆ ಅಧಿಕವಾಗಿದೆ. ಜತೆಗೆ ಇನ್ನೂ ಕೆಲ ಅಂಶಗಳನ್ನು ಪರಿಗಣಿಸಿ ಬೇಡಿಕೆ ಇಟ್ಟಿರುವಷ್ಟೂ ಸಂಖ್ಯೆಯ ಬಸ್ ಗಳನ್ನು ಹಂಚಿಕೆ ಮಾಡುವಂತೆ ಕೇಂದ್ರ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಳಿದಂತೆ ಸೂರತ್ ನಗರ ಸಾರಿಗೆ ಸಂಸ್ಥೆ 600 ಬಸ್ ಗಳಿಗೆ ಬೇಡಿಕೆ ಇಟ್ಟಿದ್ದು, ಅಷ್ಟೂ ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಲಾಗಿದೆ. ಅಹಮದಾಬಾದ್ ನಗರಕ್ಕೆ 1000 ಬಸ್ ಗಳನ್ನು ಕೇಳಲಾಗಿದ್ದು, ಅಷ್ಟೂ ಬಸ್ ಗಳನ್ನೂ ಹಂಚಿಕೆ ಮಾಡುವುದಕ್ಕೆ ಸಚಿವರು ಒಪ್ಪಿಗೆ ನೀಡಿದರು.

ತೆಲಂಗಾಣದ ರಾಜಧಾನಿ ಹೈದರಾಬಾದ್ ನಗರ ಸಾರಿಗೆ ಸಂಸ್ಥೆ 2800 ವಿದ್ಯುತ್ ಚಾಲಿತ ಬಸ್ ಗಳಿಗೆ ಬೇಡಿಕೆ ಇಟ್ಟಿತ್ತು, ಆ ಪೈಕಿ 2000 ಬಸ್ ಗಳನ್ನು ಹಂಚಿಕೆ ಮಾಡುವ ಬಗ್ಗೆ ಸಚಿವರು ಭರವಸೆ ನೀಡಿದರು.

ಒಟ್ಟಾರೆಯಾಗಿ ಐದೂ ನಗರಗಳಿಂದ 14,200 ಬಸ್ ಗಳಿಗೆ ಬೇಡಿಕೆ ಬಂದಿತ್ತು. ಆ ಪೈಕಿ 10,900 ಬಸ್ ಗಳನ್ನು ಮೊದಲ ಹಂತದಲ್ಲಿ ಹಂಚಿಕೆ ಮಾಡಲಾಗುತ್ತಿದೆ ಎಂದ ಕೇಂದ್ರ ಸಚಿವರು, ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡುವ ಮುನ್ನ ಐದೂ ನಗರಗಳ ಸಾರಿಗೆ ಸಂಸ್ಥೆಗಳು ಡಿಪೋಗಳಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವುದು ಸೇರಿದಂತೆ ಅಗತ್ಯವಾದ ಮೂಲಸೌಕರ್ಯವನ್ನು ಸಿದ್ಧ ಮಾಡಿಟ್ಟುಕೊಳ್ಳಬೇಕು.

ಈಗಾಗಲೇ ಅಸ್ತಿತ್ವದಲ್ಲಿರುವ ಡಿಪೋಗಳನ್ನು ಮೇಲ್ದರ್ಜೆಗೆ ಏರಿಸುವುದು ಹಾಗೂ ಅಗತ್ಯವಾದರೆ ಹೊಸ ಡಿಪೋಗಳನ್ನು ಸ್ಥಾಪಿಸುವ ಬಗ್ಗೆ ತ್ವರಿತಗತಿಯಲ್ಲಿ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರಿಗೆ ಸಿಕ್ಕಿದ್ದೆಷ್ಟು?

•ಬಿಎಂಟಿಸಿ ಒಟ್ಟು ಬೇಡಿಕೆಯ ಮೂರನೇ ಎರಡರಷ್ಟು (67%) ಬಸ್ ಗಳ ಬೇಡಿಕೆ ಪೂರೈಕೆ

•ಹಂಚಿಕೆ ಮಾಡುತ್ತಿರುವ 10,900 ಬಸ್ ಗಳಲ್ಲಿ 4,500 ಬಸ್ ಗಳು ಬೆಂಗಳೂರಿಗೆ

•ಮೊದಲ ಹಂತದಲ್ಲಿ ಉದ್ಯಾನ ನಗರಿಗೆ ಸಿಂಹಪಾಲು

•ಬೆಂಗಳೂರು ಹೆಚ್ಚು ಜನಸಂಖ್ಯೆಯುಳ್ಳ ನಗರ ಎಂದು ಪರಿಗಣನೆ

•ಸುಮಾರು 800 ಕಿ ಮಿ ವ್ಯಾಪ್ತಿಯಲ್ಲಿ ಬಿಎಂಟಿಸಿ ಬಸ್ ಕಾರ್ಯಾಚರಣೆ ನಡೆಸುತ್ತಿದೆ. ಈ ಅಂಶವನ್ನು ಪರಿಗಣಿಸಲಾಗಿದೆ.

ಮಾಲಿನ್ಯರಹಿತ ಸಮೂಹ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವುದು ರಾಷ್ಟ್ರೀಯ ಅಗತ್ಯ. ಈ ಕಾರಣಕ್ಕಾಗಿಯೇ ಪ್ರಧಾನಿ ನರೇಂದ್ರ ಮೋದಿ ಅವರು ಈ ಯೋಜನೆಗೆ ಹೆಚ್ಚು ಒತ್ತು ನೀಡಿದ್ದು, ಅವರ ಮಾರ್ಗದರ್ಶನದಲ್ಲಿ ಗುರಿ ಸಾಧಿಸುತ್ತೇವೆ; ಹೆಚ್.ಡಿ. ಕುಮಾರಸ್ವಾಮಿ,
ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರು.

ರಾಜಕೀಯ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

ಜೆಡಿಎಸ್ ಪಕ್ಷವನ್ನು ರಾಜ್ಯಾದ್ಯಂತ ಸಂಘಟಿಸುತ್ತಿರುವ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರಿಗೆ ಹೋದಲೆಲ್ಲಾ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.

[ccc_my_favorite_select_button post_id="110752"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!