BJP leaders appealed to the Governor for protection..!

ರಕ್ಷಣೆ ನೀಡುವಂತೆ ರಾಜ್ಯಪಾಲರ ಮೊರೆ ಹೋದ ಬಿಜೆಪಿ ನಾಯಕರು..!

ಬೆಂಗಳೂರು; ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಕುರಿತು ಅವಹೇಳನಕಾರಿ ಪದ ಬಳಕೆ ಹಿನ್ನೆಲೆಯಲ್ಲಿ, ಪ್ರಿಯಾಂಕ್‌ ಖರ್ಗೆ ಬೆಂಬಲಿಗರು ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ (Chalvadi Narayanaswamy) ಅವರಿಗೆ ಮುತ್ತಿಗೆ ಹಾಕಿ, ಕಾರಿಗೆ ಬಣ್ಣ ಸುರಿದು, ಹೈಡ್ರಾಮ ಸೃಷ್ಟಿಸಿದ್ದಾರೆ

ಈ ಕುರಿತಂತೆ ಬಿಜೆಪಿ ಮುಖಂಡರು ಇಂದು ರಾಜಭವನದಲ್ಲಿ ರಾಜ್ಯಪಾಲರಿಗೆ ರಕ್ಷಣೆ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka), ಕಾಂಗ್ರೆಸ್‌ನ ಗೂಂಡಾಗಳು ಕಾನೂನು ಕೈಗೆ ತೆಗೆದುಕೊಂಡು ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ದಾಳಿ ಮಾಡಿದ್ದಾರೆ. ಇದರ ಹಿಂದೆ ಸಚಿವ ಪ್ರಿಯಾಂಕ್‌ ಖರ್ಗೆ ಇದ್ದಾರೆ ಎಂದು ಆರೋಪಿಸಿದ್ದಾರೆ‌

ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರ ಕಾರಿನ ಮೇಲೆ ಕಾಂಗ್ರೆಸ್‌ ಗೂಂಡಾಗಳು ದಾಳಿ ಮಾಡಿದ್ದಾರೆ. ಸರ್ಕಾರ ಮಾಡಿರುವ ತಪ್ಪುಗಳ ವಿರುದ್ಧ ನಾರಾಯಣಸ್ವಾಮಿ ಮಾತಾಡಿದ್ದಾರೆ. ಆದರೆ ಅವರ ಮೇಲೆ ಹಲ್ಲೆ ಮಾಡಲು ಯತ್ನಿಸಲಾಗಿದೆ. ಇದೇ ರೀತಿ ಸಿ.ಟಿ.ರವಿ ಅವರ ಮೇಲೂ ದಾಳಿ ಮಾಡಲಾಗಿತ್ತು. ಪೊಲೀಸರು ನಾರಾಯಣಸ್ವಾಮಿ ಅವರಿಗೆ ರಕ್ಷಣೆ ನೀಡಿಲ್ಲ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಿಟ್ಟಿಲ್ಲ ಎಂದು ದೂರಿದರು.

ನಾರಾಯಣಸ್ವಾಮಿ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿ, ಕಾರಿನ ಮೇಲೆ ಬಣ್ಣ, ಮೊಟ್ಟೆ ಹಾಕಲಾಗಿದೆ. ಕೊಲೆ ಬೆದರಿಕೆ ಹಾಕಲಾಗಿದೆ. ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವುದು ಪ್ರತಿಪಕ್ಷ ನಾಯಕರ ಕರ್ತವ್ಯ. ಅದನ್ನು ಅವರು ಸರಿಯಾಗಿಯೇ ಮಾಡಿದ್ದಾರೆ.

ನಾಯಿ ಬೊಗಳಿದರೆ ಸ್ವರ್ಗ ಹಾಳಾಗಲ್ಲ ಎಂಬುದು ಗಾದೆ ಮಾತು ಅಷ್ಟೆ. ಕಲಬುರ್ಗಿಯಲ್ಲಿ ಇದು ಹೊಸದಲ್ಲ. ಇದು ಪ್ರತಿ ದಿನದ ಕಾಯಕವಾಗಿದೆ. ಸಚಿವ ಪ್ರಿಯಾಂಕ್‌ ಖರ್ಗೆ ಇದರ ಹಿಂದೆ ಇದ್ದಾರೆ ಎಂದರು.

ಕಾಂಗ್ರೆಸ್‌ ಕಾರ್ಯಕರ್ತರಿಗೆ ಕಾನೂನು ಕೈಗೆ ತೆಗೆದುಕೊಳ್ಳುವ ಅಧಿಕಾರವನ್ನು ಯಾರು ನೀಡಿದ್ದಾರೆ? ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಗೂಂಡಾಗಿರಿ ಮಾಡುತ್ತಿದೆ ಎನ್ನುವುದು ಸ್ಪಷ್ಟವಾಗಿ ಕಾಣುತ್ತಿದೆ.

ನಾರಾಯಣಸ್ವಾಮಿ ಅವರಿಗೆ ಸೂಕ್ತ ರಕ್ಷಣೆ ನೀಡಬೇಕು. ಪೊಲೀಸರು ಹಾಗೂ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ರಾಜಕೀಯ

ಎರಡು ವರ್ಷದಿಂದ ನನಗೆ ಮನೆ ಕೊಟ್ಟಿಲ್ಲ: ಆರ್ ಅಶೋಕ

ಎರಡು ವರ್ಷದಿಂದ ನನಗೆ ಮನೆ ಕೊಟ್ಟಿಲ್ಲ: ಆರ್ ಅಶೋಕ

ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ನನಗೆ ಅಧಿಕೃತ ಸರ್ಕಾರಿ ನಿವಾಸ ಕೊಡಿ ಎಂದು ಈವರೆಗೂ ರಾಜ್ಯ ಸರ್ಕಾರಕ್ಕೆ ಆರು ಬಾರಿ ಪತ್ರ ಬರೆದಿದ್ದೇನೆ: ಆರ್ ಅಶೋಕ (R Ashoka)

[ccc_my_favorite_select_button post_id="111165"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!