It is our responsibility to resolve the problems caused by rain: DCM DK Shivakumar

ಮಳೆಯಿಂದಾಗುತ್ತಿರುವ ಸಮಸ್ಯೆ ನಿವಾರಣೆ ನಮ್ಮ ಜವಾಬ್ದಾರಿ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಮಳೆ ನೀರಿನಿಂದಾಗುತ್ತಿರುವ ಅನಾಹುತಗಳನ್ನು ತಪ್ಪಿಸಲು ಶಾಶ್ವತ ಪರಿಹಾರ ಕಂಡುಹಿಡಿಯುವುದು ನಮ್ಮ ಜವಾಬ್ದಾರಿ. ನಾವದನ್ನು ಮಾಡುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಪುನರುಚ್ಚರಿಸಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.

ಮಳೆ ಪ್ರಮಾಣ ಕಡಿಮೆಯಾಗಿದ್ದು, ಪರಿಹಾರ ಕಾರ್ಯ ಕೈಗೊಳ್ಳುವ ಬಗ್ಗೆ ಕೇಳಿದಾಗ, “ನಾನು ಹೆಚ್ಚು ಮಳೆಯಾಗಬೇಕು ಎಂದು ಬಯಸುವವನು. ಮಳೆ ಹೆಚ್ಚಾಗಿ ಬಂದಷ್ಟು ನಾವು ಏನೆಲ್ಲಾ ಸರಿಪಡಿಸಿಕೊಳ್ಳಬಹುದು ಎಂದು ತಿಳಿಯುತ್ತದೆ. ಇತ್ತೀಚೆಗೆ ಸಿಎಂ ನೇತೃತ್ವದಲ್ಲಿ ಕೆರೆ ಅಭಿವೃದ್ಧಿ ಪ್ರಾಧಿಕಾರದ ಸಭೆ ಮಾಡಿದ್ದು, ಮುಂಜಾಗ್ರತಾ ಸಭೆಯನ್ನು ಮಾಡಿದ್ದೇವೆ.

ಬೆಂಗಳೂರಿನಲ್ಲಿ ಮಳೆನೀರುಗಾಲುವೆಗಳ ಅಭಿವೃದ್ಧಿ ಪೂರ್ಣಗೊಳಿಸಲು 2 ಸಾವಿರ ಕೋಟಿ ಮೊತ್ತದ ಯೋಜನೆ ರೂಪಿಸಲಾಗಿದೆ. ಮಳೆಯಿಂದಾಗುತ್ತಿರುವ ಸಮಸ್ಯೆಗಳ ಬಗ್ಗೆ ಜನರಿಗೆ ಆಕ್ರೋಶವಿದೆ. ಹೀಗಾಗಿ ತಗ್ಗು ಪ್ರದೇಶಗಳಲ್ಲಿ ಯಾವುದೇ ಕಾರಣಕ್ಕೂ ಬೇಸ್ ಮೆಂಟ್ ಪಾರ್ಕಿಂಗ್ ನಿರ್ಮಾಣ ಮಾಡದಿರುವಂತೆ ನಿಯಮ ರೂಪಿಸಲು ನಗರ ಯೋಜನಾ ಪ್ರಾಧಿಕಾರಕ್ಕೆ ಸೂಚಿಸಿದ್ದೇನೆ” ಎಂದು ತಿಳಿಸಿದರು.

“ಕೆಲವು ಪ್ರದೇಶಗಳಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದರೂ ಭೂಮಿಯಿಂದ ಜಲ ಬರುತ್ತಿದೆ. ಇದನ್ನು ತೆಗೆಯುವಾಗ ಇಬ್ಬರು ಮೃತಪಟ್ಟಿದ್ದಾರೆ. ಇಂತಹ ಅನಾಹುತಗಳನ್ನು ತಪ್ಪಿಸಲು ರಾಜಕಾಲುವೆಗಳ ಎರಡೂ ಬದಿಯ ಬಫರ್ ವಲಯದಲ್ಲಿ ರಸ್ತೆ ಮಾಡಲು ತೀರ್ಮಾನಿಸಿದ್ದೇವೆ. ಇದರಿಂದ 50 ಅಡಿಗಳಷ್ಟು ಜಾಗ ಸುರಕ್ಷಿತವಾಗಿರುತ್ತದೆ. ಜತೆಗೆ ರಾಜಕಾಲುವೆಗಳ ಹೂಳೆತ್ತಲು, ಜನರ ಸಂಚಾರಕ್ಕೂ ಅನುಕೂಲವಾಗಲಿದೆ” ಎಂದರು.

ವಿರೋಧ ಪಕ್ಷಗಳಿರುವುದೇ ರಾಜಕೀಯ ಮಾಡಲು

ಬುಧವಾರ ಮಳೆ ಹಾನಿ ಪ್ರದೇಶಗಳ ವೀಕ್ಷಣೆ ವೇಳೆ ಕೆಲವರು ನಿಮ್ಮನ್ನು ಭೇಟಿ ಮಾಡುವುದಕ್ಕೆ ನಿರಾಕರಿಸಿದರು ಎಂಬ ವಿಚಾರವಾಗಿ ಕೇಳಿದಾಗ, “ಅನೇಕರು ನಮ್ಮನ್ನು ಭೇಟಿ ಮಾಡಿದರು, ನಮ್ಮ ಮೇಲೆ ಕೂಗಾಡಿದರು. ನಾನು ಅವರೆಲ್ಲರ ದೂರುಗಳನ್ನು ಆಲಿಸಿದೆ. ಈ ರೀತಿ ಸಮಸ್ಯೆಗೆ ಒಳಗಾದವರು ಕೂಗಾಡುವುದು ಸಹಜ. ನಾವಿರುವುದೇ ಅವರ ಸಮಸ್ಯೆ ಆಲಿಸಲು. ಅವರ ಸಮಸ್ಯೆಗಳನ್ನು ಬಗೆಹರಿಸಲೇ ನಾವಿರುವುದು.

ನಾನು ಯಾವಾಗ ಬೇಕಾದರೂ ಅವರನ್ನು ಭೇಟಿ ಮಾಡುತ್ತೇನೆ. ನೂರಾರು ಜನರನ್ನು ಭೇಟಿ ಮಾಡಲಾಗದಿದ್ದರೂ ಅವರ ಪರವಾಗಿ ಬರುವವರನ್ನು ನಾನು ಭೇಟಿ ಮಾಡಿಯೇ ಮಾಡುತ್ತೇನೆ. ಕೆಲವರು ನಮ್ಮ ವಿರುದ್ಧ ಕೂಗಾಡಿದರೆ, ಮತ್ತೆ ಕೆಲವರು ನಮ್ಮ ಕೆಲಸಕ್ಕೆ ಪ್ರಶಂಸೆ ನೀಡುತ್ತಾರೆ.

ಬೆಂಗಳೂರು ನಗರದಲ್ಲಿ ಮಳೆಯಿಂದ ಸಮಸ್ಯೆಗೆ ಸಿಲುಕುತ್ತಿದ್ದ ಜಾಗಗಳ ಸಂಖ್ಯೆ 211 ಇತ್ತು. ಈ ಪೈಕಿ 166 ಪ್ರದೇಶಗಳಲ್ಲಿ ಸಮಸ್ಯೆ ಬಗೆಹರಿಸಲಾಗಿದೆ. ಉಳಿದ 44 ಕಡೆ ಕೆಲಸ ಬಾಕಿ ಇದ್ದು, ಇದರಲ್ಲಿ 24 ಕಡೆಗಳಲ್ಲಿ ಕಾರ್ಯ ಪ್ರಗತಿಯಲ್ಲಿದೆ. ವಿರೋಧ ಪಕ್ಷದವರು ಇರುವುದೇ ರಾಜಕೀಯ ಮಾಡಲು, ಮಾಡಲಿ. ನಾವು ಅವರ ಸಲಹೆಗಳನ್ನು ಸ್ವಾಗತಿಸುತ್ತೇವೆ” ಎಂದರು.

ಬಿಜೆಪಿ ಶಾಸಕರ ಕ್ಷೇತ್ರದಲ್ಲೇ ಇಂತಹ ಸಮಸ್ಯೆ

ನಾವು 2 ಸಾವಿರ ಕೋಟಿ ಯೋಜನೆ ಇಟ್ಟಿದ್ದೆವು ಆದರೆ ರಾಜ್ಯ ಸರ್ಕಾರ ಅದನ್ನು ಬಳಸಿಕೊಂಡಿಲ್ಲ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಅವರ ಕಾಲದಲ್ಲಿ ಯಾವುದೇ ಪರಿಹಾರ ಕಾರ್ಯವನ್ನು ಮಾಡಿಲ್ಲ. ನಮ್ಮ ಸರ್ಕಾರ ಮಳೆನೀರು ಗಾಲುವೆ ಯೋಜನೆಯನ್ನು ಏಕಕಾಲಕ್ಕೆ ಪೂರ್ಣಗೊಳಿಸಲು ಮುಂದಾಗಿದ್ದೇವೆ.

ಆರ್.ಅಶೋಕ್ ಅವರಿಗೆ ಒಂದು ಮಾತು ಹೇಳಲು ಬಯಸುತ್ತೇನೆ. ಇಂತಹ ಸಮಸ್ಯೆಗಳು ಆಗುತ್ತಿರುವುದು ಕೇವಲ ಬಿಜೆಪಿ ಶಾಸಕರ ಕ್ಷೇತ್ರಗಳಲ್ಲಿ ಮಾತ್ರ. ಅವರು ತಮ್ಮ ಅವಧಿಯಲ್ಲಿ ಸರಿಯಾಗಿ ಕೆಲಸ ಮಾಡದೇ ಇರುವ ಕಾರಣ ಈ ಸಮಸ್ಯೆ ಎದುರಾಗಿದೆ ಎಂದು ತಿಳಿಸಿದರು.

ಪರಮೇಶ್ವರ್ ಪ್ರಾಮಾಣಿಕರು, ಯಾವುದೇ ತಪ್ಪು ಮಾಡಿಲ್ಲ

ಗೃಹ ಸಚಿವರ ಶಿಕ್ಷಣ ಸಂಸ್ಥೆ ಮೇಲಿನ ಇಡಿ ದಾಳಿಗೂ ರನ್ಯಾ ರಾವ್ ಅವರ ಪ್ರಕರಣಕ್ಕೂ ಲಿಂಕ್ ಮಾಡಲಾಗುತ್ತಿದೆ ಎಂದು ಕೇಳಿದಾಗ, ನಾನು ಪರಮೇಶ್ವರ್ ಅವರ ಮನೆಗೆ ಭೇಟಿ ಮಾಡಿ ಅವರ ಜತೆ ಚರ್ಚೆ ಮಾಡಿದೆ. ನಾವು ಸಾರ್ವಜನಿಕ ಜೀವನದಲ್ಲಿದ್ದು ಬೇಕಾದಷ್ಟು ಜನ ಟ್ರಸ್ಟ್ ನಡೆಸುತ್ತಾರೆ. ಮದುವೆ ಶುಭ ಸಮಾರಂಭದಲ್ಲಿ ಅನೇಕ ಉಡುಗೊರೆಗಳು ಕೊಟ್ಟಿರಬಹುದು.

ಪರಮೇಶ್ವರ್ ರವರಂತಹ ಪ್ರಭಾವಿ ವ್ಯಕ್ತಿ ಬೇರೆಯವರಿಗೆ ಸ್ಮಗ್ಲಿಂಗ್ ಮಾಡಲು ಹೇಳಲು ಸಾಧ್ಯವೇ? ಈ ರೀತಿ ಯಾವುದೇ ರಾಜಕಾರಣಿ ಹೇಳಲು ಸಾಧ್ಯವಿಲ್ಲ. ಆ ಹೆಣ್ಣು ಮಗಳು ತಪ್ಪು ಮಾಡಿದ್ದರೆ ಅದು ಆಕೆಯ ವೈಯಕ್ತಿಕ ವಿಚಾರ. ತಪ್ಪು ಸಾಬೀತಾದರೆ ಆಕೆಗೆ ಕಾನೂನು ಪ್ರಕಾರ ಶಿಕ್ಷೆಯಾಗಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ಪರಮೇಶ್ವರ್ ಅವರ ಪ್ರಕರಣದಲ್ಲಿ ಅವರು ಕಾನೂನಿಗೆ ತಲೆಬಾಗುವ ವ್ಯಕ್ತಿ.

ರಾಜ್ಯದ ಗೃಹ ಸಚಿವರು. ಅವರು ದೊಡ್ಡ ನಾಯಕರು, ಎಂಟು ವರ್ಷ ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಅವರ ಬಗ್ಗೆ ನಮಗೆ ಹೆಮ್ಮೆಯಿದೆ. 1990ರಿಂದಲೂ ಅವರು ನನ್ನೊಂದಿಗೆ ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿದ್ದಾರೆ. ಅವರು ಸಜ್ಜನ ಹಾಗೂ ಪ್ರಾಮಾಣಿಕ ರಾಜಕಾರಣಿ. ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ತಿಳಿಸಿದರು.

ಪರಮೇಶ್ವರ್ ಅವರಿಗೆ ಏನಾದರೂ ಸಂದೇಶ ನೀಡುತ್ತೀರಾ ಎಂದು ಕೇಳಿದಾಗ, “ನಾನು ಅವರ ಮನೆಗೆ ಹೋಗಿ ಭೇಟಿ ಮಾಡಿದ್ದೇನೆ. ನಾವು ನಿಮ್ಮ ಪರವಾಗಿ ನಿಲ್ಲುತ್ತೇವೆ ಎಂದು ಹೇಳಿದ್ದೇನೆ” ಎಂದರು.

ಪರಮೇಶ್ವರ್ ಅವರು ಹೇಗಿದ್ದಾರೆ ಎಂದು ಕೇಳಿದಾಗ, “ಅವರು ಚೆನ್ನಾಗಿದ್ದಾರೆ, ಅವರು ಕೂಡ ಸಚಿವ ಸಂಪುಟ ಸಭೆಗೆ ಬರಲಿದ್ದಾರೆ” ಎಂದು ತಿಳಿಸಿದರು.

ರಾಮನಗರ ಜಿಲ್ಲೆ ಮರುನಾಮಕರಣ ಕೇವಲ ಆಸ್ತಿ ಮೌಲ್ಯ ಹೆಚ್ಚಿಸಿಕೊಳ್ಳಲು ಎಂಬ ಟೀಕೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಸಚಿವ ಸಂಪುಟದಲ್ಲಿ ಚರ್ಚೆಯಾಗಲಿ. ಆನಂತರ ನಾನು ನಿಮಗೆ ಪ್ರತಿಕ್ರಿಯೆ ನೀಡುತ್ತಾನೆ” ಎಂದರು.

ಉತ್ತರ ಪ್ರದೇಶದಲ್ಲಿ ನಗರಗಳ ಹೆಸರು ಬದಲಾವಣೆ ಮಾಡುವಾಗ ಯಾವುದೇ ತೊಂದರೆ ಇರಲಿಲ್ಲ. ಆದರೆ ಕರ್ನಾಟಕದ ವಿಚಾರದಲ್ಲಿ ಯಾಕೆ ಇಷ್ಟು ಅಡೆತಡೆ ಎಂದು ಕೇಳಿದಾಗ, “ಇದು ಕೇವಲ ರಾಜಕೀಯವಷ್ಟೇ” ಎಂದರು.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!