ಮೈಸೂರು ಸ್ಯಾಂಡಲ್ ಸೋಪಿಗೆ ತಮನ್ನಾ ಪ್ರಚಾರ ರಾಯಭಾರಿ: ವಿಶ್ವಮಟ್ಟದ ಉತ್ಪನ್ನ ಮಾಡಲು ಕಾರ್ಯತಂತ್ರ: ಎಂ ಬಿ ಪಾಟೀಲ

Karnataka's Mysore Sandal Soap should be promoted across the country: MB Patil

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಸಂಕೇತವಾಗಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ಡಿಎಲ್) ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ನಟಿ ತಮನ್ನಾ (Tamannaah) ಭಾಟಿಯಾ ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ.

ಇದರಲ್ಲಿ ಅವರ ವರ್ಚಸ್ಸು, ಡಿಜಿಟಲ್ ಪ್ರಸ್ತುತಿ ಮತ್ತು ಯುವಜನರೊಂದಿಗೆ ಅವರ ಸಂಪರ್ಕ ಇವುಗಳನ್ನು ಮಾತ್ರ ಪರಿಗಣಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (MB Patila) ಗುರುವಾರ ಸ್ಪಷ್ಟಪಡಿಸಿದ್ದಾರೆ.

ತಮನ್ನಾ ಅವರನ್ನು 6.2 ಕೋಟಿ ರೂಪಾಯಿ ಸಂಭಾವನೆಯೊಂದಿಗೆ ಎರಡು ವರ್ಷಗಳ ಅವಧಿಗೆ ಕೆಎಸ್ಡಿಎಲ್ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಂಡಿರುವುದಕ್ಕೆ ಕೆಲವರು ಅಪಸ್ವರ ಎತ್ತಿರುವುದಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ.

ಕೆಎಸ್ಡಿಎಲ್ ಕಳೆದ ಸಾಲಿ‌ನಲ್ಲಿ 1,785 ಕೋಟಿ ರೂಪಾಯಿ ವಹಿವಾಟು ನಡೆಸಿದೆ. ಇದರಲ್ಲಿ ಕರ್ನಾಟಕದ ಪಾಲು ಶೇ 18ರಷ್ಟಿದೆ. ಉಳಿದದ್ದು ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಮಹಾರಾಷ್ಟ್ರದಿಂದ ಬಂದಿದೆ.

ಸಂಸ್ಥೆಯ ವಹಿವಾಟನ್ನು 2030ರ ವೇಳೆಗೆ 5,000 ಕೋಟಿ ರೂಪಾಯಿಗೆ ಕೊಂಡೊಯ್ಯುವ ಗುರಿ ಇಟ್ಟುಕೊಂಡು ಈಗ ದಾಪುಗಾಲು ಹಾಕುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಮಾರುಕಟ್ಟೆ ತಂತ್ರವೇ ಮುಖ್ಯವಾಗುತ್ತದೆ. ಇದು ಮಾರುಕಟ್ಟೆ ಪರಿಣತರ ಸಮಿತಿಯ ತೀರ್ಮಾನವಾಗಿದೆ ಎಂದು ಅವರು ಹೇಳಿದ್ದಾರೆ.

ನಾವು ದೀಪಿಕಾ ಪಡುಕೋಣೆ, ರಶ್ಮಿಕಾ ಮಂದಣ್ಣ, ಪೂಜಾ ಹೆಗಡೆ, ಕಿಯಾರಾ ಅಡ್ವಾಣಿ ಅವರನ್ನೂ ಪರಿಗಣಿಸಿ‌ ನೋಡಿದೆವು. ಆದರೆ ತಮನ್ನಾ ಅವರು ಡಿಜಿಟಲ್ ಲೋಕದಲ್ಲಿ 2.8 ಕೋಟಿ ಪಾಲೋಯರ್ಸ್ ಹೊಂದಿ, ಉಳಿದವರಿಗಿಂತ ಮುಂದಿದ್ದಾರೆ. ಜತೆಗೆ ಅವರು ಅಖಿಲ ಭಾರತ ಮಟ್ಟದ ವರ್ಚಸ್ಸು ಹೊಂದಿದ್ದಾರೆ.

ಹೀಗಾಗಿ ಅವರನ್ನೇ ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಳ್ಳಲಾಗಿದೆ. ಇದು ಕೆಎಸ್ಡಿಎಲ್ ಸಂಸ್ಥೆಗೆ ನಾವು ತರುತ್ತಿರುವ ಸಮಗ್ರ ಪರಿವರ್ತನೆಯಲ್ಲಿ ಕೇವಲ ಒಂದು ಅಂಶವಷ್ಟೆ ಎಂದು ಅವರು ವಿವರಿಸಿದ್ದಾರೆ.

ಕೆಎಸ್ಡಿಎಲ್ ನ ಉದ್ಯೋಗಿಗಳು ಕನ್ನಡಿಗರೇ ಆಗಿದ್ದಾರೆ. ಬರುವ ಲಾಭಾಂಶದಲ್ಲಿ ಶೇಕಡ 30ರಷ್ಟನ್ನು ಸರಕಾರಕ್ಕೆ ಕೊಡಲಾಗುತ್ತಿದೆ. ಈಗ ಯೂರೋಪ್ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಮಾರುಕಟ್ಟೆ ವಿಸ್ತರಣೆ ಮಾಡಲಾಗುತ್ತಿದೆ. ಇವುಗಳ ಭಾಗವಾಗಿ 435 ವಿತರಕರನ್ನು ಹೊಸದಾಗಿ ನೇಮಿಸಿಕೊಳ್ಳಲಾಗಿದೆ. ಜತೆಗೆ ಇ-ಕಾಮರ್ಸ್ ಮೂಲಕ 500 ಕೋಟಿ ರೂಪಾಯಿ ವಹಿವಾಟು ನಡೆಸುವ ಮತ್ತು ರಫ್ತಿನಿಂದ 150 ಕೋಟಿ ರೂಪಾಯಿ ಗಳಿಸುವ ಗುರಿ ಹೊಂದಿದ್ದೇವೆ ಎಂದು ಪಾಟೀಲ ಪ್ರತಿಪಾದಿಸಿದ್ದಾರೆ.

ಇಷ್ಟಕ್ಕೂ ಒಂದು ಸರ್ಕಾರಿ ಸಂಸ್ಥೆ ಹೊಸ ಘಟಕವನ್ನು ವಿಜಯಪುರದಲ್ಲಿ ಆರಂಭಿಸುವ ಹಂತಕ್ಕೆ ಹೋಗುತ್ತಿದೆ ಎನ್ನುವುದೇ ಹೆಮ್ಮೆಯ ವಿಷಯ. ಹೀಗೆ ಮಾಡಿದ ನಂತರ ಅದನ್ನು ವಿಶ್ವಮಟ್ಟಕ್ಕೆ ತೆಗೆದುಕೊಂಡು‌ ಹೋಗಬೇಕಾಗಿದೆ. ಹಾಗೆಯೇ ಬ್ರ್ಯಾಂಡಿಂಗ್ ಹೆಚ್ಚಿಸಲು ಪ್ಯಾಕಿಂಗ್ ಬದಲಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.

109 ವರ್ಷಗಳ ಇತಿಹಾಸವಿರುವ ಕೆಎಸ್ಡಿಎಲ್ ಕರ್ನಾಟಕದ ಹೆಮ್ಮೆಯ ಉದ್ಯಮವಾಗಿದೆ. ಇದಕ್ಕೆ ಸಂಪೂರ್ಣ ಹೊಸತನದ ಸ್ಪರ್ಶ ನೀಡುತ್ತಿದ್ದು, ಉತ್ತರ ಭಾರತ ಮತ್ತು ವಿದೇಶಗಳಲ್ಲೂ ಮಾರುಕಟ್ಟೆ ವಿಸ್ತರಣೆ ಮಾಡಲಾಗುತ್ತಿದೆ.

ಇದರಲ್ಲಿ ಗೆಲ್ಲಬೇಕೆಂದರೆ ನಾವು ಅದಕ್ಕೆ ತಕ್ಕಂತೆ ಕಾರ್ಯತಂತ್ರ ರೂಪಿಸಬೇಕು. ತಮನ್ನಾ ಅವರನ್ನು ಬ್ರ್ಯಾಂಡ್ ಅಂಬಾಸಿಡರ್ ಮಾಡಿಕೊಂಡಿರುವುದು ಇದಕ್ಕೆ ತಕ್ಕ ಒಂದು ಉಪಕ್ರಮವಷ್ಟೆ. ಇದನ್ನು ಯಾರೂ ತಪ್ಪಾಗಿ ಭಾವಿಸಬಾರದು: ಅಪ್ಪಾಜಿ ನಾಡಗೌಡ, ಅಧ್ಯಕ್ಷರು, ಕೆಎಸ್ಡಿಎಲ್.

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]