Astrology: Likely to be a memorable day

ದಿನ ಭವಿಷ್ಯ: ಈ ರಾಶಿಯವರಿಂದು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಿ

Astrology: ಶುಕ್ರವಾರ, ಮೇ.23, 2025, ದೈನಂದಿನ ರಾಶಿ ಭವಿಷ್ಯ

ಮೇಷ: ಇಂದು ಧಾರ್ಮಿಕ ಕ್ಷೇತ್ರಕ್ಕೆ ಪ್ರಯಾಣ ಬೆಳೆಸುವರು, ಸರ್ವ ದೋಷ ಮತ್ತು ಚರ್ಮಕ್ಕೆ ಸಂಬಂಧಪಟ್ಟ ದೋಷ ನಿವಾರಣೆಯಾಗುವುದು. ಮದುವೆಯಾಗಲು ಉತ್ಸುಕರಾಗಿರುವವರು ಹೊಸ ಪ್ರಸ್ತಾಪಗಳನ್ನು ಸ್ವೀಕರಿಸಬಹುದು.

ವೃಷಭ: ಆರ್ಥಿಕ ಲಾಭವನ್ನು ಪಡೆಯುತ್ತಾರೆ. ಸಂಬಳ ಪಡೆಯುವ ಜನರು ಕೆಲವು ಲಾಭಗಳನ್ನು ಗಳಿಸುವ ಸಾಧ್ಯತೆಯಿದೆ. ಆದಾಯದ ಮೂಲಗಳು ಗಮನಾರ್ಹವಾಗಿ ಹೆಚ್ಚಾಗಬಹುದು. ಈ ದಿನ ಆಸ್ತಿ ಖರೀದಿಸುವ ಎಲ್ಲಾ ಲಕ್ಷಣಗಳು ಕಂಡುಬರುತ್ತೆ.

ಮಿಥುನ: ಉತ್ತಮ ಆದಾಯವನ್ನು ಗಳಿಸುವಲ್ಲಿ ಯಶಸ್ವಿಯಾಗುವರು. ನಿಮ್ಮ ಮಾತು ಮತ್ತು ಪದಗಳನ್ನು ಚಾತುರ್ಯದಿಂದ ಬಳಸುವುದರಿಂದ ನೀವು ಹಣವನ್ನು ಹೆಚ್ಚು ಸಂಪಾದಿಸಬಹುದು.

ಕಟಕ: ಮನೆ-ಸಂಬಂಧಿತ ವಿಷಯಗಳಲ್ಲಿ ಯಶಸ್ವಿಯಾಗುತ್ತೀರಿ ಮತ್ತು ಒಮ್ಮೆ ಮಾರಾಟ ಮಾಡಲು ಯೋಜಿಸಿದರೆ ಲಾಭ ಗಳಿಸಬಹುದು. ಆರೋಗ್ಯದ ಬಗ್ಗೆ ಗಮನವಿರಲಿ.

ಸಿಂಹ: ಆರೋಗ್ಯವನ್ನು ನೋಡಿಕೊಳ್ಳಿ. ನಿಮ್ಮ ಸಹೋದರ ಮತ್ತು ಸ್ನೇಹಿತನ ಬೆಂಬಲವು ಲಾಭ ಗಳಿಸಲು ನಿಮಗೆ ಸಹಾಯ ಮಾಡುತ್ತದೆ. ಸರ್ಕಾರಿ ಕೆಲಸ ಬಾಕಿ ಇದ್ದಲ್ಲಿ ಇಂದು ನೆರವೇರುತ್ತದೆ.

ಕನ್ಯಾ: ಸಹೋದ್ಯೋಗಿ ಗಳೊಂದಿಗೆ ನೀವು ಸಾಮರಸ್ಯ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳುತ್ತೀರಿ ಮತ್ತು ನಿಮ್ಮ ಹಿರಿಯ ಅಧಿಕಾರಿಗಳಿಂದ ಮೆಚ್ಚುಗೆಯನ್ನು ಪಡೆಯುತ್ತೀರಿ. ಬಹುದಿನಗಳ ನಿಮ್ಮ ಕೆಲಸ ಇಂದು ಈಡುವ ಸಾಧ್ಯತೆ ಹೆಚ್ಚು.

ತುಲಾ: ಹಿರಿಯ ಅಧಿಕಾರಿಗಳೊಂದಿಗೆ ಸಾಮರಸ್ಯ ಮತ್ತು ಸಂಘಟಿತ ಪ್ರಯತ್ನಗಳನ್ನು ಕಾಪಾಡಿಕೊಳ್ಳಿ ಮತ್ತು ನಿಮ್ಮ ತಂದೆಯ ಆರೋಗ್ಯವನ್ನು ನೋಡಿಕೊಳ್ಳಿ. ಕೆಲವರು ಮಕ್ಕಳಿಂದಾಗಿ ನೋವನ್ನು ಎದುರಿಸಬೇಕಾಗಬಹುದು.

ವೃಶ್ಚಿಕ: ದೊಡ್ಡ ಮೊತ್ತವನ್ನು ಖರ್ಚು ಮಾಡಬಹುದು. ಇದು ವಿದ್ಯಾರ್ಥಿಗಳಿಗೆ ಸರಾಸರಿ ದಿನ. ಸಂಪೂರ್ಣವಾಗಿ ಹೊಸ ಮೂಲಗಳಿಂದ ಹಣವನ್ನು ಸ್ವೀಕರಿಸುತ್ತೀರಿ. ಬಹುದಿನದ ಕೆಲಸ ಇಂದು ಪೂರ್ಣಗೊಳ್ಳುವ ಸಾಧ್ಯತೆ ಹೆಚ್ಚು.

ಧನಸ್ಸು: ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯು ಹೆಚ್ಚು ಕಾಡುವ ಸಾಧ್ಯತೆಯಿದೆ ಆದ್ದರಿಂದ ಮನಃಪೂರ್ವಕವಾಗಿ ತಿನ್ನಬೇಕು ಮತ್ತು ವೈದ್ಯರನ್ನು ಸಂಪರ್ಕಿಸಬೇಕು. ಜಗರೂಕರಾಗಬೇಕು.

ಮಕರ: ಸಹೋದರ ಮತ್ತು ಸ್ನೇಹಿತನ ಬೆಂಬಲವು ಲಾಭಗಳಿಸಲು ನಿಮಗೆ ಸಹಾಯ ಮಾಡುತ್ತದೆ. ವಾಹನವನ್ನು ನಿಧಾನವಾಗಿ ಚಲಿಸಿ.

ಕುಂಭ: ಕೆಲಸದ ಸ್ಥಳದಲ್ಲಿ ಲಾಭಗಳಿಸುವ ಸಾಧ್ಯತೆಯಿದೆ. ಸಂಬಳ ಪಡೆಯುವ ಜನರಿಗೆ ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿಯನ್ನು ನೀಡಬಹುದು, ವ್ಯಾಪಾರಸ್ಥರು ಇಂದು ಹೆಚ್ಚು ಲಾಭ ನಿರೀಕ್ಷಿಸಬಹುದು.

ಮೀನ: ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಬಹುದು ಮತ್ತು ಹಣವನ್ನು ಸಹ ಖರ್ಚು ಮಾಡಬಹುದು. ಆಕಸ್ಮಿಕವಾಗಿ ಕ್ಷೇತ್ರ ದರ್ಶನ ಮಾಡುವಿರಿ.

ರಾಹುಕಾಲ: 11:06 ರಿಂದ 12:32
ಗುಳಿಕಕಾಲ: 08:14 ರಿಂದ 09:40
ಯಮಗಂಡಕಾಲ: 03:24 ರಿಂದ 04:50

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!