ಬಮೂಲ್ ಚುನಾವಣೆ; ಬಿಜೆಪಿ – ಜೆಡಿಎಸ್‌‌ಗೆ ಒಳೇಟಿನ ಆತಂಕ..!

Doddaballapura Bamul election recount begins

ದೊಡ್ಡಬಳ್ಳಾಪುರ: ಮೇ.25ರಂದು ನಡೆಯಲಿರುವ ಬೆಂಗಳೂರು ಸಹಕಾರ ಹಾಲು ಒಕ್ಕೂಟದ (Bamul) ನಿರ್ದೇಶಕ ಸ್ಥಾನದ ಚುನಾವಣೆ ಎರಡು ದಿನಗಳು ಮಾತ್ರ ಉಳಿದಿದ್ದು, ಅಚ್ಚರಿ ಎಂಬಂತೆ ಈ ಚುನಾವಣೆಗೆ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಮೈತ್ರಿ ಮಿತ್ರರ (ಕಮಲ-ದಳ) ನಡುವೆಯೇ ರಾಜಕೀಯ ಸಮರ ನಡೆಯುತ್ತಿದೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಮಾಜಿ ನಿರ್ದೇಶಕ ಬಿಸಿ ಆನಂದ್ ಕುಮಾರ್ ಅವರು ಮತ್ತೊಮ್ಮೆ ಸ್ಪರ್ಧೆಗಿಳಿದಿದ್ದಾರೆ, ಮತ್ತೊಂದೆಡೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಹುಸ್ಕೂರ್ ಆನಂದ್ ಅವರು ಕಣಕ್ಕಿಳಿಯುವ ಮೂಲಕ ದೊಡ್ಡಬಳ್ಳಾಪುರ ನಿರ್ದೇಶಕ ಸ್ಥಾನದ ಚುನಾವಣೆ ಆನಂದಮಯವಾಗಿದೆ.

ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ನಾಮಪತ್ರ ಹಿಂಪಡೆದು, ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿದೆ. ಇದು ಬಿಜೆಪಿಗೆ ಆತಂಕಕ್ಕೆ ಕಾರಣವಾದರು, ಬಿಸಿ ಆನಂದ್ ಅವರು ಕೈಗೊಂಡಿರುವ ರೈತಪರ ಕಾರ್ಯಗಳು, ಡೈರಿಗಳ ಅಭಿವೃದ್ಧಿ ಕಾರ್ಯಗಳಿಗೆ ಮನ್ನಣೆ ಸಿಗುವ ವಿಶ್ವಾಸ ಹೆಚ್ಚಾಗಿದೆ.

ಇನ್ನೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗೆ ಹುಸ್ಕೂರು ಆನಂದ್ ಅವರಿಗೆ ಕಾಂಗ್ರೆಸ್ ಬೆಂಬಲ ದೊರಕಿರುವುದು ಆನೆ ಬಲ ದೊರತಂತಾಗಿದೆ, ಹುಸ್ಕೂರು ಆನಂದ್ ಅವರು ಹಲವು ರಾಜಕೀಯ ಚಟುವಟಿಕೆ, ಸಮಾಜ ಸೇವೆಗಳ ಮೂಲಕ ಜನರಿಗೆ ಪರಿಚಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತಮಗೆ ರೈತರ ಆಶೀರ್ವಾದ ದೊರಕುವ ವಿಶ್ವಾಸದಲ್ಲಿದ್ದಾರೆ‌.

ಒಳೇಟಿನ ಆತಂಕ

ಮೈತ್ರಿ ಮಿತ್ರರ ನಡುವೆಯೇ ಚುನಾವಣೆ ಕದನಕ್ಕೆ ಸಾಕ್ಷಿಯಾಗಿರುವ ದೊಡ್ಡಬಳ್ಳಾಪುರ ಬಮೂಲ್ ನಿರ್ದೆಶಕ ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಕ್ಕೆ ಒಳೇಟಿನ ಆತಂಕ ಎರಡು ಪಕ್ಷದ ಬೆಂಬಲಿಗರಲ್ಲಿ ಕಾಡುತ್ತಿದೆ.

ಕಾಂಗ್ರೆಸ್ ಜತೆ ಮೈತ್ರಿ ಕುರಿತು ಕೆಲ ಜೆಡಿಎಸ್ ನಾಯಕರಲ್ಲಿ ಅಸಮಾಧಾನ ಕೇಳಿಬಂದಿದೆ. ಬಿಸಿ ಆನಂದ್ ಅವರು ಪಕ್ಷಾತೀತವಾಗಿ ಮುಖಂಡರು, ಡೈರಿ ಅಧ್ಯಕ್ಷರ ವಿಶ್ವಾಸ ಹೊಂದಿರುವ ಕಾರಣ ಪಕ್ಷದಲ್ಲಿರುವವರೇ ಒಳೇಟು ನೀಡ್ತಾರ ಎಂಬ ಆತಂಕ ಜೆಡಿಎಸ್ ಬೆಂಬಲಿಗರದ್ದಾಗಿದೆ.

ಅಂತೆಯೇ ರಾಷ್ಟ್ರ, ರಾಜ್ಯ ಮಟ್ಟದಲ್ಲಿ ಬಿಜೆಪಿ ಜೆಡಿಎಸ್ ಜೊತೆ ಮೈತ್ರಿ ಹೊಂದಿದ್ದರು, ದೊಡ್ಡಬಳ್ಳಾಪುರ ಜೆಡಿಎಸ್ ನಾಯಕರ ವಿಶ್ವಾಸಕ್ಕೆ ಪಡೆಯದೆ ಹೋಗಿದ್ದು, ಜೆಡಿಎಸ್ ಸ್ಪರ್ಧೆಗೆ ಇಳಿದಿರುವುದು, ಜೆಡಿಎಸ್‌ ಅಭ್ಯರ್ಥಿಗೆ ಕಾಂಗ್ರೆಸ್ ಬೇಷರತ್ ಬೆಂಬಲ ನೀಡಿರುವುದು ಬಿಜೆಪಿಯಲ್ಲಿ ತಲ್ಲಣವನ್ನು ಸೃಷ್ಟಿಸಿದೆ.

ಗಂಭೀರ ವಿಷಯವೆಂದರೆ ಬಿಸಿ ಆನಂದ್ ಅವರ ಬೆಳವಣಿಗೆಯನ್ನು ಪಕ್ಷದಲ್ಲಿರುವ ಕೆಲವರು ಸಹಿಸುತ್ತಿಲ್ಲ‌. ಈ ಮುಂಚೆ ವಿಧಾನಸಭೆ ಚುನಾವಣೆ ವೇಳೆ ಬಿಸಿ ಆನಂದ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ ವೇಳೆ ಅನೇಕರ ಅಸಮಾಧಾನ ಕಂಡುಬಂದಿತ್ತು. ಅಂತವರು ಈಗ ಮತ್ತೆ ಒಳೇಟನ್ನು ನೀಡಬಹುದೇ ಎಂಬ ಆತಂಕ ಬಿಸಿ ಆನಂದ್ ಅವರ ಬೆಂಬಲಿಗರಲ್ಲಿ ಕಾಡುತ್ತಿದೆ.

ಮತ್ತೊಂದೆಡೆ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್, ದೊಡ್ಡಬಳ್ಳಾಪುರ ಬಮೂಲ್ ನಿರ್ದೇಶಕ ಸ್ಥಾನದ ಚುನಾವಣೆಗೆ ಅಭ್ಯರ್ಥಿಗಳನ್ನು ಕಣದಿಂದ ಹಿಂದೆ ಸರಿಯುವಂತೆ ಮಾಡಿದ್ದು, ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದು ಕೆಲ ಕಾಂಗ್ರೆಸ್ ಪಕ್ಷ ನಿಷ್ಠಾವಂತರ ಬೇಸರಕ್ಕೆ ಕಾರಣವಾಗಿದೆ.

ಸೈದ್ದಾಂತಿಕ ವಿರೋಧ, ದೊಡ್ಡಬಳ್ಳಾಪುರ ತಾಲೂಕಿನ ಬಿಜೆಪಿ ಆಡಳಿತ ವಿರುದ್ಧದ ಬೇಸರ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ವೆಂಕಟರಮಣಯ್ಯ ಅವರಿಗೆ ಆದ ಒಳೇಟಿನ ಪೆಟ್ಟಿಗೆ ತಿರುಗೇಟು ನೀಡಲು ಕಾಂಗ್ರೆಸ್ ಮುಖಂಡರಲ್ಲಿರುವ ಒಗ್ಗಟ್ಟು ಕಂಡುಬರುತ್ತಿದ್ದು, ಜೆಡಿಎಸ್ ಅಭ್ಯರ್ಥಿ ಹುಸ್ಕೂರು ಆನಂದ್ ಅವರಿಗೆ ವರವಾಗಬಹುದಾದರು, ಆದರೆ ಬಿಸಿ ಆನಂದ್ ಅವರು ಈ ಮುಂಚೆ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದವರಾದ ಕಾರಣ ಎಷ್ಟು ಮತಗಳನ್ನು ಸೆಳೆಯುತ್ತಾರೋ ಎಂಬ ಆತಂಕ ಕೂಡ ಕಾಂಗ್ರೆಸ್ ಮುಖಂಡರಲ್ಲಿಯೂ ಇದೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಐದು ಹೋಬಳಿಗಳ ಪೈಕಿ ಮಧುರೆ ಹೋಬಳಿ ಬೆಂಗಳೂರು ಉತ್ತರ ತಾಲ್ಲೂಕಿಗೆ ಸೇರಿದೆ. ಉಳಿದಂತೆ ತೂಬಗೆರೆ, ಕಸಬಾ, ದೊಡ್ಡಬೆಳವಂಗಲ ಹಾಗೂ ಸಾಸಲು ಹೋಬಳಿ ದೊಡ್ಡಬಳ್ಳಾಪುರ ಬಮೂಲ್ ನಿರ್ದೇಶಕ ಕ್ಷೇತ್ರಕ್ಕೆ ಸೇರಿದೆ.

ನಿರ್ದೇಶಕ ಸ್ಥಾನಕ್ಕೆ ಮತ ಚಲಾಯಿಸುವ ಹಕ್ಕನ್ನು 202 ಜನ ಹೊಂದಿದ್ದಾರೆ. ತಾಲ್ಲೂಕಿನಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಒಬ್ಬ ನಿರ್ದೇಶಕ ಅಥವಾ ಅಧ್ಯಕ್ಷರು ಮತ ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಮತದಾರರ ಓಲೈಕೆಗೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಒಳೇಟನ್ನು ತಡೆಯಲು ಎರಡು ಪಕ್ಷದ ಮುಖಂಡರು ಯಾವ ರೀತಿ ತಡೆದು ಯಶಸ್ವಿಯಾಗುತ್ತಾರೆ ಎಂಬ ಫಲಿತಾಂಶಕ್ಕಾಗಿ ಮೇ.25 ರ ಭಾನುವಾರದ ಸಂಜೆಯವರೆಗೆ ಕಾಯಬೇಕಿದೆ.

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]