Poisoning of school tank: CM Siddaramaiah lashes out at BJP

ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ- ಜನತೆಗೆ ಸಿಎಂ ಸಿದ್ದರಾಮಯ್ಯ ಸಲಹೆ

ಮೈಸೂರು: ಗುಣಮಟ್ಟದ ಆರೋಗ್ಯ ಸೇವೆಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಒದಗಿಸುವುದು ಸರ್ಕಾರದ ಗುರಿ. ಮೈಸೂರು ಜಿಲ್ಲೆಗೆ ಎಂ.ಆರ್.ಐ. ಸೌಲಭ್ಯವನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಜಿಲ್ಲಾ ಆಸ್ಪತ್ರೆ ಮೇಟಗಳ್ಳಿ ಯಲ್ಲಿ ಆಯೋಜಿಸಲಾಗಿದ್ದ ಡೇ ಕೇರ್ ಕಿಮೋಥೇರಪಿ ಕೇಂದ್ರ ವನ್ನು ವಿಡಿಯೋ ಸಂವಾದ ಮೂಲಕ ಉದ್ಘಾಟನೆ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು.

ಈ ಮೊದಲು ಕೀಮೋಥೆರಪಿ ಚಿಕಿತ್ಸೆಗೆ ಬೆಂಗಳೂರಿಗೆ ತೆರಳಬೇಕಾಗಿತ್ತು. ಇದು ರೋಗಿಗಳ ಪಾಲಿಗೆ ಕಷ್ಟಸಾಧ್ಯವಾಗಿತ್ತು. ರಾಜ್ಯದಲ್ಲಿ ಪ್ರತಿವರ್ಷ ಹೊಸ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಬಡ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ದೊರೆಯದ ಕಾರಣ, ಅಕಾಲಿಕ ಮರಣಕ್ಕೆ ತುತ್ತಾಗುತ್ತಿದ್ದರು.

ಕ್ಯಾನ್ಸರ್ ರೋಗಕ್ಕೆ ತುತ್ತಾಗುವವರ ಸಂಖ್ಯೆಯಲ್ಲಿ ತಮಿಳುನಾಡಿನ ನಂತರದ ಸ್ಥಾನವನ್ನು ಕರ್ನಾಟಕ ಪಡೆದಿದೆ. ಈ ಕಾಯಿಲೆ ತಕ್ಷಣ ಪತ್ತೆಯಾದರೆ ಗುಣಪಡಿಸುವ ಸಾಧ್ಯತೆಯಿದ್ದು, ಪತ್ತೆಯಾಗದ ಸಂದರ್ಭದಲ್ಲಿ ಮಾರಣಾಂತಿಕವಾಗಿಯೂ ಪರಿಣಮಿಸಬಹುದು. ಆದರೆ ಆಧುನಿಕ ಔಷದೋಪಚಾರಗಳು ಲಭ್ಯವಿದ್ದರೂ, ದುಬಾರಿಯಾಗಿದೆ ಎಂದರು.

ವೈದ್ಯಕೀಯ ಸೇವೆ ರಾಜ್ಯದ ಬಡವರಿಗೂ ದೊರೆಯಬೇಕು

ಭಾರತದಲ್ಲಿ ಸುಮಾರು 100 ಕೋಟಿ ಜನರಿಗೆ ಬಡತನದಿಂದಾಗಿ ಚಿಕಿತ್ಸೆ ಪಡೆಯುವ ಶಕ್ತಿಯಿರುವುದಿಲ್ಲ. 2013 ರಲ್ಲಿ ರಾಜ್ಯದ ಬಡವರ ಸಂಕಷ್ಟಕ್ಕೆ ಸ್ಪಂದಿಸಲು ನಮ್ಮ ಸರ್ಕಾರ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ.

2023ರಲ್ಲಿ ರಾಜ್ಯದ ಯಾವ ಬಡವರೂ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ 10 ಕೆಜಿ ಅಕ್ಕಿಯನ್ನು ಉಚಿತವಾಗಿ ಸರ್ಕಾರ ನೀಡುತ್ತಿದೆ. ಹಸಿವು ಮುಕ್ತ ರಾಜ್ಯ ನಿರ್ಮಿಸುವ ಜೊತೆಗೆ ಶಿಕ್ಷಣ, ವೈದ್ಯಕೀಯ ಸೇವೆ ರಾಜ್ಯದ ಪ್ರತಿಯೊಬ್ಬರಿಗೂ ದೊರೆಯಬೇಕೆಂಬುದು ಸರ್ಕಾರದ ಗುರಿ.

ಡಾ.ಬಿ.ಆರ್.ಅಂಬೇಡ್ಕರ್ ರವರು ತಿಳಿಸಿದಂತೆ ಸಮಾಜದಲ್ಲಿ ಸಮಾನತೆ ನೆಲೆಸಬೇಕಾದರೆ ಜಾತಿ ವ್ಯವಸ್ಥೆ ತೊಲಗಬೇಕು ಮತ್ತು ಆರ್ಥಿಕ, ಸಾಮಾಜಿಕ ಸಮಾನತೆ ಸಾಧಿಸಬೇಕು ಎಂದರು. 2013ರಲ್ಲಿ ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಮೈಸೂರಿನಲ್ಲಿ ಜಿಲ್ಲಾ ಆಸ್ಪತ್ರೆ ಇರಲಿಲ್ಲ. ಈ ಪ್ರಮುಖ ಜಿಲ್ಲೆಯಲ್ಲಿ ಸಕಲ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಅನುಭವ ಮತ್ತು ಪರಿಣಿತಿಯುಳ್ಳ ವೈದ್ಯರಿದ್ದಾರೆ

240 ಕೇಂದ್ರಗಳಲ್ಲಿ ಡಯಾಲಿಸಿಸ್ ಕೇಂದ್ರಗಳಿವೆ. ಡಯಾಲಿಸಿಸ್ ಎನ್ನುವುದು ಈಗ ಸಾಮಾನ್ಯ ರೋಗ ಎಂಬಂತಾಗಿದೆ. ಇದಕ್ಕೆ ದುಬಾರಿ ಬೆಲೆಯಾಗಿರುವುದರಿಂದ ಖಾಸಗಿ ಆಸ್ಪತ್ರೆಗೆ ಬಡ ಜನರು ಹೋಗಲಾಗುವುದಿಲ್ಲ.

ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷಗಳಷ್ಟು ಕೊಟ್ಟರೂ ಸಂಪೂರ್ಣ ಚಿಕಿತ್ಸೆಗೆ ಅದು ಸಾಲುವುದಿಲ್ಲ. ಇತ್ತೀಚೆಗೆ ಜನರಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಹೋದರೆ ಮಾತ್ರ ಖಾಯಿಲೆ ವಾಸಿಯಾಗುತ್ತದೆ ಎಂಬ ಭಾವನೆ ಇದೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಅನುಭವ ಮತ್ತು ಪರಿಣಿತಿ ಇರುವ ವೈದ್ಯರಿದ್ದಾರೆ ಎಂದರು.

ಜನರು ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಖಾಯಿಲೆ ವಾಸಿಯಾಗುತ್ತದೆ ಎಂದು ಅರಿಯಬೇಕು. ಜಯದೇವ ಆಸ್ಪತ್ರೆಗಳಲ್ಲಿ ನೀಡುವ ಚಿಕಿತ್ಸೆ ಯಾವ ಖಾಸಗಿ ಆಸ್ಪತ್ರೆಗೂ ಕಡಿಮೆಯಿಲ್ಲ ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು

ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಅದು ಇದ್ದರೆ ರೋಗ ಹರಡುವುದು ಕಡಿಮೆಯಾಗುತ್ತದೆ. ಸಂಸ್ಥೆಯ ಮುಖ್ಯಸ್ಥರು ಒಳ್ಳೆಯವರಿದ್ದರೆ ಒಳ್ಳೆ ಕೆಲಸಗಳಾಗುತ್ತದೆ.

ಸರ್ಕಾರ ಶಿಕ್ಷಣ, ಆರೋಗ್ಯ, ಅಭಿವೃದ್ಧಿ ಕಾಮಾಗಾರಿಗಳು, ಜನರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸಗಳಿಗೆ ಅನುದಾನ ನೀಡುತ್ತದೆ. ಪಂಚ ಗ್ಯಾರಂಟಿಗಳು ನೇರವಾಗಿ ಫಲಾನುಭವಿಗಳಿಗೆ ತಲಪುತ್ತಿದೆ. ಇದು ಎಲ್ಲಾ ಧರ್ಮ, ಜಾತಿ, ಪಕ್ಷಗಳಿಗೂ ಮುಕ್ತವಾಗಿದೆ ಎಂದರು. ರೋಗ ನ್ನುವುದು ಜಾತಿ, ಧರ್ಮ ನೋಡಿಕೊಂಡು ಬರುವುದಿಲ್ಲ. ಸಮಾಜದ ಬಡವರಿಗೆ ಹೆಚ್ಚು ಒತ್ತು ಕೊಟ್ಟು ಕೆಲಸ ಮಾಡುವುದು ಅಗತ್ಯ ಎಂದರು.

ಕೀಮೋಥೆರಪಿ ಕೇಂದ್ರಗಳ ಸದುಪಯೋಗವಾಗಬೇಕು

ನಿಮ್ಹಾನ್ಸ್ ಕೇಂದ್ರ ಮೈಸೂರು ನಗರದಲ್ಲಿ ಆಗಬೇಕೆಂಬ ಕಾರಣದಿಂದ ಬಾರಿಯ ಬಜೆಟ್ ನಲ್ಲಿ ಅನುದಾನವನ್ನು ಮೀಸಲಿರಿಸಲಾಗಿದೆ. ಶೇ 60% ರೋಗಿಗಳು ಚಿಕಿತ್ಸೆಗಾಗಿ ನೂರು ಕಿಮೀ ವರೆಗೆ ಪ್ರಯಾಣ ಮಾಡಬೇಕಾದ ಸ್ಥಿತಿ ಇದೆ. ಅದಕ್ಕಾಗಿ ನಾವು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೀಮೋಥೆರಪಿ ಸೌಲಭ್ಯವನ್ನು ಒದಗಿಸುತ್ತಿದ್ದೇವೆ. ಇದರ ಲಾಭವನ್ನು ಮೂತ್ರಪಿಂಡ ಖಾಯಿಲೆಗೆ ತುತ್ತಾದವರು ಪಡೆದುಕೊಳ್ಳಬೇಕು ಎಂದರು.

ಗ್ಯಾರಂಟಿಗಳಿಂದ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯ

ಕೆಸ್ತೂರು ಗ್ರಾಮದ ಮಹಿಳೆಯೊಬ್ಬರು ಗೃಹಲಕ್ಷ್ಮೀ ಹಾಗೂ ಶಕ್ತಿ ಯೋಜನೆಯಂದಾಗಿ ಔಷಧ ಖರೀದಿಸಲು ಹಾಗೂ ಚಿಕಿತ್ಸೆ ಪಡೆಯಲು ಉಚಿತವಾಗಿ ಪ್ರಯಾಣಿಸಲು ಸಾಧ್ಯವಾಗುತ್ತಿದೆ ಎಂದು ಹೇಳಿದ್ದನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು ಗೃಹಲಕ್ಷ್ಮೀ ಯೋಜನೆಯಡಿ 1. 22 ಕೋಟಿ ಮಹಿಳೆಯರಿಗೆ ತಿಂಗಳಿಗೆ 2000 ರೂ.ಗಳನ್ನು ನೀಡುತ್ತಿದ್ದು, 1.63 ಕೋಟಿ ಮನೆಗಳಿಗೆ ಗೃಹಜ್ಯೋತಿ ಮೂಲಕ ಉಚಿತ ವಿದ್ಯುತ್ ನೀಡುತ್ತಿರುವುದರಿಂದ ಜನತೆಗೆ ಅನುಕೂಲವಾಗುತ್ತಿದೆ ಎಂದರು.

ಇದರಿಂದಾಗಿ ಬಡವರಿಗೆ ಶಕ್ತಿ ತುಂಬಲಾಗಿದೆ. ಸಮಸಮಾಜ ನಿರ್ಮಾಣ ಮಾಡಲು ಇದರಿಂದ ಸಾಧ್ಯವಾಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಸಮ ಸಮಾಜ ನಿರ್ಮಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರ ಮಾತನ್ನು ನಂಬಬೇಡಿ, ಅದು ಕೇವಲ ಸುಳ್ಳು ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಉಳಿದ ಜಿಲ್ಲೆಗಳಲ್ಲಿ ಶೀಘ್ರವೇ ಕೀಮೋಥೆರಪಿ ಕೇಂದ್ರ ತೆರೆಯಲಾಗುವುದು

ಕೀಮೋಥರೆಪಿ ಸೌಲಭ್ಯಗಳಿಲ್ಲದೇ ಇರುವ ಜಿಲ್ಲೆಗಳಲ್ಲಿ ಶೀಘ್ರವಾಗಿಯೇ ಕೀಮೋಥೆರಪಿ ಕೇಂದ್ರಗಳನ್ನು ತೆರೆಯಲಾಗುವುದು ಎಂದ ಮುಖ್ಯಮಂತ್ರಿಗಳು ಕ್ಯಾನ್ಸರ್ ಖಾಯಿಲೆ ಬಂದವರು ಧೃತಿಗೆಬೇಕಾದ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದರು. ತಾವೂ ಕೂಡ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ 25 ವರ್ಷಗಳ ಹಿಂದೆ ಒಳಗಾಗಿದ್ದನ್ನು ನೆನೆದ ಮುಖ್ಯಮಂತ್ರಿಗಳು ಇನ್ನೂ 25 ವರ್ಷಗಳ ಕಾಲ ನಾನು ಬದುಕುತ್ತೇನೆ ಎಂದರು.

ನಾವು ಮಾನಸಿಕವಾಗಿ ಎಷ್ಟು ಗಟ್ಟಿಯಾಗಿರತ್ತೇವೋ ಅಷ್ಟರ ಮಟ್ಟಿಗೆ ನಮ್ಮ ಆಯಸ್ಸು ಗಟ್ಟಿಯಾಗಿರುತ್ತದೆ. ನಮ್ಮ ಆಯಸ್ಸು ಮುಗಿದುಹೋಯಿತು ಎಂದು ಯಾರು ಅಂದುಕೊಳ್ಳವಬಾರದು ಎಂದು ಕಿವಿಮಾತು ಹೇಳಿದರು.

ಆರೋಗ್ಯಕರ ಜೀವನ ಮುಖ್ಯ

ಈ ಹಿಂದೆ, ಜನರಲ್ಲಿ ಕ್ಷಯರೋಗವೂ ಪತ್ತೆಯಾಗದೇ ಮಾರಣಾಂತಿಕವಾಗಿತ್ತು. ಆದರೆ ಈಗ ಆಧುನಿಕ ಸೌಲಭ್ಯಗಳಿಂದ ಇಂತಹ ರೋಗಗಳಿಂದ ಗುಣಮುಖರಾಗಬಹುದಾಗಿದೆ. ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ರೋಗಗಳನ್ನು ಮುಂಚಿತವಾಗಿ ಪತ್ತೆಹಚ್ಚಲು ಅನುಕೂಲವಾಗುತ್ತದೆ. ಆಗಮಾತ್ರ ಆರೋಗ್ಯಕರ ಜೀವನ ನಡೆಸಲು ಸಾಧ್ಯ.

ಆರೋಗ್ಯ ಸದೃಢವಾಗಿದ್ದರೆ, ದೇಶದ ಅಭಿವೃದ್ಧಿಯಲ್ಲಿ ಜನರೂ ಕೊಡುಗೆ ನೀಡಬಹುದು. ಜೀವನ ಶೈಲಿ ಮತ್ತು ಆಹಾರ ಪದ್ಧತಿಯ ಬಗ್ಗೆ ಗಮನ ಹರಿಸಿ ಎಂದು ಜನರಿಗೆ ಕಿವಿಮಾತು ಹೇಳಿದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿ‌ಎ (NDA) ಬೆಂಬಲಿತ ಅಭ್ಯರ್ಥಿಗಳ ಪರ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ (B. Mune

[ccc_my_favorite_select_button post_id="115484"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!