ಕರ್ನಾಟಕದ ಮೈಸೂರು ಸ್ಯಾಂಡಲ್ ಸೋಪ್ಗೆ ದೇಶಾದ್ಯಂತ ಪ್ರಚಾರ ಸಿಗಬೇಕು: ಎಂಬಿ ಪಾಟೀಲ

Karnataka's Mysore Sandal Soap should be promoted across the country: MB Patil

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಸಂಕೇತವಾಗಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (Karnataka’s Mysore Sandal Soap) ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ನಟಿ ತಮನ್ನಾ (Tamannaah) ಭಾಟಿಯಾ ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ.

ಆದರೆ ಇದು ಕೆಲ ಕನ್ನಡ ಪರ ಹೋರಾಟಗಾರರು, ಕೆಲ ಖಾಸಗಿ ನ್ಯೂಸ್ ಚಾನಲ್‌ಗಳ ಆಕ್ಷೇಪಕ್ಕೆ ಕಾರಣವಾಗಿದೆ.

ಈ ಕುರಿತಂತೆ ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಸುದ್ದಿಗೋಷ್ಠಿ ನಡೆಸಿದ್ದು ತಮನ್ನಾ ಆಯ್ಕೆಗೆ ಕಾರಣ ಹೇಳಿದ್ದಾರೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ಡಿಎಲ್) ರಾಜ್ಯದ ಅಸ್ಮಿತೆ ಮತ್ತು ಹೆಮ್ಮೆಯ ಸಂಕೇತವಾಗಿದೆ. ವಚನ ಪರಂಪರೆಯಿಂದ ಬಂದಿರುವ ನನಗೆ ಕನ್ನಡ-ಕನ್ನಡಿಗ-ಕರ್ನಾಟಕಗಳ ಮೇಲೆ ಅಪಾರ ಗೌರವ ಮತ್ತು ಎಲ್ಲರಿಗಿಂತ ಹೆಚ್ಚಿನ ಬದ್ಧತೆ ಇದೆ.

ಇಲ್ಲಿಯ ಕಲಾವಿದರ ಬಗ್ಗೆ ಅಭಿಮಾನವೂ ಇದೆ. ಆದರೆ, ವ್ಯಾಪಾರದ ಪ್ರಶ್ನೆ ಬಂದಾಗ ಇಲ್ಲಿಯ ಸ್ಪರ್ಧಾತ್ಮಕತೆಯನ್ನು ನೋಡಬೇಕು. ಹೀಗಾಗಿ ಪರಿಣತರ ತಂಡದ ತೀರ್ಮಾನದಂತೆ ತಮನ್ನಾ ಭಾಟಿಯಾ ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ. ಇದನ್ನು ನಕಾರಾತ್ಮಕವಾಗಿ ನೋಡಬಾರದು ಎಂದು ಮನವಿ ಮಾಡಿದ್ದಾರೆ.

ತಮನ್ನಾ ಅವರ ನೇಮಕಕ್ಕೆ ಕೆಲವರು ಕನ್ನಡದ ಹೆಸರು ಹೇಳಿಕೊಂಡು ತಕರಾರು ತೆಗೆದಿರುವ ಹಿನ್ನೆಲೆಯಲ್ಲಿ ಅವರು ಶುಕ್ರವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ನಾನು ಈ ಖಾತೆಯನ್ನು ವಹಿಸಿಕೊಂಡ ಮೇಲೆ ಕೆಎಸ್ಡಿಎಲ್ ನಲ್ಲಿ ಉತ್ಪಾದನೆ ಶೇಕಡ 40ರಷ್ಟು ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ನಾವೇನೂ ಹೊಸ ಯಂತ್ರೋಪಕರಣಗಳನ್ನು ಖರೀದಿಸಿಲ್ಲ. ಜತೆಗೆ ಎಫ್ ಎಂಸಿಜಿ ವಲಯದಲ್ಲಿ ಸಂಸ್ಥೆಯ ಬೆಳವಣಿಗೆ ಶೇಕಡ 15ರಷ್ಟಿದೆ.

ಈ ವಿಚಾರದಲ್ಲಿ ಗೋದ್ರೇಜ್ (ಶೇ.11), ಹಿಂದೂಸ್ತಾನ್ ಲಿವರ್ಸ್ (ಶೇ 9), ಐಟಿಸಿ (ಶೇಕಡ 8), ವಿಪ್ರೋ (ಶೇಕಡ 7) ಮುಂತಾದ ಉದ್ದಿಮೆಗಳನ್ನೂ ಕೆಎಸ್ಡಿಎಲ್ ಹಿಂದಿಕ್ಕಿದೆ.

ನಾವು ಕೆಎಸ್ಡಿಎಲ್ ವಹಿವಾಟನ್ನು ಮುಂದಿನ ಮೂರು ವರ್ಷಗಳಲ್ಲಿ 5,000 ಕೋಟಿ ರೂ.ಗೆ ಕೊಂಡೊಯ್ಯಲು ನಿರ್ಧರಿಸಿದ್ದೇವೆ. ಆಗ ಹಾಲಿವುಡ್ ನಟಿಯೊಬ್ಬರನ್ನೇ ಪ್ರಚಾರ ರಾಯಭಾರಿಯನ್ನಾಗಿ ಮಾಡಿಕೊಳ್ಳಬೇಕಾಗುತ್ತದೆ. ಅಂತಹ ಪರಿಸ್ಥಿತಿ ಬರಲೆಂದು ನಾನು ಆಶಿಸುತ್ತೇನೆ ಎಂದು ಅವರು ವಿವರಿಸಿದ್ದಾರೆ.

ತಮನ್ನಾ ಅವರನ್ನು ನೇಮಿಸಿಕೊಳ್ಳುವ ಮೊದಲು ನಾವು ಕನ್ನಡದವರೇ ಆದ ದೀಪಿಕಾ ಪಡುಕೋಣೆ ಮತ್ತು ರಶ್ಮಿಕಾ ಮಂದಣ್ಣ ಅವರನ್ನು ಸಂಪರ್ಕಿಸಿದೆವು. ಜೊತೆಗೆ ಶ್ರೀಲೀಲಾ, ಪೂಜಾ ಹೆಗಡೆ, ಕಿಯಾರ ಅಡ್ವಾಣಿ ಅವರನ್ನೂ ಕೇಳಲಾಗಿದೆ.

ದೀಪಿಕಾ ಅವರು ಅವರದೇ ಉತ್ಪನ್ನಗಳ ಪ್ರಚಾರದಲ್ಲಿ ಇದ್ದಾರೆ. ಹೀಗಾಗಿ ಬರಲಿಲ್ಲ. ಉಳಿದವರು ಬೇರೆಬೇರೆ ಸೌಂದರ್ಯವರ್ಧಕಗಳು, ಕ್ರೀಮುಗಳು ಮತ್ತು ಸಾಬೂನುಗಳಿಗೆ ರೂಪದರ್ಶಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಮುಂದಿನ ಎರಡು ವರ್ಷ ಅವರಾರೂ ತಮಗೆ ಬಿಡುವಿಲ್ಲ ಎಂದು ತಿಳಿಸಿದರು.

ಹೀಗಾಗಿ, ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ 28 ಮಿಲಿಯನ್ ಫಾಲೋಯರ್ಸ್ ಹೊಂದಿರುವ ತಮನ್ನಾ ಅವರನ್ನು ಅವರ ಅಖಿಲ ಭಾರತೀಯ ಮಟ್ಟದ ವರ್ಚಸ್ಸನ್ನು ನೋಡಿ ನೇಮಿಸಿಕೊಳ್ಳಲಾಯಿತು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕೆಎಸ್ಡಿಎಲ್ ಮೂಲಕ ಇತ್ತೀಚೆಗೆ 21 ಹೊಸ ಉತ್ಪನ್ನ ಬಿಡುಗಡೆ ಮಾಡಲಾಗಿದೆ. ಸದ್ಯದಲ್ಲೇ ನಾವು ಪರಿಮಳಗಳ ಕ್ಷೇತ್ರಕ್ಕೂ ಕಾಲಿಡುತ್ತಿದ್ದೇವೆ. ಇದಕ್ಕೆಂದೇ ನಮ್ಮ ಅಧಿಕಾರಿಗಳನ್ನು ಅತ್ತರಿಗೆ ಹೆಸರಾಗಿರುವ ಉತ್ತರಪ್ರದೇಶದ ಕನೌಜ್ ಗೂ ಕಳಿಸಿಕೊಡಲಾಗಿತ್ತು.

ವ್ಯಾಪಾರದ ಪ್ರಶ್ನೆ ಬಂದಾಗ ನಾವು ಅದಕ್ಕೆ ತಕ್ಕ ಕಾರ್ಯತಂತ್ರವನ್ನೇ ರೂಪಿಸಬೇಕಾಗುತ್ತದೆ. ಬ್ರ್ಯಾಂಡ್ ಅಂಬಾಸಿಡರ್ ನೇಮಕವನ್ನು ತಪ್ಪಾಗಿ ಭಾವಿಸಬಾರದು.

ನಾವು ಅಧಿಕಾರಕ್ಕೆ ಬಂದಮೇಲೆ, ಕೆಎಸ್ಡಿಎಲ್ ವಹಿವಾಟು 1,700 ಕೋಟಿ ರೂ.ಗೂ ಹೆಚ್ಚಾಗಿದೆ. ಇದರ ಪೈಕಿ ರಾಜ್ಯದಲ್ಲಿ ನಡೆದಿರುವ ವಹಿವಾಟಿನ ಮೊತ್ತ 320 ಕೋಟಿ ರೂ. ಆಸುಪಾಸಿನಲ್ಲಿದೆಯಷ್ಟೆ ಎಂದು ಪಾಟೀಲ ಹೇಳಿದ್ದಾರೆ.

ಕೆಎಸ್ಡಿಎಲ್ ತರಹದಲ್ಲೇ ಎಂಎಸ್ಐಎಲ್ ಸಂಸ್ಥೆಗೂ ನಾವು ಹೊಸ ರೂಪ ನೀಡುತ್ತಿದ್ದು, ಸದ್ಯದಲ್ಲೇ ವಾರ್ಷಿಕ 10 ಸಾವಿರ ಕೋಟಿ ರೂ. ವಹಿವಾಟಿನ ಗುರಿಯುಳ್ಳ ಚಿಟ್ ಫಂಡ್ ಆರಂಭಿಸುತ್ತಿದ್ದೇವೆ.

ಹುಬ್ಬಳ್ಳಿಯಲ್ಲಿರುವ ಎನ್ಜಿಎಫ್ ಅನ್ನು ಕೂಡ ಉಳಿಸಿಕೊಳ್ಳಬೇಕಾಗಿದೆ. ನಾವು ಅಖಿಲ ಭಾರತ ಮಟ್ಟವನ್ನು ಮೀರಿ ಜಾಗತಿಕ ಸ್ತರದಲ್ಲಿ ಯೋಚಿಸಬೇಕಾಗಿದೆ. ಕೆಎಸ್ಡಿಎಲ್ ಅನ್ನು ಕೇವಲ ಭಾರತವಲ್ಲ, ಅಂತಾರಾಷ್ಟ್ರೀಯ ಬ್ರ್ಯಾಂಡ್ ಆಗಿಸಬೇಕೆನ್ನುವುದು ನಮ್ಮ ಹೆಗ್ಗುರಿ ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ವೇಳೆ ಕೆಎಸ್ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ ಇದ್ದರು.

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]