Don't talk nonsense, give money first: DCM D.K. Shivakumar slams Kumaraswamy

ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ: ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ

ವಿಜಯಪುರ: “ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕಿಡಿಕಾರಿದರು.

ವಿಜಯಪುರ ಜಿಲ್ಲೆ ಕೊಲ್ಹಾರದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಚಿನ್ನ ಕಳ್ಳಸಾಗಣೆಯ ರನ್ಯಾ ರಾವ್ ಪ್ರಕರಣದ ಮಾಹಿತಿಯನ್ನು ನೀವೇ ನೀಡಿದ್ದೀರ ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಒಬ್ಬ ಮೆಂಟಲ್. ಅವರ ಮಾನಸಿಕ ಆರೋಗ್ಯ ಹದಗೆಟ್ಟಿರಬೇಕು. ತಲೆ ಕೆಟ್ಟು ಹೋಗಿದೆ” ಎಂದು ಜರಿದರು.

ರಾಮನಗರದ ನಾಮಫಲಕಕ್ಕೆ ಚಿನ್ನದ ತಗಡು ಹೊಡೆಯಲಾಗುತ್ತದೆಯೇ ಎನ್ನುವ ಕುಮಾರಸ್ವಾಮಿ ಅವರ ಸರಣಿ ಟೀಕೆಗಳ ಕುರಿತು ಕೇಳಿದಾಗ, “ಕುಮಾರಸ್ವಾಮಿ ರಾಜಕೀಯ ಮಾಡಲು ರಾಮನಗರಕ್ಕೆ ಏಕೆ ಬಂದರು? ಹಾಸನದಲ್ಲಿಯೇ ಏಕೆ ರಾಜಕೀಯ ಮಾಡಲಿಲ್ಲ.

ಮೊದಲು ಎಚ್.ಡಿ.ಕುಮಾರಸ್ವಾಮಿ ಎನ್ನುವ ಹೆಸರಿನಲ್ಲಿರುವ ಅವರ ಊರಿನ ಹೆಸರು ಹಾಗೂ ತಂದೆಯ ಹೆಸರನ್ನು ಏಕೆ ಇನ್ನು ಇಟ್ಟುಕೊಂಡಿದ್ದಾರೆ. ಮೊದಲು ಅದನ್ನು ಬದಲಾವಣೆ ಮಾಡಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

“ನಾವು ಬೆಂಗಳೂರು ಜಿಲ್ಲೆಯವರು. ಒಂದೊಂದು ಊರಿನ ಹೆಸರಿಗೆ ತನ್ನದೇ ಆದ ಇತಿಹಾಸವಿರುತ್ತದೆ. ಮದ್ರಾಸ್ ಅನ್ನು ಮತ್ತೆ ಏಕೆ ಚೆನ್ನೈ ಎಂದು ಕರೆದರು‌. ಗುಲ್ಬರ್ಗಾವನ್ನು ಕಲಬುರ್ಗಿ ಎಂದು ಮರುನಾಮಕರಣ ಮಾಡಲಾಗಿದೆ. ನಮಗೂ ನಮ್ಮದೇ ಆದಂತಹ ಆಸೆ ಇರುತ್ತದೆ. ಅವರಿಗೆ ಏನು ತೊಂದರೆಯಾಗಿದೆ?” ಎಂದು ಪ್ರಶ್ನಿಸಿದರು.

ರಿಯಲ್ ಎಸ್ಟೇಟ್ ಗಾಗಿ ಹೆಸರು ಬದಲಾವಣೆ ಮಾಡಲಾಗಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ಹೌದು, ನಮ್ಮ ಹಳ್ಳಿಯ ಜನ ಉದ್ದಾರವಾಗಬೇಕು. ಎಲ್ಲರಿಗೂ ಉದ್ಯೋಗ ಸಿಗಬೇಕು.

ನಮ್ಮ ಜನರ ಆಸ್ತಿ ಮೌಲ್ಯ ಜಾಸ್ತಿಯಾಗಬೇಕು. ಪ್ರತಿಯೊಬ್ಬ ರೈತನಿಗೂ ಒಳ್ಳೆಯದಾಗಬೇಕು. ಹೊರಗಡೆ ದೇಶದಿಂದ ಜನರು ಬಂದು ಬಂಡವಾಳ ಹೂಡಿಕೆ ಮಾಡಬೇಕು. ಅಭಿವೃದ್ಧಿ ಆಗಬೇಕು ಎಂಬುದು ನಮ್ಮ ಆಸೆ” ಎಂದರು.

“ಸಂಸತ್ ಕ್ಷೇತ್ರವನ್ನು ಮೊದಲು ಕನಕಪುರ ಎಂದು ಕರೆಯಲಾಗುತ್ತಿತ್ತು. ಅದನ್ನು ಬೆಂಗಳೂರು ಗ್ರಾಮಾಂತರ ಎಂದು ಆನಂತರ ಏಕೆ ಮಾಡಿದರು? ರಾಮನಗರದ ಹೆಸರು ಬದಲಾವಣೆ ಮಾಡುತ್ತಿಲ್ಲ. ಜತೆಗೆ ರಾಮನಗರವೇ ಜಿಲ್ಲಾ ಕೇಂದ್ರವಾಗಿರುತ್ತದೆ. ನಾವು ಕೇವಲ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ನ್ಯಾಷನಲ್ ಹೆರಾಲ್ಡ್ ಗೆ ರಾಜಾರೋಷವಾಗಿ 25 ಲಕ್ಷ‌ ಕೊಟ್ಟಿದ್ದೇವೆ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಿಮ್ಮ ಹೆಸರು ಡಿಕೆ ಸುರೇಶ್ ಅವರ ಹಾಗೂ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರ ಹೆಸರು ಇರುವುದರ ಬಗ್ಗೆ ಕೇಳಿದಾಗ, “ನಮ್ಮ ಪಕ್ಷ ನಡೆಸುವಂತಹ ಪತ್ರಿಕೆ‌. ಅದಕ್ಕೆ ನಾನು ಹಾಗೂ ಸುರೇಶ್ 25 ಲಕ್ಷ ದುಡ್ಡು ಕೊಟ್ಟಿದ್ದೇವೆ. ‌ನಮ್ಮ ಟ್ರಸ್ಟ್‌ ನಿಂದಲೂ ದೇಣಿಗೆ ನೀಡಿದ್ದೇವೆ” ಎಂದರು.

ದೇಣಿಗೆ ನೀಡಿರುವುದರಿಂದ ನಿಮಗೆ ತೊಂದರೆಯಾಗುತ್ತದೆಯೇ ಎಂದಾಗ, “ನಾವು ದುಡಿದಂತಹ ಆಸ್ತಿಯಿಂದ ರಾಜರೋಷವಾಗಿ ಹಣ ನೀಡಿದ್ದೇವೆ. ನಾವು ಕದ್ದುಮುಚ್ಚಿ ಹಣ ನೀಡಿಲ್ಲ” ಎಂದು ಹೇಳಿದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!