ದೆಹಲಿ: ಕೇಂದ್ರದ ಮೋದಿ (Modi) ಸರ್ಕಾರ ಇ.ಡಿ (E.D), ಸಿಬಿಇ (CBI) ಮುಂತಾದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷಗಳನ್ನು, ವಿರೋಧ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರಗಳಿಗೆ ಕಿರುಕುಳ ನೀಡುತ್ತದೆ ಎಂಬ ಆರೋಪ ವ್ಯಾಪಕವಾಗಿದೆ.
ಇದಕ್ಕೆ ಪುಷ್ಟಿ ನೀಡುವಂತೆ ತಮಿಳುನಾಡು ಸರ್ಕಾರ ಸ್ವಾಮ್ಯದ ಮದ್ಯ ಚಿಲ್ಲರೆ ಉದ್ಯ ಮ ಟ್ಯಾಸ್ಟ್ರಾಕ್ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ನಡೆಸುತ್ತಿದ್ದ ಹಣ ಅಕ್ರಮ ವರ್ಗಾವಣೆ ತನಿಖೆಗೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದ್ದು, ಪ್ರಕರಣ ವಿಚಾರಣೆಯಲ್ಲಿ ಇ.ಡಿ ತನಿಖಾ ಸಂಸ್ಥೆ ಎಲ್ಲಾ ಮಿತಿಗಳನ್ನು ಮೀರಿದೆ ಎಂದು ಛೀಮಾರಿ ಹಾಕಿದೆ.
ಸರಕಾರಿ ಸ್ವಾಮ್ಯದ ಸಂಸ್ಥೆಯ ವಿರುದ್ದ ಕ್ರಮ ಕೈಗೊಂಡು ನಂತರ ದಾಳಿ ಆರಂಭಿಸಿದ ಜಾರಿ ನಿರ್ದೇಶನಾಲಯ ಕ್ರಮವನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಸಿಹ್ ಅವರನ್ನೊಳ ಗೊಂಡ ನ್ಯಾಯಪೀಠವು ಆಕ್ಷೇಪಿಸಿದೆ.
ಇತ್ತೀಚಿನ ದಾಳಿಗಳನ್ನು ಪ್ರಶ್ನಿಸಿ ತಮಿಳುನಾಡು ಸರಕಾರ ಮತ್ತು ತಮಿಳುನಾಡು ರಾಜ್ಯ ಮಾರ್ಕೆಟಿಂಗ್ ಕಾರ್ಪೊರೇಷನ್ ಸಲ್ಲಿಸಿದ ಅರ್ಜಿಗಳ ಮೇರೆಗೆ ನ್ಯಾಯಪೀಠವು ಇ.ಡಿಗೆ ನೋಟಿಸ್ ನೀಡಿ ನಿರ್ದಿಷ್ಟ ದಿನಾಂಕವನ್ನು ನಿಗದಿಪಡಿಸದೆ ರಜೆಯ ನಂತರ ಮುಂದಿನ ವಿಚಾರಣೆಗೆ ನಿಗದಿಪಡಿಸಿದೆ.
ಇ.ಡಿಯ ಕ್ರಮಗಳು ಫೆಡರಲ್ ರಚನೆಯನ್ನು ಉಲ್ಲಂಘಿಸಿವೆ. ಟ್ಯಾಸ್ಟ್ರಾಕ್ ವಿರುದ್ಧದ ತನಿಖೆಗೆ ಅನುಮತಿ ನೀಡಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. 2014ರಿಂದ ಮದ್ಯದಂಗಡಿ ಪರವಾನಗಿಗಳ ಹಂಚಿಕೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಇ.ಡಿ 40 ಕ್ಕೂ ಹೆಚ್ಚು ಎಫ್ ಐಆರ್‌ಗಳನ್ನು ದಾಖಲಿಸಿದೆ ಎಂದು ವರದಿಯಾಗಿದೆ.