ಬೆಂಗಳೂರು: ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.
ಇಂದು ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದರು.
ಸಿಇಟಿ ಪರೀಕ್ಷೆಗೆ 3.11 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಆನ್ ಲೈನ್ ಮೂಲಕವೂ ಪರೀಕ್ಷೆಯ ಫಲಿತಾಂಶ ತಿಳಿಯಬಹುದಾಗಿದೆ.
ಫಲಿತಾಂಶ ಒಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಪೋರ್ಟಲ್ https://cetonline.karnataka.gov.in/kea ಗೆ ಹೋಗಿ.