Supreme Court order; DCM DK Shivakumar's important advice to those building houses

ಬೆಂಗಳೂರು ಸುರಂಗ ಮಾರ್ಗಕ್ಕೆ ಶೀಘ್ರದಲ್ಲೇ ಟೆಂಡರ್: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: “ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಎರಡು ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಮೊದಲ ಹಂತದ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದರು.

ಬೆಂಗಳೂರಲ್ಲಿ ಸುರಂಗ ರಸ್ತೆ ನಿರ್ಮಾಣ ಹಾಗೂ ಮಂಡ್ಯದ ಕೆ ಆರ್ ಎಸ್ ನಲ್ಲಿ ಕಾವೇರಿ ಆರತಿ ನಡೆಸುವ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸಭೆ ನಡೆಸಿದ ನಂತರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು.

“ಬೆಂಗಳೂರಿನ ಸುರಂಗ ರಸ್ತೆಯ ಪ್ರವೇಶ ಹಾಗೂ ನಿರ್ಗಮನದ ಭಾಗದಲ್ಲಿ ಸಂಚಾರ ದಟ್ಟಣೆ ಆಗಬಾರದು ಎಂಬ ಉದ್ದೇಶದಿಂದ ಈ ಯೋಜನೆಗೆ ಟೆಂಡರ್ ಕರೆಯುವ ಮುನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳು, ಪೊಲೀಸ್ ಇಲಾಖೆಯ ಡಿಜಿಪಿ, ಐಜಿಪಿ ಮತ್ತು ಸಂಚಾರಿ ಪೊಲೀಸ್ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ” ಎಂದು ಮಾಹಿತಿ ನೀಡಿದರು.

“ವಿಧಾನಸೌಧದ ಒಂದು ಕಿ.ಮೀ ಸುತ್ತಮುತ್ತ ಎಲ್ಲೂ ನಿರ್ಗಮನಕ್ಕೆ ಅವಕಾಶ ಕಲ್ಪಿಸುವುದಿಲ್ಲ. ಇಲ್ಲಿ ಟ್ರಾಫಿಕ್ ಜಾಮ್ ಆದರೆ ಎಲ್ಲಾಕಡೆ ಆಗುತ್ತದೆ. ಹೀಗಾಗಿ ಇದನ್ನು ಪರಿಶೀಲಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ. ನಾನು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಜಿಬಿಎ ಮುಖ್ಯ ಆಡಳಿತಾಧಿಕಾರಿಗಳು ಈ ಸಭೆ ಮಾಡಿದ್ದೇವೆ” ಎಂದು ಹೇಳಿದರು.

“ಇನ್ನು ಬೆಂಗಳೂರಿನಲ್ಲಿ 114 ಕಿ.ಮೀ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನ ಮಾಡಿದ್ದು, ಈ ಯೋಜನೆ ಸಂಬಂಧ ಸಂಚಾರ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ ಪಡೆಯಲಾಗಿದೆ” ಎಂದರು.

ಕಸ ವಿಲೇವಾರಿಗೆ ಸ್ವಚ್ಛ ಬೆಂಗಳೂರು ಕಾರ್ಯಕ್ರಮ

“ಇನ್ನು ಬೆಂಗಳೂರಿನ ಕಸ ವಿಲೇವಾರಿ ವಿಚಾರವಾಗಿ ದೊಡ್ಡ ಕ್ಷೇತ್ರಗಳಲ್ಲಿ ಎರಡರಂತೆ ಪ್ರತಿಯೊಂದು ಕ್ಷೇತ್ರಕ್ಕೆ ಒಂದೊಂದರಂತೆ ಒಟ್ಟು 33 ಪ್ಯಾಕೇಜ್ ಗಳನ್ನು ಕರೆಯಲು ತೀರ್ಮಾನಿಸಿದ್ದೇವೆ. ಸುಮಾರು ₹4000 ಕೋಟಿ ಮೊತ್ತದ ಈ ಯೋಜನೆಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು. ಏಳು ವರ್ಷಗಳ ಅವಧಿಗೆ ಟೆಂಡರ್ ಕರೆಯಲಾಗುತ್ತಿದೆ” ಎಂದರು.

“ಸ್ವಚ್ಛ ಬೆಂಗಳೂರು ಕಾರ್ಯಕ್ರಮದ ಮೂಲಕ ಬೆಂಗಳೂರಿನ ಎಲ್ಲಾ ಭಾಗಗಳಲ್ಲಿ ಇರುವ ಕಟ್ಟಡ ತ್ಯಾಜ್ಯ ಹಾಗೂ ಇತರೆ ಕಸವನ್ನು ಒಮ್ಮೆಲೇ ಸ್ವಚ್ಛ ಮಾಡಲು ತೀರ್ಮಾನಿಸಲಾಗಿದೆ. ನಾಗರೀಕರು ಕೂಡ ಈ ಕಾರ್ಯಕ್ರಮದಲ್ಲಿ ಕೈಜೋಡಿಸಿ, ಎಲ್ಲೆಲ್ಲಿ ಕಸ ಇದೆ ಎಂದು ಜಿಬಿಎ ಅಧಿಕಾರಿಗಳಿಗೆ ಆಪ್ ಅಥವಾ ನೀಡಲಾಗುವ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿದರೆ, ಅಲ್ಲಿರುವ ಕಸವನ್ನು ತೆಗೆಯಲಾಗುವುದು. ಇದಕ್ಕಾಗಿ ಅಧಿಕಾರಿಗಳು, ಮಾರ್ಷಲ್ ಗಳನ್ನು ನಿಯೋಜಿಸಲಾಗಿದೆ” ಎಂದು ತಿಳಿಸಿದರು.

“ಇನ್ನು ಇಂಟಿಗ್ರೇಟ್ ಸಾಲಿಡ್ ವೇಸ್ಟ್ ಮ್ಯಾನೇಜ್ಮೆಂಟ್ ಮಾಡಲು 15 ದಿನಗಳಲ್ಲಿ ಟೆಂಡರ್ ಕರೆಯಲಾಗುವುದು” ಎಂದರು.

ಕಾವೇರಿ ಆರತಿ ವೇದಿಕೆ ನಿರ್ಮಾಣಕ್ಕೆ ಶೀಘ್ರವೇ ಟೆಂಡರ್

ಕಾವೇರಿ ಆರತಿ ನಮ್ಮ ರಾಜ್ಯದ ಸಂಸ್ಕೃತಿ, ಪರಂಪರೆಯ ಪ್ರತೀಕವಾಗಲಿದೆ. ಕೊಡಗು, ಮಲೆನಾಡು, ಕರಾವಳಿ, ಬೆಂಗಳೂರು ಭಾಗದ ಆಚರಣೆ, ಈ ಭಾಗದ ಮಠಗಳನ್ನು ಒಳಗೊಂಡು ಈ ಕಾರ್ಯಕ್ರಮದ ವಿಧಾನ ರೂಪಿಸಲಾಗುವುದು. ವಾರಾಂತ್ಯದ 3 ದಿನಗಳ ಕಾಲ ಈ ಕಾರ್ಯಕ್ರಮ ನಡೆಯಬೇಕು ಎಂದು ನಾನು ಆಲೋಚಿಸುತ್ತಿದ್ದೇನೆ.

ಪೂಜಾ ಕಾರ್ಯದ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಮಾಡಲಾಗುವುದು. ಇದಕ್ಕಾಗಿ ಕಾವೇರಿ ನಿಗಮದಲ್ಲಿ ₹92 ಕೋಟಿ ಹಣ ಮೀಸಲಿಡಲಾಗಿದೆ ಎಂದು ತಿಳಿಸಿದರು.

“ಇದರ ಜತೆಗೆ ಇಂಧನ ಇಲಾಖೆ, ಲೋಕೋಪಯೋಗಿ, ಪ್ರವಾಸೋದ್ಯಮ, ಧಾರ್ಮಿಕ ದತ್ತಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೂ ಈ ಕಾರ್ಯಕ್ರಮಕ್ಕೆ ಕೈ ಜೋಡಿಸಲಿದೆ. ಈ ಕಾರ್ಯಕ್ರಮದ ಸಾರ್ವಜನಿಕ ವೀಕ್ಷಣೆಗಾಗಿ 10 ಸಾವಿರ ಆಸನಗಳ ಗ್ಯಾಲರಿಯ ವಿನ್ಯಾಸ ಕೂಡ ಸಿದ್ಧವಾಗಿದೆ. ಈ ಕಾರ್ಯಕ್ರಮಕ್ಕೆ ಅತ್ಯುತ್ತಮ ಗೀತೆ ರಚನೆಗೆ ಆಹ್ವಾನ ನೀಡಿದ್ದೇವೆ” ಎಂದರು.

“ಈ ಕಾರ್ಯಕ್ರಮ ದಕ್ಷಿಣ ಭಾರತದ ಕಾರ್ಯಕ್ರಮವಾಗಲಿದೆ. ಕಾವೇರಿ ನದಿ ಹರಿಯುವ ಕರ್ನಾಟಕ, ತಮಿಳುನಾಡು, ಕೇರಳ, ಪುದುಚೇರಿ ರಾಜ್ಯಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು. ಈ ಎಲ್ಲಾ ವಿಚಾರಗಳ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಬಹುತೇಕ ಎಲ್ಲಾ ನೀಲನಕ್ಷೆಗಳು ಸಿದ್ಧವಾಗಿವೆ. ಇವು ಪೂರ್ಣಗೊಂಡ ನಂತರ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು” ಎಂದು ಹೇಳಿದರು.

“ಹರಿಯುವ ನೀರಿನಲ್ಲಿ ಈ ಕಾರ್ಯಕ್ರಮದ ವೇದಿಕೆ ನಿರ್ಮಿಸಲಾಗುವುದು. ಈ ವೇದಿಕೆ ನಿರ್ಮಾಣಕ್ಕೆ ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು” ಎಂದು ತಿಳಿಸಿದರು.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!