CM asks Vijayendra to explain reason for absence from Niti Aayog meeting

ಸಿಎಂ ನೀತಿ ಆಯೋಗದ ಸಭೆಗೆ ಗೈರಾಗಲು ಕಾರಣ ತಿಳಿಸಿ: ಬಿವೈ ವಿಜಯೇಂದ್ರ ಒತ್ತಾಯ

ಮೈಸೂರು: ಮುಖ್ಯಮಂತ್ರಿಗಳೇ, ನೀತಿ ಆಯೋಗದ ಸಭೆಗೆ ಗೈರಾಗಲು ಕಾರಣವನ್ನು ನೀವು ರಾಜ್ಯದ ಜನರಿಗೆ ತಿಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿವೈ ವಿಜಯೇಂದ್ರ (BY Vijayendra) ಅವರು ಒತ್ತಾಯಿಸಿದ್ದಾರೆ.

ಇಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಜೀ ಅವರು ನಿನ್ನೆ ದೆಹಲಿಯಲ್ಲಿ ಮಹತ್ವದ ನೀತಿ ಆಯೋಗದ ಸಭೆ ಕರೆದಿದ್ದರು. ಆ ಸಭೆಯಲ್ಲಿ ಪ್ರಮುಖವಾಗಿ ಭಾರತವು 2027ನೇ ಇಸವಿಗೆ ಒಂದು ಅಭಿವೃದ್ಧಿ ಹೊಂದಿದ ದೇಶವಾಗಿ ಪರಿವರ್ತನೆ ಆಗಬೇಕೆಂಬ ನಿಟ್ಟಿನಲ್ಲಿ ವಿವಿಧ ರಾಜ್ಯಗಳ ಅಭಿಪ್ರಾಯಗಳು, ಆ ರಾಜ್ಯಗಳ ದೂರದೃಷ್ಟಿತ್ವ- ಇವೆಲ್ಲವನ್ನೂ ಸಮಗ್ರವಾಗಿ ಚರ್ಚಿಸಲು ಉದ್ದೇಶಿಸಲಾಗಿತ್ತು ಎಂದು ವಿವರಿಸಿದರು.

ಆ ಸಭೆಯಲ್ಲಿ ಕಾಂಗ್ರೆಸ್ ಆಡಳಿತವಿರುವ ತೆಲಂಗಾಣ, ಹಿಮಾಚಲ ಪ್ರದೇಶ ರಾಜ್ಯಗಳ ಮುಖ್ಯಮಂತ್ರಿಗಳು, ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರೂ ಭಾಗವಹಿಸಿದ್ದರು. ಆದರೆ, ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆ ಸಭೆಯಲ್ಲಿ ಪಾಲ್ಗೊಳ್ಳದೆ ಇರುವುದು ದುರದೃಷ್ಟದ ವಿಚಾರ ಎಂದು ನುಡಿದರು.

ಸಿದ್ದರಾಮಯ್ಯನವರು (Siddaramaiah) ಆ ಸಭೆಗೆ ಯಾಕೆ, ಯಾವ ಕಾರಣಕ್ಕಾಗಿ ಹೋಗಿಲ್ಲ? ಬಹಿಷ್ಕಾರ ಹಾಕಿದರೇ? ಯಾವ ಕಾರಣಕ್ಕೆ ಸಭೆಯಲ್ಲಿ ಭಾಗವಹಿಸಬೇಕೆಂದು ಮುಖ್ಯಮಂತ್ರಿಗಳಿಗೆ ಅನಿಸಿಲ್ಲ ಎಂದು ಕೇಳಿದರು.

ಕಾಂಗ್ರೆಸ್ ಸರಕಾರದ ಶಾಸಕರನ್ನು ದೆಹಲಿಗೆ ಕರೆದುಕೊಂಡು ಹೋಗಿ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ಮಾಡಿದ್ದರು. ಆದರೆ, ಇಂಥ ಮಹತ್ವದ ಸಭೆಯಲ್ಲಿ ಪಾಲ್ಗೊಂಡಿಲ್ಲವೆಂದಾದರೆ ಎಲ್ಲೋ ಒಂದು ಕಡೆ ರಾಜ್ಯದ ಮುಖ್ಯಮಂತ್ರಿಗಳು ರಾಜ್ಯದ ಅಭಿವೃದ್ಧಿ ಬದಿಗಿಟ್ಟು, ರಾಜಕಾರಣ ಮಾಡುವುದೇ ಇವರಿಗೆ ಆದ್ಯತೆ ಆಗಿದೆ ಎಂದು ಆಕ್ಷೇಪಿಸಿದರು. ಇದು ರಾಜ್ಯಕ್ಕೆ ಮಾಡುವ ಅನ್ಯಾಯ ಎಂದು ಟೀಕಿಸಿದರು.

ಸಂಘರ್ಷದ ಹಾದಿಯಿಂದ ರಾಜ್ಯಕ್ಕೆ ಒಳಿತಾಗದು

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದಾಗಿನಿಂದ ಕೇಂದ್ರ ಸರಕಾರದ ವಿರುದ್ಧ ಸಂಘರ್ಷದ ಹಾದಿಯನ್ನು ತಳೆದಿದ್ದಾರೆ; ತುಳಿಯುತ್ತಿದ್ದಾರೆ. ಈ ಸಂಘರ್ಷದ ಹಾದಿ ರಾಜ್ಯಕ್ಕೆ ಒಳಿತು ನೀಡದು ಎಂದು ವಿಜಯೇಂದ್ರ ಅವರು ಎಚ್ಚರಿಸಿದರು.

ಈ ವಿಷಯವನ್ನು ಹಲವು ಬಾರಿ ಪ್ರಸ್ತಾಪ ಮಾಡಿದ್ದೇವೆ. ಮುಖ್ಯಮಂತ್ರಿಗಳ ಈ ನಿಲುವಿನಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಯಾವ ಕಾರಣಕ್ಕೆ ಸಭೆಗೆ ಹೋಗಿಲ್ಲವೆಂದು ಸಿದ್ದರಾಮಯ್ಯನವರು ರಾಜ್ಯದ ಜನರಿಗೆ ತಿಳಿಸಬೇಕು ಎಂದು ಆಗ್ರಹಿಸಿದರು.

ಬ್ರಾಂಡ್ ಅಂಬಾಸಿಡರ್ ಆಗಿ ಕರ್ನಾಟಕದವರು ಸಿಗಲಿಲ್ಲವೇ?

ಕೆಎಸ್‍ಡಿಎಲ್‍ನ ಮೈಸೂರು ಸ್ಯಾಂಡಲ್ ಸಾಬೂನಿಗೆ 6.20 ಕೋಟಿ ಕೊಟ್ಟು ನಟಿ ತಮನ್ನಾ ಭಾಟಿಯರನ್ನು ರಾಯಭಾರಿಯಾಗಿ ತರಲು ರಾಜ್ಯ ಸರಕಾರ ತೀರ್ಮಾನಿಸಿದೆ. ಇದು ಗಂಭೀರ ವಿಚಾರ.

ನಾಡಿನ ನೆಲ, ಜಲ, ಭಾಷೆ, ಪರಂಪರೆಯನ್ನು ಉಳಿಸಿ ಬೆಳೆಸುವುದು ರಾಜ್ಯದ ಕರ್ತವ್ಯ. ಕೆಎಸ್‍ಡಿಎಲ್ ಸಂಸ್ಥೆಯನ್ನು ಕಾಂಗ್ರೆಸ್ ಸರಕಾರ ಹುಟ್ಟು ಹಾಕಿಲ್ಲ. 1916ರಲ್ಲಿ ಅಂದಿನ ಮಹಾರಾಜರ ದೂರದೃಷ್ಟಿ- ಕನಸಿನ ಕೂಸಿದು ಎಂದು ಗಮನ ಸೆಳೆದರು.

ಈ ಸಂಸ್ಥೆಗೆ ಬ್ರಾಂಡ್ ಅಂಬಾಸಿಡರ್ ಆಗಿ ಕರ್ನಾಟಕದವರು ಯಾರೂ ಸಿಗಲಿಲ್ಲವೇ? ರಾಜ್ಯದಲ್ಲಿ ಅಂಥ ಉತ್ತಮ ನಟ, ನಟಿ, ಕನ್ನಡಿಗರು ಸಿಗಲೇ ಇಲ್ಲವೇ? ಎಂದು ಪ್ರಶ್ನಿಸಿದರು.

ಪರಿಣಿತರ ಸಲಹೆ ಪಡೆದುಕೊಂಡರೆಂಬ ಸಚಿವರ ಹೇಳಿಕೆಯನ್ನೂ ಗಮನಿಸಿದ್ದೇನೆ. ಇದಕ್ಯಾಕ್ರೀ ಬೇಕು ಪರಿಣಿತರ ಸಲಹೆ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಯಾರು ಪರಿಣಿತರು, ಯಾವುದರಲ್ಲಿ ಪರಿಣಿತರು ಎಂದು ಕೇಳಿದರಲ್ಲದೆ, ರಾಜ್ಯ ಸರಕಾರ ಈ ವಿಷಯದಲ್ಲಿ ಸ್ವೇಚ್ಛಾಚಾರದಿಂದ ನಡೆದುಕೊಳ್ಳುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. ಇದು ಮಹಾರಾಜರಿಗೆ ಮಾಡುವ ಅವಮಾನ ಎಂದು ಖಂಡಿಸಿದರು.

ಶಿವಕುಮಾರರಿಗೆ ರಾಮನಗರ ಹೆಸರಿನ ಕುರಿತು ಕೀಳರಿಮೆಯೇ?

ರಾಮನಗರ ಜಿಲ್ಲೆಯ ಹೆಸರು ಬದಲಿಸುವ ವಿಚಾರದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿಗಳು ಎನ್ನುವುದನ್ನೂ ಮರೆತ ಡಿಕೆ ಶಿವಕುಮಾರ್ (DK Shivakumar) ಅವರು, ರಿಯಲ್ ಎಸ್ಟೇಟ್ ಏಜೆಂಟ್ ಆಗಿ ವರ್ತಿಸುತ್ತಿದ್ದಾರೆ ಎಂದು ರಾಮನಗರ ಜಿಲ್ಲೆಯವರೂ, ರಾಜ್ಯದ ಜನತೆಯೂ ಪ್ರಶ್ನಿಸುತ್ತಿದ್ದಾರೆ ಎಂದು ಹೇಳಿದರು.

ಡಿಕೆ ಶಿವಕುಮಾರ್ (DK Shivakumar) ಅವರಿಗೆ ರಾಮನಗರ ಹೆಸರಿನ ಕುರಿತು ಕೀಳರಿಮೆ ಇದೆಯೇ? ಅಥವಾ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಎಂದು ಹೆಸರು ಸೇರಿಸದೇ ಇದ್ದಲ್ಲಿ ಅಭಿವೃದ್ಧಿಯೇ ಆಗಲಾರದೇ? ಎಂದು ಪ್ರಶ್ನಿಸಿದರು.

ಇತಿಹಾಸ ಇರುವ ರಾಮನಗರ ಜಿಲ್ಲೆಯ ಹೆಸರು ಬದಲಿಸುತ್ತಾರೆ ಎಂದರೆ ಆ ಜಿಲ್ಲೆಯ ಜನರಿಗೆ ಮಾಡುವ ಅವಮಾನ ಎಂದು ಆಕ್ಷೇಪಿಸಿದರು. ರಿಯಲ್ ಎಸ್ಟೇಟ್ ಎಂದರೆ ಮಾತ್ರ ಅಭಿವೃದ್ಧಿಯೇ? ರಾಜ್ಯ ಸರಕಾರ ಇರುವುದೇ ರಿಯಲ್ ಎಸ್ಟೇಟ್ ಮಾಡಲೆಂದೇ ಎಂದು ವಾಗ್ದಾಳಿ ನಡೆಸಿದರು.

ಹೆದ್ದಾರಿಗೆ ಭೂಸ್ವಾಧೀನ ವಿಷಯದಲ್ಲಿ ನಿರಾಸಕ್ತಿ

ಹೆದ್ದಾರಿಗಳ ಅಭಿವೃದ್ಧಿ ಎಂಬುದು ಪ್ರಧಾನಿಯವರ ಕನಸಿನ ಕೂಸು. ಅದು ರಾಜ್ಯದ ಅಭಿವೃದ್ಧಿಗೂ ಪೂರಕ ಎಂಬ ಚಿಂತನೆ ಅವರದು. ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ವಿಷಯದಲ್ಲಿ ಇಡೀ ದೇಶದಲ್ಲಿ ಕರ್ನಾಟಕ ರಾಜ್ಯವು ಹಿಂದುಳಿದಿದೆ.

ರಾಜ್ಯ ಸರಕಾರವು ಭೂಸ್ವಾಧೀನದ ವಿಷಯದಲ್ಲಿ ಆಸಕ್ತಿ ತೋರುತ್ತಿಲ್ಲ. ಇದರಿಂದಾಗಿ ರಾಜ್ಯದಲ್ಲಿ ಹೆದ್ದಾರಿಗಳ ಅಭಿವೃದ್ಧಿ ವೇಗದಿಂದ ಸಾಗುತ್ತಿಲ್ಲ ಎಂದರು.

ರಾಜ್ಯ ಸರಕಾರಕ್ಕೆ ಹಣಕಾಸಿನ ಕೊರತೆ ಕಾಡುತ್ತಿದೆ. ವಿಧಾನಸೌಧವನ್ನು ಪ್ರವಾಸಿಗರು ದುಡ್ಡುಕೊಟ್ಟು ನೋಡುವಂಥ ತೀರ್ಮಾನವನ್ನೂ ರಾಜ್ಯ ಸರಕಾರ ತೆಗೆದುಕೊಳ್ಳುತ್ತಿದೆ.

ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ. ಅಭಿವೃದ್ಧಿಗೆ ಬೇಕಾದ ಹಣಕಾಸನ್ನು ಹೊಂದಿಸಲು ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳಿಗೆ ಸಾಧ್ಯವಾಗುತ್ತಿಲ್ಲ; ಬೆಂಗಳೂರು ನಗರದಲ್ಲಿ ಕಸಕ್ಕೂ ತೆರಿಗೆ ಹಾಕುತ್ತಿದ್ದಾರೆ. ಮುಖ್ಯಮಂತ್ರಿಗಳು ಸತ್ಯವನ್ನು ಮರೆಮಾಚುತ್ತಿದ್ದಾರೆ. ಗ್ಯಾರಂಟಿಗಳಿಗೆ ಹಣ ಕ್ರೋಡೀಕರಿಸಲು ಸಾಧ್ಯವಾಗುತ್ತಿಲ್ಲ. ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ರಾಜ್ಯ ಸರಕಾರ ಹಣ ನೀಡುತ್ತಿಲ್ಲ ಎಂದು ಟೀಕಿಸಿದರು.

ಅಭಿವೃದ್ಧಿ ಅನುದಾನದ ಚರ್ಚೆಗೆ ಬರಲು ಸವಾಲು

ಕಾಂಗ್ರೆಸ್ ಸರಕಾರ- ಸಿದ್ದರಾಮಯ್ಯರನ್ನು ಖುಷಿ ಪಡಿಸಲು ನಾವು ಚಾರ್ಜ್‍ಶೀಟ್ ಬಿಡುಗಡೆ ಮಾಡಿಲ್ಲ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಹಿಂದೆ ಬಿಜೆಪಿ ಸರಕಾರ ಅಧಿಕಾರದಲ್ಲಿ ಇದ್ದಾಗ ಮೈಸೂರಿನ ಅಭಿವೃದ್ಧಿಗೆ ನಾವೆಷ್ಟು ಸಾವಿರ ಕೋಟಿ ಅನುದಾನ ಕೊಟ್ಟಿದ್ದೇವೆ? ನೀವೆಷ್ಟು ಕೊಟ್ಟಿದ್ದೀರೆಂದು ಚರ್ಚೆ ಮಾಡೋಣ ಬನ್ನಿ ಎಂದು ಸವಾಲು ಹಾಕಿದರು.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!