ದೇವನಹಳ್ಳಿ; ಫಾರ್ಮ್ ಹೌಸ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ (Rave party) ಮೇಲೆ ದೇವನಹಳ್ಳಿ ಪೋಲಿಸರು ದಾಳಿ ನಡೆಸಿದ್ದಾರೆ.
ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮದ ಬಳಿ ಪಾರ್ಮ್ ಹೌಸ್ ನಲ್ಲಿ ಶನಿವಾರ ರಾತ್ರಿಯಿಂದ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರ ದಾಳಿ ನಡೆಸಿದ್ದಾರೆ.
ಈ ದಾಳಿ ವೇಳೆ ರೇವ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ 30ಕ್ಕೂ ಹೆಚ್ಚು ಯುವಕ ಯುವತಿಯರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಪಾರ್ಟಿಯಲ್ಲಿ ಭಾಗವಹಿಸಿದ್ದ ಯುವಕ, ಯುವತಿಯರು ಮುಖ ಮುಚ್ಚಿಕೊಂಡು ಒಬ್ಬೊಬ್ಬರಾಗಿ ಪೊಲೀಸ್ ವ್ಯಾನ್ ಹತ್ತಿದ್ದಾರೆ.
ಈ ಕುರಿತಂತೆ ದೇವನಹಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಎಸಿಪಿ ನವೀನ್ ನೇತೃತ್ವದಲ್ಲಿ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದ ಯುವಕ ಯುವತಿಯರ ವಿಚಾರಣೆ ನಡೆಸಲಾಗಿದೆ.
ಬಳಿಕ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದವರಿಗೆ ವೈದ್ಯಕೀಯ ತಪಾಸಣೆ ನಡೆಸಲು ಪೊಲೀಸರು ಮಾಡಿಸಲು ಸಿದ್ದತೆ ನಡೆಸಿದ್ದಾರೆ.