Show cause notices issued to schools for poor SSLC performance

SSLC ಕಳಪೆ ಸಾಧನೆ ತೋರಿದ ಶಾಲೆಗಳಿಗೆ ಶೋಕಾಸ್ ನೋಟಿಸ್; ಸೂಕ್ತ ಕ್ರಮ: ಜಿಪಂ ಸಿಇಓ

ಧಾರವಾಡ: ಕಳೆದ ವರ್ಷದ ಎಸ್.ಎಸ್.ಎಲ್.ಸಿ (SSLC) ಪರೀಕ್ಷಾ ಫಲಿತಾಂಶ ಸಾಧನೆಯಲ್ಲಿ ಕಳಪೆ ಸಾಧನೆ ಮಾಡಿದ 106 ಶಾಲೆಗಳಿಗೆ ತಕ್ಷಣ ಶೋಕಾಸ್ ನೋಟಿಸ್ ನೀಡಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಆದೇಶಿಸಿದರು.

ಅವರು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.50 ಕ್ಕಿಂತ ಕಡಿಮೆ ಫಲಿತಾಂಶ ಮಾಡಿರುವ ಶಾಲೆಗಳ ಮುಖ್ಯೋಪಾಧ್ಯಾಯರ ಸಭೆ ಜರುಗಿಸಿ, ಮಾತನಾಡಿದರು.

ಶಿಕ್ಷಕ ವೃತ್ತಿ ಉಳಿದ ವೃತ್ತಿಗಳಿಗಿಂತ ಶ್ರೇಷ್ಠವಾಗಿದೆ. ಎಲ್ಲ ಸೌಲಭ್ಯಗಳಿದ್ದರೂ ಜಿಲ್ಲೆಯ ಆರು ಶಾಲೆಗಳು ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೂನ್ಯ ಫಲಿತಾಂಶ ಮಾಡಿವೆ. ಇವುಗಳಲ್ಲಿ ಎರಡು ಅನುದಾನಿತ ಹಾಗೂ ನಾಲ್ಕು ಅನುದಾನರಹಿತ ಪ್ರೌಢಶಾಲೆಗಳು ಸೇರಿವೆ.

ಶಾಲೆಯ ಒಂದು ಮಗುವನ್ನು ಪಾಸ್ ಮಾಡಿಸುವಷ್ಟು ಕಲಿಸದ ಶಿಕ್ಷಕರಿಗೆ, ಆ ಶಾಲೆಯ ಮುಖ್ಯಸ್ಥರಿಗೆ ನಾಚಿಕೆ ಆಗಬೇಕು. ನಿಮ್ಮ ಶಿಕ್ಷಕ ವೃತ್ತಿ ನಿಮಗೆ ಆತ್ಮತೃಪ್ತಿ ನೀಡಿದೆಯೇ ಎಂದು ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಅವರು ತಿಳಿಸಿದರು.

ಶೂನ್ಯ ಸಾಧನೆ ಮಾಡಿದ ಶಾಲೆಗಳ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಲು ಮತ್ತು ಅಲ್ಲಿನ ಮಕ್ಕಳನ್ನು ಹತ್ತಿರದ ಬೇರೆ ಶಾಲೆಗಳಿಗೆ ವರ್ಗಾಯಿಸಲು ಕ್ರಮವಹಿಸಬೇಕು. ಈ ಕುರಿತು ನಿಷ್ಕಾಳಜಿ ತೋರಿದಲ್ಲಿ ಡಿಡಿಪಿಐ ಮತ್ತು ಸಂಬಂಧಿಸಿದ ಬಿಇಓ ಅವರ ವಿರುದ್ದ ಕ್ರಮಕ್ಕಾಗಿ ಇಲಾಖೆಗೆ ಶಿಪಾರಸ್ಸು ಮಾಡಲಾಗುತ್ತದೆ ಎಂದು ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ ಅವರು ಎಚ್ಚರಿಸಿದರು.

ಇಂದಿನ ಪರಿಶೀಲನಾ ಸಭೆಗೆ ಗೈರಾಗಿರುವ ಶೂನ್ಯ ಸಾಧನೆ ಮಾಡಿರುವ ಶಾಲೆಗಳ ಅನುಮತಿಯನ್ನು ರದ್ದುಪಡಿಸಲು ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಸಿಇಓ ಭುವನೇಶ ಪಾಟೀಲ ಅವರು ನಿರ್ದೇಶನ ನೀಡಿದರು.

ಶಾಲೆಗಳಿಗೆ ಅನಧಿಕೃತವಾಗಿ ಗೈರಾಗುವ, ನಿಗಧಿತ ಸಮಯಕ್ಕೆ ಶಾಲೆಗೆ ಹೋಗದ ಮತ್ತು ಕಲಿಕೆಯಲ್ಲಿ ಪ್ರಗತಿ ಸಾಧಿಸದ ಶಿಕ್ಷಕರನ್ನು ಗುರುತಿಸಿ, ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಶೈಕ್ಷಣಿಕ ಸುಧಾರಣೆಗಾಗಿ ಮಿಷನ್ ಮೋಡ್‍ದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಕೆಲಸ ಮಾಡಿದರೂ, ಸರಿಯಾದ ಸಾಧನೆ ಮಾಡಲಿಲ್ಲ. ಈ ಕಳಪೆ ಗುಣಮಟ್ಟದ ಸಾಧನೆಗೆ ಶಿಕ್ಷಣ ಇಲಾಖೆಯ ಎಲ್ಲ ಅಧಿಕಾರಿಗಳು, ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರು ಹೊಣೆ ಹೊರಬೇಕು.

ಕೈತುಂಬ ಸಂಬಳ, ಸೌಲಭ್ಯಗಳನ್ನು ನೀಡಿದ್ದರೂ ತಪ್ಪು ಒಪ್ಪಿಕೊಳ್ಳದೇ ಸಣ್ಣ ಪುಟ್ಟ ಕಾರಣ ನೀಡಿ, ನಿಮ್ಮನ್ನು ನೀವು ಸಮರ್ಥಿಸಿಕೊಳ್ಳುವದರಿಂದ ಯಾವ ಪ್ರಯೋಜನವಿಲ್ಲ ಎಂದು ಅವರು ಖಾರವಾಗಿ ನುಡಿದರು.

ಪ್ರತಿ ಶಿಕ್ಷಕನ ಕರ್ತವ್ಯಗಳ ಮೌಲ್ಯಮಾಪನ ಮಾಡುವ ಮತ್ತು ಗ್ರೇಡಿಂಗ್ ಮಾಡುವ ವ್ಯವಸ್ಥೆ ಜಾರಿಗೊಳಿಸುವ ಚಿಂತನೆ ಇದೆ. ಶಾಲಾ ಮಕ್ಕಳ ಕಲಿಕಾ ಗುಣಮಟ್ಟ ಸುಧಾರಣೆ ಹಾಗೂ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ನೀಡುವ ಕಾರ್ಯಗಳನ್ನು ಸಮರ್ಪಕವಾಗಿ ಮಾಡದೇ, ನಿಷ್ಕಾಳಜಿ, ಕರ್ತವ್ಯಲೋಪ ಮಾಡುವ ಅಧಿಕಾರಿ ಮತ್ತು ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ.

ವಿಶೇಷವಾಗಿ ಸತತವಾಗಿ ಕಡಿಮೆ ಫಲಿತಾಂಶ ಮಾಡುತ್ತಿರುವ ಶಾಲೆಗಳಿಗೆ ಅಧಿಕಾರಿಗಳಿಂದ ಅನಿರೀಕ್ಷತ ಭೇಟಿ, ಪರಿಶೀಲನೆಗೆ ಆದೇಶಿಸಿ, ವರದಿ ಪಡೆಯಲಾಗುತ್ತದೆ ಎಂದು ಭುವನೇಶ ಪಾಟೀಲ ಅವರು ತಿಳಿಸಿದರು.

ಮುಂದಿನ ವರ್ಷದ ಫಲಿತಾಂಶ ಸುಧಾರಣೆ ಬಗ್ಗೆ ಕ್ರಿಯಾಯೋಜನೆ ರೂಪಿಸಿ ಡಿಡಿಪಿಐ ಕಚೇರಿ ಸಲ್ಲಿಸಬೇಕೆಂದು ಸಹಾಯಕ ಯೋಜನಾ ಸಮನ್ವಯ ಅಧಿಕಾರಿ ಡಾ.ರೇಣುಕಾ ಅಮಲಝರಿ ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯ ಧಾರವಾಡ ಜಿಲ್ಲಾ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಯಟ್ ಉಪನ್ಯಾಸಕ ಎ.ಎ.ಖಾಜಿ ಸ್ವಾಗತಿಸಿದರು. ಡಯಟ್ ಹಿರಿಯ ಉಪನ್ಯಾಸಕ ಅರ್ಜುನ ಕಾಂಬೋಗಿ ಫಲಿತಾಂಶ ವಿಶ್ಲೇಷಣೆ ಮಾಡಿದರು.

ಡಯಟ್ ಉಪ ಪ್ರಾಚಾರ್ಯ ಜೆ.ಜಿ.ಸೈಯದ್, ಡಿವೈಪಿಸಿ ಎಸ್.ಎಂ.ಹುಡೇದಮನಿ, ಕ್ಷೇತ್ರಶಿಕ್ಷಣಾಧಿಕಾರಿಗಳಾದ ಉಮೇಶ ಬೊಮ್ಮಕ್ಕನವರ, ರಾಮಕೃಷ್ಣ ಸದಲಗಿ, ಶಿವಾನಂದ ಮಲ್ಲಾಡ, ಚನ್ನಪ್ಪಗೌಡರ, ಮಹಾದೇವಿ ಮಾಡಲಗೇರಿ, ಉಮಾದೇವಿ ಬಸಾಪುರ ಸೇರಿದಂತೆ ಡಯಟ್ ಉಪನ್ಯಾಸಕರು, ಡಿಡಿಪಿಐ ಕಚೇರಿಯ ಅಧಿಕಾರಿಗಳು, ಶೇ.50 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಪ್ರೌಢಶಾಲೆಗಳ ಮುಖ್ಯೋಪಾಧ್ಯಾರು ಸಭೆಯಲ್ಲಿ ಭಾಗವಹಿಸಿದ್ದರು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!