The CM post is not vacant, D.K.Shivakumar is committed to the high command's word as a disciplined soldier of the party: D.K. Suresh

ಬಮೂಲ್ ಚುನಾವಣೆ ಫಲಿತಾಂಶ: ಡಿಕೆ ಸುರೇಶ್ ಹೇಳಿದ್ದು ಇಷ್ಟು

ಬೆಂಗಳೂರು: “ರಾಮನ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು, ತಮ್ಮ ಅವಧಿಯಲ್ಲಿ ಜಿಲ್ಲೆಗೆ ಕೊಟ್ಟಿರುವ ಕೊಡುಗೆ ಮುಂದಿಟ್ಟು ಮಾತನಾಡಲಿ” ಎಂದು ನಿಕಟಪೂರ್ವ ಸಂಸದ ಡಿಕೆ ಸುರೇಶ್ (DK Suresh) ವಿರೋಧ ಪಕ್ಷಗಳ ನಾಯಕರ ವಿರುದ್ಧ ಹರಿಹಾಯ್ದರು.

ಸದಾಶಿವನಗರ ನಿವಾಸದಲ್ಲಿ ಡಿ.ಕೆ. ಸುರೇಶ್ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ರಿಯಲ್ ಎಸ್ಟೇಟ್ ಉತ್ತೇಜನಕ್ಕೆ ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡಲಾಗಿದೆ. ರಾಮನಗರದಲ್ಲಿ ಯಾರು ನಿವೇಶನ ಖರೀದಿಸಿದ್ದಾರೆ ಎಂದು ಹೆಸರು ಬಹಿರಂಪಡಿಸಲಿ ಎಂಬ ವಿಜಯೇಂದ್ರ ಅವರ ಟೀಕೆ ಬಗ್ಗೆ ಕೇಳಿದಾಗ, ಈ ರೀತಿ ಹೇಳುತ್ತಿರುವವರೆ ಇದನ್ನು ಬಹಿರಂಗಪಡಿಸಬೇಕಲ್ಲವೇ? ಅವರು ಸ್ಥಿಮಿತ ಇಲ್ಲದೆ ಮಾತನಾಡಿದರೆ ಅದಕ್ಕೆ ನಾನೇನು ಮಾಡಲು ಸಾಧ್ಯ? ರಾಮನಗರ ತಾಲೂಕು ಈ ಹಿಂದೆ ಕ್ಲೋಸ್ ಪೇಟೆ ಎಂದಿತ್ತು. ಈ ವಿಚಾರ ವಿಜಯೇಂದ್ರ ಅವರಿಗೆ ಗೊತ್ತಿದೆಯೋ ಇಲ್ಲವೋ ಗೊತ್ತಿಲ್ಲ. ನಾವು ರಾಮನಗರ ತಾಲೂಕಿನ ಹೆಸರನ್ನು ಬದಲಾವಣೆ ಮಾಡಿಲ್ಲ.

ಬೆಂಗಳೂರು ಜಿಲ್ಲೆಯ ಭಾಗವಾಗಿದ್ದ ಈ ಪ್ರದೇಶವನ್ನು ಅದೇ ರೀತಿ ಮುಂದುವರಿಸಲು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಸರ್ಕಾರ ಆದೇಶ ಹೊರಡಿಸಿದೆ. ಇಲ್ಲಿ ಬೇರೆಯವರ ಆಸ್ತಿ ಬರೆಸಿಕೊಳ್ಳುವ ಪ್ರಶ್ನೆ ಇಲ್ಲ.

ಜಿಲ್ಲೆಯ ಹೆಸರಿನ ಮೇಲೆ ಅನಗತ್ಯ ರಾಜಕಾರಣ ಮಾಡುವುದನ್ನು ಬಿಟ್ಟು ನಿಮ್ಮ ಕಾಲದಲ್ಲಿ ಈ ಜಿಲ್ಲೆಗೆ ನೀಡಿರುವ ಕೊಡುಗೆ ಏನೆಂದು ಹೇಳಿ ಎಂದು ತಿರುಗೇಟು ನೀಡಿದರು.

“ಬೆಂಗಳೂರು ದಕ್ಷಿಣ ಎಂದು ಮರುನಾಮಕರಣದಿಂದ ರೈತರು, ಯುವಕರು ಸಂತೋಷಪಡುತ್ತಿದ್ದಾರೆ. ಬೆಂಗಳೂರು ಹೆಸರಿದ್ದರೆ ನಮ್ಮ ಕಾಲೇಜು ಹಾಗೂ ವಿವಿಗಳಿಗೆ ಗೌರವ ಸಿಗುತ್ತದೆ, ಉದ್ಯೋಗ ಸಿಗುತ್ತದೆ ಎಂದು ಭಾವಿಸಿದ್ದಾರೆ. ಈ ವಿಚಾರದಲ್ಲಿ ಜನ ಸಂತೋಷವಾಗಿದ್ದಾರೆ. ಕೆಲವು ರಾಜಕಾರಣಿಗಳು ರಾಜಕೀಯಕ್ಕಾಗಿ ರಾಮನ ಹೆಸರು ಬಳಸುತ್ತಿದ್ದಾರೆ. ಇದನ್ನು ಬಿಟ್ಟು, ಅಭಿವೃದ್ಧಿಯ ಸಂಕೇತ ಇಟ್ಟುಕೊಂಡು ಬಿಜೆಪಿ ಅಧ್ಯಕ್ಷರು ಚರ್ಚೆ ಮಾಡಲಿ. ಅವರು ಕರ್ನಾಟಕ ಹಾಗೂ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತಬೇಕು. ಕೃಷ್ಣಾ ಮೇಲ್ದಂಡೆ, ಕಳಸಾ ಬಂಡೂರಿ, ಮೇಕೆದಾಟು ಯೋಜನೆಗೆ ಅನುಮತಿ ನೀಡುವುದು ವಿಳಂಬ ಮಾಡುತ್ತಿರುವ ಅವರ ನಾಯಕರಿಗೆ ತಿಳಿ ಹೇಳಬೇಕು. ಇದು ಅವರ ಮುಖ್ಯ ಕರ್ತವ್ಯ. ನೀವು ರಾಮನಗರ ವಿಚಾರ ಬಿಟ್ಟು, ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರಾಗಿರುವ ನೀವು ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಗಮನ ಹರಿಸಿ” ಎಂದರು.

ಕುಮಾರಸ್ವಾಮಿ ಕನ್ನಡಿಗರ ಹಣ ಕೊಡಿಸಲಿ

ಹೆಸರು ಬದಲಾವಣೆ ಮಾಡಿ ಫಲಕಗಳಿಗೆ ಚಿನ್ನದ ತಗಡು ಹಾಕಿಸುತ್ತಾರಾ ಎಂಬ ಕುಮಾರಸ್ವಾಮಿ ಟೀಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರು ಚಿನ್ನದ ತಗಡು ತಂದುಕೊಟ್ಟರೆ ಖಂಡಿತವಾಗಿಯೂ ಹಾಕಿಸುತ್ತೇವೆ. ಅವರು ಕೇಂದ್ರ ಸಚಿವರಾಗಿದ್ದಾರೆ. ನಮ್ಮ ಕನ್ನಡಿಗರ ಹಣ ಕೇಂದ್ರ ಸರ್ಕಾರದ ಬಳಿಯೇ ಇದೆ. ಮಧ್ಯಪ್ರದೇಶ, ಉತ್ತರ ಪ್ರದೇಶ, ರಾಜಸ್ಥಾನ, ಬಿಹಾರ ರಾಜ್ಯಗಳಿಗೆ ನೀಡುತ್ತಿರುವುದು ಕನ್ನಡಿಗರ ಹಣವಲ್ಲವೇ? ನಮ್ಮ ರಾಜ್ಯದಿಂದ ಸಂಗ್ರಹವಾಗಿರುವ 5 ಲಕ್ಷ ಕೋಟಿ ತೆರಿಗೆ ಹಣವನ್ನು ಕೊಡಿಸಿದರೆ ಖಂಡಿತವಾಗಿ ಚಿನ್ನದ ತಗಡನ್ನೇ ಹಾಕಿಸೋಣ, ಅದಕ್ಕೆ ಅಭ್ಯಂತರವಿಲ್ಲ. ಅವರ ಆಸೆಯನ್ನು ನಾವೇಕೆ ಬೇಡ ಎನ್ನಬೇಕು. ನಮ್ಮ ಹಣವನ್ನು ಉತ್ತರ ರಾಜ್ಯಗಳಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಕುಮಾರಸ್ವಾಮಿ ಅವರು ಇಲ್ಲಿದ್ದಾಗ ಒಂದು ಮಾತಾಡುತ್ತಿದ್ದರು. ಈಗ ಬೇರೊಂದು ಮಾತು ಹೇಳುತ್ತಿದ್ದಾರೆ” ಎಂದು ಮಾತಿನಲ್ಲೇ ತಿವಿದರು.

ರಾಮನಗರಕ್ಕೆ ಅದರದೇ ಆದ ಇತಿಹಾಸವಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, “ಹೌದು ಇತಿಹಾಸ ಇದೆ. ಕೆಂಗಲ್ ಹನುಮಂತಯ್ಯ ಅವರು ಇಲ್ಲಿಂದ ಮುಖ್ಯಮಂತ್ರಿ ಆಗಿದ್ದಾರೆ. ಇವರ ಅಧಿಕಾರ ಅವಧಿಯಲ್ಲಿ ಕೆಂಗಲ್ ಹನುಮಂತಯ್ಯ ಅವರ ಒಂದೇ ಒಂದು ಪ್ರತಿಮೆ ಮಾಡಿದ್ದಾರಾ? ಅಧಿಕಾರದಲ್ಲಿದ್ದಾಗ ಅವರ ಹೆಸರು ಹೇಳಿದ್ದರಾ? ಈಗ ಯಾಕೆ ಅವರ ಹೆಸರು ಹೇಳುತ್ತಿದ್ದಾರೆ? ಸುಮ್ಮನೆ ಜನರನ್ನು ಎತ್ತಿಕಟ್ಟುವುದನ್ನು ಬಿಡಲಿ. ಅವರು ಕೇಂದ್ರ ಮಂತ್ರಿಯಾಗಿದ್ದು, ದೇಶಕ್ಕೆ ಹಾಗೂ ರಾಜ್ಯಕ್ಕೆ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದೆ. ಅದನ್ನು ಮಾಡಿದರೆ ನಾವು ಸ್ವಾಗತಿಸುತ್ತೇವೆ” ಎಂದರು.

ಇಂತಹ ಹೇಳಿಕೆಗಳು ಜನರನ್ನು ಗೊಂದಲಗೊಳಿಸುವುದಿಲ್ಲವೇ ಎಂದು ಕೇಳಿದಾಗ, “ಜನರು ಯಾರೂ ಗೊಂದಲದಲ್ಲಿಲ್ಲ. ರಾಜಕೀಯ ನಾಯಕರು ಗೊಂದಲಕ್ಕೆ ಒಳಗಾಗಿದ್ದಾರೆ” ಎಂದರು.

ಬಮೂಲ್ ಚುನಾವಣೆಯಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು

“ಬೆಂಗಳೂರು ಸಹಕಾರಿ ಹಾಲು ಒಕ್ಕೂಟ (ಬಮೂಲ್)ದ ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ ಜಿಲ್ಲೆಗಳ 14 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 11 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ನಿರ್ದೇಶಕರು ಆಯ್ಕೆಯಾಗಿದ್ದಾರೆ. ಮೂರು ಸ್ಥಾನಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ನಿರ್ದೇಶಕರು ಆಯ್ಕೆಯಾಗಿದ್ದಾರೆ. ಆ ಪೈಕಿ 2 ಸ್ಥಾನಗಳಲ್ಲಿ ತಾಂತ್ರಿಕ ಕಾರಣಗಳಿಂದ ನ್ಯಾಯಾಲಯದಲ್ಲಿ ತಡೆ ಹಿಡಿಯಲಾಗಿದೆ. ರಾಮನಗರದಲ್ಲಿ ನಡೆದ ಆರು ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು ಆಯ್ಕೆಯಾಗಿದ್ದಾರೆ” ಎಂದರು.

“ಈ ಚುನಾವಣೆಯಲ್ಲಿ ಸಹಕರಿಸಿದ ಆಡಳಿತ ಮಂಡಳಿ ಸದಸ್ಯರು, ಒಕ್ಕೂಟದ ಅಧ್ಯಕ್ಷರು, ಸಿಬ್ಬಂದಿಗೆ, ಪಕ್ಷದ ಮುಖಂಡರು, ಶಾಸಕರಿಗೆ, ಮಂತ್ರಿಗಳಿಗೆ ಈ ಸಂದರ್ಭದಲ್ಲಿ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದು ತಿಳಿಸಿದರು.

ಕೆಎಂಎಫ್ ವಿಚಾರ ಚರ್ಚೆ ಇಲ್ಲ

ಕೆಎಂಎಫ್ ಹಾದಿ ಸುಗಮವಾಯಿತಲ್ಲವೇ ಎಂದು ಕೇಳಿದಾಗ, “ಈಗ ಬಮೂಲ್ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆದಿದೆ. ನಾನು ಕನಕಪುರದಿಂದ ನಿರ್ದೇಶಕನಾಗಿ ಆಯ್ಕೆಯಾಗಿದ್ದೇನೆ. ನನ್ನ ಜತೆ ಒಟ್ಟು 14 ನಿರ್ದೇಶಕರು ಆಯ್ಕೆಯಾಗಿದ್ದಾರೆ. ಯಾರು ಅಧ್ಯಕ್ಷರಾಗಬೇಕು ಎಂದು ಮೂರು ಜಿಲ್ಲೆಯ ನಾಯಕರು ಸೇರಿ ತೀರ್ಮಾನ ಮಾಡುತ್ತಾರೆ. ಇಲ್ಲಿ ಕೆಎಂಎಫ್ ವಿಚಾರ ಚರ್ಚೆ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಜಯಮುತ್ತುಗೆ ಅನ್ಯಾಯ ಆಗಿದ್ದು ಬಿಜೆಪಿ- ದಳದಿಂದ

ಕಾಂಗ್ರೆಸ್ ಅಧಿಕಾರ ದುರುಪಯೋಗ ಮಾಡಿಕೊಂಡು ಈ ಚುನಾವಣೆ ಮಾಡಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ಅದನ್ನು ಕುಮಾರಸ್ವಾಮಿ ಅವರನ್ನೇ ಕೇಳಬೇಕು. ಈ ಹಿಂದೆ ಮಾಗಡಿಯ ನರಸಿಂಹಮೂರ್ತಿ ಅವರು ಅಧ್ಯಕ್ಷರಾಗಬೇಕಾದಾಗ ಹಿಂದಿನ ದಿನ ರಾತ್ರಿ ಅವರನ್ನು ನಿರ್ದೇಶಕ ಸ್ಥಾನದಿಂದ ಇಳಿಸಿದ್ದರು. ಈ ಪರಿಪಾಠ ಆರಂಭವಾಗಿದ್ದು, ಅವರ ಪಕ್ಷದಿಂದ. ಅದು ಅವರಿಗೆ ಚೆನ್ನಾಗಿ ಗೊತ್ತಿದೆ. ಜಯಮುತ್ತು ಅವರಿಗೆ ಅನ್ಯಾಯ ಆಗಿರುವುದು ಬಿಜೆಪಿ ಹಾಗೂ ಜೆಡಿಎಸ್ ನವರಿಂದಲೇ ಹೊರತು ಬೇರೆಯವರಿಂದ ಅಲ್ಲ” ಎಂದು ಕಿಡಿಕಾರಿದರು.

ಲೋಕಸಭೆ ಚುನಾವಣೆ ನಂತರ ಒಕ್ಕಲಿಗ ಸಮುದಾಯ ಮತ್ತೆ ಕಾಂಗ್ರೆಸ್ ಪಕ್ಷದತ್ತ ಒಲವು ತೋರುತ್ತಿದೆಯೇ ಎಂದು ಕೇಳಿದಾಗ, “ಈಗ ನಡೆದಿರುವುದು ಸಹಕಾರ ಸಂಸ್ಥೆ ಚುನಾವಣೆ. ಇಲ್ಲಿ ರಾಜಕೀಯ ಹೊರತಾಗಿ ಚುನಾವಣೆ ನಡೆಯುತ್ತವೆ. 10-20% ರಾಜಕೀಯ ಇರಬಹುದು. ಸಹಕಾರ ಸಂಸ್ಥೆ ಬೆಳೆಯಬೇಕು ಎಂದರೆ ರಾಜಕೀಯ ಪಕ್ಕಕ್ಕೆ ಇಟ್ಟು ಚುನಾವಣೆ ಎದುರಿಸಬೇಕು. ಇಲ್ಲಿ ರೈತರ ಹಿತಾಸಕ್ತಿ ಹೆಚ್ಚಾಗಿರುತ್ತದೆ. ಸಾರ್ವಜನಿಕರ ಹಿತದೃಷ್ಟಿಯಲ್ಲಿ ಕೆಲಸ ಮಾಡಿ, ಅವರ ಆಶಯ ಈಡೇರಿಸಬೇಕಾಗುತ್ತದೆ. ಈ ಸರ್ಕಾರದ ಅವಧಿಯಲ್ಲಿ ಉತ್ತಮ ಕೆಲಸ ಆಗುತ್ತದೆ ಎಂದು ಬಮೂಲ್ ಚುನಾವಣೆ ಫಲಿತಾಂಶ ಈ ಭಾಗದ ರೈತರಲ್ಲಿ ಹೊಸ ಭರವಸೆ ಮೂಡಿದೆ. ಹೀಗಾಗಿ ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿದ್ದಾರೆ” ಎಂದು ತಿಳಿಸಿದರು.

ಸರ್ಕಾರ 2 ವರ್ಷ ಪೂರೈಸಿದ ಸಂದರ್ಭದಲ್ಲಿ ಬಿಜೆಪಿ ಬಿಡುಗಡೆ ಮಾಡಿದ ಚಾರ್ಜ್ ಶೀಟ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಬಗ್ಗೆ ಕೇಳಿದಾಗ, “ನನಗೆ ಈ ವಿಚಾರವಾಗಿ ಹೆಚ್ಚಿನ ಮಾಹಿತಿ ಇಲ್ಲ. ಇದು ಸರ್ಕಾರದ ತೀರ್ಮಾನ ಆಗಿರುವುದರಿಂದ ಸರ್ಕಾರ ನಡೆಸುತ್ತಿರುವ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿ, ಸಚಿವರನ್ನು ಕೇಳಿ” ಎಂದರು.

ಖರ್ಗೆ ಅವರ ಸೂಚನೆ ಪಾಲನೆ ಎಲ್ಲರ ಧರ್ಮ

ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ ಎಂಬ ಜಮೀರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಇಲ್ಲ ಎಂದವರು ಯಾರು? ನೀವೇ (ಮಾಧ್ಯಮಗಳೇ) ಇಲ್ಲ ಎನ್ನುತ್ತಿರುವುದು. ಪದೇ ಪದೆ ಇದೇ ಪ್ರಶ್ನೆ ಯಾಕೆ ಕೇಳುತ್ತಿರೋ ಗೊತ್ತಿಲ್ಲ” ಎಂದರು.

ಸಚಿವರು ಈ ರೀತಿ ಹೇಳಿದಾಗ ಕ್ರಿಯೆಗೆ ಪ್ರತಿಕ್ರಿಯೆ ಸಹಜವಲ್ಲವೇ ಎಂದು ಕೇಳಿದಾಗ, “ಈ ವಿಚಾರದಲ್ಲಿ ಕ್ರಿಯೆಯೂ ಇಲ್ಲ, ಪ್ರತಿಕ್ರಿಯೆಯೂ ಇಲ್ಲ. ನಮ್ಮ ಪಕ್ಷ ಒಗ್ಗಟ್ಟಾಗಿದ್ದು, ನಮ್ಮ ನಾಯಕರಾಗಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾರೆ. ಅದರಲ್ಲಿ ಯಾವುದೇ ಚರ್ಚೆ ಇಲ್ಲ. ಈ ವಿಚಾರವಾಗಿ ಪಕ್ಷದ ವರಿಷ್ಠರು, ಸಿಎಂ ಸಿದ್ದರಾಮಯ್ಯ, ಪಕ್ಷದ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಎಲ್ಲರೂ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷರಾದ ಖರ್ಗೆ ಅವರು ಗಪ್ ಚುಪ್ ಎಂದು ಹೇಳಿದ್ದಾರೆ. ಅವರ ಸೂಚನೆ ಪಾಲಿಸುವುದು ಎಲ್ಲರ ಧರ್ಮ” ಎಂದು ತಿಳಿಸಿದರು.

ಬೆಂಗಳೂರು ಮಳೆಗೆ ಪಾಲಿಕೆ ಸಿದ್ಧವಾಗಿಲ್ಲ ಎಂಬ ವಿಚಾರವಾಗಿ ಕೇಳಿದಾಗ, “ಈ ಬಗ್ಗೆ ಸಿಎಂ ಹಾಗೂ ಡಿಸಿಎಂ ಅವರು ಸಿಟಿ ರೌಂಡ್ಸ್ ಮಾಡಿದ್ದು, ಅಧಿಕಾರಿಗಳ ಸಭೆ ಮಾಡಿದ್ದಾರೆ. ಕೆಲಸ ನಡೆಯುತ್ತಿವೆ. ಇಷ್ಟು ವರ್ಷ ನೆರೆ ಪರಿಸ್ಥಿತಿ ಎದುರಿಸುತ್ತಿದ್ದ ಪ್ರದೇಶಗಳಲ್ಲಿ ಸಮಸ್ಯೆ ಬಗೆಹರಿದಿದೆ. ನಿರಂತರವಾಗಿ ಬಿಜೆಪಿ ಶಾಸಕರು ಆಯ್ಕೆಯಾಗುತ್ತಿರುವ ಕ್ಷೇತ್ರಗಳಲ್ಲಿ ಇಂತಹ ಪರಿಸ್ಥಿತಿ ಎದುರಾಗುತ್ತಿದೆ. ಅವರು ಈ ಬಗ್ಗೆ ಗಮನ ಹರಿಸಿಲ್ಲ. ನೀವು ಈ ಬಗ್ಗೆ ಸರ್ಕಾರಕ್ಕೆ ಚಾಟಿ ಬೀಸಿದ್ದು, ಸರ್ಕಾರ ಈ ಬಗ್ಗೆ ಗಮನ ಹರಿಸಿದ್ದು, ಮುಂದಿನ ದಿನಗಳಲ್ಲಿ ಇದನ್ನು ಸರಿಪಡಿಸಲಾಗುವುದು” ಎಂದು ತಿಳಿಸಿದರು.

ಬೆಂಗಳೂರಿನಲ್ಲಿರುವ ಹೆಚ್ ಎಎಲ್ ಅನ್ನು ನಮ್ಮ ರಾಜ್ಯಕ್ಕೆ ನೀಡಿ ಎಂಬ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರ ಮನವಿ ಬಗ್ಗೆ ಕೇಳಿದಾಗ, “ಹೆಚ್ಎಎಲ್ ಸುಮಾರು 50 ವರ್ಷಗಳಿಂದ ಬೆಂಗಳೂರಿನಲ್ಲಿದೆ. ಅದಕ್ಕೆ ಬೇಕಾಗಿರುವ ಎಲ್ಲಾ ವ್ಯವಸ್ಥೆಗಳು ಇಲ್ಲಿವೆ. ಅತ್ಯುತ್ತಮ ಹೆಲಿಕಾಪ್ಟರ್ ತಯಾರಿ ಕೂಡ ಆಗಿದೆ. ಸ್ಥಳ, ತಂತ್ರಜ್ಞಾನ ಅಥವಾ ಬೇರೆ ವಿಚಾರವಾಗಿ ಯಾವುದೇ ಕೊರತೆ ಇಲ್ಲ. ಯಾವುದನ್ನು ಉತ್ಪಾದನೆ ಮಾಡಬೇಕು ಎಂದು ನಿರ್ಧರಿಸುತ್ತದೋ ಅದನ್ನು ಸಂಸ್ಥೆ ಮಾಡುತ್ತದೆ. ಬೆಂಗಳೂರಿನಲ್ಲಿ ಹೆಚ್ ಎಎಲ್ ಸಮರ್ಥವಾಗಿ ಕೆಲಸ ಮಾಡುತ್ತಿದ್ದು, ಇದರಲ್ಲಿ ಯಾವುದೇ ಅನುಮಾನ ಬೇಡ. ಯಾವುದೋ ರಾಜ್ಯದ ಸಿಎಂ ಮನವಿ ಮಾಡಿದ ತಕ್ಷಣ, ಇಲ್ಲಿರುವ ಸಂಸ್ಥೆಯನ್ನು ಅಲ್ಲಿಗೆ ತೆಗೆದುಕೊಂಡು ಹೋಗಲು ಕೇಂದ್ರ ಸರ್ಕಾರ ತೀರ್ಮಾನ ಮಾಡಲು ಅದು ಆಟಿಕೆ ವಸ್ತುವಲ್ಲ. ಬೆಂಗಳೂರಿನಲ್ಲಿರುವ ಹೆಚ್ ಎಎಲ್, ಬಿಹೆಚ್ ಇಎಲ್, ಬಿಎಎಲ್ ಸೇರಿದಂತೆ ಎಲ್ಲಾ ಸಂಸ್ಥೆಗಳು ಸಮರ್ಥವಾಗಿ ಕೆಲಸ ಮಾಡುತ್ತಿವೆ. ಒಂದು ಕಾಲದಲ್ಲಿ ಇವು ಬೆಂಗಳೂರಿನ ಹಿರಿಮೆಯಾಗಿದ್ದವು” ಎಂದು ತಿಳಿಸಿದರು.

ಕೇಂದ್ರ ಸರ್ಕಾರ ನರೇಗಾ ಯೋಜನೆಯಲ್ಲಿ ಬಾಕಿ ಹಣ ಬಿಡುಗಡೆ ಮಾಡಿಲ್ಲ ಎಂದು ಕೇಳಿದಾಗ, “ಕಳೆದ ವರ್ಷವೂ ಸರಿಯಾಗಿ ಅನುದಾನ ಬಿಡುಗಡೆಯಾಗಿಲ್ಲ. ಈ ವರ್ಷ ಸುಮಾರು 4 ತಿಂಗಳಿಂದ ಕಾರ್ಮಿಕರ ವೇತನ ಆಗಿಲ್ಲ. ಈ ಬಗ್ಗೆ ಸಂಸದರು, ಕೇಂದ್ರದ ಮಂತ್ರಿಗಳು ಧ್ವನಿ ಎತ್ತಿ ರಾಜ್ಯದ ಜನರಿಗೆ ನ್ಯಾಯ ಒದಗಿಸಬೇಕು. ಕಾರ್ಮಿಕ ಕಾಯ್ದೆ ಪ್ರಕಾರ ಸರಿಯಾಗಿ ಈ ಕಾರ್ಮಿಕರಿಗೆ ವೇತನ ನೀಡದಿದ್ದರೆ ಅದಕ್ಕೆ ಬಡ್ಡಿಯನ್ನು ಕೂಡ ನೀಡಬೇಕಾಗುತ್ತದೆ” ಎಂದು ಹೇಳಿದರು.

ನೀತಿ ಆಯೋಗದ ಸಭೆಗೆ ಸಿಎಂ ಗೈರಾಗಿರುವ ಬಗ್ಗೆ ಕೇಳಿದಾಗ, “ಮುಖ್ಯಮಂತ್ರಿಗಳು 2013ರಿಂದ 2018 ಹಾಗೂ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕೇಂದ್ರ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿಲ್ಲ. ಅವರ ಪರವಾಗಿ ಕಂದಾಯ ಸಚಿವರು ಭಾಗವಹಿಸುತ್ತಿದ್ದಾರೆ. ಹೀಗಾಗಿ ಅವರ ಆರೋಪದಲ್ಲಿ ಹುರುಳಿಲ್ಲ. ನಮ್ಮ ರಾಜ್ಯದ ವಿಚಾರಧಾರೆಗಳನ್ನು ನಮ್ಮ ಕಂದಾಯ ಸಚಿವರು ಸಮರ್ಥವಾಗಿ ಮಂಡಿಸಿದ್ದಾರೆ. ವಿರೋಧ ಪಕ್ಷದವರು ಹೋಗಿ ಮೋದಿ ಬಳಿ ಫೋಟೋ ತೆಗೆಸಿಕೊಳ್ಳುವ ಆಶಯ ಇಲ್ಲ. ಇದೇ ಮೊದಲ ಬಾರಿಗೆ ಮೋದಿ ಅವರು ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿದ್ದು, ಇಷ್ಟು ವರ್ಷ ನಿರ್ಮಲಾ ಸೀತಾರಾಮನ್ ಅವರು ಸಭೆ ನಡೆಸುತ್ತಿದ್ದರು” ಎಂದರು.

ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಸಿಎಂ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಬೇಕಿತ್ತು ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರು ದಿನಾ ಒಂದೊಂದು ಮಾತಾಡುತ್ತಾರೆ. ನಾಳೆ ಕೇಳಿ, ಅವರು ಈ ವಿಚಾರ ಮರೆತಿರುತ್ತಾರೆ. ಅವರು ಬೆಳಗ್ಗೆ ಒಂದು ಸುಳ್ಳು ಹೇಳಿ ಸಂಜೆ ವೇಳೆಗೆ ಅದನ್ನು ತಿರುಗಿಸಿ ಹೇಳುತ್ತಾರೆ. ಅವರು ಎರಡು ಬಾರಿ ಸಿಎಂ ಆದವರು, ಕೇಂದ್ರದಲ್ಲಿ ಕೂತಿದ್ದಾರೆ. ರಾಜ್ಯಕ್ಕೆ ಏನೆಲ್ಲಾ ಬೇಕು ಅದನ್ನು ಅವರೇ ಕೊಡಿಸಲಿ” ಎಂದು ತಿಳಿಸಿದರು.

ಬಿಜೆಪಿ ಅಧ್ಯಕ್ಷ, ವಿರೋಧ ಪಕ್ಷದ ನಾಯಕರು ಅಸಮರ್ಥರು

ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿರುವ ಬಗ್ಗೆ ಕೇಳಿದಾಗ, “ಈ ಬಗ್ಗೆ ಬಿಜೆಪಿ ನಾಯಕರಾದ ಆರ್.ಅಶೋಕ್, ವಿಜಯೇಂದ್ರ ಅವರನ್ನೇ ಕೇಳಬೇಕು. ಬಿಜೆಪಿ ಕಾರ್ಯಕರ್ತರ ಮೇಲೆ ನಡೆದಿರುವ ದೌರ್ಜನ್ಯದ ಮೇಲೆ ಧ್ವನಿ ಎತ್ತದ ಅಸಮರ್ಥ ಅಧ್ಯಕ್ಷರು, ಅಸಮರ್ಥ ವಿರೋಧ ಪಕ್ಷದ ನಾಯಕರು. ಈ ಬಗ್ಗೆ ನಾನೇನು ಹೇಳಲಿ” ಎಂದರು.

ಅವರು ನಾಪತ್ತೆಯಾಗಿದ್ದಾರೆ ಎಂದು ಕೇಳಿದಾಗ, “ನನಗೆ ಗೊತ್ತಿಲ್ಲ. ನೀವೇ ಹುಡುಕಿಕೊಡಿ. ಒಕ್ಕಲಿಗರು ಹಾಗೂ ದಲಿತರನ್ನು ನಿಂದಿಸಿರುವುದು ನಿಜ ಎಂದು ಎಫ್ ಎಸ್ ಎಲ್ ವರದಿಯಲ್ಲಿ ಸಾಬೀತಾಗಿದೆ. ಆದರೂ ಕ್ರಮ ಕೈಗೊಂಡಿಲ್ಲ. ಅತ್ಯಾಚಾರ ಮಾಡಿದ್ದಾರೆ ಎಂದು ದೂರು ಕೊಟ್ಟಿದ್ದು ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಆದರೂ ಕ್ರಮ ಕೈಗೊಂಡಿಲ್ಲ. ಈಗ ಹೆಣ್ಣು ಮಗಳ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪ ಬಂದಿದೆ. ಇಷ್ಟಾದ ಮೇಲೂ ಅವರು ತನಿಖೆ ಮಾಡದೇ, ಕ್ರಮ ಕೈಗೊಳ್ಳದೇ ರಕ್ಷಣೆ ನೀಡುತ್ತಿದ್ದರೆ, ಅವರು ತಮ್ಮ ಪಕ್ಷದಲ್ಲಿ ಎಂತಹ ರತ್ನ ಇರಬೇಕು ಎಂದು ತೀರ್ಮಾನ ಮಾಡಿರಬಹುದು. ಇತ್ತೀಚೆಗೆ ಅಶೋಕ್ ಅವರು ಬೇರೆ ರೀತಿ ಕಾಣುತ್ತಿದ್ದು, ಆರೋಗ್ಯ ಕಡಿಮೆಯಾದಂತೆ ಕಾಣುತ್ತಿದ್ದಾರೆ. ಈ ಮಾತನ್ನು ಬಿಜೆಪಿಯವರೆ ಹೇಳಿದ್ದಾರೆ” ಎಂದರು.

ಯಾರ ಕೃಪಾಕಟಾಕ್ಷದಿಂದ ಅವರನ್ನು ಬಿಜೆಪಿ ಪಕ್ಷದಲ್ಲಿ ರಕ್ಷಣೆ ಮಾಡಲಾಗುತ್ತಿದೆ ಎಂದು ಕೇಳಿದಾಗ, “ಇದನ್ನು ವಿಜಯೇಂದ್ರ, ಅಶೋಕ್ ಅವರ ಬಳಿ ಕೇಳಬೇಕು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!