ಕೋವಿಡ್ ಹೆಚ್ಚಳ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ

Increase in Covid: Cmsiddaramaiah gives important instructions to officials

ಬೆಂಗಳೂರು; ಕೋವಿಡ್ (Covid) ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು.

ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಈ ಕೆಳಗಿನ ಸೂಚನೆಗಳನ್ನು ನೀಡಿದರು.

ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು.

ಸದ್ಯಕ್ಕೆ ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ.

ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು.

ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು.

ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ, ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು.

ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಆರೋಗ್ಯಕರ, ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಾಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು.

ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರುವಂತೆ ಮುಖ್ಯಮಂತ್ರಿಗಳ ಸೂಚನೆ..

ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೋವಿಡ್ ಕಾರ್ಯಪಡೆಯ ಮುಖ್ಯಸ್ಥರಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು.

ಕಳೆದ ಜನವರಿಯಿಂದಲೂ ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೂ ಎರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದ್ದು ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ.

SARI ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳು ನಾಡಿನಲ್ಲಿ 66, ಮಹಾರಾಷ್ಟ್ರ ಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ

ರಾಜ್ಯದಲ್ಲಿ ಕೊರೊನಾ ಹರಡದಂತೆ
ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು

ಮಕ್ಕಳಿಗೆ ಜ್ವರ ಕೆಮ್ಮು ಮುಂತಾದ ಲಕ್ಷಣಗಳು ಕಂಡು ಬಂದರೆ ಶಾಲೆಗೆ ಕಳಿಸದಂತೆ ಪೋಷಕರು ಕ್ರಮ ವಹಿಸಲು, ಶಾಲಾ ಕಾಲೇಜು ಮಂಡಳಿಗಳು ನಿಗಾ ವಹಿಸಲು ಸೂಚಿಸುವಂತೆ ಕ್ರಮ ಕೈಗೊಳ್ಳಲು ತಿಳಿಸಿದರು.

ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ,
ಎಂತಹುದೇ ಪರಿಸ್ಥಿತಿ ಎದುರಿಸಲು. ಆಸ್ಪತ್ರೆಗಳಲ್ಲಿ ಹಾಸಿಗೆ, ಆಕ್ಸಿಜನ್ ವೆಂಟಿಲೇಟರ್ ಸೇರಿದಂತೆ
ಮೂಲಭೂತ ಸೌಕರ್ಯಗಳು ಕಡ್ಡಾಯವಾಗಿರುವಂತೆ
ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು

ಬಾಣಂತಿ ಹಾಗೂ ಮಕ್ಕಳ ಆರೋಗ್ಯ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಸಭೆಯಲ್ಲಿ ಉಪಸ್ಥಿತರಿದ್ದ ಆರೋಗ್ಯಾಧಿಕಾರಿ ಗಳಿಗೆ ಸೂಚಿಸಿದರು.

ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೋನಾ ಸಹಾಯವಾಣಿ ಪ್ರಾರಂಭ ಮಾಡಲು ಸೂಚನೆ ನೀಡಿದರು .

ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಲು ಕ್ರಮ ವಹಿಸುವಂತೆ ಸೂಚಿಸಿದರು.

ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಇರಬಾರದು. ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ಧವಾಗಿ ಇರುವಂತೆ ಸೂಚಿಸಿದರು.

ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಲು ಸೂಚಿಸಿದರು.

ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಈಗಾಗಲೇ ಪಾಲಿಸುತ್ತಿದ್ದೇವೆ. ರೂಪಾಂತರಿ ಕೊರೊನಾ ವೈರಾಣುವಿಗೆ ಸಂಬಂಧಿಸಿದಂತೆ ರೋಗ ನಿಯಂತ್ರಣ ಮುನ್ನೆಚ್ಚರಿಕೆಯಾಗಿ
ವ್ಯಾಕ್ಸಿನ್ ಗಳನ್ನು ಸಿದ್ದವಾಗಿಟ್ಟು ಕೊಳ್ಳಲು ಸೂಚಿಸಿದರು.

ಸಾಮಾಜಿಕ ಮಾಧ್ಯಮಗಳ ಮೂಲಕ ಕಾಲ ಕಾಲಕ್ಕೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಸೂಚಿಸಿದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]