ಕೆಎಸ್ಡಿಎಲ್ ಕುರಿತು ಬಿವೈ ವಿಜಯೇಂದ್ರ ಟೀಕೆ: ಬಿಜೆಪಿ ಸರ್ಕಾರದ ಹಗರಣ ನೆನಪಿಸಿ ಎಂಬಿ ಪಾಟೀಲ ತಿರುಗೇಟು

MB Patil hits back at BY Vijayendra, reminding him of the BJP government's scam

ಬೆಂಗಳೂರು: ರಾಜ್ಯದ ಹೆಮ್ಮೆಯ ಕೆಎಸ್ಡಿಎಲ್ (KSDL) ಸಂಸ್ಥೆಯ ವಿಚಾರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಕನ್ನಡ ಅಸ್ಮಿತೆಯ ಬಗ್ಗೆ ಮಾತನಾಡುತ್ತಿದ್ದಾರೆ. ಹಿಂದೆ ಬಿಜೆಪಿ ಸರಕಾರವಿದ್ದಾಗ ಸಂಸ್ಥೆಯ ಅಧ್ಯಕ್ಷರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವ್ಯವಹಾರ ನಡೆಸಿ ಜೈಲಿಗೆ ಹೋಗಿದ್ದರು. ಆಗ ತೆಪ್ಪಗಿದ್ದ ಬಿವೈ ವಿಜಯೇಂದ್ರ (BY Vijayendra) ಅವರಿಗೂ ಮಾಡಾಳ್ ಗೂ ವ್ಯವಹಾರ ಇತ್ತೇನೋ. ಆಗ ಏಕೆ ಇವರಿಗೆ ಕನ್ನಡ ಅಸ್ಮಿತೆ ನೆನಪಾಗಲಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ಬಿ ಪಾಟೀಲ (MB Patila) ಸೋಮವಾರ ಕಿಡಿ ಕಾರಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಇಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಕೆಎಸ್ಡಿಎಲ್ ಸಾರ್ವಕಾಲಿಕ ಉತ್ಪಾದನೆ, ವಹಿವಾಟು ಮತ್ತು ಲಾಭ ಮಾಡಿದೆ. ಇದನ್ನು ನಾನು ನನ್ನ ಸ್ವಂತ ವ್ಯಾಪಾರಕ್ಕಿಂತ ಹೆಚ್ಚು ಆದ್ಯತೆ ಕೊಟ್ಟು, ದಕ್ಷತೆ ಹೆಚ್ಚಿಸಿದ್ದೇನೆ. ಸಂಸ್ಥೆ ಸೊರಗಿದ್ದಾಗ ಏನೂ ಮಾತನಾಡದವರ ಕೆಂಗಣ್ಣು ಈಗ ಅದರ ಮೇಲಿದೆ ಎಂದಿದ್ದಾರೆ.

ಹಿಂದಿ ನಟಿ ತಮನ್ನಾ ಭಾಟಿಯಾ ಅವರನ್ನು ಪ್ರಚಾರ ರಾಯಭಾರಿಯಾಗಿ ಮಾಡಿಕೊಂಡಿರುವುದರ ಹಿಂದೆ ವಾಣಿಜ್ಯಿಕ ಉದ್ದೇಶವಿದೆ. ನಾನು ಇದನ್ನು ಸ್ಪಷ್ಟಪಡಿಸಿದ ಮೇಲೆ ಕೆಲವು ಕನ್ನಡಪರ ಸಂಘಟನೆಗಳ ನಾಯಕರು, ಈ ವಿಚಾರ ತಮಗೆ ಗೊತ್ತಿರಲಿಲ್ಲ; ನೀವು ಒಳ್ಳೆಯ ಕೆಲಸ ಮಾಡಿದ್ದೀರಿ ಎಂದು ನನಗೆ ಹೇಳಿದ್ದಾರೆ. ನಾನು ಯಾರಿಂದಲೂ ಕನ್ನಡಾಭಿಮಾನವನ್ನು ಕಲಿಯುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ 23 ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದೆ. ಸದ್ಯದಲ್ಲೇ ಡಿಶ್ ವಾಶರ್ ಮತ್ತು ಸುಗಂಧ ದ್ರವ್ಯಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು. ನಾವು ವ್ಯಾಪಾರವನ್ನು ವ್ಯಾಪಾರವಾಗಿಯೇ ನೋಡಬೇಕು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಹೈದರಾಬಾದಿನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಸುತ್ತಿದ್ದರು. ಅದನ್ನು ನಾವು ಮಟ್ಟ ಹಾಕಿದೆವು. ಈಗಲೂ ಕೆಲವರು ಇದನ್ನು ನಕಲು ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇದರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ವಿವರಿಸಿದ್ದಾರೆ.

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!