If the sanctity of Chamundeshwari temple is violated, 'Chamundeshwari Chalo'; R. Ashoka

ಕಸದ ಶುಲ್ಕದ ಮೂಲಕ ಬೆಂಗಳೂರಿನ ಜನರಿಂದ ಹಣ ಲೂಟಿ: ಆರ್‌.ಅಶೋಕ ಆರೋಪ

ಬೆಂಗಳೂರು: ಬೆಂಗಳೂರಿನಲ್ಲಿ ಕಸದ ಸೆಸ್‌ ಹೆಸರಿನಲ್ಲಿ ಕಾಂಗ್ರೆಸ್‌ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ. ಇಡೀ ಬೆಂಗಳೂರನ್ನು ಸರ್ಕಾರ ದುಬಾರಿ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಹಣ ಉಳಿದಿಲ್ಲ. ಹಿಂದೆ ಇದ್ದ ತುಘಲಕ್‌ ಕೂಡ ಹಾಕದಷ್ಟು ತೆರಿಗೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಮೇಲೆ ಹಾಕಿದ್ದಾರೆ.

ಕಸ ವಿಲೇವಾರಿ ಮಾಡಲು ಕೂಡ ತೆರಿಗೆ ಹಾಕಲಾಗಿದೆ. 30*40 ಅಡಿ ವಿಸ್ತೀರ್ಣದ ಮನೆಗೆ 120 ರೂ. ಇದ್ದ ಕಸದ ತೆರಿಗೆಯನ್ನು 720 ರೂ. ಮಾಡಿದ್ದಾರೆ. ಅಂದರೆ 500% ರಷ್ಟು ಹೆಚ್ಚಾಗಿದೆ. ಅಪಾರ್ಟ್‌ಮೆಂಟ್‌ ನಿವಾಸಿಗಳು ಕಸವನ್ನು ಅವರೇ ವಿಲೇವಾರಿ ಮಾಡಿಕೊಳ್ಳುತ್ತಿದ್ದು, ಅವರಿಗೆ ಕಸದ ಸೆಸ್‌ 1,800 ರೂ. ನಿಂದ 18,000 ರೂ. ಗೆ ಹೆಚ್ಚಿಸಲಾಗಿದೆ ಎಂದು ದೂರಿದರು.

ಮಾಲ್‌ಗಳಲ್ಲಿ 3,600 ರೂ. ಇದ್ದ ಕಸದ ಸೆಸ್‌ 52,500 ರೂ. ಆಗಿದ್ದು, 14,483% ಹೆಚ್ಚಿದೆ. ಆಸ್ಪತ್ರೆಗಳಲ್ಲಿ ಕಸದ ಸೆಸ್‌ 9,600 ರೂ. ನಿಂದ 2,75,000 ರೂ. ಆಗಿದೆ. 50*80 ವಿಸ್ತೀರ್ಣದ ಖಾಲಿ ನಿವೇಶನಗಳಿಗೆ 600 ರೂ. ನಿಂದ 5,400 ರೂ. ಆಗಿದೆ. ಕಸವೇ ಉತ್ಪತ್ತಿ ಆಗದ ಜಾಗದಲ್ಲಿ ಬಿಬಿಎಂಪಿಯಿಂದ ದುಡ್ಡು ಉತ್ಪತ್ತಿ ಮಾಡಲಾಗುತ್ತಿದೆ ಎಂದರು.

ಜಮೀನುಗಳಿಗೆ ಬಳಕೆದಾರರ ಶುಲ್ಕ 3,600 ರೂ. ನಿಂದ 67,000 ರೂ. ಆಗಿ 1,761% ಹೆಚ್ಚಾಗಿದೆ. 110 ಹಳ್ಳಿಗಳಲ್ಲಿ ಲಕ್ಷಾಂತರ ಜಮೀನುಗಳಿವೆ. ಅವುಗಳ ಮಾಲೀಕರು ಲಕ್ಷಾಂತರ ರೂಪಾಯಿ ಕಸದ ಸೆಸ್‌ ಪಾವತಿಸಬೇಕಿದೆ.

ಬಳಕೆದಾರರ ಶುಲ್ಕವನ್ನು ನಾವು ಪಾವತಿಸುವುದಿಲ್ಲ ಎಂದು ಬೆಂಗಳೂರಿನ 2,800 ಜನರು ಆನ್‌ಲೈನ್‌ ಆಂದೋಲನ ಆರಂಭಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರ ಬಿಬಿಎಂಪಿಯ ಮೂಲಕ ಜನರನ್ನು ಲೂಟಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಕಳೆದೆರಡು ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಜನರು ಅತಿ ಹೆಚ್ಚು ತೆರಿಗೆ ಪಾವತಿಸುತ್ತಿದ್ದರೂ, ಅಭಿವೃದ್ಧಿಗೆ ಹಣ ನೀಡದೆ ತೆರಿಗೆ ವಸೂಲಿ ಮಾಡಲಾಗುತ್ತಿದೆ ಎಂದರು.

ನೀತಿ ಆಯೋಗದ ಸಭೆಗೆ ಗೈರು

ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಆರೋಪ ಮಾಡುವ ಸಿಎಂ ಸಿದ್ದರಾಮಯ್ಯನವರು ನೀತಿ ಆಯೋಗದ ಸಭೆಗೆ ಹೋಗಿಲ್ಲ. ರಾಜಸ್ತಾನದ ಕಾಂಗ್ರೆಸ್‌ ಸಭೆಗೆ, ರಾಹುಲ್‌ ಗಾಂಧಿಯ ಭೇಟಿಗೆ ಅವರಿಗೆ ಸಮಯ ಇದೆ. ಆದರೆ ನೀತಿ ಆಯೋಗದ ಸಭೆಗೆ ಹೋಗಲು ಇವರಿಗೆ ಸಮಯವಿಲ್ಲ.

ಅಲ್ಲಿ ಹೋಗಿ ಅನುದಾನ ಕೇಳದೆ, ಹಾದಿಬೀದಿಯಲ್ಲಿ ಆರೋಪ ಮಾಡುತ್ತಿದ್ದಾರೆ. ಕ್ರಿಕೆಟ್‌ ಸ್ಟೇಡಿಯಂಗೆ ಹೋಗಿ ಸಮೋಸ, ಕಡ್ಳೆಪುರಿ ತಿನ್ನಲು ಸಮಯ ಇರುವ ಇವರಿಗೆ, ಕೇಂದ್ರ ಸರ್ಕಾರದ ಬಳಿ ಹೋಗಲು ಸಮಯ ಇಲ್ಲ ಎಂದರು.

ಪ್ರತಿ ಮುಖ್ಯಮಂತ್ರಿಗೆ ಹದಿನೈದಿಪ್ಪತ್ತು ನಿಮಿಷ ಸಮಯ ನೀಡಲಾಗುತ್ತದೆ. ಇದನ್ನು ಬಳಸಿಕೊಂಡು ರಾಜ್ಯದ ಜನರ ಪರವಾಗಿ ಮಾತಾಡಬಹುದಿತ್ತು. ಇನ್ನು ಮುಂದೆ ಅನುದಾನ ನೀಡಿಲ್ಲ ಎಂದು ದೂರಿದರೆ ಇವರನ್ನು ನಂಬಲೇಬಾರದು. ಇವರಿಗೆ ರಾಜ್ಯದ ಜನರ ಬಗ್ಗೆ ಕಾಳಜಿ ಇಲ್ಲ ಎಂದರು.

ರಾಜ್ಯದ ವಿವಿಧೆಡೆ ಮಳೆ ಹಾನಿಯಾಗಿದ್ದು, ಒಬ್ಬ ಸಚಿವರೂ ಸಂತ್ರಸ್ತರನ್ನು ಭೇಟಿ ಮಾಡಿಲ್ಲ. ಯಾವುದೇ ಜಿಲ್ಲಾ ಉಸ್ತುವಾರಿ ಸಚಿವರು ಮಳೆ ಹಾನಿ ಪ್ರದೇಶಕ್ಕೆ ಹೋಗಿಲ್ಲ. ಬೆಂಗಳೂರಿನಲ್ಲಿ ಸರ್ಕಾರದಿಂದ ಪರಿಶೀಲನೆ ನಡೆಸಿದ ನಂತರ ಒಂದು ರೂಪಾಯಿ ಪರಿಹಾರ ಬಿಡುಗಡೆ ಮಾಡಿಲ್ಲ.

ಸಿಲ್ಕ್‌ ಬೋರ್ಡ್‌ ವೃತ್ತದ ಅಭಿವೃದ್ಧಿಗೂ ಅನುದಾನ ನೀಡಿಲ್ಲ. ಬೆಳೆ ಹಾನಿಯಾದ ರೈತರಿಗೆ ಸಾಂತ್ವನ ಹೇಳಲು ಸಚಿವರು ಮುಂದಾಗಿಲ್ಲ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಕೂಡಲೇ ಸಚಿವರು ಭೇಟಿ ನೀಡಬೇಕು. ಸಿಎಂ ಸಿದ್ದರಾಮಯ್ಯ ಎಲ್ಲ ಜಿಲ್ಲಾಧಿಕಾರಿಗಳ ಸಭೆ ಕರೆದು ಪರಿಹಾರ ಕಾರ್ಯಾಚರಣೆ ನಡೆಸಬೇಕು ಎಂದು ಆಗ್ರಹಿಸಿದರು.

ಸರ್ಕಾರ ವಿರೋಧ ಪಕ್ಷವನ್ನು ಬೆದರಿಸುವ ಕೆಲಸ ಮಾಡುತ್ತಿದೆ. ಸರ್ಕಾರದ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ. ಸರ್ಕಾರ ಅಕ್ರಮಗಳನ್ನು ಇನ್ನಷ್ಟು ಬಯಲಿಗೆ ಎಳೆಯುತ್ತೇವೆ. ನಾವು ಬಿಡುಗಡೆ ಮಾಡಿದ ಚಾರ್ಜ್‌ಶೀಟ್‌ ಪುಸ್ತಕದಿಂದಾಗಿ ಸರ್ಕಾರ ಭಯ ಬಿದ್ದಿದೆ ಎಂದರು.

ಕೋವಿಡ್‌ ನಿಯಂತ್ರಣಕ್ಕೆ ಕ್ರಮ ವಹಿಸಿ

ರಾಜ್ಯದಲ್ಲಿ ಕೋವಿಡ್‌ ಮತ್ತೆ ಹರಡುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳನ್ನು ಅಲೆಸುತ್ತಾರೆ. ಆದ್ದರಿಂದ ಎಲ್ಲ ಆಸ್ಪತ್ರೆಗಳಲ್ಲಿ ಕೋವಿಡ್‌ ವಾರ್ಡ್‌ ಆರಂಭಿಸಿ, ಔಷಧಿ ಪೂರೈಸಬೇಕು. ಯಾವುದೇ ಖರ್ಚನ್ನು ರೋಗಿಗಳಿಂದ ಭರಿಸಬಾರದು. ಸರ್ಕಾರವೇ ಪೂರ್ತಿ ವೆಚ್ಚ ಭರಿಸಬೇಕು ಎಂದು ಆರ್.ಅಶೋಕ ಒತ್ತಾಯಿಸಿದರು.

ಮಂಡ್ಯದಲ್ಲಿ ಸಾರಿಗೆ ಇಲಾಖೆಯ ಪೊಲೀಸರ ನಿರ್ಲಕ್ಷ್ಯದಿಂದಾಗಿ ಮಗು ಮೃತಪಟ್ಟಿದೆ. ಇದು ಪೊಲೀಸ್‌ ಇಲಾಖೆಯಲ್ಲಿ ಶಿಸ್ತಿಲ್ಲ ಎಂಬುದಕ್ಕೆ ಸಾಕ್ಷಿ. ಪೊಲೀಸರ ಬಳಿ ವಾಕಿಟಾಕಿ ಇದೆ. ಆದರೂ ಏಕಾಏಕಿ ಹೋಗಿ ರಸ್ತೆಯಲ್ಲಿ ಸವಾರರನ್ನು ಅಡ್ಡ ಹಾಕುತ್ತಾರೆ.

ಸಾರಿಗೆ ಇಲಾಖೆಯ ಪೊಲೀಸರು ಜನರನ್ನು ಹೊಡೆಯಲು ಅವಕಾಶವಿಲ್ಲ. ಮಗು ಪೊಲೀಸರಿಂದಲೇ ಸತ್ತಿರುವುದರಿಂದ ಆ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!