ಬೆಂ.ಗ್ರಾಮಾಂತರ ಸೇರಿ 4 ಜಿಲ್ಲೆಗಳಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಸಮ್ಮತಿ: ಸಚಿವ ಎಂ.ಬಿ.ಪಾಟೀಲ

Approval for establishment of new industries in 4 districts including rural areas: Minister M.B. Patil

ಬೆಂಗಳೂರು: ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ (MB Patila) ಅವರ ಅಧ್ಯಕ್ಷತೆಯಲ್ಲಿ ಇಲ್ಲಿ ನಡೆದ 153ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯು, ರಾಜ್ಯದ ನಾಲ್ಕು ಪ್ರಮುಖ ಜಿಲ್ಲೆಗಳಲ್ಲಿ ₹1,741.60 ಕೋಟಿ ಬಂಡವಾಳ ಹೂಡಿಕೆಯ ಒಟ್ಟು 63 ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇದರಿಂದ 7,219 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.

ʼದಕ್ಷಿಣ ಕನ್ನಡ, ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಅತ್ಯಾಧುನಿಕ ಫೀಡ್‌ ಪ್ಲ್ಯಾಂಟ್‌, ಪ್ರಿಫ್ಯಾಬ್ರಿಕೇಟೆಡ್‌ ಮ್ಯಾಡುಲರ್‌, ಬಸ್‌ ಬಾಡಿ ಬಿಲ್ಡಿಂಗ್‌, ವೈಮಾಂತರಿಕ್ಷ ಹಾಗೂ ರಕ್ಷಣಾ ವಲಯಕ್ಕೆ ಸಂಬಂಧಿಸಿದ ಎಲೆಕ್ಟ್ರಾನಿಕ್ಸ್‌ ಸಿಸ್ಟಮ್ಸ್‌ ಮತ್ತು ಬಿಡಿಭಾಗ ತಯಾರಿಕೆ ಸೇರಿದಂತೆ 60 ಯೋಜನೆಗಳು ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 3 ಯೋಜನೆಗಳು ಒಳಗೊಂಡಂತೆ ಒಟ್ಟು 63 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆʼ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ತಿಳಿಸಿದ್ದಾರೆ.

ʼಅನುಮೋದನೆ ಪಡೆದ ಯೋಜನೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರಿ ತಾಲ್ಲೂಕಿನಲ್ಲಿ ₹125.88 ಕೋಟಿ ವೆಚ್ಚದ ಅತ್ಯಾಧುನಿಕ ಫೀಡ್‌ ಪ್ಲ್ಯಾಂಟ್‌.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ₹97.52 ಕೋಟಿ ವೆಚ್ಚದ ಪ್ರಿಫ್ಯಾಬ್ರಿಕೇಟೆಡ್‌ ಮಾಡ್ಯುಲರ್‌ ಪ್ರಾಡಕ್ಟ್ಟ್‌ ಘಟಕ.

ತುಮಕೂರು ಜಿಲ್ಲೆಯ ಹಿರೇಹಳ್ಳಿಯಲ್ಲಿ ₹91.2 ಕೋಟಿ ವೆಚ್ಚದ ಟ್ರಾನ್ಸ್‌ಫಾರ್ಮರ್‌ ರೇಡಿಯೇಟರ್‌ ತಯಾರಿಕಾ ಘಟಕ ಸ್ಥಾಪನೆ ಪ್ರಮುಖವಾಗಿವೆ.

₹50 ಕೋಟಿಗೂ ಹೆಚ್ಚಿನ ಮೊತ್ತದ ಬಂಡವಾಳ ಹೂಡಿಕೆಯ 7 ಪ್ರಮುಖ ಬೃಹತ್‌ ಹಾಗೂ ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

ಇವುಗಳಿಂದ ₹ 593.80 ಕೋಟಿ ಬಂಡವಾಳ ಹೂಡಿಕೆಯಾಗಲಿದೆ. 2,093 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.

₹15 ಕೋಟಿಗಳಿಂದ ₹50 ಕೋಟಿ ಒಳಗಿನ 53 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ ರಾಜ್ಯದಲ್ಲಿ ₹1,106.6 ಕೋಟಿ ಮೊತ್ತದ ಬಂಡವಾಳ ಹೂಡಿಕೆಯಾಗಲಿದೆ. 4,961 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.

ಹೆಚ್ಚುವರಿ ಬಂಡವಾಳ ಹೂಡಿಕೆಯ 3 ಯೋಜನೆಗಳಿಂದ ₹ 41.20 ಕೋಟಿ ಮೊತ್ತದ ಬಂಡವಾಳ ಹೂಡಿಕೆಯಾಗಲಿದೆ. 165 ಜನರಿಗೆ ಉದ್ಯೋಗ ಅವಕಾಶ ದೊರೆಯಲಿವೆʼ ಎಂದು ಸಚಿವರು ವಿವರಿಸಿದ್ದಾರೆ.

ಸಭೆಯಲ್ಲಿ ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಸೆಲ್ವಕುಮಾರ್‌, ಕೈಗಾರಿಕಾ ಇಲಾಖೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಸದಸ್ಯ ಡಾ. ಎನ್‌. ಮಹೇಶ್‌, ಐಟಿಬಿಟಿ ಇಲಾಖೆಯ ನಿರ್ದೇಶಕ ರಾಹುಲ್‌ ಎಸ್‌. ಸಂಕನೂರ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

ರಾಜಕೀಯ

ಲೋಕಸಭೆ: ಕಾಂಗ್ರೆಸ್, ಡಿಎಂಕೆ ಮೇಲೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಲೋಕಸಭೆ: ಕಾಂಗ್ರೆಸ್, ಡಿಎಂಕೆ ಮೇಲೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಲೋಕಸಭೆ ಮತ್ತು ವಿಧಾಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇರಿಸಿರುವ ಹೆಜ್ಜೆ ಐತಿಹಾಸಿಕ ಎಂದು ಬಣ್ಣಿಸಿದ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy); ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ

[ccc_my_favorite_select_button post_id="121061"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!