ನಿವೃತ್ತ ಯೋಧರಿಗಾಗಿ ಪ್ರತ್ಯೇಕ ನಿಗಮ: ಡಿಸಿಎಂ ಡಿಕೆ ಶಿವಕುಮಾರ್

Separate corporation for retired soldiers: DCM DK Shivakumar

ಬೆಂಗಳೂರು: “ರಾಜ್ಯದಲ್ಲಿರುವ ಎಲ್ಲಾ ಮಾಜಿ ಯೋಧರಿಗೆ ನೆರವಾಗಲು ಪ್ರತ್ಯೇಕ ನಿಗಮ (ಕಾರ್ಪೊರೇಷನ್) ಸ್ಥಾಪಿಸಲು ಚಿಂತನೆ ನಡೆಸಲಾಗಿದ್ದು, ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದರು.

ನಗರದ ಟೌನ್ ಹಾಲ್ ನಲ್ಲಿ ಬುಧವಾರ ನಡೆದ ಜೈ ಹಿಂದ್ ಸಭಾ ಕಾರ್ಯಕ್ರಮದಲ್ಲಿ ದೇಶಕ್ಕೆ ಸೇವೆ ಸಲ್ಲಿಸಿದ ಹಿರಿಯ ಸೇನಾಧಿಕಾರಿಗಳು ಹಾಗೂ ಮಾಜಿ ಯೋಧರು, ಹುತಾತ್ಮರಾದ ಯೋಧರ ಕುಟುಂಬ ಸದಸ್ಯರನ್ನು ಸನ್ಮಾನಿಸಿದ ನಂತರ ಶಿವಕುಮಾರ್ ಅವರು ಮಾತನಾಡಿದರು.

“ಕಾಂಗ್ರೆಸ್ ಪಕ್ಷದ ಸೈನಿಕರ ವಿಭಾಗದ ಅಧ್ಯಕ್ಷರಾದ ಮಲ್ಲಿಕಾರ್ಜುನ ಅವರ ಸಲಹೆ ಮೇರೆಗೆ ಕಾರ್ಪೊರೇಷನ್ ರಚಿಸಲು ಆಲೋಚಿಸುತ್ತಿದ್ದೇವೆ. ನಮ್ಮ ದೇಶಕ್ಕೆ ಸೇವೆ ಸಲ್ಲಿಸಿರುವ ಯೋಧರ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ” ಎಂದು ತಿಳಿಸಿದರು.

“ಇಂತಹ ಅತ್ಯಂತ ಮಹತ್ವದ ಕಾರ್ಯಕ್ರಮದ ಭಾಗವಾಗಿರುವುದು ಹೆಮ್ಮೆಯ ವಿಚಾರ. ದೇಶಕ್ಕೆ ಶಕ್ತಿ ತುಂಬಿರುವ ನಿಮ್ಮಲ್ಲರಿಗೆ ದೇಶ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಕಾಂಗ್ರೆಸ್ ಪಕ್ಷ ಸದಾ ದೇಶ ಹಾಗೂ ನಮ್ಮ ಸಶಸ್ತ್ರ ಪಡೆಗಳ ಪರವಾಗಿ ನಿಲ್ಲಲಿದೆ. ನಿಮ್ಮ ಕೊಡುಗೆಯನ್ನು ಸದಾ ಸ್ಮರಿಸಲಿದೆ ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಗಿದೆ” ಎಂದರು.

ಹಿರಿಯ ಸೇನಾಧಿಕಾರಿಗಳು, ಹುತಾತ್ಮ ಯೋಧರ ಕುಟುಂಬಕ್ಕೆ ಸನ್ಮಾನ

ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಹಿರಿಯ ಸೇನಾಧಿಕರಿಗಳು ಹಾಗೂ ಮಾಜಿ ಯೋಧರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಇನ್ನು ದೇಶ ಸೇವೆಯಲ್ಲಿ ಹುತಾತ್ಮರಾದ ವೀರ ಯೋಧರ ಕುಟುಂಬ ಸದಸ್ಯರಿಗೆ ಸನ್ಮಾನ ಸಲ್ಲಿಸಿದರು.

ಅಶೋಕ ಚಕ್ರ ಪ್ರಶಸ್ತಿ ಪುರಸ್ಕೃತ ದಿವಂಗತ ಮೇಜರ್ ಸಂದೀಪ್ ಉನ್ನಿಕೃಷ್ಣನ್, ಅಶೋಕ ಚಕ್ರ ಪ್ರಶಸ್ತಿ ಪುರಸ್ಕೃತ ಕರ್ನಲ್ ಜೋಜನ್ ಥಾಮಸ್, ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಮೇಜರ್ ಎಂ.ಸಿ ಮುತ್ತಣ್ಣ, ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಮೇಜರ್ ಗಣೇಶ್ ಮದ್ದಪ್ಪ, ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಮೇಜರ್ ಎಂ.ಸಿ ಮುತ್ತಣ್ಣ, ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಕ್ಯಾಪ್ಟನ್ ಎಂ.ವಿ ಪಂಜಲ್, ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಮೇಜರ್ ಮೋಹನ್ ಗಂಗಾಧರನ್, ಮೇಜರ್ ಶಫೀಕ್ ಮೊಹಮದ್ ಖಾನ್, ಸೇನಾ ಪದಕ ಪುರಸ್ಕೃತ ಕರ್ನಲ್ ರಾಮಮೂರ್ತಿ ಕುಟುಂಬ ಸದಸ್ಯರನ್ನು ಸನ್ಮಾನಿಸಲಾಯಿತು.

ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನಿರ್ದೇಶನದ ಮೇರೆಗೆ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯು ಈ ಜೈ ಹಿಂದ್ ಸಭಾ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಈ ಕಾರ್ಯಕ್ರಮದಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಸೇನೆಯ ಹಿರಿಯ ಅಧಿಕಾರಿಗಳು, ಮಾಜಿ ಯೋಧರು ಭಾಗವಹಿಸಿದ್ದರು.

ದೇಶಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿರುವ ಭಾರತೀಯ ಯೋಧರಿಗೆ ನಮನ ಸಲ್ಲಿಸಬೇಕು, ಅವರ ಬೆನ್ನಿಗೆ ನಿಲ್ಲಬೇಕು ಎಂಬ ಉದ್ದೇಶದಿಂದ ಎಐಸಿಸಿಯು ದೇಶದಾದ್ಯಂತ ಈ ಕಾರ್ಯಕ್ರಮ ಆಯೋಜಿಸಲು ನಿರ್ದೇಶನ ನೀಡಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ರಾಜಕೀಯ

ವಿಜಯ್‌ಗೆ ಬೆಂಬಲ.. ಡಿಎಂಕೆಗೆ ಕೈ ಕೊಟ್ಟ ಕಾಂಗ್ರೆಸ್‌ ಎಂದು ಆರ್‌.ಅಶೋಕ ವಾಗ್ದಾಳಿ

ವಿಜಯ್‌ಗೆ ಬೆಂಬಲ.. ಡಿಎಂಕೆಗೆ ಕೈ ಕೊಟ್ಟ ಕಾಂಗ್ರೆಸ್‌ ಎಂದು ಆರ್‌.ಅಶೋಕ ವಾಗ್ದಾಳಿ

ತಮಿಳುನಾಡಲ್ಲಿ (Tamil Nadu) ಡಿಎಂಕೆ (DMK) ಜೊತೆ ಚುನಾವಣೆ ಎದುರಿಸಿದ ಕಾಂಗ್ರೆಸ್‌ (Congress), ಈಗ ಅದೇ ಪಕ್ಷಕ್ಕೆ ಕೈ ಕೊಟ್ಟಿದೆ. ಇಂಡಿ ಒಕ್ಕೂಟದ ಮಿತ್ರಪಕ್ಷಗಳು ಈ ಬಗ್ಗೆ ಪರಾಮರ್ಶೆ ಮಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ

[ccc_my_favorite_select_button post_id="121795"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]