ಮಾನ್ಯತಾ ಟೆಕ್ ಪಾರ್ಕ್ ಮಳೆ ನೀರು ಸಮಸ್ಯೆ: ಡಿಸಿಎಂ ಡಿಕೆ ಶಿವಕುಮಾರ್ ಆದೇಶಕ್ಕೆ ಕಂಪನಿಗಳು ಶಾಕ್

Companies shocked by DCM DK Shivakumar s order

ಬೆಂಗಳೂರು: “ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡಗಳನ್ನು ವಿಪತ್ತು ನಿರ್ವಹಣೆ ಕಾಯ್ದೆ ಅಡಿ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದರು.

ಯಲಹಂಕದ ಮಾನ್ಯತಾ ಟೆಕ್ ಪಾರ್ಕ್ ಬಳಿ ಮಳೆ ಪ್ರವಾಹಕ್ಕೆ ಕಾರಣವಾದ ರಾಜಕಾಲುವೆ ಹಾಗೂ ನಾಲೆಗಳನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಗುರುವಾರ ಪರಿಶೀಲಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ನಾನು ಹಾಗೂ ಮುಖ್ಯಮಂತ್ರಿಗಳು ಈಗಾಗಲೇ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದೇವೆ. ಇದು ಬಹಳ ಮುಖ್ಯವಾದ ಜಂಕ್ಷನ್. ಇಲ್ಲಿಂದ ಸಮಸ್ಯೆ ಆರಂಭವಾಗಿ ನಂತರ ಉಳಿದ ಪ್ರದೇಶಗಳಲ್ಲಿ ಸಮಸ್ಯೆಯಾಗುತ್ತಿದೆ.

ಕೆಲವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದು ಅಡ್ಡಿಪಡಿಸುತ್ತಿದ್ದಾರೆ. ನಮ್ಮ ಅಧಿಕಾರಿಗಳಿಗೂ ಸಹಕಾರ ನೀಡುತ್ತಿರಲಿಲ್ಲ. ಹೀಗಾಗಿ ಸಮಸ್ಯೆಗೆ ಕಾರಣವಾಗಿರುವ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕಟ್ಟಡ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಶಾಶ್ವತ ಪರಿಹಾರ

ಮಾನ್ಯತಾ ಟೆಕ್ ಪಾರ್ಕ್ ಮಳೆ ನೀರು ಸಮಸ್ಯೆ: ಡಿಸಿಎಂ ಡಿಕೆ ಶಿವಕುಮಾರ್ ಆದೇಶಕ್ಕೆ ಕಂಪನಿಗಳು ಶಾಕ್

“ನಮಗೆ ಯಾರ ಆಸ್ತಿಯನ್ನು ನಷ್ಟ ಮಾಡಲು ಇಷ್ಟವಿಲ್ಲ. ಯಾರಿಗೂ ಅನ್ಯಾಯ ಮಾಡಲು ಬಯಸುವುದಿಲ್ಲ. ನೀರು ಸರಾಗವಾಗಿ ಹರಿಯಬೇಕು. ಹೀಗಾಗಿ ನಾನೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಕಾಮಗಾರಿ ಮುಂದುವರಿಸಲು ನನ್ನ ಮುಂದೆ ಎಲ್ಲರೂ ಒಪ್ಪಿಕೊಂಡಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರ ಕಂಡು ಹಿಡಿಯುವುದು ಮುಖ್ಯ” ಎಂದು ತಿಳಿಸಿದರು.

ಆಯುಕ್ತರಿಗೆ ಅಧಿಕಾರ

“ಮಳೆ ನೀರು ಸರಾಗವಾಗಿ ಹರಿಯುವುದು ಇಲ್ಲಿ ಮುಖ್ಯವೇ ಹೊರತು ಇನ್ಯಾರೂ ಅಲ್ಲ. ನಾವು ಯಾವುದೇ ಕಟ್ಟಡಗಳಿಗೆ ಅಡಚಣೆ ಮಾಡಲು ಬಯಸುವುದಿಲ್ಲ. ನಾವು ಬೆಂಗಳೂರಿನ ಘನತೆ ಹಾಳಾಗಲು ಬಿಡುವುದಿಲ್ಲ. ಹೀಗಾಗಿ ಈ ಭಾಗದ ಭೂಮಾಲೀಕರಿಗೆ ಸಹಕಾರ ನೀಡುವಂತೆ ಮನವಿ ಮಾಡಿದ್ದೇವೆ.

ತಾಂತ್ರಿಕ ಕಾರಣಗಳಿಂದಾಗಿ ತಪ್ಪಾಗಿದ್ದರೆ ನಾವು ಅದಕ್ಕೆ ಪರಿಹಾರ ನೀಡುತ್ತೇವೆ. ನಮಗೆ ಈ ವಿಚಾರವಾಗಿ ಶಾಶ್ವತ ಪರಿಹಾರ ಬೇಕಾಗಿದೆ. ಇದಕ್ಕೆ ಎಲ್ಲರೂ ಒಪ್ಪಿಗೆ ನೀಡಿದ್ದು, ನಾವು ನಮ್ಮ ಕೆಲಸ ಮುಂದುವರಿಸುತ್ತೇವೆ. ನಮ್ಮ ಪಾಲಿಕೆ ಆಯುಕ್ತರು ಹಾಗೂ ಕಾರ್ಯದರ್ಶಿಗಳಿಗೆ ಈ ವಿಚಾರದಲ್ಲಿ ಇರುವ ಅಡಚಣೆಗಳನ್ನು ತೆರವುಗೊಳಿಸಲು ಸಂಪೂರ್ಣ ಅಧಿಕಾರ ನೀಡಲಾಗಿದೆ” ಎಂದು ತಿಳಿಸಿದರು.

ನಕ್ಷೆಗಳ ವಿಚಾರವಾಗಿ ಇರುವ ಗೊಂದಲದ ಬಗ್ಗೆ ಕೇಳಿದಾಗ, “ನಕ್ಷೆಗಳ ಗೊಂದಲ ಏನೇ ಇದ್ದರೂ ನೀರು ಹರಿಯಲು ಜಾಗ ಮಾಡಲೇಬೇಕು” ಎಂದು ತಿಳಿಸಿದರು.

ಕಸದ ಸೆಸ್ ಕಡಿಮೆ ಮಾಡಬೇಕು ಎಂಬ ಬಿಜೆಪಿ ಆಗ್ರಹದ ಬಗ್ಗೆ ಕೇಳಿದಾಗ, “ಅವರ ಕಾಲದಲ್ಲಿ ತೆಗೆದುಕೊಂಡ ತೀರ್ಮಾನವನ್ನು ನಾವು ಅವರಿಗೆ ಮನವರಿಕೆ ಮಾಡಿಕೊಡುತ್ತೇನೆ. ಅವರು ಏನು ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ಪರಿಶೀಲಿಸಿ ನಂತರ ಅವರೊಂದಿಗೆ ಮಾತನಾಡುತ್ತೇನೆ. ಅವರ ಅಭಿಪ್ರಾಯಕ್ಕೂ ಗೌರವ ನೀಡುತ್ತೇನೆ” ಎಂದು ತಿಳಿಸಿದರು.

ನೀರಾವರಿ ಇಲಾಖೆಯಲ್ಲಿ ಹೆಚ್ಚು ಇಂಜಿನಿಯರ್ ಗಳಿಲ್ಲ

ಜಲಸಂಪನ್ಮೂಲ ಇಲಾಖೆ ಇಂಜಿನಿಯರ್ ಗಳ ವರ್ಗಾವಣೆ ಕುರಿತು ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದ ಬಗ್ಗೆ ಕೇಳಿದಾಗ ಜಲಸಂಪನ್ಮೂಲ ಇಲಾಖೆಯಲ್ಲಿ ಹೆಚ್ಚು ಇಂಜಿನಿಯರ್ ಗಳಿಲ್ಲ. ನಮಗೆ ತುರ್ತಾಗಿ ಇಂಜಿನಿಯರ್ ಗಳು ಬೇಕು. ಹೀಗಾಗಿ ನಮ್ಮ ಇಲಾಖೆಯಿಂದ ಯಾರನ್ನೂ ಬೇರೆಡೆಗೆ ಕಳಿಸಬೇಡಿ ಎಂದು ಪತ್ರ ಬರೆದಿದ್ದೇನೆ.

ನಮ್ಮ ಇಲಾಖೆಗೆ ಬಂದು ಬಡ್ತಿ ಪಡೆದು ನಂತರ ಲೋಕೋಪಯೋಗಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಇತರ ಇಲಾಖೆಗಳಿಗೆ ವರ್ಗಾವಣೆ ಪಡೆಯುತ್ತಾರೆ ಎಂದು ಸ್ಪಷ್ಟನೆ ನೀಡಿದರು.

ನಿಮ್ಮ ಅನುಮತಿ ಇಲ್ಲದೆ ಯಾರು ವರ್ಗಾವಣೆ ಮಾಡಿದ್ದಾರೆ ಎಂದು ಕೇಳಿದಾಗ, “ಉನ್ನತ ಮಟ್ಟದಲ್ಲಿ ಈ ರೀತಿ ವರ್ಗಾವಣೆ ಮಾಡಲು ಅವಕಾಶ ಇದೆ. ಅನೇಕ ಶಾಸಕರು ತಮಗೆ ಬೇಕಾದವರನ್ನು ಬೇರೆ ಇಲಾಖೆಗೆ ಕಳಿಸಿಕೊಡಿ ಎಂದು ಒತ್ತಡ ಹಾಕುತ್ತಾರೆ. ನೀರಾವರಿ ಇಲಾಖೆಯಲ್ಲಿ ಕೆಲಸ ಮಾಡಲು ಇಂಜಿನಿಯರ್ ಗಳು ಮುಂದೆ ಬರುತ್ತಿಲ್ಲ. ಈ ದೃಷ್ಟಿಯಿಂದ ನನ್ನ ಗಮನಕ್ಕೆ ತರದೆ ಯಾರನ್ನೂ ವರ್ಗಾವಣೆ ಮಾಡಬೇಡಿ ಎಂದು ಹೇಳಿದ್ದೇನೆ” ಎಂದರು.

ರಾಜಕೀಯ

ವಿಜಯ್‌ಗೆ ಬೆಂಬಲ.. ಡಿಎಂಕೆಗೆ ಕೈ ಕೊಟ್ಟ ಕಾಂಗ್ರೆಸ್‌ ಎಂದು ಆರ್‌.ಅಶೋಕ ವಾಗ್ದಾಳಿ

ವಿಜಯ್‌ಗೆ ಬೆಂಬಲ.. ಡಿಎಂಕೆಗೆ ಕೈ ಕೊಟ್ಟ ಕಾಂಗ್ರೆಸ್‌ ಎಂದು ಆರ್‌.ಅಶೋಕ ವಾಗ್ದಾಳಿ

ತಮಿಳುನಾಡಲ್ಲಿ (Tamil Nadu) ಡಿಎಂಕೆ (DMK) ಜೊತೆ ಚುನಾವಣೆ ಎದುರಿಸಿದ ಕಾಂಗ್ರೆಸ್‌ (Congress), ಈಗ ಅದೇ ಪಕ್ಷಕ್ಕೆ ಕೈ ಕೊಟ್ಟಿದೆ. ಇಂಡಿ ಒಕ್ಕೂಟದ ಮಿತ್ರಪಕ್ಷಗಳು ಈ ಬಗ್ಗೆ ಪರಾಮರ್ಶೆ ಮಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ

[ccc_my_favorite_select_button post_id="121795"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]