ಕಮಲಹಾಸನ್ ಅವರಿಗೆ ತಮಿಳಿನ ಕುರಿತ ಪ್ರೀತಿ, ಕಾಳಜಿ ನನಗೆ ಅರ್ಥವಾಗುತ್ತದೆ: ಬಿವೈ ವಿಜಯೇಂದ್ರ

I understand Kamal Haasan's love and concern for Tamil: BY Vijayendra

ಬೆಂಗಳೂರು: ಕಾಂಗ್ರೆಸ್ಸಿಗರು ಅಧಿಕಾರ ಇದೆ ಎಂದು ದರ್ಪದಿಂದ ಮೆರೆದರೆ, ಅದಕ್ಕೆ ಉತ್ತರ ಕೊಡುವ ದಿನಗಳು ಹತ್ತಿರ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ಎಚ್ಚರಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರಕಾರ ಇವತ್ತು ಇರುತ್ತದೆ, ನಾಳೆ ಹೋಗುತ್ತದೆ. ಅಧಿಕಾರ ಶಾಶ್ವತವಲ್ಲ. ವಿಪಕ್ಷದವರಿಗೆ ಅವರದೇ ಆದ ಗೌರವ ಇದೆ. ಆ ಗೌರವಕ್ಕೆ ಧಕ್ಕೆ ಬಾರದಂತೆ ನಡೆದುಕೊಳ್ಳುವುದು ಆಡಳಿತ ಪಕ್ಷದವರ ಕರ್ತವ್ಯ ಎಂದು ಗಮನ ಸೆಳೆದರು.

ಸರಕಾರ ಈಗಲಾದರೂ ಎಚ್ಚತ್ತುಕೊಳ್ಳಲಿ. ವಿಪಕ್ಷ ನಾಯಕರನ್ನು ಹೆದರಿಸುವುದು, ನಮ್ಮ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸುವುದನ್ನು ಕೈಬಿಡಿ ಎಂದು ಆಗ್ರಹಿಸಿದರು.

ಮಂಗಳೂರಿನಲ್ಲಿ ಹತ್ಯೆ ಬಳಿಕ ಶಾಂತಿ ಸಭೆ ನಡೆಸಿಲ್ಲ ಎಂಬ ಕುರಿತ ಮಾಧ್ಯಮಗಳ ಪ್ರಶ್ನೆಗೆ ಉತ್ತರ ನೀಡಿದ ಅವರು, ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ಗೃಹ ಸಚಿವರು ಮಂಗಳೂರಿನಲ್ಲಿ ಪ್ರಮುಖರ ಸಭೆ ನಡೆಸಿದ್ದರು. ಅವರು ಸುಹಾಸ್ ಶೆಟ್ಟಿ ಮನೆಗೆ ಭೇಟಿ ಕೊಡುವ ವಿಷಯ ತಿಳಿದು ಒಂದು ಕೋಮಿನ ಮುಖಂಡರು ಬಂದು ಗೃಹ ಸಚಿವರನ್ನು ಮುತ್ತಿಗೆ ಹಾಕಿದ್ದ ಮಾಹಿತಿ ಇದೆ.

ಸುಹಾಸ್ ಶೆಟ್ಟಿ ಮನೆಗೆ ಭೇಟಿ ಕೊಡದಂತೆ ಬೆದರಿಕೆ ಹಾಕಿದ್ದರು. ಸಚಿವರು ಹೆದರಿ ವಾಪಸ್ ಬಂದಿದ್ದಾರೆಂದರೆ ಯಾವ ಸೌಹಾರ್ದದ ಬಗ್ಗೆ ನೀವು ಚರ್ಚೆ ಮಾಡುತ್ತೀರಿ ಎಂದು ಕೇಳಿದರು.

ಸಿದ್ದರಾಮಯ್ಯನವರ ಈ ಸರಕಾರ ಅಲ್ಪಸಂಖ್ಯಾತರ ಓಲೈಕೆ ಮತ್ತು ಅವರನ್ನು ಖುಷಿ ಪಡಿಸಲು ಇದೆಯೇ ಹೊರತು ಕಾನೂನು- ಸುವ್ಯವಸ್ಥೆ ಚೆನ್ನಾಗಿರಬೇಕು; ರಾಜ್ಯದಲ್ಲಿ ಶಾಂತಿಯುತ ವಾತಾವರಣ ಇರಬೇಕೆಂಬ ಕಿಂಚಿತ್ತೂ ಕಾಳಜಿ ಅವರಿಗೆ ಇಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

ರಾಜ್ಯ ರಾಜಕಾರಣದ ಮಹತ್ತರ ತಿರುವು

ರಾಜ್ಯ ರಾಜಕಾರಣವು ಮುಂದಿನ ದಿನಗಳಲ್ಲಿ ಮಹತ್ತರ ತಿರುವು ಪಡೆದುಕೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ಹಲವಾರು ಬೆಳವಣಿಗೆಗಳು ನಡೆಯುತ್ತಿವೆ. ಸ್ವತಃ ಸಿದ್ದರಾಮಯ್ಯನವರು ಬಿ.ಕೆ.ಹರಿಪ್ರಸಾದ್ ಅವರ ಮನೆಗೆ ಹೋಗಿದ್ದಾರೆ. ಮುಂದಿನ ದಿನಗಳ ಘಟನೆಗಳನ್ನು ಕಾದು ನೋಡಿ ಎಂದು ಹೇಳಿದರು.

ಕಮಲಹಾಸನ್ ಕಾಳಜಿ ನನಗೆ ಅರ್ಥವಾಗುತ್ತದೆ..

ನಟ ಕಮಲಹಾಸನ್ ಅವರಿಗೆ ತಮಿಳಿನ ಕುರಿತ ಪ್ರೀತಿ, ಕಾಳಜಿ ನನಗೆ ಅರ್ಥವಾಗುತ್ತದೆ. ಅವರಿಗೆ ತಮಿಳು ಭಾಷೆ ಬಗ್ಗೆ ಪ್ರೇಮ ಇದೆಯೆಂದು ಕನ್ನಡ ಭಾಷೆ ಬಗ್ಗೆ ಇಂಥ ಹೇಳಿಕೆ ಕೊಡುವುದು ಖಂಡಿತ ಸರಿಯಲ್ಲ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಕನ್ನಡ ಮತ್ತು ತಮಿಳು ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಕಮಲಹಾಸನ್ ಅವರ ಹೇಳಿಕೆಯಿಂದ ಕನ್ನಡಿಗರಿಗೆ ನೋವುಂಟಾಗಿದೆ.

ಅನೇಕ ಪ್ರತಿಕ್ರಿಯೆಗಳ ಬಳಿಕ ಕೂಡ ಕ್ಷಮೆ ಕೇಳುವುದಿಲ್ಲ ಎಂದಿರುವುದು ದುರಹಂಕಾರದ ನಡೆ ಎಂದು ಖಂಡಿಸಿದರು. ಕಮಲಹಾಸನ್ ಅವರು ಈ ರೀತಿ ವಿಷಬೀಜ ಬಿತ್ತಬಾರದು ಎಂದು ತಿಳಿಸಿದರು.

ಬಿಜೆಪಿ ಮುಖಂಡರ ಬೆದರಿಕೆ, ಬ್ಲ್ಯಾಕ್‍ಮೇಲ್‍ಗೆ ಹೆದರೆವು

ಹೋರಾಟದ ಸಂದರ್ಭದಲ್ಲಿ ನಮ್ಮ ಹಿರಿಯರು, ವಿಧಾನಪರಿಷತ್ತಿನ ವಿಪಕ್ಷದ ಮುಖ್ಯ ಸಚೇತಕ ರವಿಕುಮಾರ್ ಅವರು ಭಾಷಣದಲ್ಲಿ, ಅಲ್ಲಿನ ಜಿಲ್ಲಾಧಿಕಾರಿಗಳ ಬಗ್ಗೆ ಕೆಲವು ಮಾತುಗಳನ್ನು ಆಡಿದ್ದರು. ಬಳಿಕ ರವಿಕುಮಾರ್ ಅವರು ತಮ್ಮ ಮಾತಿಗೆ ವಿಷಾದವನ್ನೂ ವ್ಯಕ್ತಪಡಿಸಿದ್ದಾರೆ. ಆದರೂ, ಕಾಂಗ್ರೆಸ್ ಸರಕಾರದ ಕುಮ್ಮಕ್ಕಿನಿಂದ ದೂರು ಪಡೆದು ಎಫ್‍ಐಆರ್ ಮಾಡಿದ್ದಾರೆ.

ರವಿಕುಮಾರ್ ಅವರ ತೇಜೋವಧೆ ಮಾಡುವ ಕೆಲಸ ನಡೆಯುತ್ತಿದೆ; ಅಲ್ಲದೆ ಬೆದರಿಸುವ ಕೆಲಸ ಈ ಸರಕಾರಕ್ಕೆ ಶೋಭೆ ತರುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಸರಕಾರಕ್ಕೆ ಪ್ರಾಮಾಣಿಕತೆ ಇದ್ದಲ್ಲಿ ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ಧ ಗೂಂಡಾ ವರ್ತನೆ ತೋರಿದವರ ವಿರುದ್ಧ ಎಫ್‍ಐಆರ್ ದಾಖಲಿಸಿ ತನಿಖೆ ಮಾಡಬೇಕಿತ್ತು. ಅಧಿಕಾರಿಗಳು ಕಣ್ಮುಚ್ಚಿ ಕೂತ ಬಗ್ಗೆ ತನಿಖೆ ಮಾಡಿಸಬೇಕಿತ್ತು. ಅದನ್ನು ಬಿಟ್ಟು ಹಿಂದುಳಿದ, ದಲಿತ ನಾಯಕರನ್ನು ಗುರಿಯನ್ನಾಗಿ ಮಾಡುತ್ತಿದ್ದಾರೆ.

ಬಿಜೆಪಿ ಮುಖಂಡರನ್ನು ಬೆದರಿಸುವುದು, ಬ್ಲ್ಯಾಕ್‍ಮೇಲ್ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಇವ್ಯಾವುದಕ್ಕೂ ಬಿಜೆಪಿ ಹೆದರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸದೃಢ ಸಂಘಟನೆಗೆ ರಾಜ್ಯಾದ್ಯಂತ ಪ್ರವಾಸ

ಸಂಘಟನೆಯನ್ನು ಬಲಪಡಿಸುವುದು ಹಾಗೂ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನು ಕಣ್ಮುಂದೆ ಇಟ್ಟುಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡಿ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಕುರಿತು ಇಂದಿನ ಕೋರ್ ಕಮಿಟಿ ಸಭೆಯಲ್ಲಿ ನಾವು ಚರ್ಚಿಸಲಿದ್ದೇವೆ ಎಂದು ತಿಳಿಸಿದರು.

ಪಕ್ಷದ ರಾಜ್ಯ ಉಸ್ತುವಾರಿಗಳಾದ ಡಾ.ರಾಧಾಮೋಹನ್‍ದಾಸ್ ಅಗ್ರವಾಲ್ ಅವರ ನೇತೃತ್ವದಲ್ಲಿ ಕಳೆದ 2 ದಿನಗಳಿಂದ ಅನೇಕ ಸಭೆಗಳು ನಡೆದಿವೆ. ನಿನ್ನೆ ರಾಜ್ಯ ಎಸ್‍ಟಿ ಮೋರ್ಚಾ, ಮಹಿಳಾ ಮೋರ್ಚಾ, ಯುವ ಮೋರ್ಚಾಗಳ ಪ್ರಮುಖರ ಸಭೆ ನಡೆದಿದೆ. ಇವತ್ತು ಬೇರೆ ಬೇರೆ ಸಮುದಾಯಗಳ ಪ್ರಮುಖರ ಸಭೆ ನಡೆಯಲಿದೆ ಎಂದು ತಿಳಿಸಿದರು.

ಮಧ್ಯಾಹ್ನ ಭೋಜನದ ನಂತರ ರಾಜ್ಯದ ಕೋರ್ ಕಮಿಟಿ ಸಭೆ ಆಯೋಜಿಸಿದ್ದೇವೆ. ಕಳೆದ ಕೆಲವು ತಿಂಗಳುಗಳಿಂದ ಈ ರಾಜ್ಯದಲ್ಲಿರುವ ಭ್ರಷ್ಟ, ಜನವಿರೋಧಿ, ರೈತ ವಿರೋಧಿ ಸರಕಾರದ ವಿರುದ್ಧ ಹಾಗೂ ಬೆಲೆ ಏರಿಕೆಯ ಸಿದ್ದರಾಮಯ್ಯರ ನೇತೃತ್ವದ ಸರಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿದ ಕುರಿತು ಕೋರ್ ಕಮಿಟಿ ಸಭೆಯು ಚರ್ಚಿಸಲಿದೆ ಎಂದು ಹೇಳಿದರು.

ಗುಲ್ಬರ್ಗ ಜಿಲ್ಲಾ ಪ್ರವಾಸದಲ್ಲಿದ್ದ ನಮ್ಮ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರನ್ನು ಚಿತ್ತಾಪುರದ ಅತಿಥಿಗೃಹದಲ್ಲಿ ಬಂಧನ ಮಾಡಿ, ಕಾಂಗ್ರೆಸ್ ಪುಡಾರಿಗಳನ್ನು ಅಲ್ಲಿಗೆ ಕರೆತಂದು ಅವರ ಮೇಲೆ ಹಲ್ಲೆ ಮಾಡುವ ಪ್ರಯತ್ನ ನಡೆದಿತ್ತು. ಇದನ್ನು ಖಂಡಿಸಿ ಗುಲ್ಬರ್ಗದಲ್ಲಿ ಮೊನ್ನೆ ನಾನು ಮತ್ತು ನಮ್ಮ ಪಕ್ಷದ ಪ್ರಮುಖರು ಕಾಂಗ್ರೆಸ್ ಸರಕಾರ ಮತ್ತು ಅಲ್ಲಿನ ಉಸ್ತುವಾರಿ ಸಚಿವರ ವಿರುದ್ಧ ಹೋರಾಟ ಮಾಡಿದ್ದೇವೆ. ನಮ್ಮ ಈ ಹೋರಾಟವು ಯಶಸ್ವಿಯಾಗಿದೆ ಎಂದು ತಿಳಿಸಿದರು.

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!