ರಾಯಚೂಟಿ: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆಹೆಚ್ ಮುನಿಯಪ್ಪ (KH Muniyappa) ಇಂದು ಆಂದ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ರಾಯಚೂಟಿಯ ಬೆಟ್ಟದ ತಪ್ಪಲಿನಲ್ಲಿ ನಿರ್ಮಾಣವಾಗಿರುವ ಮಾತಾಂಗ ಸ್ವಾಮಿಯ ಗುರು ಪೀಠದ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಸಚಿವರಿಗೆ ಪೋಲಿಸ್ ಗೌರವ ವಂದನೆ ಸಲ್ಲಿಸಿ ಸ್ವಾಗತಿಸಿದರು.
ಈ ವೇಳೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಡಾ.ಎಲ್.ಮುರಗನ್ ಹಾಗೂ ಜಿಲ್ಲಾಧಿಕಾರಿ ಉಪಸ್ಥಿತರಿದ್ದರು.