Quick solution to the issue of mandatory OC for electricity connection: Minister K.J.George

ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ (ಒಸಿ) ಕಡ್ಡಾಯಗೊಳಿಸಿರುವುದರಿಂದ ಆಗುತ್ತಿರುವ ಸಮಸ್ಯೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ (K.J.George) ಹೇಳಿದ್ದಾರೆ.

ಗುರುವಾರ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಅಹವಾಲುಗಳನ್ನು ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.

ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯಗೊಳಿಸಿರುವುದರಿಂದ ಮನೆ ನಿರ್ಮಾಣ, ಕೈಗಾರಿಕೋದ್ಯಮಕ್ಕೆ ಆಗುತ್ತಿರುವ ಸಮಸ್ಯೆ ಈಗಾಗಲೇ ಸರ್ಕಾರದ ಗಮನದಲ್ಲಿದ್ದು, ಸಚಿವ ಸಂಪುಟ ಸಭೆಯಲ್ಲಿ ಸಮಾಲೋಚನೆ ನಡೆಸಿ ಪರಿಹಾರ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ ಎಂದರು.

ಸುಪ್ರೀಂ ಕೋರ್ಟ್ ಆದೇಶದಂತೆ ಸರ್ಕಾರ ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ ಕಡ್ಡಾಯಗೊಳಿಸಿದೆ. ಇದರಿಂದ ಉದ್ಭವವಾಗಿರುವ ಸಮಸ್ಯೆ ನಿವಾರಿಸಲು ಬೈಲಾ ತಿದ್ದುಪಡಿ ಮಾಡಬೇಕಿದೆ. ಅದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಮಾಲೋಚನೆ ನಡೆಸಿ, ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಎಂಬ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ. ಅವರು ವರದಿ ಸಲ್ಲಿಸಿದ ಕೂಡಲೇ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡು ಸಮಸ್ಯೆ ನಿವಾರಿಸಲಾಗುವುದು ಎಂದರು.

ಗೃಹ ಜ್ಯೋತಿ ಡಿ ಲಿಂಕ್ ಸಮಸ್ಯೆ ಇಲ್ಲ

ಗೃಹ ಜ್ಯೋತಿ ಯೋಜನೆಯಿಂದ ಸಾಕಷ್ಟು ಅನುಕೂಲವಾಗಿದೆಯಾದರೂ ಬಾಡಿಗೆ ಮನೆ ಬದಲಿಸುವಾಗ ಹಳೆಯ ಆರ್ ಆರ್ ನಂಬರ್ ಗೆ ಡಿ ಲಿಂಕ್ ಮಾಡಿ ಹೊಸ ಆರ್ ಆರ್ ನಂಬರ್ ಗೆ ಲಿಂಕ್ ಮಾಡುವ ವೇಳೆ ಸಮಸ್ಯೆಯಾಗುತ್ತಿದೆ ಎಂಬ ಪಕ್ಷದ ಕಾರ್ಯಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೆ.ಜೆ.ಜಾರ್ಜ್, ಆನ್ ಲೈನ್ ಮೂಲಕವೇ ಡಿ ಲಿಂಕ್ ಮತ್ತು ಲಿಂಕ್ ವ್ಯವಸ್ಥೆ ಮಾಡಲಾಗಿದೆ. ಈ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಒಂದೊಮ್ಮೆ ನಿರ್ದಿಷ್ಟ ವ್ಯಕ್ತಿಗಳಿಗೆ ಸಮಸ್ಯೆ ಕಾಣಿಸಿಕೊಂಡರೆ ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿಯಾಗಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದು ಹೇಳಿದರು.

ಗೃಹಜ್ಯೋತಿ ಯೋಜನೆಯಡಿ ಪ್ರಸ್ತುತ 1.60 ಕೋಟಿ ಕುಟುಂಬಗಳು ಶೂನ್ಯ ಬಿಲ್ ಅನುಕೂಲ ಪಡೆದುಕೊಳ್ಳುತ್ತಿದ್ದಾರೆ. ಇದರ ಸಬ್ಸಿಡಿ ಮೊತ್ತ ಸುಮಾರು 9,000 ಕೋಟಿ ರೂ.ಅನ್ನು ಈಗಾಗಲೇ ಸರ್ಕಾರ ಸಂಬಂಧಿಸಿದ ಎಸ್ಕಾಂಗಳಿಗೆ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.

ನಮ್ಮ ಸರ್ಕಾರ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಆದ್ಯತೆ ನೀಡುವುದರ ಜತೆಗೆ ಬೇಸಿಗೆಯಲ್ಲಿ ಅನ್ಯ ರಾಜ್ಯಗಳಿಂದ ವಿನಿಮಯ ಆಧಾರದ ಮೇಲೆ ವಿದ್ಯುತ್ ಪಡೆದು ಗ್ರಾಹಕರಿಗೆ ಪೂರೈಸಿದ್ದು, ವಿದ್ಯುತ್ ಸಮಸ್ಯೆಯಾಗದಂತೆ ಗಮನಹರಿಸಲಾಗಿದೆ.

ಪ್ರಸ್ತುತ ರಾಜ್ಯದ ಒಟ್ಟು ಉತ್ಪಾದನೆ ಪೈಕಿ ಶೇ. 65 ವಿದ್ಯುತ್ ನವೀಕರಿಸಬಹುದಾದ ಇಂಧನ ಮೂಲಗಳಿಂದ ಬರುತ್ತಿದೆ. ಇದರಿಂದಾಗಿ ಪ್ರಸ್ತುತ ಹೆಚ್ಚುವರಿ ವಿದ್ಯುತ್ ರಾಜ್ಯದಲ್ಲಿ ಲಭ್ಯವಿದೆ. ವಿತರಣೆಯಲ್ಲಿ ಆಗುತ್ತಿರುವ ಸಮಸ್ಯೆ ನಿವಾರಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!