DCM DK Shivakumar is upset that the coastal region has been hit by an axe due to communal riots

ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು: ಡಿಸಿಎಂ ಡಿಕೆ ಶಿವಕುಮಾರ್ ಬೇಸರ

ಬೆಂಗಳೂರು; “ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ. ಇದರಿಂದ ನಷ್ಟವಾಗುತ್ತಿರುವುದು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯಕ್ಕೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದರು.

ವಿಧಾನಸೌಧ ಆವರಣ ಹಾಗೂ ಅರಮನೆ ಮೈದಾನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು.

ನಾವು ಎಲ್ಲಾ ಸಮಾಜ ರಕ್ಷಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಪಕ್ಷದ ವತಿಯಿಂದ ಒಂದು ತಂಡ ಕಳುಹಿಸಿ ವರದಿ ನೀಡಲು ಹೇಳಿದ್ದೇವೆ. ಅಧಿಕಾರಿಗಳು ನೀಡುವ ವರದಿ ಬೇರೆ, ಸಾರ್ವಜನಿಕರ ಜತೆ ಚರ್ಚೆ ಮಾಡಿ ವರದಿ ನೀಡಲು ನಮ್ಮ ಪಕ್ಷದವರಿಗೆ ತಿಳಿಸಿದ್ದೇನೆ. ಕರಾವಳಿ ಭಾಗದಲ್ಲಿ ಶಾಂತಿ ನೆಲೆಸಬೇಕು. ಇದು ಒಂದು ಸಾವು, ಎರಡು ಸಾವಿನ ವಿಚಾರ ಮಾತ್ರವಲ್ಲ. ಇದು ಇಡೀ ಕರಾವಳಿ ಭಾಗಕ್ಕೆ ಬಿದ್ದಿರುವ ಕೊಡಲಿಪೆಟ್ಟು.

ಜನರು ಆಂತಕಕ್ಕೆ ಒಳಗಾಗುವುದು, ಬಂಡವಾಳ ಹೂಡಿಕೆದಾರರು ಅಲ್ಲಿ ಹೂಡಿಕೆ ಮಾಡಲು ಹಿಂಜರಿಯುತ್ತಿರುವುದನ್ನು ಎಲ್ಲರೂ ಅರಿತುಕೊಳ್ಳಬೇಕು. ಈ ಪರಿಸ್ಥಿತಿಯನ್ನು ಅರಿತುಕೊಳ್ಳಬೇಕು ಎಂದು ಬಿಜೆಪಿ ಸ್ನೇಹಿತರು ಹಾಗೂ ಬೇರೆ ಬೇರೆ ಸಂಘಟನೆಗಳಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ನೀವು ಅಧಿಕಾರಿಗಳನ್ನು ವರ್ಗಾವಣೆ ಮಾಡಿದರೂ ಪರಿಸ್ಥಿತಿ ನಿಯಂತ್ರಣವಾಗುತ್ತಿಲ್ಲ ಎಂದು ಕೇಳಿದಾಗ, “ಪರಿಸ್ಥಿತಿ ನಿಯಂತ್ರಿಸಲಾಗುತ್ತಿದೆ. ಬಿಜೆಪಿಯವರು ಹಾಗೂ ಅನೇಕ ಸಂಘಟನೆಗಳು ಈ ಭಾಗದಲ್ಲಿ ಕರ್ನಾಟಕ ರಾಜ್ಯದಲ್ಲಿ ಕೋಮು ಪ್ರಚೋದನೆ ಮಾಡುತ್ತಿದ್ದಾರೆ. ಇದರಿಂದ ನಷ್ಟ ಆಗುವುದು ಕರ್ನಾಟಕ ರಾಜ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಎಂಬುದನ್ನು ಅವರು ಅರಿತುಕೊಳ್ಳಬೇಕು.

ಅಲ್ಲಿರುವ ಪ್ರತಿಭಾವಂತ ಯುವಕರು ಈಗಾಗಲೇ ಉದ್ಯೋಗಕ್ಕಾಗಿ ಬೇರೆ ರಾಜ್ಯ ಹಾಗೂ ದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ನಾವು ಉದ್ಯೋಗ ಸೃಷ್ಟಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ತಿಳಿಸಿದರು.

ಅಧಿಕಾರಿಗಳು ಸ್ಥಳೀಯವಾಗಿ ಸ್ಪಂದಿಸುತ್ತಿಲ್ಲ ಎಂದು ಕೇಳಿದಾಗ “ನಮ್ಮ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳು ಸ್ಪಂದಿಸುತ್ತಾರೆ” ಎಂದರು.

ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಜೆಡಿಎಸ್ ಟ್ವೀಟ್ ಮಾಡಿರುವ ಬಗ್ಗೆ ಕೇಳಿದಾಗ, “ಅವರ ಪಕ್ಷದವರು ಯಾಕೆ ಗಾಬರಿಯಾಗಬೇಕು? ಅವರು ಒಂದೇ ಪಕ್ಷ ಅಲ್ಲವಲ್ಲ. ಅವರು ಎರಡು ಪಕ್ಷ ಸೇರಿ ಒಟ್ಟಿಗೆ ಇದ್ದಾರಲ್ಲಾ? ಅವರು ಯಾರ ಜತೆ ಬೇಕಾದರೂ ಬೇರೆಯಬಹುದು. ಜನ, ಕಾರ್ಯಕರ್ತರು, ಮುಖಂಡರು ನಮ್ಮ ಜತೆ ಸೇರಲು ಆಸೆ ಪಡುತ್ತಿದ್ದಾರೆ. ಅವರನ್ನು ಬೇಡ ಎನ್ನಲು ಸಾಧ್ಯವೇ?” ಎಂದು ತಿಳಿಸಿದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!