ಗುಡ್ಮಾರ್ನಿಂಗ್ ನ್ಯೂಸ್: ಬ್ಯಾಂಕ್‍ಗಳಲ್ಲಿ ಕನ್ನಡ ಅಧಿಕಾರಿಗಳ ನೇಮಕಕ್ಕೆ ದೊಡ್ಡಬಳ್ಳಾಪುರದಲ್ಲಿ ಒತ್ತಾಯ

Demand in Doddaballapura for appointment of Kannada officers in banks

ದೊಡ್ಡಬಳ್ಳಾಪುರ: ಕನ್ನಡ ಜಾಗೃತಿ ವೇದಿಕೆ ತಾಲೂಕು ಮತ್ತು ಜಿಲ್ಲಾ ಘಟಕದ ವತಿಯಿಂದ ಕನ್ನಡ ಜಾಗೃತಿ ಅಭಿಯಾನ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರೀಕೃತ ಬ್ಯಾಂಕ್‍ಗಳು (Banks) ಹಾಗೂ ಖಾಸಗಿ ಬ್ಯಾಂಕ್‍ಗಳಲ್ಲಿ ಕಡ್ಡಾಯವಾಗಿ ಕನ್ನಡ ಬಲ್ಲ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಯನ್ನು ನೇಮಿಸುವಂತೆ ಬ್ಯಾಂಕಿನ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಎಂ.ನಾಗರಾಜು, ಇತ್ತೀಚೆಗೆ ಆನೇಕಲ್ ನ ಎಸ್‍ಬಿಐ ಬ್ಯಾಂಕ್‍ನಲ್ಲಿ ವ್ಯವಸ್ಥಾಫಕರೊಬ್ಬರು ಕನ್ನಡ ಮಾತನಾಡುವುದಿಲ್ಲ ಎಂದು ಉದ್ಘಾಟತನದ ಉತ್ತರ ನೀಡಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂಕ್ ಸೂಚನೆಯಂತೆ ಸ್ಥಳೀಯ ಭಾಷೆಗಳಲ್ಲಿ ವ್ಯವಹರಿಸಲು ಆದ್ಯತೆ ನೀಡಬೇಕೆಂಬ ನಿಯಮವಿದೆ.

ಸ್ಥಳೀಯ ಕನ್ನಡ ಭಾಷೆಯಲ್ಲಿ ಮಾತನಾಡಿದರೆ ಗ್ರಾಹಕರಿಗೆ ತಮ್ಮ ವ್ಯವಹಾರ ಮಾಡಲು ಹೆಚ್ಚಿನ ಅನುಕೂಲವಾಗುತ್ತದೆ. ಈ ದಿಸೆಯಲ್ಲಿ ಕರ್ನಾಟಕದಲ್ಲಿರುವ ಎಲ್ಲಾ ಬ್ಯಾಂಕುಗಳಲ್ಲಿ ಕನ್ನಡ ಮಾತನಾಡುವ ವ್ಯವಸ್ಥಾಪಕರನ್ನು ಕಡ್ಡಾಯವಾಗಿ ನೇಮಿಸಬೇಕು.

ಬ್ಯಾಂಕುಗಳು ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡುವುದರಿಂದ ಪ್ರತಿಯೊಬ್ಬ ಗ್ರಾಹಕರನ್ನು ಗೌರವದಿಂದ ಕಾಣಬೇಕು. ಮತ್ತು ಕನ್ನಡ ಭಾಷೆ ಕಡ್ಡಾಯವಾಗಿ ಮಾತನಾಡುವ ಗ್ರಾಹಕ ಸೇವಾ ಅಕಾರಿಯನ್ನು ನೇಮಿಸಬೇಕು. ಬ್ಯಾಂಕಿನ ಸೇವೆಗಳನ್ನು ಕನ್ನಡದಲ್ಲಿ ನಾಮಫಲಕ ಹಾಕುವ ಮುಖಾಂತರ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಒತ್ತಾಯಿಸಲಾಗುತ್ತಿದೆ ಎಂದರು.

ಕನ್ನಡ ಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ಸಿ.ಶಶಿಧರ್ ಮಾತನಾಡಿ, ಬ್ಯಾಂಕ್‍ಗಳಲ್ಲಿ ಕನ್ನಡಿಗರಿಗೆ ಹೆಚ್ಚಾಗಿ ಉದ್ಯೋಗವನ್ನು ಕಲ್ಪಿಸಬೇಕು ಎಂದು ತಾಲೂಕಿನ ಸ್ಟೇಟ್ ಬ್ಯಾಂಕ್ ಆಫ್‍ಇಂಡಿಯಾ, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ, ಫೆಡರಲ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್, ಕರ್ನಾಟಕ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಓವರ್ಸೀಸ್ ಬ್ಯಾಂಕ್‍ಗಳ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಗಿದೆ. ಅಲ್ಲದೆ ಕನ್ನಡ ಭಾಷೆಗೆ ಧಕ್ಕೆಯಾದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದರು.

ಈ ವೇಳೆ ಕನ್ನಡ ಜಾಗೃತಿ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಅಗ್ನಿ ವೆಂಕಟೇಶ್, ಕಾರ್ಮಿಕ ಘಟಕದ ಅಧ್ಯಕ್ಷರಾದ ಗುರುಪ್ರಸಾದ್, ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್, ಉಪಾಧ್ಯಕ್ಷ ಮಹದೇವ್, ಕಾರ್ಮಿಕ ಘಟಕದ ಜಿಲ್ಲಾ ಉಪಾಧ್ಯಕ್ಷರಾದ ಸುರೇಶ್ ಸಿಂಗಂ, ಸಂಘಟನಾ ಕಾರ್ಯದರ್ಶಿ ಮಂಜುನಾಥ್ ನಿಜಗಲ್, ವಿಶ್ವನಾಥ್, ಸಂಘಟನೆಯ ಸದಸ್ಯರು ಭಾಗವಹಿಸಿದ್ದರು.

ರಾಜಕೀಯ

ವಿಜಯ್‌ಗೆ ಬೆಂಬಲ ನೀಡಿದ ಕಾಂಗ್ರೆಸ್

ವಿಜಯ್‌ಗೆ ಬೆಂಬಲ ನೀಡಿದ ಕಾಂಗ್ರೆಸ್

ದ್ರಾವಿಡರ ನಾಡು ತಮಿಳುನಾಡಿನಲ್ಲಿ ರಾಜಕೀಯ ಪಂಡಿತರ ಲೆಕ್ಕಾಚಾರವನ್ನು ಬುಡಮೇಲು ಮಾಡಿರುವ ಟಿವಿಕೆ (TVK) ಪಕ್ಷದ ಮುಖಂಡ ವಿಜಯ್ (Vijay) ಅವರು ಸರಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

[ccc_my_favorite_select_button post_id="121783"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]