ದೊಡ್ಡಬಳ್ಳಾಪುರ: ತಂದೆ ತಾಯಿ ಕೆಲಸಕ್ಕೆ ತೆರಳಿದ್ಸ ವೇಳೆ 12 ವರ್ಷದ ಬಾಲಕಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಪಿಳ್ಳೇಗೌಡನ ತೋಟದ ಬಳಿ ನಡೆದಿದೆ.
ಮೃತ ಬಾಲಕಿಯನ್ನು 12 ವರ್ಷದ ಚಾಂದಿನಿ ಕುಮಾರಿ ಎಂದು ಗುರುತಿಸಲಾಗಿದೆ.
ಬಿಹಾರ ಮೂಲದ ಧಮೇಂದ್ರಕುಮಾರ್, ರಿಂಕು ದಂಪತಿಗಳು ಕೂಲಿ ಕಾರ್ಮಿಕರಾಗಿದ್ದು, ಕೆಲಸಕ್ಕೆ ತೆರಳಿದ್ದ ವೇಳೆ ಈಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಘಟನೆಗೆ ಕಾರಣ ತಿಳಿದು ಬಂದಿಲ್ಲವಾಗಿದ್ದು, ಹಲವು ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮೃತದೇಹವನ್ನು ಶವಾಗಾರಕ್ಕೆ ವರ್ಗಾಯಿಸಲಾಗಿದೆ.