Initial Rs. 200 crore for flood control and water utilization work; Minister Santosh Lad

ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆ ಕಾಮಗಾರಿಗೆ ಆರಂಭಿಕ ರೂ.200 ಕೋಟಿ ಅನುದಾನ ಬಿಡುಗಡೆ; ಸಚಿವ ಸಂತೋಷ ಲಾಡ್

ಧಾರವಾಡ: ಧಾರವಾಡ ಜಿಲ್ಲೆಯ ಎರಡು ಪ್ರಮುಖ ಹಳ್ಳಗಳಾದ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆಗೆ ಅಗತ್ಯ ಯೋಜನೆ ಸಿದ್ಧಗೊಳಿಸಿದ್ದು, ಶಾಶ್ವತ ಪರಿಹಾರ ಕ್ರಮಕೈಗೊಳ್ಳಲು ಆರಂಭಿಕವಾಗಿ ರೂ.200 ಕೋಟಿ ಹಣ ಸರ್ಕಾರದಿಂದ ಈಗಾಗಲೇ ಬಿಡುಗಡೆ ಆಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ (Santosh lad) ಅವರು ಹೇಳಿದರು.

ಅವರು ಗುರುವಾರ ನವಲಗುಂದ ತಾಲೂಕಿನ ಯಮನೂರು ಗ್ರಾಮದ ಸೇತುವೆ ಹತ್ತಿರ ಬೆಣ್ಣಿಹಳ್ಳದ ನಾಲೆಯನ್ನು ವೀಕ್ಷಣೆ ಮಾಡಿದ ನಂತರ ಮಾತನಾಡಿದರು.

ಬೆಣ್ಣೆಹಳ್ಳದಿಂದ ಧಾರವಾಡ ಗದಗ ಮತ್ತು ಹಾವೇರಿ ಜಿಲ್ಲೆಗಳ 6 ತಾಲೂಕುಗಳ 56 ಹಳ್ಳಿಗಳು ಬಾಧಿತವಾಗುತ್ತವೆ. ಬೆಣ್ಣಿಹಳ್ಳವು ಈ ಮೂರು ಜಿಲ್ಲೆಗಳ 148 ಕಿ.ಮೀ ಉದ್ದದಲ್ಲಿ ಹರಿಯುತ್ತದೆ. ಇದು ಸುಮಾರು 4800 ಚದರ ಕಿ.ಮೀ ಜಲಾನಯನ ಪ್ರದೇಶವನ್ನು ಹೊಂದಿದೆ ಎಂದು ಸಚಿವರು ಹೇಳಿದರು.

2012 ರಲ್ಲಿ ನೀರಾವರಿ ತಜ್ಞ ಡಾ.ಜಿ.ಎಸ್.ಪರಮಶಿವಯ್ಯ ಅವರು ತುಪ್ಪರಿಹಳ್ಳ ಮತ್ತು ಬೆಣ್ಣಿಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆ ಕುರಿತು ನೀಡಿದ ಅಧ್ಯಯನ ವರದಿಯನ್ನು ಸರಕಾರ ಪರಿಶೀಲಿಸಿದೆ. ಅದರ ಆಧಾರದ ಮೇಲೆ ನೀರಾವರಿ ನಿಗಮದ ವರದಿ ಪಡೆದು ಅನುಷ್ಠಾಗೊಳಿಸುತ್ತದೆ ಎಂದು ಸಚಿವರು ಹೇಳಿದರು.

ಸ್ಥಳೀಯ ಶಾಸಕರಾದ ಎನ್.ಎಚ್,ಕೋನರಡ್ಡಿ ಅವರ ನಿರಂತರ ಪ್ರಯತ್ನ ಹಾಗೂ ಒತ್ತಾಯದ ಫಲವಾಗಿ ಮಾನ್ಯ ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ರೂ. 200 ಕೋಟಿಗಳ ಅನುದಾನ ನೀಡಿ, ಹಣ ಬಿಡುಗಡೆ ಮಾಡಿದ್ದಾರೆ. ಕಾಮಗಾರಿಗೆ ಟೆಂಡರ್ ಕರೆಯಲಾಗಿದ್ದು, ಅಂತಿಮ ಹಂತದಲ್ಲಿದೆ ಮಳೆಗಾಲ ಮುಗಿದ ನಂತರ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ಸಚಿವ ಸಂತೋಷ ಲಾಡ್ ಅವರು ತಿಳಿಸಿದರು.

ಯಮನೂರ ಸೇತುವೆ ಹತ್ತಿರ ಸಾರ್ವಜನಿಕರ ಹಾಗೂ ಪ್ರವಾಸಿಗರ ಅನುಕೂಲಕ್ಕಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ. ಮುಖ್ಯವಾಗಿ ಬೆಣ್ಣಿಹಳ್ಳ ದಡದಲ್ಲಿ ಸ್ನಾನಘಟ್ಟ, ಉತ್ತಮ ರಸ್ತೆ, ಹೂಳು ಹಳ್ಳಕ್ಕೆ ಬರದಂತೆ ಮಾಡಲು ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಪ್ರವಾಹ, ವಿಪತ್ತು ನಿರ್ವಹಣೆಗೆ ಅಗತ್ಯ ನೆರವು

ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳ ಮಳೆಗಾಲದಲ್ಲಿ ಉಂಟಾಗುವ ಹಳ್ಳಗಳ ಪ್ರವಾಹ, ಅತಿವೃಷ್ಟಿ ಸಮಸ್ಯೆಗಳನ್ನು ಸಮರ್ಪಕವಾಗಿ ಎದುರಿಸಿ, ಯಾವುದೇ ಜನ ಜಾನುವಾರ ಹಾನಿ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಈಗಾಗಲೇ ಜಿಲ್ಲಾಮಟ್ಟದಲ್ಲಿ ಸಭೆ ಜರುಗಿಸಿ, ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕೇಂದ್ರ ಸ್ಥಾನ ಬಿಡದಂತೆ ಮತ್ತು ಕರ್ತವ್ಯ ನಿರ್ವಹಣೆಯಲ್ಲಿ ನಿಷ್ಕಾಳಜಿ ತೋರದಂತೆ ನಿರ್ದೇಶಿಸಿ, ಎಚ್ಚರಿಕೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಪ್ರವಾಹ ಪರಿಸ್ಥಿತಿ ಎದುರಿಸಲು ಅನುವಾಗುವಂತೆ ನವಲಗುಂದ ಪಟ್ಟಣದಲ್ಲಿ ಅಗ್ನಿಶಾಮಕ ದಳದ ತಾತ್ಕಾಲಿಕ ನಿಲ್ದಾಣ ತೆರೆಯಲಾಗಿದೆ. ಬೋಟ್ ಸೇರಿದಂತೆ ಎಲ್ಲ ಜೀವ ರಕ್ಷಕ ಪರಿಕರಗಳನ್ನು ಪೂರೈಸಲಾಗಿದೆ. ಸ್ಥಳೀಯ ಈಜುಗಾರರನ್ನು, ಸ್ವಯಂಸೇವಕರ ತಂಡಗಳನ್ನು ಗ್ರಾಮ ಮಟ್ಟದಲ್ಲಿ ರಚಿಸಲಾಗಿದೆ. ಸ್ಥಳೀಯರ ಸಹಭಾಗಿತ್ವದಲ್ಲಿ ತಕ್ಷಣ ಸ್ಪಂದಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಯೋಜನೆ ರೂಪಿಸಿ, ಅನುಷ್ಠಾನಗೊಳಿಸಿದ್ದಾರೆ ಎಂದು ಅವರು ಹೇಳಿದರು.

ನವಲಗುಂದ ತಾಲೂಕಿನಲ್ಲಿ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳ ಎರಡು ಹಳ್ಳಗಳು ಹರಿದು, ಇದೇ ತಾಲೂಕಿನಲ್ಲಿ ಕೂಡಿ, ಮುಂದೆ ಗದಗ ಜಿಲ್ಲೆಗೆ ಹೋಗುವುದರಿಂದ ಪ್ರವಾಹ ಹೆಚ್ಚಿನ ಮಟ್ಟದಲ್ಲಿರುತ್ತದೆ. ಅದಕ್ಕಾಗಿ ಪ್ರವಾಹ ಪರಿಸ್ಥಿತಿ ಎದುರಿಸಲು ಪ್ರತ್ಯೇಕ 10 ತಂಡಗಳನ್ನು ರಚಿಸಿ, ಸನ್ನದಗೊಳಿಸಲು ಸಚಿವರು ನಿರ್ದೇಶಿಸಿದರು.

ಈಗಾಗಲೇ ಜನರ ಸಂರಕ್ಷಣೆಗೊಸ್ಕರ ಐದು ತಂಡವನ್ನು ಸಿದ್ಧ ಮಾಡಲಾಗಿದೆ. ಅವರು ನವಲಗುಂದ ತಾಲೂಕಿನಲ್ಲಿ ದಿನದ 24 ಗಂಟೆ ಸಿದ್ಧರಿರುತ್ತಾರೆ. ಒಂದೂ ಜೀವ ಹಾನಿ ಆಗಬಾರದು ಎಂದು ಮೊದಲೆ ವ್ಯವಸ್ಥೆ ಮಾಡಿಕೊಳ್ಳುವ ದೃಷ್ಠಿಯಿಂದ ಐದು ತಂಡಗಳು ಸಿದ್ದಪಡಿಸಲಾಗಿದೆ. ಮುಂದಿನ ಮೂರು ತಿಂಗಳು ಬೇರೆ ಭಾಗದಲ್ಲಿ ಮಳೆ ಆದರೂ ಇಲ್ಲಿನ ಪರಿಸ್ಥಿತಿ ತೊಂದರೆಗೆ ಉಂಟಾಗಬಹುದು ಎಂದು ಎಲ್ಲಿಯವರೆಗೆ ಮಳೆಯ ಆತಂಕ ಇರುತ್ತದೆಯೋ ಅಲ್ಲಿಯವರೆಗೆ ಈ ಐದು ತಂಡಗಳು ಜನರ ಸಂರಕ್ಷಣೆಗೆ ಇರುತ್ತಾರೆ ಎಂದು ಹೇಳಿದರು.

ಶಾಸಕರಾದ ಎನ್.ಎಚ್.ಕೋನರಡ್ಡಿ ಅವರು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿದ್ದು, ಇದಕ್ಕಾಗಿ ಮಾನ್ಯ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಪ್ರತಿ ಜಿಲ್ಲೆಯಲ್ಲಿರುವ ಉಸ್ತುವಾರಿ ಸಚಿವರು ಮತ್ತು ಶಾಸಕರು, ಜಿಲ್ಲಾಧಿಕಾರಿಯವರು ಜಿಲ್ಲೆಯಲ್ಲಿ ಬರುವ ಪ್ರತಿಯೊಂದು ಪ್ರವಾಹ ಪೀಡಿತ ಪ್ರದೇಶಗಳನ್ನು ಮತ್ತು ಹಳ್ಳಗಳನ್ನು ಪರೀಕ್ಷಿಸಿ, ವರದಿ ಸಲ್ಲಿಸಬೇಕೆಂದು ಹೇಳಿದ್ದಾರೆ. ಅದರಂತೆ ನಮ್ಮ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಬೆಣ್ಣಿಹಳ್ಳ ಹಾಗೂ ತುಪ್ಪರಿಹಳ್ಳದ ಪ್ರವಾಹ ಪೀಡತವಾಗಬಹುದಾದ ಪ್ರದೇಶಗಳಿಗೆ ಇಂದು ಭೇಟಿ ನೀಡಿದ್ದಾರೆ. ನವಲಗುಂದ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪ್ರವಾಹ ಪೀಡತ ಪ್ರದೇಶಗಳನ್ನು ತೋರಿಸಿ, ವಿವರಿಸಲಾಗಿದೆ ಎಂದು ಅವರು ಹೇಳಿದರು.

ಪ್ರತಿ ವರ್ಷವೂ ಬೆಣ್ಣಿಹಳ್ಳ ಪ್ರವಾಹವಾಗುವದರಿಂದ, ಇದನ್ನು ನಿಯಂತ್ರಿಸಿ ಶಾಶ್ವತ ಪರಿಹಾರ ಕಾಣಲು ಮಾನ್ಯ ಮುಖ್ಯಮಂತ್ರಿಗಳು ಅಗತ್ಯ ಅನುದಾನ ನೀಡುವ ಭರವಸೆ ನೀಡಿ, ಈಗಾಗಲೇ ಕಳೆದ ಬಜೆಟ್‍ನಲ್ಲಿ ರೂ. 200 ಕೋಟಿ ಅನುದಾನ ನೀಡಿದ್ದಾರೆ. ಕಾಮಗಾರಿಯನ್ನು ಮಳೆಗಾಲದ ಗಂಭೀರತೆ ನೋಡಿಕೊಂಡು ಸಧ್ಯದಲ್ಲಿ ಆರಂಭಿಸಲಾಗುವುದು. ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳದ ಪ್ರವಾಹ ನಿಯಂತ್ರಣಕ್ಕೆ ಹಾಗೂ ಲಭ್ಯ ನೀರಿನ ಸದ್ಭಳಕೆಗೆ ಅಂದಾಜು ರೂ.1600 ಕೋಟಿ ಅನುದಾನದ ಅಗತ್ಯವಿದ್ದು, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿಯವರ ಮೂಲಕ ಕೇಂದ್ರ ಸರ್ಕಾರದ ಅನುದಾನ ತರಲು ವಿನಂತಿಸಲಾಗುವುದು ಎಂದು ಶಾಸಕ ಎನ್.ಎಚ್.ಕೋನರಡ್ಡಿ ಅವರು ತಿಳಿಸಿದರು.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಅಧಿಕವಾಗಿರುವದರಿಂದ ಜಿಲ್ಲೆಯ ಬಹುತೇಕ ಭಾಗದಲ್ಲಿ ಬಿತ್ತನೆ ಆರಂಭವಾಗಿರುವುದಿಲ್ಲ. ರೈತರಿಗೆ ಅಗತ್ಯವಿರುವ ಬೀಜ, ರಸಗೊಬ್ಬರಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ವಿತರಿಸಲಾಗುತ್ತಿದೆ.

ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ ಹಾಗೂ ಇತರ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರವಾಹದಲ್ಲಿನ ಜೀವ ರಕ್ಷಣೆ ಕುರಿತ ಅಣುಕ ಪ್ರದರ್ಶನ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ನೀಲಮ್ಮನ ಕೆರೆಯಲ್ಲಿ ಪ್ರವಾಹದ ಮುನ್ನಚ್ಚರಿಕೆ ಕುರಿತು ನೀರಿನಲ್ಲಿ ಮುಳುಗಿದವರವನ್ನು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಅಣುಕ ಪ್ರದರ್ಶನದ ಮೂಲಕ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ನಾಗರಿಕರ ರಕ್ಷಣೆಯ ತಾಲೀಮು ನಡೆಸಲಾಯಿತು.

ನೀರಿನಲ್ಲಿ ಮುಳುಗಿರುವ ಹಾಗೆ ಸಂದರ್ಭವನ್ನು ಸೃಷ್ಟಿಸುವ ಮೂಲಕ ಕಾಲ್ಪನಿಕ ತುರ್ತು ಪರಿಸ್ಥಿತಿ ಸೃಷ್ಟಿಸಿ, ಅಗ್ನಿಶಾಮಕ ದಳದ ಎಲ್ಲ ಸಿಬ್ಬಂದಿಗಳು ಸೇರಿ ತಾಲೀಮು ನಡೆಸಿದರು.

ಕೇರೆಯಲ್ಲಿ ಇಬ್ಬರು ವ್ಯಕ್ತಿಗಳು ಬಿದ್ದಿರುವ ಹಾಗೆ ಸನ್ನಿವೇಶ ಸೃಷ್ಟಿಮಾಡಲಾಗಿತ್ತು. ಬಿದ್ದವರನ್ನು ತಕ್ಷಣ ರಕ್ಷಿಸಲು ಅಗ್ನಿಶಾಮಕ ದಳದವರು ಹಡಗಿನ ಮುಖಾಂತರ ಹೋಗಿ ಲೈವ್ ಜಾಕೆಟ್‍ನ್ನು ಆ ವ್ಯಕ್ತಿಗಳಿಗೆ ಎಸೆದು ನಂತರ ಅಗ್ನಿಶಾಮಕ ಸಿಬ್ಬಂದಿಯವರು ನೀರಿನಲ್ಲಿ ಇಳಿದು ಅವರನ್ನು ಹಡಗಿನಲ್ಲಿ ಹಾಕಿಕೊಂಡು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಬಂದರು.

ವೈದ್ಯರು ತಕ್ಷಣ ಅವರನ್ನು ಮಲಗಿಸಿ, ಉಸಿರಾಡುತ್ತಿದ್ದಾರೋ ಇಲ್ಲವೋ ಎಂದು ಪರಿಶೀಲಿಸಿ, ಅವರಿಗೆ ಸಿಪಿಆರ್ ಮಾಡಿದರು. ಮತ್ತು ಜನರಿಗೂ ಸಹ ಇಂತಹ ಸಂದರ್ಭದಲ್ಲಿ ಯಾವ ರೀತಿ ಸಿಪಿಆರ್‍ನ್ನು ಮಾಡಬೇಕೆಂದು ತಿಳಿಸಿದರು. ನಂತರ ಆ ವ್ಯಕ್ತಿಯಗಳನ್ನು ಸ್ಟ್ರಚರ್ ಮೂಲಕ ಆಸ್ಪತ್ರೆಗೆ ಸಾಗಿಸಿದರು.

ನವಲಗುಂದ ಕ್ಷೇತ್ರ ವ್ಯಾಪ್ತಿಯಲ್ಲಿನ ಬೆಣ್ಣಿಹಳ್ಳ ಬದಿಯ ಹಳ್ಳಿಗಳ ಜನರಿಗೆ ಮಳೆಗಾಲದಲ್ಲಿ ಅನಾನುಕೂಲ ಆಗಬಹುದು ಎಂದು ಮುಂಜಾಗ್ರತಾ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ನಾವು, ಜಿಲ್ಲಾಡಳಿತ, ಶಾಸಕರು ಸೇರಿ ಜನರಿಗೆ ಜಾಗೃತಿ ಮೂಡಿಸಲು ಅಗ್ನಿಶಾಮಕ ಇಲಾಖೆಯಿಂದ ಅಣುಕು ಪ್ರದರ್ಶನ ನಡೆಸಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೆÇಲೀಸ್ ಅಧೀಕ್ಷಕ ಡಾ. ಗೋಪಾಲ ಎಮ್.ಬ್ಯಾಕೋಡ್, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಿ.ಎಸ್.ಮೂಗನೂರಮಠ, ಬೃಹತ ನೀರಾವರಿ ಇಲಾಖೆಯ ಎಇಇ ರವೀಂದ್ರ ಜಾಲಗಾರ, ನವಲಗುಂದ ತಹಶೀಲ್ದಾರ ಸುಧೀರ ಸಾವುಕಾರ, ಪುರಸಭೆ ಮುಖ್ಯಾಧಿಕಾರಿ ಶರಣು ಪೂಜಾರ, ಅಗ್ನಿಶಾಮಕ ದಳದ ಅಧಿಕಾರಿ ಅಮೃತ ಮತ್ತು ಸಿಬ್ಬಂದಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ನವಲಗುಂದ ತಾಲೂಕಿನ ವಿವಿಧ ಇಲಾಖೆಗಳ ಮುಖ್ಯಸ್ಥರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!