Bengaluru as 'Asia's MRO hub

‘ಏಷ್ಯಾದ ಎಂಆರ್‌ಒ ಕೇಂದ್ರ’ವಾಗಿ ಬೆಂಗಳೂರು

ಬೆಂಗಳೂರು: ದೇವನಹಳ್ಳಿಯಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ದೇಶಿ ಪ್ರಮುಖ ವಿಮಾನಯಾನ ಸಂಸ್ಥೆ ಇಂಡಿಗೊ (Indigo)- ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಸಂಪೂರ್ಣ ನವೀಕರಣದ (MRO) ಸೌಲಭ್ಯ ಆರಂಭಿಸಲು ₹1,100 ಕೋಟಿಗೂ ಹೆಚ್ಚಿನ ಮೊತ್ತದ ಬಂಡವಾಳ ಹೂಡಿಕೆ ಮಾಡಲಿದೆ.

ಇಂಡಿಗೊ-ದ ಈ ಮಹತ್ವದ ನಿರ್ಧಾರವನ್ನು ಸ್ವಾಗತಿಸಿರುವ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು, ʼಅತ್ಯಾಧುನಿಕ ʼಎಂಆರ್‌ಒʼ ಸೌಲಭ್ಯಕ್ಕೆ ಇಂಡಿಗೊ ಮಾಡಲಿರುವ ಬಂಡವಾಳ ಹೂಡಿಕೆಯು, ಕರ್ನಾಟಕವನ್ನು ಏಷ್ಯಾದ ʼಎಂಆರ್‌ಒʼ ರಾಜಧಾನಿಯನ್ನಾಗಿ ಅಭಿವೃದ್ಧಿಪಡಿಸುವ ನಮ್ಮ ಮುನ್ನೋಟವನ್ನು ಬಲಪಡಿಸಲಿದೆ. ಈ ಉಪಕ್ರಮವು ರಾಜ್ಯದಲ್ಲಿ ಉನ್ನತ ಗುಣಮಟ್ಟದ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಲಿರುವ ಜೊತೆಗೆ ಬೆಂಗಳೂರಿನಲ್ಲಿ ಜಾಗತಿಕ ಸ್ಪರ್ಧಾತ್ಮಕ ವಿಮಾನಯಾನ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲಿದೆʼ ಎಂದು ಹೇಳಿದ್ದಾರೆ.

ʼಈ ʼಎಂಆರ್‌ಒʼ ಘಟಕ ನಿರ್ಮಾಣದಿಂದ ಬೆಂಗಳೂರು ಈಗ ʼಏಷ್ಯಾದ ಎಂಆರ್‌ಒ ಕೇಂದ್ರʼವಾಗಿ ಬೆಳೆಯಲಿದೆ. ಕರ್ನಾಟಕವು ಈಗ ವಿಮಾನಯಾನ ಮೂಲಸೌಲಭ್ಯ ಕ್ಷೇತ್ರದಲ್ಲಿ ಪ್ರಾದೇಶಿಕ ನಾಯಕತ್ವಕ್ಕೆ ಭಾಜನವಾಗಲಿದೆ.

ಕೈಗಾರಿಕಾ ಬೆಳವಣಿಗೆ ಮತ್ತು ಗರಿಷ್ಠ ಪರಿಣತಿಯ ಉದ್ಯೋಗ ಸೃಷ್ಟಿಗೆ ರಾಜ್ಯದ ಬದ್ಧತೆಯನ್ನು ಪುನರುಚ್ಚರಿಸಲಿದೆ. ವೈಮಾಂತರಿಕ್ಷ ವಲಯದ ಅಭಿವೃದ್ಧಿ ಮತ್ತು ವಿಮಾನಯಾನ ಕ್ಷೇತ್ರದ ತಯಾರಿಕೆಗೆ ಉತ್ತೇಜನ ನೀಡಲು ಕರ್ನಾಟಕ ರಾಜ್ಯ ಸರ್ಕಾರವು ಬದ್ಧವಾಗಿದೆʼ ಎಂದು ಹೇಳಿದ್ದಾರೆ.

31 ಎಕರೆ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಇಂಡಿಗೊದ ʼಎಂಆರ್‌ಒʼ ಸೌಲಭ್ಯವು ಮೂಲಸೌಲಭ್ಯ, ಯಂತ್ರೋಪಕರಣ, ಘಟಕ ನಿರ್ಮಾಣ ಮತ್ತಿತರ ಉದ್ದೇಶಗಳಿಗೆ ₹ 1,100 ಕೋಟಿಗೂ ಹೆಚ್ಚಿನ ಮೊತ್ತದ ಬಂಡವಾಳ ಹೂಡಿಕೆ ಮಾಡಲಿದೆ.

ಎಂಆರ್‌ಒ ಸೌಲಭ್ಯದಲ್ಲಿ ಲಭ್ಯ ಇರಲಿರುವ ಅನುಕೂಲತೆಗಳು

4 ದೊಡ್ಡ ಮತ್ತು 8 ಚಿಕ್ಕ ವಿಮಾನಗಳ ಸರ್ವೀಸ್‌ಗೆ ನೆರವಾಗಲಿರುವ 4 ಹ್ಯಾಂಗರ್‌ಗಳು.

1 ದೊಡ್ಡ ಮತ್ತು 2 ಚಿಕ್ಕ ವಿಮಾನಗಳಿಗೆ ಅವಕಾಶ ಕಲ್ಪಿಸಲಿರುವ ಒಂದು ಪೇಂಟ್‌ ಹ್ಯಾಂಗರ್‌.

ಇಂಡಿಗೊ ಹೊಸದಾಗಿ ಸೇರ್ಪಡೆ ಮಾಡಲಿರುವ ದೊಡ್ಡ ಗಾತ್ರದ ಎ350 ವಿಮಾನಗಳು ಮತ್ತು ಎ320/ಎ321ಎಕ್ಸ್‌ಎಲ್‌ಆರ್‌ ವಿಮಾನಗಳಿಗೆ ನೆರವು

ಇಂಡಿಗೊದ ಪಾಲುದಾರ ವಿಮಾನಯಾನ ಸಂಸ್ಥೆಗಳ ವಿಮಾನಗಳ ಸರ್ವೀಸ್‌ಗೂ ಅವಕಾಶ.

ಈ ʼಎಂಆರ್‌ಒʼ ಸೌಲಭ್ಯವು ಜಾಗತಿಕ ವಿಮಾನಯಾನ ಕೇಂದ್ರವಾಗಿ ಬೆಂಗಳೂರಿನ ಸ್ಥಾನಮಾನ ಹೆಚ್ಚಿಸಲಿದ್ದು, ದೇಶದ ನಾಗರಿಕ ವಿಮಾನಯಾನ ಕ್ಷೇತ್ರವನ್ನು ಬಲಪಡಿಸಲಿದೆ.

ಈ ಯೋಜನೆಯು ಎಂಜಿನಿಯರಿಂಗ್‌, ಸರಕು ಸಾಗಣೆ, ಉಗ್ರಾಣ ಮತ್ತು ಪೂರಕ ಸೇವಾಕ್ಷೇತ್ರಗಳಲ್ಲಿ 750 ನೇರ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಲಿದೆ. 2031ರ ವೇಳೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು 1,300 ಕ್ಕೆ ಹೆಚ್ಚಿಸಲಿದೆ.

ಎಲ್ಲಕ್ಕಿಂತ ಮುಖ್ಯವಾಗಿ, ಈ ಸೌಲಭ್ಯವು ಜಾಗತಿಕ ಪ್ರಮುಖ ಮೂಲ ಸಲಕರಣೆ ತಯಾರಿಕಾ (ಒಇಎಂ) ಕಂಪನಿಗಳು, ಪೂರೈಕೆದಾರರನ್ನು ಆಕರ್ಷಿಸಲಿದ್ದು, ಪೂರಕ ಕೈಗಾರಿಕೆಗಳಿಗೆ ಉತ್ತೇಜನ ನೀಡಲಿದೆ.

ಏರ್‌ ಇಂಡಿಯಾ, ಟಿಎಎಸ್‌ಎಲ್‌, ಎಚ್‌ಎಎಲ್‌ – ಎಂಆರ್‌ಒ ಸೌಲಭ್ಯಗಳ ಸಾಲಿಗೆ ಈಗ ಇಂಡಿಗೊ ಸೇರ್ಪಡೆಯು ವಿಮಾನಯಾನ ಕ್ಷೇತ್ರದಲ್ಲಿನ ನಾವೀನ್ಯತೆ, ತಯಾರಿಕೆ ಮತ್ತು ನಿರ್ವಹಣೆ ವಲಯಗಳಲ್ಲಿ ಕರ್ನಾಟಕವನ್ನು ಏಷ್ಯಾದಲ್ಲಿಯೇ ಆದ್ಯತಾ ತಾಣವನ್ನಾಗಿ ಅಭಿವೃದ್ಧಿಪಡಿಸಲು ನೆರವಾಗಲಿದೆ.

ರಾಜಕೀಯ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ: ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="112771"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!