Delay in construction of public schools under CSR funds: DCM DK Shivakumar unhappy

CSR ನಿಧಿಯಲ್ಲಿ ಪಬ್ಲಿಕ್ ಶಾಲೆ ನಿರ್ಮಾಣ ವಿಳಂಬ: ಡಿಸಿಎಂ ಡಿಕೆ ಶಿವಕುಮಾರ್ ತೀವ್ರ ಅಸಮಾಧಾನ

ಬೆಂಗಳೂರು: ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಸಿಎಸ್ಸಾರ್ ಶಾಲೆಗಳ ನಿರ್ಮಾಣ ಯೋಜನೆಯು ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಕಾಣದಿರುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಶನಿವಾರ ಮುಂದುವರೆದ ರಾಜ್ಯ ಪ್ರಗತಿ ಪರಿಶೀಲನೆ ಕುರಿತ ಜಿಲ್ಲಾಧಿಕಾರಿಗಳು ಹಾಗೂ ಸಿಇಓಗಳ ಸಭೆಯಲ್ಲಿ ಡಿಸಿಎಂ ಅವರು ಅಧಿಕಾರಿಗಳ ಕಾರ್ಯವೈಖರಿಗೆ ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಪ್ರತಿ ವರ್ಷ 8000 ಕೋಟಿ ರೂ. ಸಿಎಸ್ಸಾರ್ ನಿಧಿ ಲಭ್ಯವಿದ್ದು, ಇದನ್ನು ಸಿಎಸ್ಸಾರ್ ಶಾಲೆಗಳ ನಿರ್ಮಾಣಕ್ಕೆ ಬಳಸಿಕೊಳ್ಳಬೇಕು ಎಂದು ವರ್ಷದ ಹಿಂದೆಯೇ ಸೂಚನೆ ನೀಡಲಾಗಿತ್ತು. ಆದರೆ ಇದು ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ.

ರಾಜ್ಯದ ಕಾರ್ಪೊರೇಟ್ ಸಂಸ್ಥೆಗಳು ಸಿಎಸ್ಸಾರ್ ನಿಧಿಯನ್ನು ಅನ್ಯ ರಾಜ್ಯಗಳ ಖಾಸಗಿ ಸೇವಾ ಸಂಸ್ಥೆಗಳಿಗೆ (NGO)ಗಳಿಗೆ ಚೆಕ್ ನಲ್ಲಿ ಕೊಟ್ಟು ಅದರಲ್ಲಿ ಶೇಕಡಾ 50 ರಷ್ಟನ್ನು ನಗದು ಸ್ವರೂಪದಲ್ಲಿ ವಾಪಸ್ಸು ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಇದೊಂದು ಅಕ್ರಮ. ಇದರಿಂದ ನಮ್ಮ ರಾಜ್ಯದ ನಿಧಿ ದುರುಪಯೋಗ ಆಗುತ್ತಿದೆ. ಇದನ್ನು ನಮ್ಮ ರಾಜ್ಯದ ಶಾಲೆಗಳ ಅಭಿವೃದ್ಧಿಗೆ ಬಳಸುವುದು ನಿಮ್ಮ ಜವಾಬ್ದಾರಿ ಎಂದು ಹೇಳಿದರು.

ಶಾಲೆ ಕಟ್ಟಿ ಕಾರ್ಪೊರೇಟ್ ಸಂಸ್ಥೆಗಳ ಹೆಸರು ಹಾಕಿಕೊಳ್ಳಲಿ

ಕಾರ್ಪೊರೇಟ್ ಸಂಸ್ಥೆಗಳು CSR ನಿಧಿಯನ್ನು ನಮಗೆ ನಗದು ಸ್ವರೂಪದಲ್ಲಿ ಕೊಡುವುದು ಬೇಡ. ಮೂರೂ ಗ್ರಾಮ ಪಂಚಾಯಿತಿಗೆ ಒಂದು ಪಬ್ಲಿಕ್ ಶಾಲೆ ಕಟ್ಟಿಕೊಡಲಿ. ಜಮೀನು ಬೇಕಿದ್ದರೆ ಸರಕಾರದಿಂದಲೇ ಕೊಡೋಣ. ನೀವೇ ಜಾಗ ಗುರುತಿಸಿ. ನಾವು ವಿನ್ಯಾಸ ಕೊಡೋಣ. ಅವರು ಕಟ್ಟಡ ಕಟ್ಟಿ, ಮೂಲಸೌಕರ್ಯ ಒದಗಿಸಲಿ. ಆ ಶಾಲಾ ಕಟ್ಟಡದ ಮೇಲೆ ರಾಜ್ಯ ಸರಕಾರದ ಜತೆಗೆ ಆಯಾ ಸಂಸ್ಥೆಗಳ ಹೆಸರಿನ ಫಲಕ ಹಾಕಿಕೊಳ್ಳಲಿ. ಈ ಶಾಲೆಗಳಿಗೆ ಖಾಸಗಿ ಶಾಲೆಗಳಿಂದ ತಲಾ ಒಬ್ಬರು ನುರಿತ ಶಿಕ್ಷಕರನ್ನು ಪೂರೈಸುವ ಜವಾಬ್ದಾರಿ ವಹಿಸೋಣ ಎಂದರು.

ನನ್ನ ಕ್ಷೇತ್ರದಲ್ಲಿ ತಲಾ 9 ರಿಂದ 12 ಕೋಟಿ ರೂಪಾಯಿವರೆಗೂ ವೆಚ್ಚ ಮಾಡಿ 13 ಸಿಎಸ್ಸಾರ್ ಪಬ್ಲಿಕ್ ಶಾಲೆಗಳನ್ನು ನಿರ್ಮಿಸಲಾಗುತ್ತಿದೆ. ಕೆಲವು ಕಡೆ ಮಾತ್ರ ಕೆಲಸ ಆಗುತ್ತಿದೆ. ಬಹುತೇಕ ಕಡೆ ಯಾರೂ ಆಸಕ್ತಿಯನ್ನೇ ವಹಿಸಿಲ್ಲ ಎಂದು ಕಿಡಿ ಕಾರಿದರು.

ಪತ್ರ ಬರೆದು, ಸಭೆ ನಡೆಸಲು ಸೂಚನೆ

ನಿಮ್ಮ ನಿಮ್ಮ ವ್ಯಾಪ್ತಿಯಲ್ಲಿನ ಕಾರ್ಪೊರೇಟ್ ಸಂಸ್ಥೆಗಳಿಗೆ ಕೂಡಲೇ ಪತ್ರ ಬರೆದು, ಸಭೆ ಕರೆದು ಪಬ್ಲಿಕ್ ಶಾಲೆಗಳ ನಿರ್ಮಾಣ ಕೈಗೆತ್ತಿಕೊಳ್ಳುವಂತೆ ಸೂಚನೆ ನೀಡಿ.

ಈವರೆಗೂ ಕಾರ್ಪೊರೇಟ್ ಸಂಸ್ಥೆಗಳು ಏನು ಮಾಡಿವೆ ಎಂಬುದರ ಮಾಹಿತಿ ಪಡೆಯಿರಿ. ಶಿಕ್ಷಣ ಇಲಾಖೆ ವಿನ್ಯಾಸ (ಡಿಸೈನ್) ನೀಡುತ್ತದೆ. ಅದನ್ನು ಆಧರಿಸಿ ಕಟ್ಟಡ ಕಟ್ಟಲು ಸೂಚನೆ ಕೊಡಿ. ಒಂದೊಂದು ತಾಲೂಕಿಗೆ ಒಂದು ಮಾದರಿ ಶಾಲೆ ನಿರ್ಮಿಸಿ, ಅದರ ವಿನ್ಯಾಸದ ಮೇರೆಗೆ ಮೂರು ಪಂಚಾಯಿತಿಗೆ ಒಂದು ಶಾಲೆ ನಿರ್ಮಾಣದ ಗುರಿ ನಿಗದಿ ಮಾಡಿ ಎಂದು ಡಿಸಿ ಹಾಗೂ ಸಿಇಓ ಗಳಿಗೆ ಸೂಚನೆ ನೀಡಿದರು.

ಶಾಲೆಗಳ ನಿರ್ಮಾಣಕ್ಕೆ ಸಿಎಸ್ಸಾರ್ ನಿಧಿ ಬಳಕೆ ಸಂಬಂಧ ಬೆಂಗಳೂರು ಕಾರ್ಪೊರೇಟ್ ಸಂಸ್ಥೆಗಳ ಸಭೆ ಕರೆಯಲು ಬೆಂಗಳೂರು ಜಿಲ್ಲಾಧಿಕಾರಿ, ಸಿಇಓಗಳಿಗೆ ಸೂಚನೆ ನೀಡಲಾಗಿದೆ. ಅದೇ ರೀತಿ ಎಲ್ಲ ಜಿಲ್ಲಾಧಿಕಾರಿಗಳು, ಸಿಇಓ ಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಸಭೆ ಕರೆದು ಸಿಎಸ್ಸಾರ್ ಶಾಲೆ ನಿರ್ಮಾಣ ತ್ವರಿತಗತಿಯಲ್ಲಿ ಆಗುವಂತೆ ಕ್ರಮ ಕೈಗೊಳ್ಳಬೇಕು. ತಾವೇ ಆಗಾಗ್ಗೆ ಡಿಸಿ ಮತ್ತು ಸಿಇಓಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ಯೋಜನೆ ಪ್ರಗತಿ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದರು.

ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಎಚ್ ಕೆ ಪಾಟೀಲ್, ಕೆ ಜೆ ಜಾರ್ಜ್, ಕೃಷ್ಣ ಬೈರೇಗೌಡ, ಕೆ ಎಚ್ ಮುನಿಯಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ಮಧು ಬಂಗಾರಪ್ಪ, ವೆಂಕಟೇಶ್, ಎಂ ಸಿ ಸುಧಾಕರ್, ಡಿ ಸುಧಾಕರ್, ಬೋಸರಾಜ್, ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಭಾಗವಹಿಸಿದ್ದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!