ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್ ನೀಡಿ: ಸಿಎಂ ಸಿದ್ದರಾಮಯ್ಯ

Give gun licenses to shepherds: CM Siddaramaiah

ಬೆಂಗಳೂರು: DC, CEO ಗಳ ಸಭೆಯಲ್ಲಿ ನಾನಾ ಇಲಾಖೆಗಳ ಪ್ರಗತಿ ಪರಿಶೀಲನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಕುರಿಗಾಹಿಗಳಿಗೆ ಉಂಟಾಗುತ್ತಿರುವ ಸಮಸ್ಯೆ ಬೆಳಕಿಗೆ ತಂದರು.

ಈ ವೇಳೆ ಕುರಿಗಾಹಿಗಳ ಮೇಲೆ ಅರಣ್ಯ ಇಲಾಖೆಯವರು ಅವೈಜ್ಞಾನಿಕವಾಗಿ ಕೇಸು ದಾಖಲಿಸುವುದು ಮತ್ತು ಅನಗತ್ಯ ತೊಂದರೆ ಕೊಡುವ ಬಗ್ಗೆ ವರದಿಗಳು, ದೂರುಗಳು ಬಂದಿವೆ. ಇದನ್ನು ನಿಲ್ಲಿಸಬೇಕು. ಕುರಿಗಳು ತಲೆ ಎತ್ತಿ ಮೇಯುವುದಿಲ್ಲ. ಅವು ತಲೆ ಬಗ್ಗಿಸಿಕೊಂಡು ಮೇಯುವುದರಿಂದ ಅರಣ್ಯ ಸಿಬ್ಬಂದಿಯ ತಪ್ಪು ಗ್ರಹಿಕೆಯಿಂದ ಕುರಿಗಾಹಿಗಳಿಗೆ ತೊಂದರೆ ಆಗುತ್ತಿದೆ ಇದನ್ನು ತಪ್ಪಿಸಿ ಎಂದರು.

ಕುರಿಗಾಹಿಗಳಿಗೆ ಕುರಿಗಳ ಮತ್ತು ತಮ್ಮ ಜೀವದ ರಕ್ಷಣೆಗೆ ಬಂದೂಕು ಪರವಾನಗಿ ಕೊಡಬೇಕು ಎಂದು ಸೂಚಿಸಿದ್ದೆ. ಇದಿನ್ನೂ ಕೆಲವು ಕಡೆ ಜಾರಿಗೆ ಬಂದಿಲ್ಲ. ಕುರಿಗಳ್ಳರು ಕುರಿಗಳನ್ನು ಕದಿಯುವ ಜೊತೆಗೆ, ಕುರಿಗಾಹಿಗಳನ್ನು ಕೊಲೆ ಮಾಡಿರುವ ಘಟನೆಗಳೂ ಕೂಡ ನಡೆದಿವೆ. ಹೀಗಾಗಿ ಬಂದೂಕು ಪರವಾನಗಿ ಕೊಡುವುದನ್ನು ಸಮರ್ಪಗೊಳಿಸಬೇಕು ಎನ್ನುವ ಸೂಚನೆ ನೀಡಿದರು.

ಈ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು, ಕುರಿಗಾಹಿಗಳಿಗೆ ಬಂದೂಕು ನೀಡುವ ಕಾರ್ಯದ ಬಗ್ಗೆ ನಿಗಾ ಇಡಲು ಹಿರಿಯ ಅಧಿಕಾರಿಯೊಬ್ಬರನ್ನು ನಿಯೋಜಿಸುವುದಾಗಿ ತಿಳಿಸಿದರು.

ಯುವನಿಧಿ ಫಲಾನುಭವಿ ನಿರುದ್ಯೋಗಿಗಳಿಗೆ ಉದ್ಯೋಗ, ತರಬೇತಿ ಸಿಗಬೇಕು. ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ತರಬೇತಿ ನೀಡಿ, ಉದ್ಯೋಗ ಕೈಗೆ ಸಿಗುವಂತಾಗಬೇಕು. ತರಬೇತಿ ಪಡೆದವರೆಲ್ಲರಿಗೂ ಉದ್ಯೋಗ ಸಿಗದೇ ಹೋಗಬಹುದು. ಆದರೆ ತರಬೇತಿ ಮಾತ್ರ ಹೆಚ್ಚೆಚ್ಚು ನಿರುದ್ಯೋಗಿ ಮತ್ತು ಯುವನಿಧಿ ಫಲಾನುಭವಿಗಳಿಗೆ ನೀಡಬೇಕು ಎಂದು ಸಿಎಂ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳು ನಿಯಮಿತವಾಗಿ ಡೈರಿ ಬರೆಯುವ ಅಭ್ಯಾಸ ಮಾಡಿಕೊಳ್ಳಬೇಕು, ಆ ಡೈರಿಯಲ್ಲಿ ಫೀಲ್ಡ್‌ ವರ್ಕ್‌ ಅನುಭವಗಳು, ಸಮಸ್ಯೆಗಳು, ಪರಿಹಾರ ಎಲ್ಲದರ ಬಗ್ಗೆಯೂ ಉಲ್ಲೇಖವಿರಬೇಕು ಎಂದು ಕಳೆದ ವರ್ಷದ ಸಭೆಯಲ್ಲಿ ಮತ್ತು ಎಲ್ಲಾ ಕೆಡಿಪಿ ಸಭೆಗಳಲ್ಲಿ ನಾನು ಸೂಚನೆ ನೀಡಿದ್ದೆ. ಇನ್ನೂ ಕೆಲವರು ಸಮರ್ಪವಾಗಿ ಡೈರಿಗಳನ್ನು ಬರೆದಿಲ್ಲ ಎನ್ನುವ ಮಾಹಿತಿ ಇದೆ. ನೀವು ಬರೆದ ಡೈರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬಂದರೆ ನಾನೂ ಗಮನಿಸಬಹುದು ಎಂದು ಸೂಚನೆ ನೀಡಿದರು.

ನೀವೆಲ್ಲಾ ಯುವ ಜಿಲ್ಲಾಧಿಕಾರಿಗಳಿದ್ದೀರಿ. ನಿಮಗೆ ಫೀಲ್ಡ್‌ ಎಕ್ಸ್‌ಪೀರಿಯನ್ಸ್‌ ಚನ್ನಾಗಿ ಇರುತ್ತದೆ. ನೀವು ಕೆಲಸ ಮಾಡುವ ಜಿಲ್ಲೆಗಳಲ್ಲಿ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗುವ ದಿಕ್ಕಿನಲ್ಲಿ ಇನ್ನೋವೇಟೀವ್‌ ಆಗಿ ಕೆಲಸ ಮಾಡಿ ತೋರಿಸಿ. ನಿಮ್ಮ ಹೆಸರು ಜಿಲ್ಲೆಗಳಲ್ಲಿ, ರಾಜ್ಯದಲ್ಲಿ ಅಚ್ಚಳಿಯದೆ ಉಳಿಯುವ ರೀತಿಯಲ್ಲಿ ದಾಖಲೆ ಮಾಡಿ ತೋರಿಸಿ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಹುರಿದುಂಬಿಸಿದರು.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]