ಬೆಂಗಳೂರು: “ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಯ ಶೇ.40 ರಷ್ಟು ಕಾಮಗಾರಿ ಮುಗಿದಿದೆ. ಹೀಗಿರುವಾಗ ಕಾಮಗಾರಿಯನ್ನು ನಿಲ್ಲಿಸುವ ಪ್ರಮೇಯವೇ ಬರುವುದಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರದಂದು ಉತ್ತರಿಸಿದರು.
ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ ವಿಚಾರವಾಗಿ ಕೇಳಿದಾಗ, “ಅಲ್ಲಿರುವವರು, ಇಲ್ಲಿರುವವರು ಎಲ್ಲರೂ ನಮ್ಮ ರೈತರೇ. ಎಲ್ಲರ ಹಿತವನ್ನು ನಾವು ಕಾಪಾಡುತ್ತೇವೆ” ಎಂದರು.
ಹಾಗೂ ಬಿಜೆಪಿ ಶಾಸಕ ಸುರೇಶ್ ಗೌಡ ಪ್ರತಿಭಟನೆ ಬಗ್ಗೆ ಕೇಳಿದಾಗ, “ಶಾಸಕರಾದ ಕೃಷ್ಣಪ್ಪ, ಸುರೇಶ್ ಗೌಡ ಅವರಿಗೆ ಈ ಯೋಜನೆ ವಿಚಾರವಾಗಿ ಅರಿವಿದೆ ಎಂದು ಹೇಳಿದ್ದಾರೆ. ಅವರೂ ಈ ಬಗ್ಗೆ ಮಾತನಾಡಿದ್ದಾರೆ. ಆದರೂ ಈಗ ಹೋರಾಟ ಮಾಡುತ್ತಿದ್ದಾರೆ. ಇದನ್ನು ನಾನು ತಪ್ಪು ಎಂದು ಹೇಳುವುದಿಲ್ಲ. ಮಾನಸಿಕವಾಗಿ ಎಲ್ಲಾ ಶಾಸಕರಿಗೂ ಈ ವಿಚಾರ ತಿಳಿದಿದೆ” ಎಂದು ಹೇಳಿದರು.
ವಿ.ಸೋಮಣ್ಣ ಅವರು ಈ ವಿಚಾರವಾಗಿ ಪತ್ರ ಬರೆದಿರುವ ಬಗ್ಗೆ ಕೇಳಿದಾಗ, “ಅವರು ದೊಡ್ಡವರು, ಕೇಂದ್ರ ಸಚಿವರು. ಅವರ ಮಾರ್ಗದರ್ಶನವನ್ನೂ ಕೇಳೋಣ” ಎಂದರು.