DDPI

SSLC ಕಳಪೆ ಫಲಿತಾಂಶ: DDPI ಗಳಿಗೆ ನೋಟಿಸ್

ಬೆಂಗಳೂರು: ಎಸ್‌ಎಸ್‌ಎಲ್‌ಸಿ (SSLC) ಫಲಿತಾಂಶದಲ್ಲಿ ಕಳಪೆ ಸಾಧನೆ ಹಿನ್ನೆಲೆಯಲ್ಲಿ DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಡಿಸಿ ಮತ್ತು ಸಿಇಒ ಗಳ ಸಭೆಯ ಆರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು‌ 2024-25 ನೇ ಸಾಲಿನ SSLC ಯಲ್ಲಿ‌ ಶೇ.60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಬೇಕು, ನೋಟಿಸ್ ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಹೇಳಿದ್ದಾರೆ.

ಈ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದರು.

ಸೂಚನೆಗಳು

ಎಸ್‌ಎಸ್‌ಎಲ್‌ಸಿ ಯಲ್ಲಿ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ ಕೊರತೆ, ಸಿಬ್ಬಂದಿ ಕೊರತೆ ಎನ್ನುವ ನೆಪ ಹೇಳಬೇಡಿ. ದಕ್ಷಿಣ ಕನ್ನಡ ಮತ್ತು ಇತರೆ ಜಿಲ್ಲೆಗಳಲ್ಲಿ ಮಾತ್ರ ಉತ್ತಮ ಫಲಿತಾಂಶ ಬರುತ್ತಿದೆ. ಡಿಡಿಪಿಐಗಳು ಜವಾಬ್ದಾರಿ ತೆಗೆದುಕೊಳ್ಳಬೇಕು. ಡಿಸಿಪಿಐಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಶಿಕ್ಷಕರು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೋ ಇಲ್ಲವೋ ಎನ್ನುವುದನ್ನು ಪರಿಶೀಲನೆ ನಡೆಸಬೇಕು. ಇಲ್ಲ ಸಲ್ಲಸ ನೆಪ ಹೇಳಬೇಡಿ. ಶಿಕ್ಷಕರು ಮತ್ತು ಡಿಡಿಪಿಐ ಗಳು ಆಸಕ್ತಿಯಿಂದ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಎಲ್ಲಾ ಕಡೆ ಬರುತ್ತದೆ ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ವಿವೇಕ ಯೋಜನೆಯಡಿಯಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಹಣ ಮಂಜೂರು ಮಾಡುವುದರಲ್ಲಿ ವಿಳಂಬ ಆಗಬಾರದು. ಕ್ರಿಯಾ ಯೋಜನೆ ತಕ್ಷಣ ತಕ್ಷಣ ಸಿದ್ದಪಡಿಸಬೇಕು. ಹಣ ಬಿಡುಗಡೆ ಆಗಿದ್ದರೂ ಇನ್ನೂ ಶಾಲಾ ಕೊಠಡಿಗಳ ನಿರ್ಮಾಣ ಆಗದಿರುವ ಬಗ್ಗೆ ಜಿಲ್ಲಾಧಿಕಾರಿಗಳನ್ನು ಸಿಎಂ ಪ್ರಶ್ನಿಸಿದರು

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಕಡಿಮೆ ಆಗದಂತೆ ಶಿಕ್ಷಕರು ಮತ್ತು ಅಧಿಕಾರಿಗಳು ಪೋಷಕರ ಜೊತೆ ಮಾತನಾಡಬೇಕು, ಡ್ರಾಪ್‌ಔಟ್‌ ತಡೆಯಲು ಏನೆಲ್ಲಾ ಸಾಧ್ಯವೋ ಎಲ್ಲವನ್ನೂ ಮಾಡಬೇಕು. ಡಿಡಿಪಿಐ ಗಳು, ಬಿಇಒ ಗಳು ಶಾಲೆಗಳಿಗೆ ಭೇಟಿ ನೀಡ್ತಾ ಇದಾರಾ ಎನ್ನುವ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಗಮನಿಸಬೇಕು. ಪ್ರತೀ ವರ್ಷ ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಕಡಿಮೆ ಆಗುತ್ತಿರುವುದು ಕೆಟ್ಟ ಬೆಳವಣಿಗೆ. ಸರ್ಕಾರ ಮೊಟ್ಟೆ, ಹಾಲು, ರಾಗಿಮಾಲ್ಟ್‌, ಸೂಪು, ಹಾಸ್ಟೆಲ್‌ ಸವಲತ್ತು ಎಲ್ಲಾ ಕೊಟ್ಟು ಮಕ್ಕಳ ದಾಖಲಾತಿ ಪ್ರಮಾಣ ಏಕೆ ಕಡಿಮೆ ಆಗುತ್ತಿದೆ. ನಿಮ್ಮ ಪ್ರಾಯೋಗಿಕ ಅನುಭವಗಳು ಏನು ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದು ಸಮಸ್ಯೆಗಳನ್ನು ಬಗೆಹರಿಸಲು ಅಗತ್ಯ ಕ್ರಮಕ್ಕೆ ಸಿಎಂ ಸೂಚಿಸಿದರು.

ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವುದನ್ನು ಗಮನದಲ್ಲಿಡಿ. ಡಿಡಿಪಿಐ ಗಳು ಜಿಲ್ಲೆಗಳಲ್ಲಿ ಕುಳಿತು ಕೆಲಸ ಮಾಡುವುದಲ್ಲ. ಇಡೀ ಜಿಲ್ಲೆ ಪ್ರಯಾಣ ಮಾಡಬೇಕು. ಸಿಇಒ ಗಳು ಕಡ್ಡಾಯವಾಗಿ ಈ ಬಗ್ಗೆ ನಿಗಾ ವಹಿಸಿ ಪೋಷಕರ ಜೊತೆ ಸಭೆ ನಡೆಸಿ ಚರ್ಚಿಸಲೇಬೇಕು ಎಂದು ಸಿಎಂ ತಾಕೀತು ಮಾಡಿದರು.

ಪರೀಕ್ಷಾ ಫಲಿತಾಂಶದಲ್ಲಿ ಮತ್ತು ಮಕ್ಕಳ ದಾಖಲಾತಿಯಲ್ಲಿ ರಾಜ್ಯ ಸರಾಸರಿಗಿಂತ ಶೇಕಡಾವಾರು ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಸಿಇಒ ಮತ್ತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಖಡಕ್‌ ಸೂಚನೆ ನೀಡಿ ಮುಂದಿನ ಶೈಕ್ಷಣಿಕ ಸಾಲಿನ ಹೊತ್ತಿಗೆ ಪರಿಸ್ಥಿತಿ ಉತ್ತಮಗೊಳ್ಳಬೇಕು ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಮತ್ತು ಹೈದರಾಬಾದ್‌ ಕರ್ನಾಟಕ ಜಿಲ್ಲೆಗಳ ಸಿಇಓ ಗಳು ಹೆಚ್ಚಿನ ಆಸಕ್ತಿ ಕೊಟ್ಟು ಈ ಬಗ್ಗೆ ನಿಗಾ ಇಡಬೇಕು. ಫಲಿತಾಂಶ ಕಡಿಮೆ ಇರುವುದಕ್ಕೆ ಕಾರಣಗಳು, ನೆಪಗಳು ಮುಖ್ಯ ಅಲ್ಲ, ಫಲಿತಾಂಶ ತರುವುದು ಮುಖ್ಯ. ಪ್ರಾಮಾಣಿಕ ಪ್ರಯತ್ನ ಇದ್ದರೆ ಪ್ರಾಮಾಣಿಕ ಫಲಿತಾಂಶ ಬರುತ್ತದೆ ಎಂದರು.

ಬಾಲ್ಯ ವಿವಾಹ, ಬಾಲಗರ್ಭಿಣಿ ಪ್ರಕರಣ ತಡಿಬೇಕು ಅನ್ಸಲ್ವಾ ನಿಮಗೆ: ಸಿಎಂ ಗರಂ

ಹಿಂದುಳಿದವರು, ದಲಿತರು, ಅಶಿಕ್ಷಿತರು ಇರುವ ಕಡೆ ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣಗಳು ಇರುತ್ತವೆ. ಇದನ್ನು ಸಮರ್ಪಕವಾಗಿ ತಡೆಯಬೇಕು ಎಂದು ನಿಮಗೆ ಅನ್ನಿಸಲ್ವಾ ಎಂದು ಸಿಎಂ ಅಧಿಕಾರಿಗಳಿಗೆ ಪ್ರಶ್ನಿಸಿದರು.

ಸರಿಯಾಗಿ ನಿಗಾ ವಹಿಸಿ, ವರದಿ ನೀಡದ PDO ಗಳು ರೆವಿನ್ಯೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸಿಎಂ ಸೂಚಿಸಿದರು.

ಅಗತ್ಯ ಇರುವ ಕಡೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ಕಾನೂನು ಕ್ರಮ ಕೈಗೊಳ್ಳಿ ಎಂದು ಸಿಎಂ ಸೂಚಿಸಿದರು.

ಸಿಎಂ ನೀಡಿದ ಇತರೆ ಸೂಚನೆಗಳು

ಶೇಕಡಾವಾರು ತೀವ್ರ ಅಪೌಷ್ಠಿಕ ಮಕ್ಕಳ ಸಂಖ್ಯೆ ಹೆಚ್ಚಾಗಿರುವ ಜಿಲ್ಲೆಗಳ ಪ್ರತೀ ವರ್ಷ ನಿಮ್ಮ ನಿಮ್ಮ ಜಿಲ್ಲೆಗಳಲ್ಲಿ ಶೇ.1ರಷ್ಟು ಕಡಿಮೆ ಮಾಡಿಕೊಂಡು ಹೋಗಲು ಸಾಧ್ಯವಿದೆ. ಒಂದೇ ಸಾರಿಗೆ ನಿಲ್ಲಿಸಲು ಸಾಧ್ಯವಿಲ್ಲ ಎನ್ನುವುದಕ್ಕೆ ಸಾಮಾಜಿಕ ಕಾರಣಗಳೂ ಇವೆ. ಆದ್ದರಿಂದ ಪ್ರತೀ ವರ್ಷ ಶೇ.1ರಷ್ಟು ಪ್ರಮಾಣ ಕಡಿಮೆ ಮಾಡಿಕೊಂಡು ಬಂದರೆ ಅಪೌಷ್ಠಿಕ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎನ್ನುವ ಸೂಚನೆ ನೀಡಿದರು. ಬೀದರ್‌, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸಿಎಂ ಈ ಸೂಚನೆ ನೀಡಿದರು.

ಮಕ್ಕಳ ಹಿಮೋಗ್ಲೋಬಿನ್‌ ಪ್ರಮಾಣ ಸೇರಿ ಅವರ ಆರೋಗ್ಯ ತಪಾಸಣೆ ನಿರಂತರವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಹಾಳಿ, ಮೊಟ್ಟೆ, ಮಾತ್ರೆ ಎಲ್ಲವನ್ನೂ ಕೊಡುತ್ತಿದ್ದರೂ ಏಕೆ ಕೆಲವು ಕಡೆ ಮಹಿಳೆಯರ ಮತ್ತು ಮಕ್ಕಳ ಪೌಷ್ಠಿಕ ಮಟ್ಟ ಮಾತ್ರ ಸುಧಾರಿಸುತ್ತಿಲ್ಲ ಎನ್ನುವ ಬಗ್ಗೆ ವೈಜ್ಞಾನಿಕ ವರದಿ ನೀಡಿ, ವರದಿ ಆಧಾರದಲ್ಲಿ ಅಗತ್ಯ ಸುಧಾರಣಾ ಕ್ರಮ ಕೈಗೊಳ್ಳಬಹುದು ಎಂದು ಸಿಎಂ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿಪ್ರಾಧಿಕಾರದ ಹಲವು ಯೋಜನೆಗಳಲ್ಲಿ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ತಾಂತ್ರಿಕ ತೊಂದರೆಗಳನ್ನು ಅಧಿಕಾರಿಗಳು ಮುಂದಿಟ್ಟಾಗ ಗರಂ ಆದ ಮುಖ್ಯಮಂತ್ರಿಗಳು, ಎಷ್ಟು ವರ್ಷಗಳಿಂದ ಇದೇ ಕತೆ ಹೇಳಿಕೊಂಡು ಕೂತಿರ್ತೀರಿ ? ಅಗತ್ಯ ಬಿದ್ದರೆ ಭೂ ಸ್ವಾಧೀನಕ್ಕಾಗಿಯೇ ವಿಶೇಷ ಅಧಿಕಾರಿಯನ್ನು ನೇಮಿಸಲು ನಾವು ಸಿದ್ದರಿದ್ದೇವೆ. ನೇಮಕ ಮಾಡಿಕೊಳ್ಳಿ.

ಹಳೆ ಯೋಜನೆಗಳು ಪೂರ್ಣಗೊಳ್ಳದ ಹೊರತು ಹೊಸ ಹೆದ್ದಾರಿ ಯೋಜನೆಗಳು ನಮಗೆ ಸಿಗುವುದಿಲ್ಲ ಎಂದರು, ಇದಕ್ಕೆ ಧ್ವನಿಗೂಡಿಸಿದ ಸಚಿವ ಸತೀಶ್‌ ಜಾರಕಿಹೊಳಿಯವರು, 42 ಬಾಕಿ ಯೋಜನೆಗಳಲ್ಲಿ ನಾವು 22ಯೋಜನೆಗಳನ್ನು ಮುಗಿಸಿದ್ದೇವೆ. ಕೇಂದ್ರದಿಂದಲೇ ಬಹಳ ಮಸ್ಯೆ ಆಗುತ್ತಿದೆ. ಕೇಂದ್ರದ ಅಧಿಕಾರಿಗಳು ಹಲವು ಕಡೆ ಇನ್ನಷ್ಟು ಹೆಚ್ಚು ಕ್ರಿಯಾಶೀಲವಾಗಿ ಮಾಡಬೇಕಿದೆ ಎಂದರು.

ಎಲ್ಲೆಲ್ಲಿ ಬಾಟಲ್‌ ನೆಕ್‌ ಸಮಸ್ಯೆ ಇದೆ ಅವುಗಳನ್ನು ಮೊದಲ ಆಧ್ಯತೆ ನೀಡಿ ಬಗೆಹರಿಸಬೇಕು. ಎಸ್‌ಎಲ್‌ಎಒ ಗಳು ಜಿಲ್ಲಾಧಿಕಾರಿಗಳ ಅಧೀನದಲ್ಲಿ ಬರುವಂತೆ ಒಂದು circular ಹೊರಡಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಮೇಲಿಂದ ಮೇಲೆ ಪರಿಶೀಲನೆ ನಡೆಸುತ್ತಿದ್ದರೆ ಪರಿಸ್ಥಿತಿ ಸುಧಾರಿಸಬಹುದು ಎಂದು ಸಚಿವ ಕೃಷ್ಣಬೈರೇಗೌಡರು ಸೂಚನೆ ನೀಡಿದರು.

ಎಸ್‌ಎಲ್‌ಎಒ ಗಳ ಪ್ರಾಕ್ಟೀಸ್‌ ಅಷ್ಟು ಸರಿ ಇಲ್ಲ. ಮಾರುಕಟ್ಟೆ ಬೆಲೆ, ಗೈಡೆನ್ಸ್‌ ಬೆಲೆಗೂ ಇವರು ತರುವ ಬೆಲೆಗೂ ಯದ್ವಾ ತದ್ವಾ ವ್ಯತ್ಯಾಸ ಇರುತ್ತದೆ. ಇದು ಸರ್ಕಾರದ ಮೇಲೆ ಅನಗತ್ಯ ಹೊರೆ ಬೀಳುತ್ತದೆ. ಇದರಲ್ಲಿ ಎಸ್‌ ಎಲ್ ಎ ಒ ಗಳ ವರ್ತನೆಗಳು, ಪ್ರಾಕ್ಟೀಸ್‌ ಸರಿ ಇಲ್ಲ.

ಹೀಗಾಗಿ ಇವರನ್ನು ಜಿಲ್ಲಾಧಿಕಾರಿಗಳ ಅಧೀನಕ್ಕೆ ತರುವುದು ಉತ್ತಮ ಎನ್ನುವ ಅಭಿಪ್ರಾಯವನ್ನು ಸಭೆಯಲ್ಲಿ ಸಚಿವರುಗಳು ಮತ್ತು ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳು ಈ ಬಗ್ಗೆ ಸಮಗ್ರ ಪರಿಶೀಲನೆ ಮಾಡಿ ಜಿಲ್ಲಾಧಿಕಾರಿಗಳ ಅಧೀನಕ್ಕೆ ತರುವಂತೆ ಸೂಚನೆ ನೀಡಿದರು.

ಅನರ್ಹ ಪಡಿತರ ಚೀಟಿದಾರರ ಸಂಖ್ಯೆ ವಿಪರೀತ ಹೆಚ್ಚುತ್ತಿರುವುದಕ್ಕೆ ಕಾರಣ ಏನು? ವೈಜ್ಞಾನಿಕ ಅಂಕಿಅಂಶಗಳು ಬೇರೆಯೇ ಹೇಳುತ್ತಿವೆ. ಯಾವ ಜಿಲ್ಲೆಯಲ್ಲೂ ಶೇ60 ಕ್ಕಿಂತ ಹೆಚ್ಚು ಅರ್ಹರು ಇರಲು ಸಾಧ್ಯವಿಲ್ಲ. ಇದರಲ್ಲಿ ಸ್ವಲ್ಪ ಪ್ರಮಾಣದಲ್ಲಿ ವ್ಯತ್ಯಾಸ ಇರಬಹುದು. ಆದರೆ ಶೇ.80, ಶೇ.90 ಅಂತೆಲ್ಲಾ ಇದ್ದರೆ ಅದನ್ನು ಯಾವ ಮಾನದಂಡದಲ್ಲೂ ಒಪ್ಪಲು ಸಾಧ್ಯವಿಲ್ಲ.

ಇದರಿಂದ ದೊಡ್ಡ ಅನ್ಯಾಯ ಆಗುವುದು ನಿಜವಾದ ಅರ್ಹರಿಗೆ. ಅರ್ಹರಿಗೆ ಅನ್ಯಾಯ ಆಗುವುದನ್ನು ತಡೆಯಲು ನಕಲಿ, ಡೂಪ್ಲಿಕೇಟ್‌ ಮತ್ತು ಅನರ್ಹ ಕಾರ್ಡ್‌ಗಳನ್ನು ತಡೆಯಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಶಿಕ್ಷಕರು, ಸರ್ಕಾರಿ ನೌಕರರ ಬಳಿಯೂ ಬಿಪಿಎಲ್‌ ಪಡಿತರ ಚೀಟಿಗಳಿವೆ. ಇವರಲ್ಲಿ ಹಲವರು ಪಡಿತರ ಪಡೆಯುವುದಿಲ್ಲ. ಆದರೆ ಆಸ್ಪತ್ರೆಗಳಿಗೆ ಹೋಗಲು ಮತ್ತು ಇನ್ನಿತರೆ ಅಗತ್ಯಗಳಿಗೆ ಕಾರ್ಡ್‌ಗಳನ್ನು ಬಳಸುತ್ತಿದ್ದಾರೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ಸಭೆಗೆ ನೀಡಿದರು.

ಅರ್ಹರು ಯಾವುದೇ ಕಾರಣಕ್ಕೂ ತಪ್ಪಬಾರದು. ಅರ್ಹರಿಗೆ ಸವಲತ್ತು ತಪ್ಪಬಾರದು, ಸಮಸ್ಯೆ ಆಗಬಾರದು. ಆದರೆ ಅರ್ಹರಿಗೆ ಸಮಸ್ಯೆ ಆಗದಂತೆ ಅನರ್ಹ ಕಾರ್ಡ್‌ಗಳನ್ನು ರದ್ದಾಗುವ ದಿಕ್ಕಿನಲ್ಲಿ ಏನೇನು ಮಾಡಬಹುದು ಎನ್ನುವ ಬಗ್ಗೆ ಜಿಲ್ಲಾಧಿಕಾರಿಗಳಿಂದ ಉತ್ತರ ಕೇಳಿದರು.

ನಿಮ್ಮ ಪ್ರಾಯೋಗಿಕ ಅನುಭವದಲ್ಲಿ ಏನೇನು ಸಮಸ್ಯೆಗಳನ್ನು ಎದುರಿಸಿದ್ದೀರಿ, ಈ ಸಮಸ್ಯೆಗಳ ಪರಿಹಾರಕ್ಕೆ ಏನೇನು ಕ್ರಮ ಕೈಗೊಂಡಿದ್ದೀರಿ ಎಂದು ಸಿಎಂ ಪ್ರಶ್ನಿಸಿದರು.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!