ಹುಕ್ಕೇರಿ: 50 ವಯಸ್ಸು ಮೀರಿದರು ಮದುವೆ ಆಗಿಲ್ಲ ಎಂದು ಜುಗುಪ್ಪೆಗೊಂಡು ಅಣ್ಣ-ತಮ್ಮ ವಿಷ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ನಡೆದಿದೆ.
ಸಂತೋಷ ರವೀಂದ್ರ ಗುಂಡೆ (55 ವರ್ಷ), ಅಣ್ಣಾಸಾಹೇಬ ರವೀಂದ್ರ ಗುಂಡೆ (50 ವರ್ಷ) ಮೃತಪಟ್ಟ ದುರ್ದೈಗಳು.
ಮದುವೆ ಆಗಿರಲಿಲ್ಲ ಎನ್ನುವ ಕಾರಣಕ್ಕೆ ಮದ್ಯದ ಕುಡಿತದ ಚಟಕ್ಕೆ ಬಿದ್ದಿದ್ದರು. ಕುಡಿದ ನಶೆಯಲ್ಲಿ ವಿಷ ಸೇವಿಸಿ ಮೃತಪಟ್ಟಿದ್ದಾರೆ.
ಅಸ್ವಸ್ಥಗೊಂಡಿದ್ದ ಇಬ್ಬರನ್ನು ಮಹಾರಾಷ್ಟ್ರದ ಗಡಹಿಂಗ್ಲಜ್ ಪಟ್ಟಣದ ಆಸ್ಪತ್ರೆಗೆ ಚಿಕಿತ್ಸೆ ಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಈ ಕುರಿತು ಸಂಕೇಶ್ವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.