Hemavati Express Canal; MLA Dr. H.D. Ranganath says he is ready for a fierce fight

ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್; ಉಗ್ರ ಹೋರಾಟಕ್ಕೂ ಸಿದ್ಧವೆಂದ ಶಾಸಕ ಡಾ.ಎಚ್.ಡಿ.ರಂಗನಾಥ್

ಕುಣಿಗಲ್: “ಕುಣಿಗಲ್ ತಾಲೂಕು ಆರಂಭದಿಂದಲೂ ಹೇಮಾವತಿ ನೀರಿನ ತನ್ನ ಪಾಲು 3.01 ಟಿಎಂಸಿ ನೀರನ್ನು ಪಡೆಯಲು ವಂಚಿತವಾಗಿದ್ದು, ಈ ಪಾಲಿನ ನೀರು ಪಡೆಯಲು ಲಿಂಕ್ ಕೆನಾಲ್ ಯೋಜನೆ ಅನಿವಾರ್ಯ. ಇದಕ್ಕಾಗಿ ಉಗ್ರ ಹೋರಾಟಕ್ಕೂ ಸಿದ್ಧ” ಎಂದು ಶಾಸಕ ಡಾ.ಎಚ್.ಡಿ.ರಂಗನಾಥ್ (Dr.H.D.Ranganath) ತಿಳಿಸಿದ್ದಾರೆ.

“ವೈ.ಕೆ. ರಾಮಯ್ಯ ಅವರ ಹೋರಾಟದ ಫಲವಾಗಿ ತುಮಕೂರು ಜಿಲ್ಲೆಯು ಹೇಮಾವತಿ ನೀರಿನ ಶೇ.49 ರಷ್ಟು ಪಾಲನ್ನು ಪಡೆಯುತ್ತಿದೆ. ಹೇಮಾವತಿ ಹೋರಾಟದ ತವರು ಕುಣಿಗಲ್ ತಾಲೂಕು. ಕಾವೇರಿ ಜಲಾನಯನ ಪ್ರದೇಶಕ್ಕೆ ಒಳಪಟ್ಟ ಮೂಲ ಫಲಾನುಭವಿಗಳಾಗಿದ್ದರೂ ತಾಲೂಕು ತನ್ನ ಪಾಲಿನ ನೀರು ಪಡೆಯಲು ಸಾಧ್ಯವಾಗಿಲ್ಲ. ಕಳೆದ ಹತ್ತು ವರ್ಷಗಳಲ್ಲಿ ನಮಗೆ ಹರಿದಿರುವುದು ಕೇವಲ 300- 500 ಎಂಸಿಎಫ್ ನೀರು ಮಾತ್ರ. ಅಂದರೆ ಶೇ. 90 ನೀರು ನಮಗೆ ಬಂದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಅನ್ಯಾಯ ಸರಿಪಡಿಸಿ ಕುಣಿಗಲ್ ತಾಲ್ಲೂಕಿನ ಜನತೆಗೆ ತಮ್ಮ ಪಾಲಿನ ನೀರನ್ನು ಹರಿಸಲು 2018ರಲ್ಲಿ ಈ ಲಿಂಕ್ ಕೆನಾಲ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಯಿತು. ಹಲವಾರು ಕಾರಣಗಳಿಂದಾಗಿ ಕಾಮಗಾರಿಯು ವಿಳಂಭವಾಗಿತ್ತು. ಈ ಎಲ್ಲಾ ಅಡೆ-ತಡೆಗಳನ್ನು ಮೀರಿ ಕಾಮಗಾರಿಯು ಪ್ರಾರಂಭವಾಗಿ ಕುಣಿಗಲ್ ಜನತೆಯ ದಶಕಗಳ ಕನಸು ನನಸಾಗುವ ಹೊತ್ತಿನಲ್ಲಿ ಈ ಯೋಜನೆ ವಿರೋಧಿಸಿ ಹೋರಾಟಗಳು ನಡೆಯುತ್ತಿರುವುದು ವಿಷಾದನೀಯ ಸಂಗತಿ” ಎಂದು ಹೇಳಿದ್ದಾರೆ.

“ಕುಣಿಗಲ್ ತಾಲೂಕಿನ ಜನ ತನ್ನ ಪಾಲಿನ ನೀರು ಸಿಗದೇ ಇದ್ದರೂ, ಕಾವೇರಿ ಜಲಾನಯನ ಪ್ರದೇಶಕ್ಕೆ ಒಳಪಡದೇ ಇರುವ ಜಿಲ್ಲೆಯ ಕೆಲವು ತಾಲ್ಲೂಕುಗಳ ಭಾಗಗಳಿಗೆ ಕುಡಿಯುವ ನೀರಿಗಾಗಿ ಹೇಮಾವತಿ ನೀರನ್ನು ಹಂಚಿಕೆ ಮಾಡಿದಾಗಲೂ ಯಾವುದೇ ವಿರೋಧ ವ್ಯಕ್ತಪಡಿಸದೇ ಔದಾರ್ಯತೆ ತೋರಿ ಸೌಹಾರ್ದತೆ ಮೆರೆದಿದ್ದರು. ಆದರೆ ಇಂದು ನಮ್ಮ ಪಾಲಿನ ನೀರನ್ನು ಪಡೆಯಲು ಕೈಗೊಳ್ಳಲಾಗುತ್ತಿರುವ ಕಾಮಗಾರಿಗೆ ಅಡ್ಡಿಯುಂಟು ಮಾಡುತ್ತಿರುವುದು ಅತೀವ ನೋವಿನ ಸಂಗತಿಯಾಗಿದೆ” ಎಂದು ತಿಳಿಸಿದ್ದಾರೆ.

ಈ ಲಿಂಕ್ ಕೆನಾಲ್ ಪೈಪ್‌ಲೈನ್ ಕಾಮಗಾರಿಯನ್ನು ಕೇವಲ ಕುಣಿಗಲ್ ತಾಲ್ಲೂಕಿಗೆ ಹಂಚಿಕೆಯಾಗಿರುವ 388 ಕ್ಯೂಸೆಕ್ಸ್ ನೀರು ಮಾತ್ರ ಹರಿಸಲು ಸಾಧ್ಯವಾಗುವಂತೆ ಮಾತ್ರ ವಿನ್ಯಾಸಗೊಳಿಸಲಾಗಿದ್ದು, ಕುಣಿಗಲ್ ತಾಲ್ಲೂಕಿನ ಪಾಲಿನ ನೀರನ್ನು ಮಾತ್ರ ಕುಣಿಗಲ್ ತಾಲ್ಲೂಕಿಗೆ ಹರಿಸುವುದು ಲಿಂಕ್ ಕೆನಾಲ್ ಕಾಮಗಾರಿಯ ಏಕೈಕ ಉದ್ದೇಶವ. ಇದರಿಂದ ಜಿಲ್ಲೆಯ ಇತರೇ ತಾಲ್ಲೂಕುಗಳ ಪಾಲಿನ ನೀರಿಗೆ ಯಾವುದೇ ದಕ್ಕೆಯಾಗುವುದಿಲ್ಲ. ಇದೇ ವಿಚಾರವಾಗಿ ಅಧ್ಯಯನಕ್ಕಾಗಿ ಸರ್ಕಾರ ರಚಿಸಿದ್ದ ತಜ್ಞರ ಸಮಿತಿಯು ಸಹ ಈ ಯೋಜನೆ ಅಗತ್ಯತೆ ಹಾಗೂ ಇತರೆ ತಾಲೂಕಿನ ನೀರಿಗೆ ಧಕ್ಕೆಯಾಗುವುದಿಲ್ಲ ಎಂದು ಅಭಿಪ್ರಾಯ ಪಟ್ಟಿತ್ತು” ಎಂದಿದ್ದಾರೆ.

“ಕೆಲವು ಪಟ್ಟಭದ್ರರು ತಮ್ಮ ರಾಜಕೀಯ ಸ್ವಹಿತಾಸಕ್ತಿಗಳಿಗೆ ಯೋಜನೆ ಬಗ್ಗೆ ಅಪಪ್ರಚಾರ ಮಾಡುತ್ತಾ, ಜಿಲ್ಲೆಯ ಜನತೆಯ ಮಧ್ಯೆ ದ್ವೇಷದ ಬೀಜ ಬಿತ್ತಲು ಮುಂದಾಗಿದ್ದಾರೆ. ಜಿಲ್ಲೆಯ ರೈತ ಬಾಂಧವರು ಮತ್ತು ಸಂಘ-ಸಂಸ್ಥೆಗಳು ಇಂತಹ ರಾಜಕೀಯ ಸ್ವಹಿತಾಸಕ್ತಿಯ ಅಪಪ್ರಚಾರಗಳಿಗೆ ಕಿವಿಗೊಡದೇ ಕುಣಿಗಲ್ ತಾಲ್ಲೂಕಿನ ಜನತೆಗೆ ತಮ್ಮ ಪಾಲಿನ ನೀರನ್ನು ಪಡೆಯಲು ಕೈಗೊಂಡಿರುವ ಲಿಂಕ್ ಕೆನಾಲ್ ಕಾಮಗಾರಿಗೆ ಅಡ್ಡಿಪಡಿಸದೇ ಸಹಕರಿಸಬೇಕು” ಎಂದು ಮನವಿ ಮಾಡಿದ್ದಾರೆ.

“ಈ ಯೋಜನೆ ಜಾರಿಗೆ ಸರಿಯಾಗಿ ಸಹಕಾರ ಸಿಗದಿದ್ದರೆ, ಜಿಲ್ಲೆಯ ಮಗನಾಗಿ ಕುಣಿಗಲ್ ತಾಲೂಕಿನ ಜನತೆ ಪರವಾಗಿ ಉಗ್ರ ಹೋರಾಟ ಮಾಡಲು ಸಿದ್ಧನಿದ್ದೇನೆ” ಎಂದು ಮಾಧ್ಯಮ ಪ್ರಕಟಣೆ ಮೂಲಕ ಸಂದೇಶ ರವಾನಿಸಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ: BEO ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ ನೀಡಿದ ಕರವೇ ರಾಜಘಟ್ಟರವಿ

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ: BEO ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ

ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ 132 ಮಂದಿ ಶಿಕ್ಷಕರ (Teacher) ಹುದ್ದೆ ಖಾಲಿಯಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮೇಲೆ ತೀವ್ರತರವಾದ ಆತಂಕ.

[ccc_my_favorite_select_button post_id="110310"]
ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಆದ್ಯತೆ; ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="110133"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್ ಪಿ

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ಇನೋವಾ ಕಾರು ಅಪಘಾತ.. ಮೃತರ ಸಂಖ್ಯೆ 6ಕ್ಕೆ ಏರಿಕೆ..!

ದೊಡ್ಡಬಳ್ಳಾಪುರ: ಇನೋವಾ ಕಾರು ಅಪಘಾತ.. ಮೃತರ ಸಂಖ್ಯೆ 6ಕ್ಕೆ ಏರಿಕೆ..!

ಹಿಂದೂಪುರ - ಯಲಹಂಕ ನಡುವಣ ರಾಜ್ಯ ಹೆದ್ದಾರಿ ಮಾಕಳಿ ಬಳಿಯ ಮೇಲಿನ ನಾಯಕರಂಡಹಳ್ಳಿ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ (Accident) ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

[ccc_my_favorite_select_button post_id="110338"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!