ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್; ಉಗ್ರ ಹೋರಾಟಕ್ಕೂ ಸಿದ್ಧವೆಂದ ಶಾಸಕ ಡಾ.ಎಚ್.ಡಿ.ರಂಗನಾಥ್

Hemavati Express Canal; MLA Dr. H.D. Ranganath says he is ready for a fierce fight

ಕುಣಿಗಲ್: “ಕುಣಿಗಲ್ ತಾಲೂಕು ಆರಂಭದಿಂದಲೂ ಹೇಮಾವತಿ ನೀರಿನ ತನ್ನ ಪಾಲು 3.01 ಟಿಎಂಸಿ ನೀರನ್ನು ಪಡೆಯಲು ವಂಚಿತವಾಗಿದ್ದು, ಈ ಪಾಲಿನ ನೀರು ಪಡೆಯಲು ಲಿಂಕ್ ಕೆನಾಲ್ ಯೋಜನೆ ಅನಿವಾರ್ಯ. ಇದಕ್ಕಾಗಿ ಉಗ್ರ ಹೋರಾಟಕ್ಕೂ ಸಿದ್ಧ” ಎಂದು ಶಾಸಕ ಡಾ.ಎಚ್.ಡಿ.ರಂಗನಾಥ್ (Dr.H.D.Ranganath) ತಿಳಿಸಿದ್ದಾರೆ.

“ವೈ.ಕೆ. ರಾಮಯ್ಯ ಅವರ ಹೋರಾಟದ ಫಲವಾಗಿ ತುಮಕೂರು ಜಿಲ್ಲೆಯು ಹೇಮಾವತಿ ನೀರಿನ ಶೇ.49 ರಷ್ಟು ಪಾಲನ್ನು ಪಡೆಯುತ್ತಿದೆ. ಹೇಮಾವತಿ ಹೋರಾಟದ ತವರು ಕುಣಿಗಲ್ ತಾಲೂಕು. ಕಾವೇರಿ ಜಲಾನಯನ ಪ್ರದೇಶಕ್ಕೆ ಒಳಪಟ್ಟ ಮೂಲ ಫಲಾನುಭವಿಗಳಾಗಿದ್ದರೂ ತಾಲೂಕು ತನ್ನ ಪಾಲಿನ ನೀರು ಪಡೆಯಲು ಸಾಧ್ಯವಾಗಿಲ್ಲ. ಕಳೆದ ಹತ್ತು ವರ್ಷಗಳಲ್ಲಿ ನಮಗೆ ಹರಿದಿರುವುದು ಕೇವಲ 300- 500 ಎಂಸಿಎಫ್ ನೀರು ಮಾತ್ರ. ಅಂದರೆ ಶೇ. 90 ನೀರು ನಮಗೆ ಬಂದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಅನ್ಯಾಯ ಸರಿಪಡಿಸಿ ಕುಣಿಗಲ್ ತಾಲ್ಲೂಕಿನ ಜನತೆಗೆ ತಮ್ಮ ಪಾಲಿನ ನೀರನ್ನು ಹರಿಸಲು 2018ರಲ್ಲಿ ಈ ಲಿಂಕ್ ಕೆನಾಲ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಯಿತು. ಹಲವಾರು ಕಾರಣಗಳಿಂದಾಗಿ ಕಾಮಗಾರಿಯು ವಿಳಂಭವಾಗಿತ್ತು. ಈ ಎಲ್ಲಾ ಅಡೆ-ತಡೆಗಳನ್ನು ಮೀರಿ ಕಾಮಗಾರಿಯು ಪ್ರಾರಂಭವಾಗಿ ಕುಣಿಗಲ್ ಜನತೆಯ ದಶಕಗಳ ಕನಸು ನನಸಾಗುವ ಹೊತ್ತಿನಲ್ಲಿ ಈ ಯೋಜನೆ ವಿರೋಧಿಸಿ ಹೋರಾಟಗಳು ನಡೆಯುತ್ತಿರುವುದು ವಿಷಾದನೀಯ ಸಂಗತಿ” ಎಂದು ಹೇಳಿದ್ದಾರೆ.

“ಕುಣಿಗಲ್ ತಾಲೂಕಿನ ಜನ ತನ್ನ ಪಾಲಿನ ನೀರು ಸಿಗದೇ ಇದ್ದರೂ, ಕಾವೇರಿ ಜಲಾನಯನ ಪ್ರದೇಶಕ್ಕೆ ಒಳಪಡದೇ ಇರುವ ಜಿಲ್ಲೆಯ ಕೆಲವು ತಾಲ್ಲೂಕುಗಳ ಭಾಗಗಳಿಗೆ ಕುಡಿಯುವ ನೀರಿಗಾಗಿ ಹೇಮಾವತಿ ನೀರನ್ನು ಹಂಚಿಕೆ ಮಾಡಿದಾಗಲೂ ಯಾವುದೇ ವಿರೋಧ ವ್ಯಕ್ತಪಡಿಸದೇ ಔದಾರ್ಯತೆ ತೋರಿ ಸೌಹಾರ್ದತೆ ಮೆರೆದಿದ್ದರು. ಆದರೆ ಇಂದು ನಮ್ಮ ಪಾಲಿನ ನೀರನ್ನು ಪಡೆಯಲು ಕೈಗೊಳ್ಳಲಾಗುತ್ತಿರುವ ಕಾಮಗಾರಿಗೆ ಅಡ್ಡಿಯುಂಟು ಮಾಡುತ್ತಿರುವುದು ಅತೀವ ನೋವಿನ ಸಂಗತಿಯಾಗಿದೆ” ಎಂದು ತಿಳಿಸಿದ್ದಾರೆ.

ಈ ಲಿಂಕ್ ಕೆನಾಲ್ ಪೈಪ್‌ಲೈನ್ ಕಾಮಗಾರಿಯನ್ನು ಕೇವಲ ಕುಣಿಗಲ್ ತಾಲ್ಲೂಕಿಗೆ ಹಂಚಿಕೆಯಾಗಿರುವ 388 ಕ್ಯೂಸೆಕ್ಸ್ ನೀರು ಮಾತ್ರ ಹರಿಸಲು ಸಾಧ್ಯವಾಗುವಂತೆ ಮಾತ್ರ ವಿನ್ಯಾಸಗೊಳಿಸಲಾಗಿದ್ದು, ಕುಣಿಗಲ್ ತಾಲ್ಲೂಕಿನ ಪಾಲಿನ ನೀರನ್ನು ಮಾತ್ರ ಕುಣಿಗಲ್ ತಾಲ್ಲೂಕಿಗೆ ಹರಿಸುವುದು ಲಿಂಕ್ ಕೆನಾಲ್ ಕಾಮಗಾರಿಯ ಏಕೈಕ ಉದ್ದೇಶವ. ಇದರಿಂದ ಜಿಲ್ಲೆಯ ಇತರೇ ತಾಲ್ಲೂಕುಗಳ ಪಾಲಿನ ನೀರಿಗೆ ಯಾವುದೇ ದಕ್ಕೆಯಾಗುವುದಿಲ್ಲ. ಇದೇ ವಿಚಾರವಾಗಿ ಅಧ್ಯಯನಕ್ಕಾಗಿ ಸರ್ಕಾರ ರಚಿಸಿದ್ದ ತಜ್ಞರ ಸಮಿತಿಯು ಸಹ ಈ ಯೋಜನೆ ಅಗತ್ಯತೆ ಹಾಗೂ ಇತರೆ ತಾಲೂಕಿನ ನೀರಿಗೆ ಧಕ್ಕೆಯಾಗುವುದಿಲ್ಲ ಎಂದು ಅಭಿಪ್ರಾಯ ಪಟ್ಟಿತ್ತು” ಎಂದಿದ್ದಾರೆ.

“ಕೆಲವು ಪಟ್ಟಭದ್ರರು ತಮ್ಮ ರಾಜಕೀಯ ಸ್ವಹಿತಾಸಕ್ತಿಗಳಿಗೆ ಯೋಜನೆ ಬಗ್ಗೆ ಅಪಪ್ರಚಾರ ಮಾಡುತ್ತಾ, ಜಿಲ್ಲೆಯ ಜನತೆಯ ಮಧ್ಯೆ ದ್ವೇಷದ ಬೀಜ ಬಿತ್ತಲು ಮುಂದಾಗಿದ್ದಾರೆ. ಜಿಲ್ಲೆಯ ರೈತ ಬಾಂಧವರು ಮತ್ತು ಸಂಘ-ಸಂಸ್ಥೆಗಳು ಇಂತಹ ರಾಜಕೀಯ ಸ್ವಹಿತಾಸಕ್ತಿಯ ಅಪಪ್ರಚಾರಗಳಿಗೆ ಕಿವಿಗೊಡದೇ ಕುಣಿಗಲ್ ತಾಲ್ಲೂಕಿನ ಜನತೆಗೆ ತಮ್ಮ ಪಾಲಿನ ನೀರನ್ನು ಪಡೆಯಲು ಕೈಗೊಂಡಿರುವ ಲಿಂಕ್ ಕೆನಾಲ್ ಕಾಮಗಾರಿಗೆ ಅಡ್ಡಿಪಡಿಸದೇ ಸಹಕರಿಸಬೇಕು” ಎಂದು ಮನವಿ ಮಾಡಿದ್ದಾರೆ.

“ಈ ಯೋಜನೆ ಜಾರಿಗೆ ಸರಿಯಾಗಿ ಸಹಕಾರ ಸಿಗದಿದ್ದರೆ, ಜಿಲ್ಲೆಯ ಮಗನಾಗಿ ಕುಣಿಗಲ್ ತಾಲೂಕಿನ ಜನತೆ ಪರವಾಗಿ ಉಗ್ರ ಹೋರಾಟ ಮಾಡಲು ಸಿದ್ಧನಿದ್ದೇನೆ” ಎಂದು ಮಾಧ್ಯಮ ಪ್ರಕಟಣೆ ಮೂಲಕ ಸಂದೇಶ ರವಾನಿಸಿದ್ದಾರೆ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]