The poet Dr. H.S. Venkateshamurthy gave the best lyrics to Kannada Sugama Sangeet.

ಕನ್ನಡ ಸುಗಮ ಸಂಗೀತಕ್ಕೆ ಅತ್ಯುತ್ತಮ ಭಾವಗೀತೆಗಳನ್ನು ನೀಡಿದವರು ಕವಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ

ದೊಡ್ಡಬಳ್ಳಾಪುರ: ಕನ್ನಡ ಸುಗಮಸಂಗೀತಕ್ಕೆ ಅತ್ಯುತ್ತಮ ಭಾವಗೀತೆಗಳನ್ನು ನೀಡಿದವರು ಕವಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ ( Dr. H.S.Venkateshamurthy) ಆಗಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ (Prof. KR Ravikiran) ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ  ಹಿರಿಯ ಕವಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ ಅವರಿಗೆ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

ಕನ್ನಡ ಸಾಹಿತಿಗಳಯಾವ ಪಂಥಕ್ಕೂ ಸೇರದ ಡಾ.ಎಚ್.ಎಸ್.ವೆಂಕಟೇಶಮೂರ್ತಿ ತಮ್ಮ ಸೃಜನಶೀಲತೆಯನ್ನು ನಿರಂತರವಾಗಿ ಉಳಿಸಿಕೊಂಡು ಬಂದವರು. ಕಾವ್ಯ, ನಾಟಕ, ವಿಮರ್ಶೆ, ಕಥೆ, ಕಾದಂಬರಿ, ಮಕ್ಕಳ ಸಾಹಿತ್ಯ ಮುಂತಾದ ಹಲವು ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡುವ‌‌ ಮೂಲಕ‌ ಕನ್ನಡ ಸಾಹಿತ್ಯಕ್ಕೆ ಉತ್ತಮ‌ ಕೊಡುಗೆ ನೀಡಿದರು ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಕೋಶಾಧ್ಯಕ್ಷ ನಂ.ಮಹಾದೇವ ಮಾತನಾಡಿ, ಡಾ.ಎಚ್.ಎಸ್.ವೆಂಕಟೇಶ ಮೂರ್ತಿಯವರ ಬುದ್ಧಚರಣ ಮಹಾಕಾವ್ಯ ಗಮಕವಾಚನ ಮತ್ತು ಗೀತಗಾಯನದ ಮೂಲಕ‌ ಸಹೃದಯರಿಗೆ ಸುಲಭವಾಗಿ ಅರ್ಥವಾಗುತ್ತದೆ. ಮಹಾಕಾವ್ಯ ಪರಂಪರೆಯನ್ನು ಮುಂದುವರಿಸಿದ ಕವಿ ಎಲ್ಲಾ ವಯೋಮಾನದ ಓದುಗರಿಗೂ ಪ್ರೀತಿ ಪಾತ್ರರಾಗಿದ್ದರು ಎಂದರು.

ಜವಾಹರ್ ನವೋದಯ ವಿದ್ಯಾಲಯದ  ನಿವೃತ್ತ  ಅಧ್ಯಾಪಕ ವಿ.ಎಸ್.ಹೆಗಡೆ ಮಾತನಾಡಿ, ಡಾ.ಎಚ್.ಎಸ್.ವೆಂಕಟೇಶಮೂರ್ತಿ ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಮಾತ್ರವಲ್ಲದೆ ಸುಗಮಸಂಗೀತ, ಕಿರುತೆರೆ, ಸಿನಿಮಾ ಕ್ಷೇತ್ರದಲ್ಲೂ ಗಣನೀಯ ಸಾಧನೆ ಮಾಡಿದ್ದಾರೆ. ಐದು ಬೆರಳು ಕೂಡಿ ಒಂದು ಮುಷ್ಟಿಯು ಹಲವು ಮಂದಿ ಸೇರಿ ಈ ಸಮಷ್ಟಿಯು ಬೇರೆ ಬೇರೆ ಒಕ್ಕಲು ಒಂದೆ ತಾಯ ಮಕ್ಕಳು” ಎಂದು ಬರೆದ ಈ ಹಾಡು ರಾಷ್ಟ್ರೀಯ ಭಾವನೆಗಳನ್ನು ತೋರಿಸುತ್ತದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ಮಾತನಾಡಿ, ಗಾಯಕ ಸಿ.ಅಶ್ವಥ್ ಮತ್ತು ಕವಿ ಎಚ್.ಎಸ್.ವೆಂಕಟೇಶಮೂರ್ತಿ ಜೋಡಿ ಕನ್ನಡ ಭಾವಗೀತೆ ಮೂಲಕ   ಜನಪ್ರಿಯರಾದವರು. ಚಲನಚಿತ್ರ ಮತ್ತು ರಂಗಭೂಮಿಯೊಡನೆ ನಿರಂತರ ಸಂಪರ್ಕ ಹೊಂದಿದ್ದ ಅವರು ಚಲನಚಿತ್ರಗಳಿಗೆ ರಚಿಸಿದ ಹಾಡುಗಳು, ಸಂಭಾಷಣೆ. ದೂರದರ್ಶನ ಧಾರಾವಾಹಿಗಳಿಗೆ ಶೀರ್ಷಿಕೆ ಗೀತೆ. ಭಾವಗೀತೆಗಳ ಧ್ವನಿ ಸುರಳಿಗಳಿಗೆ  ರಚಿಸಿದ ಹಾಡುಗಳು ಕನ್ನಡಿಗರ ಮನಗೆದ್ದಿವೆ ಎಂದರು.

ಕಾರ್ಯಕ್ರಮದಲ್ಲಿ  ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಸೂರ್ಯ ಪದವಿಪೂರ್ವ ಕಾಲೇಜು ಪ್ರಾಚಾರ್ಯ  ಎಂ.ಸಿ.ಮಂಜುನಾಥ್,  ಡಾ.ಬಿ.ಆರ್.ಅಂಬೇಡ್ಕರ್  ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಅಣ್ಣಯ್ಯ.

ಜ್ಞಾನಗಂಗಾ ಪ್ರೌಢಶಾಲೆ ಶಿಕ್ಷಕ ಕೋದಂಡರಾಮ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಕೋಶಾಧ್ಯಕ್ಷ  ಸಾ.ಲ.ಕಮಲನಾಥ್, ಸಾಸಲು ಹೋಬಳಿ ಘಟಕ ಅಧ್ಯಕ್ಷ ಜಿ.ಎಂ.ನಾಗರಾಜು ಕಸಬಾ ಹೋಬಳಿ ಘಟಕದ ಅಧ್ಯಕ್ಷ ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ನಾಗರತ್ನಮ್ಮ, ಷಫೀರ್, ಕಲಾವಿದ ಬಾಶೆಟ್ಟಿಹಳ್ಳಿ ಮಂಜುನಾಥ್ ಮುಂತಾದವರು ಭಾಗವಹಿಸಿದ್ದರು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!