ಚನ್ನಮ್ಮನ ಕಿತ್ತೂರು (ಬೆಳಗಾವಿ): ಕಾರ್ಮಿಕರು ಪ್ರಯಾಣಿಸುತ್ತಿದ್ದ ಟಿಪ್ಪರ್‌ಗೆ ಹಿಂಬದಿಯಿಂದ ಆಯಿಲ್ ಟ್ಯಾಂಕರ್ ಡಿಕ್ಕಿಹೊಡೆದ (Accident) ಪರಿಣಾಮ ಟ್ಯಾಂಕರ್ ಚಕ್ರದಡಿ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಭಾನುವಾರ ಬೆಳಗಾವಿ ಜಿಲ್ಲೆಯ ಚನ್ನಮನ ಕಿತ್ತೂರು ತಾಲೂಕಿನ ಇಟಗಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಹೆದ್ದಾರಿಯಲ್ಲಿ ನಡೆದಿದೆ.
ಕಲಬುರಗಿ ಮೂಲದ ಕಾರ್ಮಿಕರಾದ ರಾಮಚಂದ್ರ ಜಾಧವ, ಮಹೇಶ ಜಾಧವ ಮತ್ತು ರಾಮಣ್ಣಮುಕ್ಕಿಂದ್ರಪ್ಪಮೃತರು.
ಗಂಭೀರ ಗಾಯಗೊಂಡಿರುವ ಕಾರ್ಮಿಕರನ್ನು ಬೆಳಗಾವಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆದ್ದಾರಿ ಸ್ವಚ್ಛತೆ ಮುಗಿಸಿ ಟಿಪ್ಪರ್ ವಾಹನದಲ್ಲಿ ಹಿರೇಬಾಗೇವಾಡಿ ಟೋಲ್ ಕಡೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ವೇಳೆ ಹಿಂದಿನಿಂದ ಬಂದ ಆಯಿಲ್ ಸಾಗಿಸುವ ಟ್ಯಾಂಕರ್‌ಕಾರ್ಮಿಕರಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದೆ.
ಮೂವರು ಕಾರ್ಮಿಕರು ರಸ್ತೆಗೆ ಬಿದ್ದು ಟ್ಯಾಂಕರ್‌ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾರೆ. ಉಳಿದ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.