ದೊಡ್ಡಬಳ್ಳಾಪುರ: ತಾಲೂಕಿನ ಸ್ವಾತಂತ್ರ್ಯ ಹೋರಾಟಗಾರ ಕರಿಕಲ್ಲಹಳ್ಳಿ ಕೆಸಿ ನಾರಾಯಣಪ್ಪ (KC Narayanappa) ಅವರು ನಿಧನರಾಗಿದ್ದಾರೆ. ಅವರಿಗೆ 96 ವರ್ಷ ವಯಸ್ಸಾಗಿತ್ತು.
ಬೆಂಗಳೂರಿನ ವಿನಾಯಕ ಲೇಔಟ್ ನಲ್ಲಿರುವ ಪುತ್ರನ ಮನೆಯಲ್ಲಿ ಕೆಸಿ ನಾರಾಯಣಪ್ಪ ಅವರು ಇಂದು ಬೆಳಗ್ಗೆ ಇಹಲೋಕವನ್ನು ತ್ಯಜಿಸಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ಮೃತರು ಇಬ್ಬರು ಗಂಡು ಮಕ್ಕಳು, ಮೂವರು ಹೆಣ್ಣುಮಕ್ಕಳ ತುಂಬು ಕುಟುಂಬವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಬುಧವಾರ ಬೆಳಗ್ಗೆ 11.30ಕ್ಕೆ ದೊಡ್ಡಬಳ್ಳಾಪುರ ತಾಲೂಕು ಸಾಸಲು ಹೋಬಳಿಯ ಕರಿಕಲ್ಲಹಳ್ಳಿ ಗ್ರಾಮದ ಸ್ವಂತ ಜಮೀನಿನಲ್ಲಿ ನಡೆಯಲಿದೆ ಎಂದು ಅವರ ಪುತ್ರ ಡಾ.ಕೆಎನ್ ವೆಂಕಟೇಶ್ ಹರಿತಲೇಖನಿಗೆ ತಿಳಿಸಿದ್ದಾರೆ.
ಕೆಸಿ ನಾರಾಯಣಪ್ಪ ಅವರು ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು, ಈ ಹಿನ್ನೆಲೆಯಲ್ಲಿ ಸ್ವಾತಂತ್ರ್ಯನಂತರ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮಲ್ಲಿ ಸನ್ಮಾನಿಸಲಾಗಿತ್ತು.
ಇತ್ತಿಚೆಗಷ್ಟೇ ರಾಜ್ಯ ಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು, ಕೆಸಿ ನಾರಾಯಣಪ್ಪ ಅವರ ಸ್ವಗೃಹಕ್ಕೆ ಭೇಟಿ ನೀಡಿ ಸನ್ಮಾನಿಸಿದ್ದರು.

ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯಲ್ಲಿ ಕೆಸಿ ನಾರಾಯಣಪ್ಪ ಅವರಿಗೆ, ರಾಷ್ಟ್ರ, ರಾಜ್ಯ ಮಟ್ಟದ ಅನೇಕ ಪುರಸ್ಕಾರಗಳು ಸಂದಿವೆ.
ಅಂದಿನ ಪ್ರಧಾನಿ ಜವಹಾರ ಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ನಿಕಟ ಸಂಪರ್ಕವನ್ನು ಕೆಸಿ ನಾರಾಯಣಪ್ಪ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದರು.