ದೇವನಹಳ್ಳಿ; ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶದಲ್ಲಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಆವರಣದಲ್ಲಿ ನಡೆಯುತ್ತಿರುವ ಕೆಂಪೇಗೌಡ ತೀಮ್ ಪಾರ್ಕ್ (Kempegowda Theme Park) ಕಾಮಗಾರಿಯನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ (Krishna Byre Gowda) ಅವರು ಪರಿಶೀಲನೆ ನಡೆಸಿದರು.
ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಸುತ್ತಲೂ 20 ಕೋಟಿ ವೆಚ್ಚದಲ್ಲಿ ಥೀಮ್ ಪಾರ್ಕ್ ನಿರ್ಮಾಣಗೊಳ್ಳುತ್ತಿದ್ದು, ಅಧಿಕಾರಿಗಳಿಂದ ಥೀಮ್ ಪಾರ್ಕ್ ನಿರ್ಮಾಣದ ಇಂಚಿಂಚು ಮಾಹಿತಿ ಪಡೆದರು.

ಕಾಮಗಾರಿಯು ಗುಣಮಟ್ಟ ಕಾಪಾಡಿಕೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಕಂದಾಯ ಸಚಿವರು ಮುಂದಿನ ನಾಲ್ಕು ತಿಂಗಳಲ್ಲಿ ಥೀಮ್ ಪಾರ್ಕ್ ಕಾಮಗಾರಿ ಪೂರ್ಣಗೊಳ್ಳುವ ಭರವಸೆ ಇದೆ ಎಂದರು.
ಕಾಮಗಾರಿ ವೀಕ್ಷಣೆ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಉಷಾರಾಣಿ, ಪಂಚಾಯತ್ ರಾಜ್ ಇಲಾಖೆಯ ಜಿಲ್ಲಾ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರಶೇಖರ್, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.