ಬೆಂ.ಗ್ರಾಂ.ಜಿಲ್ಲೆ: ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ಸಿ.ನಾರಾಯಣಪ್ಪ (K.C.Narayanappa) ಸೋಮವಾರ ನಿಧನರಾಗಿದ್ದು, ಅವರ ಪಾರ್ಥಿವ ಶರೀರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಅಂತಿಮ ನಮನವನ್ನು ಸಲ್ಲಿಸಿ, ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಕಾರಿ ಎ.ಬಿ ಬಸವರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಡಿವೈಎಸ್ಪಿ ರವಿ ಹಾಗೂ ಸ್ಥಳೀಯರಿದ್ದರು.
ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಕೆ.ಸಿ.ನಾರಾಯಣಪ್ಪ ಅವರ ಅಂತ್ಯಕ್ರಿಯೆ ಅವರ ಸ್ವಂತ ಜಮೀನಿನಲ್ಲಿ ನಡೆಸಲಾಯಿತು.