Zilla Panchayat, Taluk Panchayat election tour: B.Y. Vijayendra

ಕಾಲ್ತುಳಿತ ಪ್ರಕರಣ: ಹೈಕೋರ್ಟ್ ಜಡ್ಜ್ ತನಿಖೆ, ರೂ.50 ಲಕ್ಷ ಪರಿಹಾರಕೊಡಲು ವಿಜಯೇಂದ್ರ ಆಗ್ರಹ

ಬೆಂಗಳೂರು: ಆರ್‍‌ಸಿಬಿ (RCB) ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಕುರಿತು ಕಾರ್ಯನಿರತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು, ಮೃತರಿಗೆ ಕನಿಷ್ಠ 50 ಲಕ್ಷ ಪರಿಹಾರ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ಆಗ್ರಹಿಸಿದ್ದಾರೆ.

ವಿಧಾನಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿ ಸಂಖ್ಯೆ 101ರಲ್ಲಿ ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿದರು.

ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ರಾಜೀನಾಮೆ ಕೊಡುವ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ವಿಶ್ಲೇಷಿಸಿದರು.

ತೆಲಂಗಾಣದಲ್ಲಿ ಈಚೆಗೆ ಅಲ್ಲು ಅರ್ಜುನ್ ಅವರ ಸಿನಿಮಾ ಬಿಡುಗಡೆ ವೇಳೆ ತುಳಿತಕ್ಕೆ ಒಳಗಾಗಿ ಸಾವು ನೋವಾಗಿತ್ತು. ಅಲ್ಲಿ ಕೂಡ ಕಾಂಗ್ರೆಸ್ ಸರಕಾರ ಇತ್ತು. ಅಲ್ಲು ಅರ್ಜುನ್ ಅವರನ್ನು ಬಂಧಿಸಲಿಲ್ಲವೇ ಎಂದು ಕೇಳಿದರು.

ನಿನ್ನೆಯ ದುರ್ಘಟನೆಗೆ ರಾಜ್ಯ ಸರಕಾರವೇ ಸಂಪೂರ್ಣ ಹೊಣೆ ಹೊರಬೇಕು ಎಂದು ಒತ್ತಾಯಿಸಿದರು. ಲಂಡನ್‍ನಲ್ಲೋ, ದುಬೈನಲ್ಲೋ ಇರುವ ಆರ್‍ಸಿಬಿ ಮಾಲೀಕರು ಕೂಡ ಇದಕ್ಕೆ ಪರಿಹಾರ ಕೊಡಬೇಕೆಂದು ಒತ್ತಾಯಿಸಿದರು.

ಕೇರಳದಲ್ಲಿ ಆನೆ ತುಳಿತದಿಂದ ಸಾವಾದರೆ ಆನೆ ಕರ್ನಾಟಕದ್ದು ಎಂದು 25 ಲಕ್ಷ ಪರಿಹಾರ ಘೋಷಿಸಿದ್ದರು ಎಂದು ಗಮನ ಸೆಳೆದರು.

ಒಬ್ಬ ಮ್ಯಾಜಿಸ್ಟ್ರೇಟ್ ರಿಂದ ತನಿಖೆ ನಡೆದರೆ ಅಪರಾಧಿ ಸ್ಥಾನದಲ್ಲಿ ಇರುವ ಮುಖ್ಯಮಂತ್ರಿಗಳು, ಮಂತ್ರಿಮಂಡಲದ ಸದಸ್ಯರನ್ನು ತನಿಖೆ ಮಾಡಲಾಗದು ಎಂದು ನುಡಿದರು. ಮುಖ್ಯಮಂತ್ರಿಗಳು ಒಬ್ಬ ಮ್ಯಾಜಿಸ್ಟ್ರೇಟ್ ರಿಂದ ತನಿಖೆಗೆ ಆದೇಶಿಸಿದ್ದಾರೆ. ಅದರ ಅರ್ಥ ಏನು ಎಂದು ಕೇಳಿದರು. ವೈಫಲ್ಯಕ್ಕೆ ಹೊಣೆ ಹೊರಲು ಸರಕಾರ ಸಿದ್ಧವಿಲ್ಲ. ಇವರಿಗೆ ಜನಪರ ಕಾಳಜಿ ಬದಲು ಪ್ರಚಾರದ ಹುಚ್ಚೇ ಪ್ರಮುಖವೆನಿಸಿದೆ ಎಂದು ಟೀಕಿಸಿದರು.

ಆರ್‍ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ 13 ವರ್ಷದ ಬಾಲಕನೂ ಸೇರಿ 11 ಜನರು ಮೃತಪಟ್ಟಿದ್ದಾರೆ. ರಾಜ್ಯ ಸರಕಾರವು ಇಷ್ಟೊಂದು ಆತುರಾತುರವಾಗಿ ಈ ಸಂಭ್ರಮಾಚರಣೆಯನ್ನು ಯಾಕೆ ಆಯೋಜಿಸಿತ್ತು? ಬೇರೆ ಯಾರಾದರೂ ಆಯೋಜಿಸಿದ್ದರೆ ಸರಕಾರ ಅನುಮತಿ ಕೊಟ್ಟದ್ದೇಕೆ? ಪೂರ್ವತಯಾರಿ ಇಲ್ಲದೇ ನಿನ್ನೆಯೇ ಸಂಭ್ರಮಾಚರಣೆಗೆ ಅವಕಾಶ ಮಾಡಿಕೊಟ್ಟಿದ್ದೇಕೆ ಎಂದು ಕೇಳಿದರು.

ಅಮಾನವೀಯ ನಡೆ ಖಂಡನಾರ್ಹ

ಸಾವಿನ ಸಂಖ್ಯೆ ಐದಾರರ ಕುರಿತ ಮಾಹಿತಿ ಟಿ.ವಿಗಳಲ್ಲಿ ಬರುತ್ತಿದ್ದರೂ ಉಪ ಮುಖ್ಯಮಂತ್ರಿಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಪ್ ಮುತ್ತಿಕ್ಕಿದ್ದರು. ವಿಧಾನಸೌಧದಲ್ಲಿ ಆಡಳಿತ ಪಕ್ಷದವರ ಸೆಲ್ಫಿಗಳ ಭರಾಟೆ ಮುಂದುವರೆದಿತ್ತು. ರಾಜ್ಯ ಸರಕಾರದ ಇಷ್ಟೊಂದು ಅಮಾನವೀಯ ನಡವಳಿಕೆ ಖಂಡನಾರ್ಹ ಎಂದು ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಿಗೆ ವಿಧಾನಸೌಧದ ಮುಂದೆ ಸಂಭ್ರಮಾಚರಣೆ ಮಾಡುವ ಅಗತ್ಯ ಏನಿತ್ತು? ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ಇರುವಾಗ ವಿಧಾನಸೌಧದ ಮುಂದೆ ಕಾರ್ಯಕ್ರಮ ಆಯೋಜಿಸಲು ಡಿಸಿಎಂ ತೀರ್ಮಾನಿಸಿದರೇ? ಮುಖ್ಯಮಂತ್ರಿ ತಿಳಿಸಿದರೇ? ಯಾವಾಗ ಇದು ತೀರ್ಮಾನ ಆಗಿದೆ? ಎಂದು ಸ್ಪಷ್ಟಪಡಿಸಲು ಆಗ್ರಹಿಸಿದರು.

ದುರ್ಘಟನೆಯ ಬಳಿಕ ಆರ್‍ಸಿಬಿ ಟೀಂ ವಿಧಾನಸೌಧಕ್ಕೆ ಹೊರಡುವ ಮುಂಚಿತವಾಗಿ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಆರಂಭವಾಗಿತ್ತು. ಒಬ್ಬಿಬ್ಬರು ಸತ್ತ ಮಾಹಿತಿ ಇದ್ದರೂ ವಿಧಾನಸೌಧದ ಮುಂದೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು, ಶಾಸಕರು ಸಂಭ್ರಮಾಚರಣೆ ಮಾಡುವ ಅವಶ್ಯಕತೆ ಏನಿತ್ತು? ಯಾಕೆ ಅದನ್ನು ಬದಲಿಸಲಿಲ್ಲ? ಸಾವಿನ ಮಾಹಿತಿ ಇದ್ದರೂ ವಿಧಾನಸೌಧದ ಮುಂದೆ ಸಂಭ್ರಮಾಚರಣೆ ಮುಂದುವರೆಸಿದ್ದೇಕೆ ಎಂದು ಕೇಳಿದರು.

30-40 ಸಾವಿರ ಜನರನ್ನು ನಿರೀಕ್ಷಿಸಿದ್ದೆವು. ಒಂದೂವರೆಯಿಂದ 2 ಲಕ್ಷ ಜನ ಬಂದರು ಎಂದು ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಹೇಳಿದ್ದು, ಇದು ವೈಫಲ್ಯದ ಸ್ಪಷ್ಟ ಉದಾಹರಣೆ ಎಂದು ವಿಶ್ಲೇಷಿಸಿದರು.

ಸಂಖ್ಯೆಯ ಕುರಿತು ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳಿಗೆ ಸ್ಪಷ್ಟತೆ ಇರಲಿಲ್ಲ. ಆಂಬುಲೆನ್ಸ್, ಮಹಿಳಾ ಪೊಲೀಸರು, ಸ್ಟ್ರೆಚರ್‍ಗಳು, ಸಮರ್ಪಕ ಪೊಲೀಸ್ ವ್ಯವಸ್ಥೆ ಇರಲಿಲ್ಲ ಎಂದ ಅವರು, ವಿಧಾನಸೌಧದ ಬಳಿ ದುರ್ಘಟನೆ ಆಗಿಲ್ಲ; ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಮಾತ್ರ ದುರ್ಘಟನೆ ಆಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದು ನುಣುಚಿಕೊಳ್ಳುವ ಕಾರ್ಯಕ್ಕೆ ಮುಂದಾಗಿದ್ದಾರೆ ಎಂದು ಟೀಕಿಸಿದರು.

ಕಬ್ಬನ್ ಪಾರ್ಕ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ. ಸರಕಾರದ ಬೇಜವಾಬ್ದಾರಿಯಿಂದ 11 ಅಮಾಯಕರು ಪ್ರಾಣ ಕಳಕೊಂಡಿದ್ದಾರೆ. ಇದರ ಸಮರ್ಪಕ ತನಿಖೆ ಆಗಲೇಬೇಕಿದೆ.

ರಾಜ್ಯ ಸರಕಾರ ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದ ಅವರು, ಸಿಟ್ಟಿಂಗ್ ಹೈಕೋರ್ಟ್ ಜಡ್ಜ್‍ರಿಂದ ತನಿಖೆ ಮಾಡಿಸಿ ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. ರಾಜ್ಯ ಸರಕಾರ ಸಮರ್ಪಕ ನಿರ್ಧಾರ ಮಾಡಲಿ ಎಂದು ಒತ್ತಾಯವನ್ನು ಮುಂದಿಟ್ಟರು.

ರಾಜಕೀಯ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರದ ಪ್ರತಿಷ್ಠಿತ ಬೃಹತ್ ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ ಪುಣೆ, ನಾಗಪೂರ ಸೇರಿದಂತೆ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಬಿಜೆಪಿ (BJP) ಮತ್ತು ಶಿವಸೇನೆ (ಏಕನಾಥ ಸಿಂಧೆ ಬಣ) ದೊಡ್ಡ ಪ್ರಮಾಣದಲ್ಲಿ ಜಯಗಳಿಸಿದ್ದಾರೆ.

[ccc_my_favorite_select_button post_id="118518"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!