ಬದುಕಿ ಬಾಳಬೇಕಿದ್ದ ನಮ್ಮ ಮನೆಯ ಮಕ್ಕಳು ಕಾಲ್ತುಳಿತಕ್ಕೆ ಬಲಿಯಾದರು: ಡಿಕೆ ಶಿವಕುಮಾರ್ ಭಾವುಕ

Our children, who were supposed to survive, were trampled to death: DK Shivakumar

ಬೆಂಗಳೂರು: “ಬದುಕಿ ಬಾಳಬೇಕಿದ್ದ ನಮ್ಮ ಮನೆಯ ಮಕ್ಕಳು ಕಾಲ್ತುಳಿತಕ್ಕೆ ಬಲಿಯಾಗಿರುವುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ದುರ್ಘಟನೆಯಿಂದ ಜೀವಹಾನಿಯಾಗಿದೆ. ಬೆಂಗಳೂರು ಹಾಗೂ ಕರ್ನಾಟಕ ರಾಜ್ಯದ ಘನತೆಗೆ ಧಕ್ಕೆಯಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಮಾಡಿ ಲೋಪದೋಷ ಸರಿಪಡಿಸಲಾಗುವುದು. ಇದರಿಂದ ನಾವು ಪಾಠವನ್ನು ಕಲಿಯಬೇಕಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಭಾವುಕರಾದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಬುಧವಾರ ನಡೆದ ದುರ್ಘಟನೆ ಬಗ್ಗೆ ಕೇಳಿದಾಗ, ನಮ್ಮ ರಾಜ್ಯದಲ್ಲಿ ಇಂತಹ ದುರ್ಘಟನೆ ನಡೆಯುತ್ತದೆ ಎಂದು ನಾವ್ಯಾರೂ ನಿರೀಕ್ಷೆ ಮಾಡಿರಲಿಲ್ಲ. ಆರ್ ಸಿಬಿ ತಂಡ ಬೆಂಗಳೂರಿಗೆ ಬರುತ್ತಿರುವುದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು. ನಮ್ಮ ಸರ್ಕಾರದ ಮುಂದೆ ಬೇರೆ ಆಯ್ಕೆ ಇರಲಿಲ್ಲ.

ಈ ದುರ್ಘಟನೆ ನಡೆದಿರುವುದು ನಮ್ಮ ಕುಟುಂಬದಲ್ಲೇ ಎಂದು ಭಾವಿಸಿದ್ದೇವೆ. ದುರ್ಘಟನೆಯಲ್ಲಿ ಮೃತಪಟ್ಟವರು ನಮ್ಮ ಮನೆಯವರೇ ಮೃತಪಟ್ಟಿದ್ದಾರೆ ಎಂಬ ನೋವು ರಾಜ್ಯದಲ್ಲಿ ತುಂಬಿದೆ.

ಈ ನೋವನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಸತ್ತವರು ನಮ್ಮ ಕುಟುಂಬದ ಸದಸ್ಯರು. ಈ ಪರಿಸ್ಥಿತಿಯಲ್ಲಿ ನಾವು ಸಂತಾಪ ಸೂಚಿಸಬೇಕು. ರಾಜಕೀಯ ಮಾಡಬಾರದು. ಈ ದುರ್ಘಟನೆಯ ಹೊಣೆಯನ್ನು ಒಬ್ಬರೂ ಇಬ್ಬರ ಮೇಲೆ ಹಾಕಲು ಆಗುವುದಿಲ್ಲ ಎಂದು ತಿಳಿಸಿದರು.

18 ವರ್ಷಗಳ ಕಾಲ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಲ್ಲಿ ಸಂತೋಷ ಕಟ್ಟೆಯೊಡೆದಿತ್ತು. ಹೀಗಾಗಿ ಅಪಾರ ಸಂಖ್ಯೆಯಲ್ಲಿ ಜನ ಸೇರಿದರು ಹೀಗಾಗಿ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ನಿನ್ನೆ ಆಸ್ಪತ್ರೆಯಲ್ಲಿ ಮೃತರ ಪೋಷಕರು ಮರಣೋತ್ತರ ಪರೀಕ್ಷೆ ಮಾಡಬೇಡಿ. ನಮ್ಮ ಮಗುವಿನ ಮೃತದೇಹ ನಮಗೆ ಕೊಡಿ ಎಂದು ಅಂಗಲಾಚಿದರು. ನಾವು ಆ ರೀತಿ ಪರೀಕ್ಷೆ ಮಾಡದೇ ಮೃತದೇಹವನ್ನು ಹಸ್ತಾಂತರ ಮಾಡಲು ಹೇಗೆ ಸಾಧ್ಯ? ಇದರಿಂದ ನಾಳೆ ಕಾನೂನಾತ್ಮಕ ಸಮಸ್ಯೆಗಳು ಎದುರಾಗುತ್ತವೆ. ಈ ಸಾವು ಯಾವ ಕಾರಣಕ್ಕೆ ಆಗಿದೆ ಎಂಬ ವೈಜ್ಞಾನಿಕ ವರದಿ ಬೇಕು ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ರಾಜಕೀಯ ಮಾಡುವುದರಲ್ಲಿ ಅವರು ಮಾಸ್ಟರ್ ಮೈಂಡ್

ಬಿಜೆಪಿಯವರ ಟೀಕೆ ಬಗ್ಗೆ ಕೇಳಿದಾಗ, ಈ ವಿಚಾರದಲ್ಲಿ ನಾನು ರಾಜ್ಯದ ಜನತೆಗೆ ಉತ್ತರ ನೀಡಬೇಕೇ ಹೊರತು, ಬಿಜೆಪಿಯವರ ಹೇಳಿಕೆಗೆ ಉತ್ತರಿಸುವ ಅಗತ್ಯವಿಲ್ಲ. ಅವರ ಹೇಳಿಕೆಗಳು ಅಸಂಬದ್ಧ, ರಾಜಕೀಯ ಮಾಡುವುದರಲ್ಲಿ ಅವರು ಮಾಸ್ಟರ್ ಮೈಂಡ್ ಗಳು ಎಂದು ತಿಳಿಸಿದರು.

ಕುಮಾರಸ್ವಾಮಿ ಹಾಗೂ ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ಇದೇ ಅವರ ವೃತ್ತಿ. ಅವರ ಆಡಳಿತ ಅವಧಿಯಲ್ಲಿ ಏನೆಲ್ಲಾ ಆಗಿದೆ ಎಂದು ಪಟ್ಟಿ ನೀಡಬಹುದು. ಆದರೆ ಅವರ ಮಟ್ಟಕ್ಕೆ ಇಳಿದು ರಾಜಕಾರಣ ಮಾಡಲು ನನಗೆ ಇಚ್ಛೆ ಇಲ್ಲ. ಆದರೆ ಬಾಳಿ ಬದುಕಬೇಕಾಗಿದ್ದ 14-15 ವರ್ಷದ ಮಕ್ಕಳು ಸತ್ತಿರುವುದನ್ನು ಕಣ್ಣಾರೆ ನೋಡಿದ್ದೇನೆ. ಇದನ್ನು ಯಾವುದೇ ಕುಟುಂಬ ಅರಗಿಸಿಕೊಳ್ಳಲು ಸಾಧ್ಯವಿಲ್ಲ.

ಪೊಲೀಸ್ ಆಯುಕ್ತರು ಈ ಕಾರ್ಯಕ್ರಮವನ್ನು 10 ನಿಮಿಷಗಳಲ್ಲಿ ಮುಗಿಸಿ ಎಂದು ಹೇಳಿದರು. ನಾನು ಕೂಡ ಆರ್ ಸಿಬಿ ತಂಡದ ಜೊತೆ ಮಾತನಾಡಿ ಕಾರ್ಯಕ್ರಮವನ್ನು ಮೊಟಕುಗೊಳಿಸಲಾಯಿತು ಎಂದು ಭಾವುಕರಾದರು.

ಕೆಎಸ್ ಸಿಎ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಕೆಎಸ್ ಸಿಎಗೆ ಹೋಗಲು ಸಾಧ್ಯವಾದಾಗ ನನ್ನ ಕಾರಿನಲ್ಲೇ ಅವರನ್ನು ಕರೆದುಕೊಂಡು ಹೋಗಬೇಕಾಯಿತು. ಕ್ರೀಡಾಂಗಣಕ್ಕೆ ಹೋಗುವಾಗ ಈ ರೀತಿ ದುರ್ಘಟನೆ ನಡೆದಿದೆ ಎಂದು ಮಾಧ್ಯಮ ಸ್ನೇಹಿತರು ನನಗೆ ಮಾಹಿತಿ ನೀಡಿದರು. ನಂತರ ಆಯುಕ್ತರು ನನಗೆ ಮಾಹಿತಿ ನೀಡಿದರು ಎಂದರು.

ಅಧಿವೇಶನದಲ್ಲಿ ಚರ್ಚೆಗೆ ಬಂದಾಗ ಅವರ ಕಾಲದ ಘಟನೆಗಳ ಬಗ್ಗೆ ಪ್ರಸ್ತಾಪಿಸುತ್ತೇನೆ

ಈ ಘಟನೆ ಬಗ್ಗೆ ರಾಜಕೀಯದವರು ಏನೇ ಟೀಕೆ ಮಾಡಿದರೂ ಲೆಕ್ಕ ಇಲ್ಲ. ಅವರ ಚೇಷ್ಟೆ ಇದ್ದಿದ್ದೆ. ಸಿ.ಟಿ ರವಿ, ಕುಮಾರಸ್ವಾಮಿ, ಅಶೋಕ್ ಸೇರಿದಂತೆ ಎಲ್ಲರದ್ದು ಕೇವಲ ರಾಜಕಾರಣ. ಇದೆಲ್ಲದಕ್ಕೂ ಬೇರೆ ಸಮಯದಲ್ಲಿ ಚರ್ಚೆ ಮಾಡುತ್ತೇನೆ. ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಾಗ ಅವರ ಕಾಲದಲ್ಲಿ ಏನಾಗಿತ್ತು ಎಂದು ನಾನು ಪ್ರಸ್ತಾಪ ಮಾಡುತ್ತೇನೆ.

ಈಗ ರಾಜಕಾರಣ ಮಾಡುವುದಿಲ್ಲ. ಮಾಧ್ಯಮದವರು ಕೂಡ ಈ ಸಂದರ್ಭದಲ್ಲಿ ರಾಜಕೀಯ ವಿಚಾರಗಳನ್ನು ಪ್ರಸ್ತಾಪ ಮಾಡಬೇಡಿ. ರಾಜಕುಮಾರ್ ಅವರು ಸತ್ತಾಗ ಏನೆಲ್ಲಾ ಆಯಿತು ಎಂದು ನಾನು ಈಗ ಮಾತನಾಡಲು ಬಯಸುವುದಿಲ್ಲ. ಅಂತಹ ನೀಚ ರಾಜಕಾರಣ ಮಾಡಲು ನನಗೆ ಇಷ್ಟವಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಸದಾ ಹೆಣದ ಮೇಲೆ ರಾಜಕೀಯ ಮಾಡುತ್ತಾರೆ. ಇದೇ ಅವರ ರಾಜಕೀಯ ಅಜೆಂಡಾ ಎಂದು ತಿರುಗೇಟು ನೀಡಿದರು.

ಈ ಸಾವಿಗೆ ನೀವೇ ಹೊಣೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದು ಕೇಳಿದಾಗ, ಕುಮಾರಸ್ವಾಮಿಗೆ ನಾನು ಆಮೇಲೆ ಉತ್ತರ ನೀಡುತ್ತೇನೆ. ನಾನು ಕನಕಪುರದಲ್ಲಿ ನ್ಯಾಯಾಲಯ ವಿಚಾರಣೆ ಹಾಜರಾಗಿದ್ದೆ. ಪೊಲೀಸ್ ಅಧಿಕಾರಿಗಳು ಮೆರವಣಿಗೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದ ತಕ್ಷಣವೇ ನಾನು ಬೆಂಗಳೂರಿನತ್ತ ಧಾವಿಸಿದೆ. ಜನ ಬರುವುದನ್ನು ತಡೆಯಲು ಮೆಟ್ರೋ ಸಂಚಾರವನ್ನೇ ಸ್ಥಗಿತಗೊಳಿಸಲಾಯಿತು ಎಂದು ತಿಳಿಸಿದರು.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]